Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 4:49 - ಕನ್ನಡ ಸತ್ಯವೇದವು C.L. Bible (BSI)

49 ಅರಾಬ ಎಂಬ ತಗ್ಗಿನಲ್ಲಿ ಪಿಸ್ಗಾ ಬೆಟ್ಟದ ಬುಡದಲ್ಲಿ ಇರುವ ಅರಾಬದ ಸಮುದ್ರದವರೆಗೆ ಜೋರ್ಡನ್ ನದಿಯ ಆಚೆ ಇರುವ ಭಾಗವನ್ನೆಲ್ಲಾ ಸ್ವಾಧೀನ ಮಾಡಿಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

49 ಅರಾಬಾ ಎಂಬ ತಗ್ಗಿನಲ್ಲಿ ಪಿಸ್ಗಾ ಬೆಟ್ಟದ ಬುಡದಲ್ಲಿರುವ ಅರಾಬ್ ಸಮುದ್ರದ ವರೆಗೆ ಯೊರ್ದನ್ ನದಿಯ ಆಚೆ ಇರುವ ಭಾಗವನ್ನೆಲ್ಲಾ ಸ್ವಾಧೀನಮಾಡಿಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

49 ಅರಾಬಾ ಎಂಬ ತಗ್ಗಿನಲ್ಲಿ ಪಿಸ್ಗಾ ಬೆಟ್ಟದ ಬುಡದಲ್ಲಿರುವ ಅರಾಬದ ಸಮುದ್ರದವರೆಗೆ ಯೊರ್ದನ್ ಹೊಳೆಯ ಆಚೆ ಇರುವ ಭಾಗವನ್ನೆಲ್ಲಾ ಸ್ವಾಧೀನಮಾಡಿಕೊಂಡಿದ್ದರು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

49 ಈ ಪ್ರದೇಶವು ಜೋರ್ಡನ್ ತಗ್ಗು ಪ್ರಾಂತ್ಯವನ್ನು ಆವರಿಸಿದೆ. ದಕ್ಷಿಣಕ್ಕೆ ಇದರ ಮೇರೆ ಮೃತ್ಯು ಸರೋವರದ ತನಕವೂ ಪೂರ್ವದಲ್ಲಿ ಪಿಸ್ಗಾ ಬೆಟ್ಟದ ತನಕವೂ ವಿಸ್ತರಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

49 ಯೊರ್ದನ್ ನದಿಯ ಆಚೆ ಪೂರ್ವದಿಕ್ಕಿನಲ್ಲಿ ಇರುವ ಎಲ್ಲಾ ಅರಾಬಾದನ್ನು ಸಹ, ಪಿಸ್ಗಾದ ಬೆಟ್ಟದ ತಗ್ಗಿನಲ್ಲಿರುವ ಬಯಲಿನ ಸಮುದ್ರದವರೆಗೆ ಸ್ವಾಧೀನಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 4:49
6 ತಿಳಿವುಗಳ ಹೋಲಿಕೆ  

ಪಶ್ಚಿಮದಲ್ಲಿ ಅವರ ಪ್ರದೇಶ ಜೋರ್ಡನ್ ನದಿಯವರೆಗೆ ಹರಡಿತ್ತು. ಉತ್ತರದಲ್ಲಿ ಕಿನ್ನೆರೆತ್ ಸರೋವರ ಮೊದಲ್ಗೊಂಡು ದಕ್ಷಿಣದಲ್ಲಿ ಲವಣ ಸಮುದ್ರದವರೆಗೆ ವಿಸ್ತರಿಸಿತ್ತು. ಅದು ಪೂರ್ವದಲ್ಲಿ ಪಿಸ್ಗಾ ಬೆಟ್ಟದ ಬುಡದವರೆಗೆ ವ್ಯಾಪಿಸಿತ್ತು.


ಪಿಸ್ಗದ ಬುಡದಲ್ಲಿ ಇರುವ ಪ್ರದೇಶ, ಬೇತ್ ಯೆಷಿಮೋತ್ ನಗರ,


ಮೋಶೆ ಮೋವಾಬ್ಯರ ಬಯಲು ನಾಡಿನಿಂದ ಜೆರಿಕೋ ಪಟ್ಟಣಕ್ಕೆ ಎದುರಾಗಿ ಇರುವ ನೆಬೋ ಪರ್ವತಕ್ಕೆ ಹೋಗಿ, ಪಿಸ್ಗಾ ಎಂಬ ಬೆಟ್ಟದ ಶಿಖರವನ್ನು ಹತ್ತಿದನು. ಆಗ ಸರ್ವೆಶ್ವರ ಕಾನಾನ್ ನಾಡೆಲ್ಲವನ್ನು ಅಂದರೆ, ದಾನ್ ಪಟ್ಟಣದವರೆಗಿದ್ದ ಗಿಲ್ಯಾದ್ ಪ್ರಾಂತ್ಯ,


ಅರ್ನೋನ್ ತಗ್ಗಿನ ಅಂಚಿನಲ್ಲಿರುವ ಅರೋಯೇರ್ ಪಟ್ಟಣ ಮೊದಲ್ಗೊಂಡು ಹೆರ್ಮೋನ್ ಎಂಬ ಸೀಯೋನ್ ಪರ್ವತದವರೆಗೂ


ಮೋಶೆ ಇಸ್ರಯೇಲರನ್ನು ಕರೆದು ಹೀಗೆ ಸಂಬೋಧಿಸಿದನು: “ಇಸ್ರಯೇಲರೇ, ನಾನು ಈಗ ನಿಮಗೆ ತಿಳಿಸಲಿರುವ ಆಜ್ಞಾವಿಧಿಗಳನ್ನು ಕಿವಿಗೊಟ್ಟು ಕೇಳಿ; ಇವುಗಳನ್ನು ಗ್ರಹಿಸಿಕೊಂಡು ಅನುಸರಿಸಿ ನಡೆಯಿರಿ.


ಆಗ ಅವನು ನನಗೆ ಹೀಗೆ ಹೇಳಿದನು: “ಈ ಪ್ರವಾಹ ಪೂರ್ವಪ್ರಾಂತ್ಯಕ್ಕೆ ಹೊರಟು ಅರಬಾ ಎಂಬ ಕಣಿವೆಗೆ ಇಳಿದು ಲವಣ ಸಮುದ್ರದ ಕಡೆಗೆ ಹರಿಯುವುದು; ದೇವಸ್ಥಾನದಿಂದ ಹೊರಟ ಪ್ರವಾಹವು ಲವಣ ಸಮುದ್ರಕ್ಕೆ ಸೇರಲು ಅದರ ನೀರು ಸಿಹಿಯಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು