Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 4:38 - ಕನ್ನಡ ಸತ್ಯವೇದವು C.L. Bible (BSI)

38 ಈಗ ನಮಗೆ ತಿಳಿದಿರುವಂತೆ ನಿಮಗಿಂತ ದೊಡ್ಡವೂ ಬಲಿಷ್ಠವೂ ಆದ ಜನಾಂಗಗಳನ್ನು ಹೊರಡಿಸಿ ಅವರ ನಾಡಲ್ಲೆ ನಿಮ್ಮನ್ನು ಸೇರಿಸಿ, ಆ ನಾಡನ್ನು ನಿಮಗೇ ಸ್ವಂತ ನಾಡನ್ನಾಗಿ ಕೊಡಲು ಸಂಕಲ್ಪಿಸಿದ್ದಾರೆ. ತಾವೇ ನಿಮ್ಮೊಂದಿಗಿದ್ದು, ತಮ್ಮ ಅಪಾರ ಸಾಮರ್ಥ್ಯದಿಂದ ನಿಮ್ಮನ್ನು ಈಜಿಪ್ಟ್ ದೇಶದಿಂದ ಕರೆದುತಂದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ಈಗ ನಮ್ಮ ಅನುಭವಕ್ಕೆ ಬಂದ ಪ್ರಕಾರ ನಿಮಗಿಂತ ಮಹಾಬಲಿಷ್ಠವಾದ ಜನಾಂಗಗಳನ್ನು ಹೊರಡಿಸಲು ಅವರ ದೇಶದಲ್ಲಿ ನಿಮ್ಮನ್ನು ಸೇರಿಸಿ, ಆ ದೇಶವನ್ನು ನಿಮಗೇ ಸ್ವದೇಶವಾಗಿ ಕೊಡಬೇಕೆಂದು ಸಂಕಲ್ಪಿಸಿ, ತಾನೇ ನಿಮ್ಮೊಂದಿಗಿದ್ದು ತನ್ನ ಅಪಾರ ಸಾಮರ್ಥ್ಯದಿಂದ ನಿಮ್ಮನ್ನು ಐಗುಪ್ತದೇಶದೊಳಗಿಂದ ಬರಮಾಡಿದನಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

38 ಈಗ ನಿಮ್ಮ ಅನುಭವಕ್ಕೆ ಬಂದ ಪ್ರಕಾರ ನಿಮಗಿಂತ ಮಹಾಬಲಿಷ್ಠವಾದ ಜನಾಂಗಗಳನ್ನು ಹೊರಡಿಸಲೂ ಅವರ ದೇಶದಲ್ಲಿ ನಿಮ್ಮನ್ನು ಸೇರಿಸಿ ಆ ದೇಶವನ್ನು ನಿಮಗೇ ಸ್ವದೇಶವಾಗಿ ಕೊಡಲೂಬೇಕೆಂದು ಸಂಕಲ್ಪಿಸಿ ತಾನೇ ನಿಮ್ಮೊಂದಿಗಿದ್ದು ತನ್ನ ಅಪಾರ ಸಾಮರ್ಥ್ಯದಿಂದ ನಿಮ್ಮನ್ನು ಐಗುಪ್ತದೇಶದೊಳಗಿಂದ ಬರಮಾಡಿದನಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

38 ನೀವು ಮುಂದುವರಿಯುತ್ತಿದ್ದಾಗ ನಿಮಗಿಂತಲೂ ಮಹತ್ತಾದ ಮತ್ತು ಬಲಿಷ್ಠವಾಗಿದ್ದ ಜನಾಂಗಗಳನ್ನು ಹೊರಡಿಸಿಬಿಟ್ಟನು. ಅವರ ದೇಶದೊಳಗೆ ಯೆಹೋವನು ನಿಮ್ಮನ್ನು ನಡಿಸಿದನು. ಅಲ್ಲಿ ನೀವು ವಾಸಿಸುವುದಕ್ಕಾಗಿ ಆ ದೇಶವನ್ನು ನಿಮಗೆ ಕೊಟ್ಟನು. ಈಗಲೂ ಆತನು ಹಾಗೆಯೇ ಮಾಡುತ್ತಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

38 ದೇವರು ನಿಮಗಿಂತ ದೊಡ್ಡದಾದ, ನಿಮಗಿಂತ ಬಲಿಷ್ಠವಾದ ಜನಾಂಗಗಳನ್ನು ನಿಮ್ಮ ಮುಂದೆ ಓಡಿಸಿ, ನಿಮ್ಮನ್ನು ಅವರ ದೇಶದೊಳಗೆ ಬರಮಾಡಿ, ಈ ದಿನ ನೀವು ಇರುವಂತೆ ನಿಮಗೆ ಅವರ ದೇಶವನ್ನು ಬಳುವಳಿಯಾಗಿ ಕೊಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 4:38
14 ತಿಳಿವುಗಳ ಹೋಲಿಕೆ  

“ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ನಾಡಿಗೆ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ಸೇರಿಸಿ, ಸಂಖ್ಯೆಯಲ್ಲೂ ಶಕ್ತಿಯಲ್ಲೂ ನಿಮ್ಮನ್ನು ಮೀರುವ ಜನಾಂಗಗಳನ್ನು ಅಲ್ಲಿಂದ ನಿಮ್ಮ ಮುಂದೆಯೆ ಹೊರಡಿಸುವರು.


ಅವರು ಆ ಜನಾಂಗಗಳನ್ನೆಲ್ಲ ನಿಮ್ಮ ಬಳಿಯಿಂದ ಹೊರದೂಡುವರು; ನಿಮಗಿಂತಲೂ ಮಹಾಬಲಿಷ್ಠಜನಾಂಗಗಳ ನಾಡನ್ನು ಸ್ವಾಧೀನಮಾಡಿಕೊಳ್ಳುವಿರಿ.


“ತರುವಾಯ ಸರ್ವೇಶ್ವರ ನನಗೆ, ‘ಈಗ ನಾನು ಸೀಹೋನನನ್ನೂ ಅವನ ನಾಡನ್ನೂ ನಿಮಗೆ ವಶಪಡಿಸುವುದಕ್ಕೆ ಪ್ರಾರಂಭಿಸಿದ್ದೇನೆ; ಅದನ್ನು ಸ್ವಾಧೀನ ಮಾಡಿಕೊಳ್ಳಲು ಶುರುಮಾಡಿರಿ,’ ಎಂದು ಹೇಳಿದರು.


ಚೈತನ್ಯಸ್ವರೂಪನಾದ ದೇವರು ನಿಮ್ಮ ಮಧ್ಯೆ ಇದ್ದಾರೆಂದು ನಿಮಗೆ ಈಗ ತಿಳಿಯುವುದು. ಅದೇ ಕಾನಾನ್ಯರನ್ನು, ಹಿತ್ತಿಯರನ್ನು, ಹಿವ್ವಿಯರನ್ನು, ಪೆರಿಜೀಯರನ್ನು, ಗಿರ್ಗಾಷಿಯರನ್ನು, ಅಮೋರಿಯರನ್ನು ಹಾಗೂ ಯೆಬೂಸಿಯರನ್ನು ನಿಮ್ಮ ಮುಂದಿನಿಂದ ಓಡಿಸಿಬಿಡುವರೆಂದು ನಿಮಗೆ ಗೊತ್ತಾಗುವುದು.


ನಿಮ್ಮ ದೇವರಾದ ಸರ್ವೇಶ್ವರಸ್ವಾಮಿಯೇ ನಿಮ್ಮ ಪಿತೃಗಳಿಗೆ ಪ್ರಮಾಣಪೂರ್ವಕವಾಗಿ ಮಾಡಿದ ವಾಗ್ದಾನವನ್ನು ಈಗ ನಿಮಗೆ ಮನಮುಟ್ಟುವ ರೀತಿಯಲ್ಲಿ ನೆರವೇರಿಸಿದ್ದಾರೆ. ನಿಮಗೆ ಇಷ್ಟು ಭಾಗ್ಯವನ್ನು ಸಂಪಾದಿಸುವ ಸಾಮರ್ಥ್ಯವನ್ನು ಕೊಟ್ಟಿದ್ದಾರೆ ಎಂಬುದನ್ನು ಜ್ಞಾಪಕಮಾಡಿಕೊಳ್ಳಿ.


ನಿಮ್ಮ ದಾಸರಾದ ನಮಗೆ ಬಹಳ ದನಕುರಿಗಳಿವೆ.


ಬೇರೆ ಎರಡುವರೆ ಕುಲಗಳವರು, ಅಂದರೆ ರೂಬೇನ್ಯರ ಕುಟುಂಬಗಳು, ಗಾದ್ಯರ ಕುಟುಂಬಗಳು ಹಾಗು ಮನಸ್ಸೆಕುಲದವರಲ್ಲಿ ಅರ್ಧಜನರು ಜೋರ್ಡನ್ ನದಿಯ ಈಚೆ ಜೆರಿಕೊ ಪಟ್ಟಣಕ್ಕೆ ಪೂರ್ವದಿಕ್ಕಿನಲ್ಲಿ ಸೊತ್ತನ್ನು ಹೊಂದಿದ್ದಾರೆ,” ಎಂದು ಅಪ್ಪಣೆಕೊಟ್ಟನು.


ನಮ್ಮ ದೇವರಾದ ನೀವು ನಿಮ್ಮ ಪ್ರಜೆಗಳಾದ ಇಸ್ರಯೇಲರ ಎದುರಿನಿಂದ ಈ ನಾಡಿನ ನಿವಾಸಿಗಳನ್ನು ಹೊರದೂಡಿಸಿ, ಇದನ್ನು ಮಿತ್ರ ಅಬ್ರಹಾಮನ ಸಂತಾನದವರಿಗೆ ಶಾಶ್ವತ ಸೊತ್ತಾಗಿ ಕೊಟ್ಟಿರಲ್ಲವೆ?


ಈಗ ಅವರು ಉಪಕಾರಕ್ಕೆ ಅಪಕಾರಮಾಡಿ, ನೀವು ನಮಗೆ ಅನುಗ್ರಹಿಸಿದ ಸೊತ್ತಿನಿಂದ ನಮ್ಮನ್ನು ಹೊರತಳ್ಳುವುದಕ್ಕಾಗಿ, ನಮ್ಮ ಮೇಲೆ ಯುದ್ಧಕ್ಕೆ ಬಂದಿರುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು