ಧರ್ಮೋಪದೇಶಕಾಂಡ 5:1 - ಕನ್ನಡ ಸತ್ಯವೇದವು C.L. Bible (BSI)1 ಮೋಶೆ ಇಸ್ರಯೇಲರನ್ನು ಕರೆದು ಹೀಗೆ ಸಂಬೋಧಿಸಿದನು: “ಇಸ್ರಯೇಲರೇ, ನಾನು ಈಗ ನಿಮಗೆ ತಿಳಿಸಲಿರುವ ಆಜ್ಞಾವಿಧಿಗಳನ್ನು ಕಿವಿಗೊಟ್ಟು ಕೇಳಿ; ಇವುಗಳನ್ನು ಗ್ರಹಿಸಿಕೊಂಡು ಅನುಸರಿಸಿ ನಡೆಯಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಮೋಶೆ ಎಲ್ಲಾ ಇಸ್ರಾಯೇಲರನ್ನು ಕರೆದು, “ಇಸ್ರಾಯೇಲರೇ, ನಾನು ಈಗ ನಿಮಗೆ ತಿಳಿಸುವ ಆಜ್ಞಾವಿಧಿಗಳನ್ನು ಕೇಳಿರಿ; ಇವುಗಳನ್ನು ಗ್ರಹಿಸಿಕೊಂಡು ಅನುಸರಿಸಿ ನಡೆಯಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಮೋಶೆ ಇಸ್ರಾಯೇಲ್ಯರೆಲ್ಲರನ್ನು ಕರೆದು ಹೀಗಂದನು - ಇಸ್ರಾಯೇಲ್ಯರೇ, ನಾನು ಈಗ ನಿಮಗೆ ತಿಳಿಸುವ ಆಜ್ಞಾವಿಧಿಗಳನ್ನು ಕೇಳಿರಿ; ಇವುಗಳನ್ನು ಗ್ರಹಿಸಿಕೊಂಡು ಅನುಸರಿಸಿ ನಡೆಯಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಇಸ್ರೇಲ್ ಸಮೂಹದವರನ್ನೆಲ್ಲಾ ಮೋಶೆ ಒಟ್ಟಾಗಿ ಸೇರಿಸಿ ಅವರಿಗೆ ಹೇಳಿದ್ದೇನೆಂದರೆ: “ಇಸ್ರೇಲ್ ಜನರೇ, ನಾನು ಈ ಹೊತ್ತು ಹೇಳುವ ಕಟ್ಟಳೆಗಳಿಗೆ ಕಿವಿಗೊಡಿರಿ. ಇವುಗಳನ್ನು ಕಲಿತುಕೊಂಡು ಪಾಲಿಸುವವರಾಗಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಮೋಶೆಯು ಇಸ್ರಾಯೇಲರನ್ನೆಲ್ಲಾ ಕರೆದು ಅವರಿಗೆ ಹೀಗೆ ಹೇಳಿದನು: ಇಸ್ರಾಯೇಲರೇ, ನಾನು ಈ ಹೊತ್ತು ನೀವು ಕೇಳುವಂತೆ ಹೇಳುವ ನಿಯಮಗಳನ್ನೂ, ನ್ಯಾಯಗಳನ್ನೂ ಕೇಳಿರಿ. ಇವುಗಳನ್ನು ಕಲಿತು ಕೈಗೊಂಡು ನಡೆಯಬೇಕು. ಅಧ್ಯಾಯವನ್ನು ನೋಡಿ |
ಅಲ್ಲಿ ಸರ್ವೇಶ್ವರ ಇಸ್ರಯೇಲರಿಗೆ ಒಂದು ನಿಯಮವನ್ನು ಕೊಟ್ಟರು. ಅದು ಮಾತ್ರವಲ್ಲ, ಅವರನ್ನು ಪರೀಕ್ಷಿಸಿದರು. ಅವರಿಗೆ, “ನೀವು ನಿಮ್ಮ ದೇವರಾದ ನನ್ನ ಮಾತನ್ನು ಶ್ರದ್ಧೆಯಿಂದ ಕೇಳಿ, ನನ್ನ ದೃಷ್ಟಿಗೆ ಸರಿಬೀಳುವುದನ್ನೆ ಮಾಡಿ ನನ್ನ ಆಜ್ಞೆಗಳಿಗೆ ವಿಧೇಯರಾಗಿದ್ದು, ನನ್ನ ಕಟ್ಟಳೆಗಳನ್ನೆಲ್ಲ ಅನುಸರಿಸಿ ನಡೆದರೆ ನಾನು ಈಜಿಪ್ಟಿನವರಿಗೆ ಉಂಟುಮಾಡಿದ ವ್ಯಾಧಿಗಳಲ್ಲಿ ಒಂದನ್ನೂ ನಿಮಗೆ ಬರಮಾಡುವುದಿಲ್ಲ. ಸರ್ವೇಶ್ವರನೆಂಬ ನಾನೇ ನಿಮಗೆ ಆರೋಗ್ಯದಾಯಕ,” ಎಂದರು.
ಅವನು ಗರ್ವದಿಂದ ತನ್ನ ಸ್ವದೇಶದವರನ್ನು ಹೀಯಾಳಿಸಬಾರದು; ಸರ್ವೇಶ್ವರನ ಆಜ್ಞೆಯನ್ನು ಮೀರಿ ಎಡಬಲಕ್ಕೆ ತಿರುಗಿಕೊಳ್ಳಬಾರದು; ದೇವರಾದ ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವನಾಗಿರಬೇಕು; ಈ ಧರ್ಮಶಾಸ್ತ್ರದ ಎಲ್ಲ ವಾಕ್ಯಗಳನ್ನೂ ವಿಧಿಗಳನ್ನೂ ಅನುಸರಿಸಲು ಅಭ್ಯಾಸಮಾಡಿಕೊಳ್ಳಬೇಕು; ಈ ಕಾರಣ ಈ ಗ್ರಂಥ ಅವನ ಬಳಿಯಲ್ಲೇ ಇರಬೇಕು. ಅವನು ತನ್ನ ಜೀವಮಾನವೆಲ್ಲಾ ಇದನ್ನು ಓದಿಕೊಳ್ಳುತ್ತಾ ಇರಬೇಕು.