ಧರ್ಮೋಪದೇಶಕಾಂಡ 4:40 - ಕನ್ನಡ ಸತ್ಯವೇದವು C.L. Bible (BSI)40 ನಾನು ಇಂದು ನಿಮಗೆ ತಿಳಿಸಿದ ಅವರ ಆಜ್ಞಾವಿಧಿಗಳನ್ನು ಅನುಸರಿಸಿ ನಡೆಯಿರಿ. ಆಗ ನಿಮಗೂ ನಿಮ್ಮ ಸಂತತಿಗೂ ಶುಭವುಂಟಾಗುವುದು; ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಶಾಶ್ವತವಾಗಿ ಕೊಡುವ ನಾಡಿನಲ್ಲಿ ನೀವು ದೀರ್ಘಕಾಲ ಬಾಳುವಿರಿ.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201940 ನಿಮಗೂ ಮತ್ತು ನಿಮ್ಮ ಸಂತತಿಯವರಿಗೂ ಶುಭವುಂಟಾಗುವಂತೆಯೂ, ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದಲ್ಲಿ ನೀವು ಸದಾಕಾಲ ಬಾಳುವಂತೆಯೂ, ನಾನು ನಿಮಗೆ ಈಗ ತಿಳಿಸಿದ ಆತನ ಆಜ್ಞಾವಿಧಿಗಳನ್ನು ನೀವು ಅನುಸರಿಸಿ ನಡೆಯಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)40 ನಿಮಗೂ ನಿಮ್ಮ ಸಂತತಿಯವರಿಗೂ ಶುಭವುಂಟಾಗುವಂತೆಯೂ ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದಲ್ಲಿ ನೀವು ಸದಾಕಾಲ ಬಾಳುವಂತೆಯೂ ನಾನು ನಿಮಗೆ ಈಗ ತಿಳಿಸಿದ ಆತನ ಆಜ್ಞಾವಿಧಿಗಳನ್ನು ನೀವು ಅನುಸರಿಸಿ ನಡೆಯಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್40 ನಾನು ಈ ಹೊತ್ತು ಕೊಡಲಿರುವ ಆತನ ಕಟ್ಟಳೆಗಳನ್ನೂ ಆಜ್ಞೆಗಳನ್ನೂ ನೀವು ಪರಿಪಾಲಿಸಬೇಕು. ಆಗ ನಿಮಗೂ ನಿಮ್ಮ ನಂತರ ಜೀವಿಸುವ ನಿಮ್ಮ ಮಕ್ಕಳಿಗೂ ಶುಭವಾಗುವುದು. ದೇವರಾದ ಯೆಹೋವನು ನಿಮಗೆ ಕೊಡಲಿರುವ ದೇಶದಲ್ಲಿ ಶಾಶ್ವತವಾಗಿ ಬಾಳುವಿರಿ!” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ40 ನಿಮಗೂ, ನಿಮ್ಮ ತರುವಾಯ ನಿಮ್ಮ ಮಕ್ಕಳಿಗೂ ಒಳ್ಳೆಯದು ಆಗುವ ಹಾಗೆಯೂ, ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಸದಾಕಾಲಕ್ಕೆ ಕೊಡುವ ಭೂಮಿಯ ಮೇಲೆ ನೀವು ಬಹಳ ದಿವಸವಿರುವ ಹಾಗೆಯೂ, ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವ ದೇವರ ನಿಯಮಗಳನ್ನೂ, ಆಜ್ಞೆಗಳನ್ನೂ ಅನುಸರಿಸಿರಿ. ಅಧ್ಯಾಯವನ್ನು ನೋಡಿ |