ಧರ್ಮೋಪದೇಶಕಾಂಡ 4:34 - ಕನ್ನಡ ಸತ್ಯವೇದವು C.L. Bible (BSI)34 ಬೇರೆ ಯಾವ ದೇವರು ತಾನೆ ಪರಿಶೋಧನೆ, ಪವಾಡ, ಮಹತ್ಕಾರ್ಯ, ಯುದ್ಧ, ಭುಜಪರಾಕ್ರಮ, ಶಿಕ್ಷಾಹಸ್ತ, ಭಯಂಕರಕಾರ್ಯ ಇವುಗಳನ್ನು ಪ್ರಯೋಗಿಸಿ ಒಂದು ಜನಾಂಗವನ್ನು ಮತ್ತೊಂದು ಜನಾಂಗದ ಕೈಯಿಂದ ತಪ್ಪಿಸಲು ಪ್ರಯತ್ನಿಸಿದ್ದಾರೆ? ನಿಮ್ಮ ದೇವರಾದ ಸರ್ವೇಶ್ವರ ಸ್ವಾಮಿಯಾದರೊ ಈಜಿಪ್ಟಿನಲ್ಲಿ ನಿಮ್ಮ ಪರವಾಗಿ, ಇದನ್ನೆಲ್ಲ ನಿಮ್ಮ ಕಣ್ಮುಂದೆಯೇ, ನಡೆಸಿದರಲ್ಲವೆ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ಬೇರೆ ಯಾವ ದೇವರೂ ಮನಪರಿಶೋಧನೆ, ಮಹತ್ಕಾರ್ಯ, ಉತ್ಪಾತ, ಯುದ್ಧ, ಭುಜಪರಾಕ್ರಮ, ಶಿಕ್ಷಾಹಸ್ತ, ಮಹಾಭೀತಿ ಇವುಗಳನ್ನು ಪ್ರಯೋಗಿಸಿ, ಒಂದು ಜನಾಂಗವನ್ನು ಮತ್ತೊಂದು ಜನಾಂಗದ ಕೈಯೊಳಗಿಂದ ತಪ್ಪಿಸುವುದಕ್ಕೆ ಪ್ರಯತ್ನಿಸಿದ್ದಾನೇ? ನಿಮ್ಮ ದೇವರಾದ ಯೆಹೋವನಾದರೋ ಐಗುಪ್ತದೇಶದಲ್ಲಿ ನಿಮಗೋಸ್ಕರ ಇದನ್ನೆಲ್ಲಾ ನಿಮ್ಮ ಕಣ್ಣು ಮುಂದೆ ನಡಿಸಿದ್ದಾನಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)34 ಬೇರೆ ಯಾವ ದೇವರಾದರೂ ಮನಶ್ಶೋಧನೆ, ಮಹತ್ಕಾರ್ಯ, ಉತ್ಪಾತ, ಯುದ್ಧ, ಭುಜಪರಾಕ್ರಮ, ಶಿಕ್ಷಾಹಸ್ತ, ಮಹಾಭೀತಿ ಇವುಗಳನ್ನು ಪ್ರಯೋಗಿಸಿ ಒಂದು ಜನಾಂಗವನ್ನು ಮತ್ತೊಂದು ಜನಾಂಗದ ಕೈಯೊಳಗಿಂದ ತಪ್ಪಿಸುವದಕ್ಕೆ ಪ್ರಯತ್ನಿಸಿದ್ದುಂಟೋ? ನಿಮ್ಮ ದೇವರಾದ ಯೆಹೋವನಾದರೋ ಐಗುಪ್ತದೇಶದಲ್ಲಿ ನಿಮಗೋಸ್ಕರ ಇದನ್ನೆಲ್ಲಾ ನಿಮ್ಮ ಕಣ್ಣಿಗೆದುರಾಗಿ ನಡಿಸಿದನಲ್ಲಾ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್34 ಬೇರೊಂದು ಜನಾಂಗದೊಳಗಿಂದ ಜನರನ್ನು ತನಗೋಸ್ಕರ ತೆಗೆದುಕೊಳ್ಳಲು ಬೇರೆ ಯಾವ ದೇವರಾದರೂ ಎಂದಾದರೂ ಪ್ರಯತ್ನಿಸಿದ್ದುಂಟೇ? ಇಲ್ಲ! ಆದರೆ ದೇವರಾದ ಯೆಹೋವನು ಇಂಥ ಮಹಾಕಾರ್ಯಗಳನ್ನು ಮಾಡುವುದನ್ನು ನೀವು ನೋಡಿದ್ದೀರಿ! ಆತನು ನಿಮಗೆ ತನ್ನ ಶಕ್ತಿಯನ್ನು, ಬಲವನ್ನು, ಅದ್ಭುತಕಾರ್ಯಗಳನ್ನು ಮತ್ತು ಆಶ್ಚರ್ಯಕರವಾದ ಕಾರ್ಯಗಳನ್ನು ತೋರಿಸಿದ್ದಾನೆ. ಆತನು ಈಜಿಪ್ಟಿನ ಮೇಲೆ ಬರಮಾಡಿದ ವಿಪತ್ತುಗಳನ್ನು ಮತ್ತು ಭಯಂಕರವಾದ ಘಟನೆಗಳನ್ನು ನೀವು ನೋಡಿದ್ದೀರಿ! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ34 ನಿಮ್ಮ ದೇವರಾದ ಯೆಹೋವ ದೇವರು ಈಜಿಪ್ಟಿನಲ್ಲಿ ನಿಮ್ಮ ಕಣ್ಣ ಮುಂದೆಯೇ ನಿಮಗೆ ಮಾಡಿದ್ದೆಲ್ಲದರ ಹಾಗೆ ಯಾವ ದೇವರು ಒಂದು ಜನಾಂಗವನ್ನು ಮತ್ತೊಂದು ಜನಾಂಗದಿಂದ ತಮಗಾಗಿ ಆಯ್ದು ತೆಗೆದುಕೊಳ್ಳುವುದಕ್ಕೆ ಪರೀಕ್ಷೆಗಳು, ಗುರುತುಗಳು, ಅದ್ಭುತಗಳು ಇವುಗಳ ಮೂಲಕವಾಗಿಯೂ, ಯುದ್ಧದಿಂದಲೂ, ಭುಜಬಲದಿಂದಲೂ, ಚಾಚಿದ ತೋಳಿನಿಂದಲೂ, ದೊಡ್ಡ ಭಯಗಳಿಂದಲೂ ಪ್ರಯತ್ನ ಮಾಡಿದರೋ? ಅಧ್ಯಾಯವನ್ನು ನೋಡಿ |