ಧರ್ಮೋಪದೇಶಕಾಂಡ 4:4 - ಕನ್ನಡ ಸತ್ಯವೇದವು C.L. Bible (BSI)4 ನಿಮ್ಮ ದೇವರಾದ ಸರ್ವೇಶ್ವರನನ್ನು ಅವಲಂಭಿಸಿದ ನೀವಾದರೋ ಇಂದಿನವರೆಗೂ ಉಳಿದುಕೊಂಡಿದ್ದೀರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ನಿಮ್ಮ ದೇವರಾದ ಯೆಹೋವನನ್ನು ನೀವು ನಂಬಿ ನಡೆದುದರಿಂದ ನೀವಾದರೋ ಇಂದಿನವರೆಗೂ ಉಳಿದಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ನಿಮ್ಮ ದೇವರಾದ ಯೆಹೋವನನ್ನು ಹೊಂದಿಕೊಂಡವರಾದ ನೀವಾದರೋ ಇಂದಿನವರೆಗೂ ಉಳಿದುಕೊಂಡಿದ್ದೀರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಆದರೆ ಯಾರು ದೇವರಾದ ಯೆಹೋವನನ್ನು ಮಾತ್ರ ಸೇವಿಸಿದರೋ ಅವರು ಈಗಲೂ ಜೀವಂತರಾಗಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಆದರೆ ನಿಮ್ಮ ದೇವರಾದ ಯೆಹೋವ ದೇವರಿಗೆ ವಿಧೇಯರಾದ ನೀವೆಲ್ಲರು ಇಂದಿನವರೆಗೆ ಬದುಕಿದ್ದೀರಿ. ಅಧ್ಯಾಯವನ್ನು ನೋಡಿ |
ಬಳಿಕ ಸಿಂಹಾಸನಗಳನ್ನು ಕಂಡೆ. ಅವುಗಳ ಮೇಲೆ ಕುಳಿತಿದ್ದವರಿಗೆ ತೀರ್ಪುಕೊಡುವ ಅಧಿಕಾರವನ್ನು ಕೊಡಲಾಗಿತ್ತು. ಇದಲ್ಲದೆ, ಕ್ರಿಸ್ತೇಸುವಿನ ಪರವಾಗಿ ಸಾಕ್ಷಿಕೊಟ್ಟು ದೇವರ ವಾಕ್ಯದ ಪ್ರಚಾರಕ್ಕಾಗಿ ತಲೆತೆತ್ತ ಜೀವಾತ್ಮಗಳನ್ನು ಕಂಡೆ. ಇವರು ಆ ಮೃಗವನ್ನಾಗಲಿ, ಅದರ ವಿಗ್ರಹವನ್ನಾಗಲಿ ಪೂಜಿಸಿದವರಲ್ಲ; ತಮ್ಮ ಹಣೆಗಳ ಮೇಲಾಗಲಿ, ಕೈಗಳ ಮೇಲಾಗಲಿ ಅದರ ಗುರುತಿನ ಹಚ್ಚೆಯನ್ನೂ ಚುಚ್ಚಿಸಿಕೊಂಡವರಲ್ಲ. ಇವರು ಜೀವಂತರಾಗಿ ಕ್ರಿಸ್ತೇಸುವಿನೊಡನೆ ಒಂದು ಸಾವಿರ ವರ್ಷಗಳು ಆಳುವರು.