ಧರ್ಮೋಪದೇಶಕಾಂಡ 4:9 - ಕನ್ನಡ ಸತ್ಯವೇದವು C.L. Bible (BSI)9 ಹೀಗಿರುವಲ್ಲಿ, ನೀವು ಬಹಳ ಜಾಗರೂಕತೆಯಿಂದಿರಿ; ನಿಮ್ಮ ಕಣ್ಣುಗಳಿಂದಲೇ ನೋಡಿದ ಘಟನೆಗಳನ್ನು ಎಷ್ಟು ಮಾತ್ರಕ್ಕೂ ಮರೆಯದಿರಿ; ಜೀವಮಾನಪರ್ಯಂತ ಇವುಗಳನ್ನು ನೆನಪಿನಲ್ಲಿ ಇಡಿ; ನಿಮ್ಮ ಮಕ್ಕಳಿಗೂ ಮೊಮ್ಮಕ್ಕಳಿಗೂ ತಿಳಿಸುತ್ತಾ ಹೋಗಿ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಹೀಗಿರುವುದರಿಂದ ನೀವು ಬಹು ಜಾಗರೂಕತೆಯಿಂದ ನಿಮ್ಮ ನಿಮ್ಮ ಮನಸ್ಸುಗಳನ್ನು ಕಾಪಾಡಿಕೊಳ್ಳುವವರಾಗಿ, ನೀವು ನೋಡಿದ ಸಂಗತಿಗಳನ್ನು ಎಷ್ಟು ಮಾತ್ರವೂ ಮರೆಯದೆ ಜೀವದಿಂದಿರುವ ವರೆಗೂ ಅವುಗಳನ್ನು ನೆನಪಿನಲ್ಲಿಟ್ಟುಕೊಂಡು ನಿಮ್ಮ ಮಕ್ಕಳಿಗೂ ಮತ್ತು ಮೊಮ್ಮಕ್ಕಳಿಗೂ ತಿಳಿಸುತ್ತಾ ಹೋಗಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಹೀಗಿರುವದರಿಂದ ನೀವು ಬಹು ಜಾಗರೂಕತೆಯಿಂದ ನಿಮ್ಮನಿಮ್ಮ ಮನಸ್ಸುಗಳನ್ನು ಕಾಪಾಡಿಕೊಳ್ಳುವವರಾಗಿ ನೀವು ನೋಡಿದ ಸಂಗತಿಗಳನ್ನು ಎಷ್ಟು ಮಾತ್ರವೂ ಮರೆಯದೆ ಜೀವದಿಂದಿರುವವರೆಗೂ ಅವುಗಳನ್ನು ನೆನಪಿನಲ್ಲಿಟ್ಟುಕೊಂಡು ನಿಮ್ಮ ಮಕ್ಕಳಿಗೂ ಮೊಮ್ಮಕ್ಕಳಿಗೂ ತಿಳಿಸುತ್ತಾ ಹೋಗಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಆದರೆ ನೀವು ನೋಡಿದ್ದನ್ನು ನಿಮ್ಮ ಜೀವಮಾನವೆಲ್ಲಾ ಜಾಗ್ರತೆಯುಳ್ಳವರಾಗಿದ್ದು ಮರೆಯದೆ ಅದನ್ನು ನಿಮ್ಮ ಮಕ್ಕಳಿಗೂ ಮೊಮ್ಮಕ್ಕಳಿಗೂ ತಿಳಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ನಿಮ್ಮ ಕಣ್ಣುಗಳಿಂದ ನೋಡಿದ ಕಾರ್ಯಗಳನ್ನು ನೀವು ಮರೆಯದ ಹಾಗೆಯೂ, ನೀವು ಬದುಕುವ ದಿನಗಳೆಲ್ಲಾ ಅವು ನಿಮ್ಮ ಹೃದಯಕ್ಕೆ ದೂರವಾಗದ ಹಾಗೆಯೂ ಬಹು ಜಾಗ್ರತೆಯಾಗಿದ್ದು, ಕಾಪಾಡಿಕೊಳ್ಳಿರಿ. ಅವುಗಳನ್ನು ನಿಮ್ಮ ಮಕ್ಕಳಿಗೂ, ನಿಮ್ಮ ಮಕ್ಕಳ ಮಕ್ಕಳಿಗೂ ಬೋಧಿಸಿರಿ. ಅಧ್ಯಾಯವನ್ನು ನೋಡಿ |
ಅವನು ಗರ್ವದಿಂದ ತನ್ನ ಸ್ವದೇಶದವರನ್ನು ಹೀಯಾಳಿಸಬಾರದು; ಸರ್ವೇಶ್ವರನ ಆಜ್ಞೆಯನ್ನು ಮೀರಿ ಎಡಬಲಕ್ಕೆ ತಿರುಗಿಕೊಳ್ಳಬಾರದು; ದೇವರಾದ ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವನಾಗಿರಬೇಕು; ಈ ಧರ್ಮಶಾಸ್ತ್ರದ ಎಲ್ಲ ವಾಕ್ಯಗಳನ್ನೂ ವಿಧಿಗಳನ್ನೂ ಅನುಸರಿಸಲು ಅಭ್ಯಾಸಮಾಡಿಕೊಳ್ಳಬೇಕು; ಈ ಕಾರಣ ಈ ಗ್ರಂಥ ಅವನ ಬಳಿಯಲ್ಲೇ ಇರಬೇಕು. ಅವನು ತನ್ನ ಜೀವಮಾನವೆಲ್ಲಾ ಇದನ್ನು ಓದಿಕೊಳ್ಳುತ್ತಾ ಇರಬೇಕು.