Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 4:6 - ಕನ್ನಡ ಸತ್ಯವೇದವು C.L. Bible (BSI)

6 ಇವುಗಳನ್ನು ಕೈಗೊಂಡು ಅನುಸರಿಸಿರಿ. ಅನುಸರಿಸಿದ್ದೇ ಆದರೆ ಅನ್ಯಜನಗಳು ನಿಮ್ಮನ್ನು ಜ್ಞಾನಿಗಳೂ ವಿವೇಕಿಗಳೂ ಎಂದು ತಿಳಿಯುವರು; ಈ ಆಜ್ಞೆಗಳ ಬಗ್ಗೆ ಅವರು ಅರಿತುಕೊಂಡಾಗ, ‘ಈ ದೊಡ್ಡ ಜನಾಂಗ ಎಂಥಾ ಜ್ಞಾನವಿವೇಕವುಳ್ಳ ಜನಾಂಗ’, ಎಂದು ಮಾತಾಡಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಇವುಗಳನ್ನು ಕೈಕೊಂಡು ಅನುಸರಿಸಿರಿ. ನೀವು ಅನುಸರಿಸಿ ನಡೆದರೆ ಅನ್ಯಜನಗಳು ನಿಮ್ಮನ್ನು ಜ್ಞಾನಿಗಳೂ, ವಿವೇಕಿಗಳೂ ಎಂದು ತಿಳಿಯುವರು. ಅವರು ಈ ಆಜ್ಞೆಗಳ ವಿಷಯದಲ್ಲಿ ವರ್ತಮಾನವನ್ನು ಕೇಳಿ, “ಈ ದೊಡ್ಡ ಜನಾಂಗವು ಜ್ಞಾನವಿವೇಕವುಳ್ಳ ಜನಾಂಗ” ಎಂದು ಹೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಇವುಗಳನ್ನು ಕೈಕೊಂಡು ಅನುಸರಿಸಿರಿ. ಅನುಸರಿಸಿದರೇ ಅನ್ಯಜನಗಳು ನಿಮ್ಮನ್ನು ಜ್ಞಾನಿಗಳೂ ವಿವೇಕಿಗಳೂ ಎಂದು ತಿಳಿಯುವರು. ಅವರು ಈ ಆಜ್ಞೆಗಳ ವಿಷಯದಲ್ಲಿ ವರ್ತಮಾನವನ್ನು ಕೇಳಿ - ಈ ದೊಡ್ಡ ಜನಾಂಗವು ಜ್ಞಾನ ವಿವೇಕವುಳ್ಳ ಜನಾಂಗ ಎಂದು ಮಾತಾಡಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆ ನಿಯಮಗಳನ್ನು ಪರಿಪೂರ್ಣವಾಗಿ ಅಭ್ಯಾಸಿಸಿರಿ, ‘ಆಗ ಅನ್ಯಜನರು ನಿಮ್ಮನ್ನು ನೋಡಿ ನೀವು ಜ್ಞಾನಿಗಳು’ ಎಂದು ತಿಳಿದುಕೊಳ್ಳುವರು. ಆ ದೇಶದ ಜನರು ನಿಮ್ಮ ವಿಧಿನಿಯಮಗಳನ್ನು ಕೇಳಿ, ‘ನಿಜವಾಗಿಯೂ ಈ ಮಹಾ ಜನಾಂಗದ ಜನರು ಬುದ್ಧಿಯುಳ್ಳವರು ಮತ್ತು ಜ್ಞಾನಿಗಳು’ ಎಂದು ಹೇಳುವರು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಹೀಗಿರುವುದರಿಂದ ನೀವು ಅವುಗಳನ್ನು ಎಚ್ಚರದಿಂದ ಕೈಗೊಂಡು ಅನುಸರಿಸಿರಿ. ಏಕೆಂದರೆ ಇತರ ಜನಗಳು ನಿಮ್ಮನ್ನು ಜ್ಞಾನಿಗಳೂ ವಿವೇಕಿಗಳೂ ಎಂದು ತಿಳಿಯುವರು. ಈ ಆಜ್ಞೆಗಳ ಬಗ್ಗೆ ಅವರು ಅರಿತುಕೊಂಡಾಗ, “ನಿಶ್ಚಯವಾಗಿ ಇದು ದೊಡ್ಡ ಜನಾಂಗವು ಎಂತಹ ಜ್ಞಾನವೂ ವಿವೇಕವೂ ಉಳ್ಳ ಜನಾಂಗವಾಗಿದೆ” ಎನ್ನುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 4:6
27 ತಿಳಿವುಗಳ ಹೋಲಿಕೆ  

ಬಳಿಕ ಮಾನವನಿಗೆ ಇಂತೆಂದನು: ‘ಸರ್ವೇಶ್ವರನಲ್ಲಿ ಭಯಭಕ್ತಿ ಇಡುವುದೇ ಸುಜ್ಞಾನ ದುಷ್ಟತನವನ್ನು ಬಿಟ್ಟುಬಿಡುವುದೇ ವಿವೇಕ’.”


ಸುಜ್ಞಾನಕ್ಕೆ ಮೂಲವು ದೈವಭಯವು I ಅದರ ಪಾಲನೆಯು ವಿವೇಕತನವು I ಪ್ರಭುವಿಗೆ ಸ್ತೋತ್ರ ಸದಾಕಾಲವು II


ನಿನ್ನ ಬೋಧಕರು ಯಾರೆಂಬುದು ನಿನಗೆ ಗೊತ್ತಿದೆ. ಚಿಕ್ಕಂದಿನಿಂದಲೇ ನೀನು ಪವಿತ್ರಗ್ರಂಥವನ್ನು ಪರಿಚಯಮಾಡಿಕೊಂಡಿರುವೆ. ಯೇಸುಕ್ರಿಸ್ತರನ್ನು ವಿಶ್ವಾಸಿಸುವುದರ ಮೂಲಕ ಜೀವೋದ್ಧಾರವನ್ನು ಪಡೆಯಬಹುದೆಂಬ ಜ್ಞಾನವು ಲಭಿಸುವುದು ಆ ಪವಿತ್ರಗ್ರಂಥದಿಂದಲೇ.


ಸೊಲೊಮೋನನ ಜ್ಞಾನವಿಶೇಷವನ್ನು ಕುರಿತು ಕೇಳಿದ ಸರ್ವಜನಾಂಗಗಳ ಭೂಪಾಲರಲ್ಲಿ ಅನೇಕರು ಅವನ ಜ್ಞಾನವಾಕ್ಯಗಳನ್ನು ಕೇಳುವುದಕ್ಕಾಗಿ ಬರುತ್ತಿದ್ದರು.


ನಿಮ್ಮಲ್ಲಿ ಯಾರಾದರೂ ಜ್ಞಾನಿಯೂ ವಿವೇಕಿಯೂ ಆದವನು ಇದ್ದಾನೋ? ಅಂಥವನು ಜ್ಞಾನದ ಲಕ್ಷಣವಾಗಿರುವ ವಿನಯಶೀಲತೆಯನ್ನು ತನ್ನ ನಡೆನುಡಿಯಲ್ಲಿ ತೋರ್ಪಡಿಸಲಿ.


ಜ್ಞಾನಿಗಳು ನಾಚಿಕೆಪಡುವರು, ನಿಬ್ಬೆರಗಾಗಿ ಬೋನಿಗೆ ಸಿಕ್ಕಿಬೀಳುವರು. ಏಕೆಂದರೆ ಸರ್ವೇಶ್ವರನಾದ ನನ್ನ ಮಾತನ್ನು ಅವರು ನಿರಾಕರಿಸಿದ್ದಾರೆ. ಇದು ತಾನೋ ಅವರ ಜ್ಞಾನ?


ಸರ್ವೇಶ್ವರನಲ್ಲಿ ಭಯಭಕ್ತಿಯೇ ಜ್ಞಾನಕ್ಕೆ ಮೂಲ; ಮೂರ್ಖರಿಗಾದರೋ ಜ್ಞಾನ, ಶಿಸ್ತು ಎಂದರೆ ತಾತ್ಸಾರ.


ಪ್ರಭುವಿನ ಆಜ್ಞೆ ಪರಿಪೂರ್ಣ; ಜೀವನಕದು ನವಚೇತನ I ನಂಬಲರ್ಹ; ಪ್ರಭುವಿನ ಶಾಸನ ಮುಗ್ದರಿಗದು ಸುಜ್ಞಾನ II


ಆಗ ಎಲ್ಲ ರಾಷ್ಟ್ರಗಳು ನಿಮ್ಮನ್ನು ಧನ್ಯರೆಂದು ಹೊಗಳುವರು. ನಿಮ್ಮ ನಾಡು ಚೆಲುವಿನ ನಾಡಾಗಿರುವುದು.” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.


ಬಳಿಕ ರಾಜನು ಶಾಸ್ತ್ರೀಯ ವಿದ್ಯೆಯ ಎಲ್ಲ ವಿಷಯಗಳಲ್ಲಿ ಅವರನ್ನು ವಿಚಾರಮಾಡಿದಾಗ ಸಮಸ್ತರಾಜ್ಯದಲ್ಲಿನ ಎಲ್ಲ ಜೋಯಿಸರಿಗಿಂತಲೂ ಮಂತ್ರವಾದಿಗಳಿಗಿಂತಲೂ ಹತ್ತರಷ್ಟು ನಿಪುಣರಾಗಿ ಕಂಡುಬಂದರು.


ವಿವೇಕಿಯ ಜ್ಞಾನ ಸನ್ಮಾರ್ಗದಲ್ಲಿ ನಡೆಸುತ್ತದೆ; ಮೂಢರ ಮೂರ್ಖತನ ಮೋಸಗೊಳಿಸುತ್ತದೆ.


‘ಬೇಲ್ತೆಶಚ್ಚರನೇ, ಜೋಯಿಸರಲ್ಲಿ ಪ್ರಾಮುಖ್ಯನೇ, ಪರಿಶುದ್ಧ ದೇವರ ಆತ್ಮ ನಿನ್ನಲ್ಲಿ ನೆಲೆಯಾಗಿದೆಯೆಂದು ತಿಳಿದಿದ್ದೇನೆ. ಯಾವ ರಹಸ್ಯವೂ ನಿನಗೆ ಅಶೋಧ್ಯವಲ್ಲವೆಂದು ನನಗೆ ಗೊತ್ತು. ಆದುದರಿಂದ ನಾನು ಕಂಡ ಕನಸನ್ನೂ ಅದರ ಅರ್ಥವನ್ನೂ ನನಗೆ ತಿಳಿಸು.’


ಈ ಸಂಗತಿಗಳನ್ನೆಲ್ಲಾ ನೀವು ಜ್ಞಾಪಕಮಾಡಿಕೊಂಡು ಈ ಒಡಂಬಡಿಕೆಯ ವಾಕ್ಯಗಳನ್ನು ಅನುಸರಿಸಿ ನಡೆಯಬೇಕು; ಆಗ ನೀವು ನಡೆಸುವ ಕೆಲಸಕಾರ್ಯಗಳಲ್ಲಿ ಜಾಣರಾಗಿ ಅಭಿವೃದ್ಧಿ ಹೊಂದುವಿರಿ.


“ನಾನು ಈಗ ನಿಮಗೆ ಹೇಳಿದ ಎಚ್ಚರಿಕೆಯ ಮಾತುಗಳನ್ನೆಲ್ಲ ಮನಸ್ಸಿನಲ್ಲಿಟ್ಟುಕೊಳ್ಳಿರಿ; ನಿಮ್ಮ ಸಂತತಿಯವರಿಗೆ ಈ ಧರ್ಮಶಾಸ್ತ್ರದ ನಿಯಮಗಳನ್ನು ಅನುಸರಿಸಬೇಕೆಂದು ಆಜ್ಞಾಪಿಸಿರಿ.


ಇದು ನಿರರ್ಥಕವೆಂದು ಭಾವಿಸಬೇಡಿ; ಇದರಿಂದ ನೀವು ಬಾಳುವಿರಿ; ನೀವು ಜೋರ್ಡನ್ ನದಿಯನ್ನು ದಾಟಿ ಸ್ವಾಧೀನಮಾಡಿಕೊಳ್ಳಲು ಹೋಗುವ ನಾಡಿನಲ್ಲಿ ಇದನ್ನು ಅನುಸರಿಸುವುದರಿಂದಲೇ ಬಹುಕಾಲ ಇರುವಿರಿ,” ಎಂದು ಹೇಳಿದನು.


ಸರ್ವೇಶ್ವರನಾದ ದೇವರು ಹೀಗೆಂದರು: “ನಾನಾ ದೇಶಗಳ ನಡುವೆ, ನಾನಾ ಜನಾಂಗಗಳ ಮಧ್ಯೆ ನಾನು ಸ್ಥಾಪಿಸಿದ ಜೆರುಸಲೇಮ್ ಪಟ್ಟಣ ಈ ಮನೆ.


ನಾನು ನನ್ನ ಧರ್ಮವನ್ನು ಲಕ್ಷಾಂತರ ವಿಧಿಗಳ ರೂಪದಲ್ಲಿ ಬರೆದುಕೊಟ್ಟರೂ ಅವುಗಳು ತನಗೆ ಪರಕೀಯವೆಂದು ಭಾವಿಸುತ್ತದೆ.


ಪ್ರಭುವಿನ ನಿಯಮ ನೀತಿಬದ್ಧ; ಮನಸ್ಸಿಗದು ಒಸಗೆ I ಪ್ರಭುವಿನ ಕಟ್ಟಳೆ ಪರಿಶುದ್ಧ; ಕಣ್ಣಿಗದು ದೀವಿಗೆ II


ಮೂಢರಿಗೆ ಬುದ್ಧಿಯನ್ನೂ ಯುವಜನರಿಗೆ ತಿಳುವಳಿಕೆಯನ್ನೂ ಕಲಿಸುವುದಕ್ಕೆ ಒದಗುತ್ತವೆ ಈ ಜ್ಞಾನೋಕ್ತಿಗಳು.


ಇವುಗಳನ್ನು ಕೇಳಿ ಜಾಣನು ಇನ್ನೂ ಜಾಣ ನಾಗುವನು, ವಿವೇಕಿಯು ಮತ್ತಷ್ಟು ಜ್ಞಾನಸಂಪನ್ನನಾಗುವನು.


ಸದಾಚಾರದಿಂದ ನಾಡಿನ ಉನ್ನತಿ; ಅನಾಚಾರದಿಂದ ಅದರ ಅವನತಿ.


ಸರ್ವೇಶ್ವರ ಮುಕ್ತಿದಾತನಾದುದರಿಂದ ಧರ್ಮಶಾಸ್ತ್ರಕ್ಕೆ ಮಹಿಮೆಯಿತ್ತು ಅದನ್ನು ಮಹತ್ತಾಗಿಸಿದ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು