Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 4:5 - ಕನ್ನಡ ಸತ್ಯವೇದವು C.L. Bible (BSI)

5 “ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ನಾಡಿನಲ್ಲಿ ಅನುಸರಿಸಬೇಕಾದ ಆಜ್ಞಾವಿಧಿಗಳನ್ನು ನನ್ನ ದೇವರಾದ ಸರ್ವೇಶ್ವರ ನನಗೆ ಆಜ್ಞಾಪಿಸಿದಂತೆಯೇ ನಿಮಗೆ ಬೋಧಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ದೇಶದಲ್ಲಿ ಅನುಸರಿಸಬೇಕಾದ ಆಜ್ಞಾವಿಧಿಗಳನ್ನು ನನ್ನ ದೇವರಾದ ಯೆಹೋವನು ನನಗೆ ಆಜ್ಞಾಪಿಸಿದಂತೆಯೇ ನಿಮಗೆ ಬೋಧಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನೀವು ಸ್ವಾಧೀನಮಾಡಿಕೊಳ್ಳುವದಕ್ಕೆ ಹೋಗುವ ದೇಶದಲ್ಲಿ ಅನುಸರಿಸಬೇಕಾದ ಆಜ್ಞಾವಿಧಿಗಳನ್ನು ನನ್ನ ದೇವರಾದ ಯೆಹೋವನು ನನಗೆ ಆಜ್ಞಾಪಿಸಿದಂತೆಯೇ ನಿಮಗೆ ಬೋಧಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 “ಯೆಹೋವನು ನನಗೆ ಆಜ್ಞಾಪಿಸಿದ ವಿಧಿನಿಯಮಗಳನ್ನು ನಾನು ನಿಮಗೆ ಬೋಧಿಸಿದೆನು. ಈಗ ನೀವು ಸ್ವಾಧೀನಪಡಿಸಿಕೊಳ್ಳುವ ದೇಶದಲ್ಲಿ ನೀವು ನೆಲೆಸುವಾಗ ಆ ವಿಧಿನಿಯಮಗಳನ್ನು ಅನುಸರಿಸಬೇಕೆಂದು ನಾನು ನಿಮಗೆ ಬೋಧಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನೀವು ಹೋಗಿ ಸ್ವತಂತ್ರಿಸಿಕೊಳ್ಳುವ ದೇಶದಲ್ಲಿ ನೀವು ಮಾಡಬೇಕೆಂದು ನನ್ನ ದೇವರಾದ ಯೆಹೋವ ದೇವರು ನನಗೆ ಆಜ್ಞಾಪಿಸಿದ ಆಜ್ಞಾವಿಧಿಗಳನ್ನೂ ನಿಮಗೆ ಬೋಧಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 4:5
24 ತಿಳಿವುಗಳ ಹೋಲಿಕೆ  

ನಾನು ನಿಮಗೆ ಆಜ್ಞಾಪಿಸಿದ ಸಕಲವನ್ನೂ ಅನುಸರಿಸುವಂತೆ ಅವರಿಗೆ ಬೋಧಿಸಿರಿ. ಇಗೋ, ಲೋಕಾಂತ್ಯದವರೆಗೂ ಸದಾ ನಾನು ನಿಮ್ಮೊಡನೆ ಇರುತ್ತೇನೆ,” ಎಂದರು


ಮೋಶೆ ದೇವರ ಮನೆಗೆಲ್ಲಾ ಪ್ರಾಮಾಣಿಕ ದಾಸನಾಗಿದ್ದನು; ಮುಂದೆ ಪ್ರಕಟವಾಗಬೇಕಿದ್ದ ಸಂಗತಿಗಳಿಗೆ ಸಾಕ್ಷಿಯಾಗಿದ್ದನು.


“ಇಸ್ರಯೇಲರೇ, ಕೇಳಿ; ನೀವು ಜೀವದಿಂದುಳಿದು ನಿಮ್ಮ ಪಿತೃಗಳ ದೇವರಾದ ಸರ್ವೇಶ್ವರ ನಿಮಗೆ ಕೊಡುವ ನಾಡನ್ನು ಸೇರಿ ಸ್ವಾಧೀನಮಾಡಿಕೊಳ್ಳಬೇಕಾದರೆ ನಾನು ಈಗ ಬೋಧಿಸುವ ಆಜ್ಞಾವಿಧಿಗಳನ್ನು ಗಮನದಿಂದ ಅನುಸರಿಸಬೇಕು.


ಏಕೆಂದರೆ, ದೈವಯೋಜನೆಯನ್ನು ಕಿಂಚಿತ್ತೂ ಮರೆಮಾಚದೆ ತಿಳಿಯಪಡಿಸಿದ್ದೇನೆ.


ನಾನು ಪಡೆದುಕೊಂಡದ್ದನ್ನು ಮುಖ್ಯವಾದುದು ಎಂದೆಣಿಸಿ ನಿಮಗೆ ಒಪ್ಪಿಸಿದ್ದೇನೆ. ಅದು ಯಾವುದೆಂದರೆ, ಪವಿತ್ರಗ್ರಂಥದಲ್ಲಿ ಹೇಳಿರುವ ಪ್ರಕಾರ ಕ್ರಿಸ್ತಯೇಸು ನಮ್ಮ ಪಾಪಗಳ ಪರಿಹಾರಕ್ಕಾಗಿ ಪ್ರಾಣತ್ಯಾಗ ಮಾಡಿದರು.


ಪ್ರತಿಯೊಬ್ಬನೂ ಮೊಟ್ಟಮೊದಲು ತನ್ನನ್ನು ಪರಿಶೋಧಿಸಿಕೊಂಡು ಅನಂತರ ಆ ರೊಟ್ಟಿಯನ್ನು ಭುಜಿಸಲಿ; ಮತ್ತು ಆ ಪಾತ್ರೆಯಿಂದ ಪಾನಮಾಡಲಿ.


ಅಂತೆಯೇ ದೇವರ ಆಜ್ಞಾವಿಧಿಗಳನ್ನು ಜನರಿಗೆ ಬೋಧಿಸಿ ಅವರು ನಡೆಯಬೇಕಾದ ಮಾರ್ಗವನ್ನು ಹಾಗು ಕೈಗೊಳ್ಳಬೇಕಾದ ಕಾರ್ಯಗಳನ್ನು ತಿಳಿಯಪಡಿಸಲೇಬೇಕು.


ಸರ್ವೇಶ್ವರ ಸೀನಾಯಿ ಬೆಟ್ಟದಲ್ಲಿ ಮೋಶೆಗೆ ಈ ಆಜ್ಞೆಗಳನ್ನು ಕೊಟ್ಟರು. ಸೀನಾಯಿ ಮರುಭೂಮಿಯಲ್ಲಿ ಇಸ್ರಯೇಲರು ಅರ್ಪಿಸಬೇಕಾದುದನ್ನು ಸರ್ವೇಶ್ವರನಿಗೆ ಅರ್ಪಿಸಬೇಕೆಂದು ಮೋಶೆ ಆಜ್ಞಾಪಿಸಿ ಮೇಲ್ಕಂಡ ವಿಧಿಗಳನ್ನು ಕೊಟ್ಟನು.


ಸರ್ವೇಶ್ವರ ಸ್ವಾಮಿ ಸೀನಾಯಿ ಬೆಟ್ಟದಲ್ಲಿ ಮೋಶೆಯ ಮುಖಾಂತರ ಇಸ್ರಯೇಲರ ಸಂಗಡ ಒಡಂಬಡಿಕೆಯನ್ನು ಮಾಡಿಕೊಂಡು ಅವರಿಗೆ ಕೊಟ್ಟ ಆಜ್ಞಾವಿಧಿಗಳು ಇವುಗಳೇ.


ಇವೇ ಸರ್ವೇಶ್ವರನು ಸೀನಾಯಿ ಬೆಟ್ಟದಲ್ಲಿ ಮೋಶೆಯ ಮುಖಾಂತರ ಇಸ್ರಯೇಲರಿಗೆ ಕೊಟ್ಟ ಆಜ್ಞೆಗಳು.


ನಿಮ್ಮ ದೇವರಾದ ಸರ್ವೇಶ್ವರ ಕೊಟ್ಟ ಆಜ್ಞೆಗಳನ್ನೇ ನಾನು ನಿಮಗೆ ತಿಳಿಸುತ್ತಾ ಇದ್ದೇನೆ. ಈ ಆಜ್ಞೆಗಳನ್ನು ನೀವು ಕೈಗೊಳ್ಳಬೇಕೇ ಹೊರತು ಅವುಗಳಿಗೆ ಏನೂ ಕೂಡಿಸಬಾರದು, ಅವುಗಳಿಂದ ಏನೂ ತೆಗೆದುಬಿಡಬಾರದು.


ನಿಮ್ಮ ದೇವರಾದ ಸರ್ವೇಶ್ವರನನ್ನು ಅವಲಂಭಿಸಿದ ನೀವಾದರೋ ಇಂದಿನವರೆಗೂ ಉಳಿದುಕೊಂಡಿದ್ದೀರಿ.


ದೇವಾ, ಬಾಲ್ಯಾರಭ್ಯ ನನಗೆ ಬೋಧಿಸಿರುವೆಯಲ್ಲವೆ? I ನಿನ್ನ ಅದ್ಭುತಕಾರ್ಯಗಳನೆಂದಿಗು ನಾ ಘೋಷಿಸುತ್ತಿರುವೆ II


“ನನ್ನ ಆಜ್ಞೆಗಳನ್ನು ನೀವು ಅನುಸರಿಸಿ ನಡೆಯಬೇಕು. ನಿಮ್ಮ ಜಾನುವಾರಗಳಿಂದ ಬೆರಕೆ ತಳಿಯನ್ನು ಪಡೆಯಲು ಅವಕಾಶವೀಯಬಾರದು; ನಿಮ್ಮ ಹೊಲದಲ್ಲಿ ಇಬ್ಬಗೆಯ ಬೀಜವನ್ನು ಬಿತ್ತಬಾರದು; ನಾರು ಮತ್ತು ಉಣ್ಣೆಯಿಂದ ನೇಯ್ದ ಬಟ್ಟೆಯನ್ನು ಹಾಕಿಕೊಳ್ಳಬಾರದು.


ನಾನು ಇಂದು ನಿಮಗೆ ತಿಳಿಸಿದ ಅವರ ಆಜ್ಞಾವಿಧಿಗಳನ್ನು ಅನುಸರಿಸಿ ನಡೆಯಿರಿ. ಆಗ ನಿಮಗೂ ನಿಮ್ಮ ಸಂತತಿಗೂ ಶುಭವುಂಟಾಗುವುದು; ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಶಾಶ್ವತವಾಗಿ ಕೊಡುವ ನಾಡಿನಲ್ಲಿ ನೀವು ದೀರ್ಘಕಾಲ ಬಾಳುವಿರಿ.”


ಮೋಶೆ ಇಸ್ರಯೇಲರನ್ನು ಕರೆದು ಹೀಗೆ ಸಂಬೋಧಿಸಿದನು: “ಇಸ್ರಯೇಲರೇ, ನಾನು ಈಗ ನಿಮಗೆ ತಿಳಿಸಲಿರುವ ಆಜ್ಞಾವಿಧಿಗಳನ್ನು ಕಿವಿಗೊಟ್ಟು ಕೇಳಿ; ಇವುಗಳನ್ನು ಗ್ರಹಿಸಿಕೊಂಡು ಅನುಸರಿಸಿ ನಡೆಯಿರಿ.


“ನಿಮ್ಮ ದೇವರಾದ ಸರ್ವೇಶ್ವರ ಸ್ವಾಮಿ ನಿಮಗೆ ಬೋಧಿಸಲು ನನಗೆ ಆಜ್ಞಾಪಿಸಿದ ಈ ಧರ್ಮೋಪದೇಶವನ್ನೂ ವಿಧಿನಿರ್ಣಯಗಳನ್ನೂ ನೀವು ನದಿದಾಟಿ ಸ್ವಾಧೀನಪಡಿಸಿಕೊಳ್ಳಲಿರುವ ಆ ನಾಡಿನಲ್ಲಿ ಅನುಸರಿಸಬೆಕು.


ಆದಕಾರಣ ನಾನು ಈ ದಿನ ನಿಮಗೆ ಬೋಧಿಸುವ ಧರ್ಮೋಪದೇಶವನ್ನೂ ಆಜ್ಞಾವಿಧಿಗಳನ್ನೂ ನೀವು ಅನುಸರಿಸಿ ನಡೆಯಬೇಕು.


“ಎಚ್ಚರಿಕೆ, ನಾನು ಈಗ ನಿಮಗೆ ಬೋಧಿಸುವ ನಿಮ್ಮ ದೇವರಾದ ಸರ್ವೇಶ್ವರನ ಆಜ್ಞಾವಿಧಿನಿರ್ಣಯಗಳನ್ನು ಕೈಕೊಳ್ಳದವರೂ ಅವರನ್ನು ಮರೆತುಬಿಡುವವರೂ ಆಗಬೇಡಿ.


ನಾನು ಈಗ ನಿಮಗೆ ತಿಳಿಸುವ ಎಲ್ಲ ಆಜ್ಞಾವಿಧಿಗಳನ್ನು ಅನುಸರಿಸಿ ನಡೆಯಲೇಬೇಕು.


ಸರ್ವೇಶ್ವರ ನನಗೆ : “ಜುದೇಯದ ನಗರಗಳಲ್ಲೂ ಜೆರುಸಲೇಮಿನ ಹಾದಿಬೀದಿಗಳಲ್ಲೂ ಈ ಸಮಾಚಾರವನ್ನು ಹರಡು - ಈ ಒಡಂಬಡಿಕೆಯ ವಚನಗಳನ್ನು ಕೇಳಿ ಅದರಂತೆ ನಡೆದುಕೊಳ್ಳಿರಿ.


ಕೈಗೊಳ್ಳುವವರಿಗೆ ಜೀವಾಧಾರವಾದ ನನ್ನ ಆಜ್ಞಾವಿಧಿಗಳನ್ನು ಅವರಿಗೆ ತಿಳಿಸಿಕೊಟ್ಟೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು