Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 4:8 - ಕನ್ನಡ ಸತ್ಯವೇದವು C.L. Bible (BSI)

8 ನಾನು ಈ ದಿನ ನಿಮ್ಮ ಮುಂದಿಡುವ ಇಂಥ ನ್ಯಾಯಯುತವಾದ ಆಜ್ಞಾವಿಧಿಗಳನ್ನು ಒಳಗೊಂಡ ಈ ಧರ್ಮಶಾಸ್ತ್ರಕ್ಕೆ ಸಮಾನವಾದುದು ಬೇರೆ ಯಾವ ಜನಾಂಗಕ್ಕೆ ಉಂಟು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನಾನು ಈ ಹೊತ್ತು ನಿಮ್ಮ ಮುಂದೆ ಇಡುವ ಇಂಥ ನ್ಯಾಯವಾದ ಆಜ್ಞಾವಿಧಿಗಳುಳ್ಳ ಈ ಧರ್ಮಶಾಸ್ತ್ರಕ್ಕೆ ಸಮಾನವಾದದ್ದು ಬೇರೆ ಯಾವ ಜನಾಂಗಕ್ಕೆ ಉಂಟು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನಾನು ಈ ಹೊತ್ತು ನಿಮ್ಮ ಮುಂದೆ ಇಡುವ ಇಂಥ ನ್ಯಾಯವಾದ ಆಜ್ಞಾವಿಧಿಗಳುಳ್ಳ ಈ ಧರ್ಮಶಾಸ್ತ್ರಕ್ಕೆ ಸಮಾನವಾದದ್ದು ಬೇರೆ ಯಾವ ಜನಾಂಗಕ್ಕೆ ಉಂಟು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನಾನು ನಿಮಗೆ ಈ ಹೊತ್ತು ಕೊಡುವ ಉಪದೇಶಗಳಿಗೆ ನ್ಯಾಯದಲ್ಲೂ ಒಳ್ಳೆಯದರಲ್ಲೂ ಸರಿಸಮಾನವಾದ ಕಟ್ಟಳೆಗಳನ್ನು ಮತ್ತು ನಿಯಮಗಳನ್ನು ಬೇರೆ ಯಾವ ದೊಡ್ಡ ದೇಶವೂ ಹೊಂದಿಲ್ಲ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಇದಲ್ಲದೆ ನಾನು ಈ ಹೊತ್ತು ನಿಮ್ಮ ಮುಂದೆ ಇಡುವ ಈ ಎಲ್ಲಾ ನಿಯಮದ ಪ್ರಕಾರ ನೀತಿ ಮತ್ತು ನ್ಯಾಯನಿಯಮಗಳುಳ್ಳ ದೊಡ್ಡ ಜನಾಂಗ ಯಾವುದು?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 4:8
18 ತಿಳಿವುಗಳ ಹೋಲಿಕೆ  

ನಿನ್ನ ಆಜ್ಞೆಗಳೆಲ್ಲ ನಂಬಲರ್ಹವಾದುವಯ್ಯಾ I ನಿಷ್ಕಾರಣವಾಗಿ ಹಿಂಸಿಸುತಿಹರು, ನೆರವಾಗಯ್ಯಾ II


ನಾ ಬಲ್ಲೆ ಸರ್ವಸಂಪೂರ್ಣತೆಗೂ ಮಿತಿ ಉಂಟೆಂದು I ನಿನ್ನ ಆಜ್ಞೆಗಳಾದರೋ ಅಪರಿಮಿತವಾದುವೆಂದು II


ಹೌದು, ಎಲ್ಲಾ ವಿಧದಲ್ಲಿಯೂ ಹೆಚ್ಚು ಪ್ರಯೋಜನವಿದೆ. ಮೊದಲನೆಯದಾಗಿ, ದೇವರು ತಮ್ಮ ಸಂದೇಶವನ್ನು ವಹಿಸಿಕೊಟ್ಟದ್ದು ಯೆಹೂದ್ಯರಿಗೆ ತಾನೆ?


ನಾನು ನಿರ್ಮಿಸಿದ ಬೇರೆ ಎಲ್ಲಾ ಜನಾಂಗಗಳಿಗಿಂತ ಇವರಿಗೆ ಹೆಚ್ಚಾದ ಕೀರ್ತಿಘನಮಾನಗಳನ್ನುಂಟು ಮಾಡುವೆನು ಹಾಗು ಇವರು ನನ್ನ ಮಾತಿನ ಮೇರೆಗೆ ತಮ್ಮ ದೇವರಾದ ಸರ್ವೇಶ್ವರನಿಗೆ ಮೀಸಲಾದ ಜನರಾಗಲು ಒಡಂಬಟ್ಟಿದ್ದಾರೆ,’ ಎನ್ನುವರು,” ಎಂದು ಹೇಳಿದನು.


ನೀತಿನ್ಯಾಯ ನಿನ್ನ ಸಿಂಹಾಸನದಸ್ತಿವಾರ I ಪ್ರೀತಿಸತ್ಯತೆ ನಿನ್ನ ಸಾನ್ನಿಧ್ಯ ಪರಿವಾರ II


ಇವೇ ಮುಗಿಲೂ ಕಾರ್ಮುಗಿಲೂ ಆತನ ಸುತ್ತಲು I ನ್ಯಾಯ-ನೀತಿ ಆತನ ಗದ್ದುಗೆಯಸ್ತಿವಾರಗಳು II


ನೀತಿಯುತ ಹಾಗೂ ಶಾಶ್ವತ ನಿನ್ನಾ ಶಾಸನ I ನಾ ಜೀವಿಸುವಂತೆ ದಯಪಾಲಿಸೆನಗೆ ಸುಜ್ಞಾನ II


ಸತ್ಯವೇ ನಿನ್ನ ವಾಕ್ಯದ ಸಾರಾಂಶ I ನಿನ್ನಯ ನೀತಿವಿಧಿಗಳೆಲ್ಲವೂ ಅನಿಶ II


ನಾನು ನನ್ನ ಧರ್ಮವನ್ನು ಲಕ್ಷಾಂತರ ವಿಧಿಗಳ ರೂಪದಲ್ಲಿ ಬರೆದುಕೊಟ್ಟರೂ ಅವುಗಳು ತನಗೆ ಪರಕೀಯವೆಂದು ಭಾವಿಸುತ್ತದೆ.


ಸೀನಾಯಿ ಬೆಟ್ಟದ ಮೇಲೆ ಇಳಿದುಬಂದು ಆಕಾಶದ ಕಡೆಯಿಂದ ಅವರೊಡನೆ ಮಾತಾಡಬಂದು ಅವರಿಗನುಗ್ರಹಿಸಿದಿರಿ ನೀತಿನಿಯಮಗಳನು ಸತ್ಯಧರ್ಮೋಪದೇಶವನು, ಶ್ರೇಷ್ಠ ಆಜ್ಞಾವಿಧಿಗಳನು.


ಸತ್ಯವಾದುವು ನೀನಿತ್ತ ಕಟ್ಟಳೆಗಳು I ಪೂರ್ಣವಿಶ್ವಾಸನೀಯವಾದುವು ಅವುಗಳು II


ಸರ್ವೇಶ್ವರ ಮುಕ್ತಿದಾತನಾದುದರಿಂದ ಧರ್ಮಶಾಸ್ತ್ರಕ್ಕೆ ಮಹಿಮೆಯಿತ್ತು ಅದನ್ನು ಮಹತ್ತಾಗಿಸಿದ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು