Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 5:11 - ಕನ್ನಡ ಸತ್ಯವೇದವು C.L. Bible (BSI)

11 ‘ನಿನ್ನ ದೇವರಾದ ಸರ್ವೇಶ್ವರನ ಹೆಸರನ್ನು ದುರುಪಯೋಗಿಸಿಕೊಳ್ಳಬೇಡ. ಏಕೆಂದರೆ ಸರ್ವೇಶ್ವರನಾದ ನಾನು ನನ್ನ ಹೆಸರನ್ನು ದುರುಪಯೋಗಿಸಿಕೊಳ್ಳುವವನನ್ನು ಶಿಕ್ಷಿಸದೆ ಬಿಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 “ನಿನ್ನ ದೇವರಾದ ಯೆಹೋವನ ಹೆಸರನ್ನು ಅಯೋಗ್ಯಕಾರ್ಯಕ್ಕಾಗಿ ಉಪಯೋಗಿಸಬಾರದು. ಯೆಹೋವನು ತನ್ನ ಹೆಸರನ್ನು ಅಯೋಗ್ಯ ಕಾರ್ಯಕ್ಕಾಗಿ ಉಪಯೋಗಿಸುವವನನ್ನು ಶಿಕ್ಷಿಸದೆ ಬಿಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ನಿನ್ನ ದೇವರಾದ ಯೆಹೋವನ ಹೆಸರನ್ನು ಅಯೋಗ್ಯ ಕಾರ್ಯಕ್ಕಾಗಿ ಎತ್ತಬಾರದು. ಯೆಹೋವನು ತನ್ನ ಹೆಸರನ್ನು ಅಯೋಗ್ಯ ಕಾರ್ಯಕ್ಕಾಗಿ ಎತ್ತುವವನನ್ನು ಶಿಕ್ಷಿಸದೆ ಬಿಡುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ‘ನಿನ್ನ ದೇವರಾದ ಯೆಹೋವನ ಹೆಸರನ್ನು ಅಯೋಗ್ಯ ಕಾರ್ಯಕ್ಕಾಗಿ ಎತ್ತಬಾರದು. ಯಾರಾದರೂ ಅಯೋಗ್ಯ ಕಾರ್ಯಕ್ಕಾಗಿ ನನ್ನ ಹೆಸರನ್ನು ಉಪಯೋಗಿಸಿದರೆ ನಾನು ಅವನನ್ನು ಶಿಕ್ಷಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ನಿನ್ನ ದೇವರಾದ ಯೆಹೋವ ದೇವರ ಹೆಸರನ್ನು ದುರುಪಯೋಗಮಾಡಬಾರದು, ಏಕೆಂದರೆ ಯೆಹೋವ ದೇವರು ತಮ್ಮ ಹೆಸರನ್ನು ದುರುಪಯೋಗಮಾಡುವವರನ್ನು ಶಿಕ್ಷಿಸದೆ ಬಿಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 5:11
9 ತಿಳಿವುಗಳ ಹೋಲಿಕೆ  

ನಿನ್ನ ದೇವರಾದ ಸರ್ವೇಶ್ವರನ ಹೆಸರನ್ನು ದುರುಪಯೋಗಪಡಿಸಿಕೊಳ್ಳಬೇಡ. ಏಕೆಂದರೆ ಸರ್ವೇಶ್ವರನಾದ ನಾನು ನನ್ನ ಹೆಸರನ್ನು ದುರುಪಯೋಗ ಪಡಿಸುವವನನ್ನು ಶಿಕ್ಷಿಸದೆ ಬಿಡುವುದಿಲ್ಲ.


ನಿನ್ನ ದೇವರಾದ ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವನಾಗಿರು; ಅವರಿಗೇ ಸೇವೆಮಾಡು; ಅವರ ಹೆಸರು ಹೇಳಿ ಪ್ರಮಾಣಮಾಡು.


ನನ್ನ ಹೆಸರಿನ ಮೇಲೆ ಸುಳ್ಳಾಣೆಯಿಟ್ಟು ನಿನ್ನ ದೇವರ ನಾಮಕ್ಕೆ ಅಪಕೀರ್ತಿ ತರಬೇಡ. ನಾನೇ ಸರ್ವೇಶ್ವರ.


ಮುಖ್ಯವಾಗಿ ಸಹೋದರರೇ, ಆಣೆಯಿಡಬೇಡಿ. ಪರಲೋಕದ ಮೇಲಾಗಲಿ, ಭೂಲೋಕದ ಮೇಲಾಗಲಿ, ಇನ್ನಾವುದರ ಮೇಲಾಗಲಿ ನೀವು ಆಣೆಯಿಡಬಾರದು. ಹೌದಾದರೆ ಹೌದು, ಇಲ್ಲವಾದರೆ ಇಲ್ಲ ಎನ್ನಿ. ಆಗ ನೀವು ದಂಡನಾತೀರ್ಪಿಗೆ ಗುರಿಯಾಗುವುದಿಲ್ಲ.


‘ಸರ್ವೇಶ್ವರ ಸ್ವಾಮಿಯ ಜೀವದಾಣೆ’ ಎಂದು ಸತ್ಯ, ನ್ಯಾಯ, ನೀತಿಗೆ ಅನುಗುಣವಾಗಿ ಪ್ರಮಾಣಮಾಡಿರಿ, ಆಗ ರಾಷ್ಟ್ರಗಳೆಲ್ಲ ನನ್ನಿಂದ ಆಶೀರ್ವಾದ ಪಡೆಯಲು ಆಶಿಸುವರು, ನನ್ನಲ್ಲೇ ಹೆಮ್ಮೆಪಡುವರು.”


ಅವರಾಡುವ ಮಾತುಗಳು ನಿನಗೆ ವಿರೋಧ I ಹಗೆಗಳನು ಎತ್ತಿಕ್ಕುವರು ನಿನಗೆ ವಿರುದ್ಧ II


ನಿಮ್ಮ ದೇವರಾದ ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವರಾಗಿ ಅವರಿಗೇ ಸೇವೆಸಲ್ಲಿಸಿ. ಅವರನ್ನು ಹೊಂದಿಕೊಂಡು ಅವರ ಹೆಸರಿನ ಮೇಲೆಯೇ ಪ್ರಮಾಣಮಾಡಬೇಕು.


ಸುಳ್ಳುಸಾಕ್ಷಿ, ನರಹತ್ಯೆ, ಕಳ್ಳತನ, ವ್ಯಭಿಚಾರ ಇವೆಲ್ಲ ತುಂಬಿಕೊಂಡಿವೆ; ದೊಂಬಿದಾಂಧಲೆಗಳು ನಡೆಯುತ್ತಿವೆ, ನಾಡೆಲ್ಲ ರಕ್ತಮಯವಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು