Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 5:12 - ಕನ್ನಡ ಸತ್ಯವೇದವು C.L. Bible (BSI)

12 ‘ನಿನ್ನ ದೇವರೂ ಸರ್ವೇಶ್ವರನೂ ಆದ ನಾನು ಆಜ್ಞಾಪಿಸಿದಂತೆ ನೀನು ವಿಶ್ರಾಂತಿ ದಿನವನ್ನು ಪವಿತ್ರವಾಗಿ ಆಚರಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 “ನಿನ್ನ ದೇವರಾದ ಯೆಹೋವನು ಆಜ್ಞಾಪಿಸಿದಂತೆ ನೀನು ಸಬ್ಬತ್‍ ದಿನವನ್ನು ದೇವರ ದಿನವೆಂದು ಆಚರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನಿನ್ನ ದೇವರಾದ ಯೆಹೋವನು ಆಜ್ಞಾಪಿಸಿದಂತೆ ನೀನು ಸಬ್ಬತ್ ದಿನವನ್ನು ದೇವರ ದಿನವೆಂದು ಆಚರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ‘ನಿನ್ನ ದೇವರಾದ ಯೆಹೋವನು ಆಜ್ಞಾಪಿಸಿದಂತೆ ಸಬ್ಬತ್ ದಿನವನ್ನು ವಿಶೇಷದಿನವೆಂದು ಪರಿಗಣಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ನಿನ್ನ ದೇವರಾದ ಯೆಹೋವ ದೇವರು ನಿನಗೆ ಆಜ್ಞಾಪಿಸಿದಂತೆ ಸಬ್ಬತ್ ದಿನವನ್ನು ಪರಿಶುದ್ಧ ದಿನವೆಂದು ಆಚರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 5:12
11 ತಿಳಿವುಗಳ ಹೋಲಿಕೆ  

“ನೀವು ಸಬ್ಬತ್‍ದಿನವನ್ನು ತಾತ್ಸಾರಮಾಡದೆ, ಆ ನನ್ನ ಪರಿಶುದ್ಧ ದಿನದಲ್ಲಿ ನಿಮ್ಮ ದೈನಂದಿನ ವ್ಯವಹಾರವನ್ನು ನಡೆಸದೆ, ಸ್ವೇಚ್ಛೆಯಾಗಿ ವರ್ತಿಸದೆ, ಸ್ವಕಾರ್ಯದಲ್ಲೇ ನಿರತರಾಗದೆ, ಹರಟೆಮಾತುಗಳಲ್ಲಿ ಕಾಲಕಳೆಯದೆ, ಸರ್ವೇಶ್ವರ ಸ್ವಾಮಿಯ ಸಬ್ಬತ್‍ದಿನ ಪರಿಶುದ್ಧವಾದುದು, ಸಂತೋಷಕರವಾದುದು, ಮಾನ್ಯತೆಗೆ ಅರ್ಹವಾದುದು ಎಂದು ಸನ್ಮಾನಿಸಿದ್ದೇ ಆದರೆ


ಅನ್ಯದೇಶೀಯರಲ್ಲಿ ಯಾರು ಯಾರು ‘ಸರ್ವೇಶ್ವರ’ ಎಂದು ನನ್ನನ್ನು ಅವಲಂಭಿಸಿ, ಪೂಜಿಸಿ, ನನ್ನ ನಾಮವನ್ನು ಪ್ರೀತಿಸಿ, ನನಗೆ ದಾಸನಾಗಿ, ಸಬ್ಬತ್‍ದಿನವನ್ನು ಹೊಲೆಮಾಡದೆ ನನ್ನ ದಿನವೆಂದು ಆಚರಿಸಿ, ಜೊತೆಗೆ ನನ್ನ ಒಡಂಬಡಿಕೆಯನ್ನು ಸುಭದ್ರವಾಗಿ ಪಾಲಿಸುತ್ತಾರೋ,


ಬಳಿಕ ಯೇಸು ಅವರಿಗೆ, “ಸಬ್ಬತ್‍ದಿನ ಇರುವುದು ಮನುಷ್ಯನಿಗಾಗಿ ಹೊರತು ಮನುಷ್ಯ ಇರುವುದು ಸಬ್ಬತ್ತಿಗಾಗಿ ಅಲ್ಲ.


ಅದಕ್ಕೆ ಮೋಶೆ, “ಇದು ಸರ್ವೇಶ್ವರ ಹೇಳಿದ ಮಾತು. ನಾಳೆ ವಿಶ್ರಾಂತಿಯ ದಿನ, ಸರ್ವೇಶ್ವರನ ಪರಿಶುದ್ಧ ‘ಸಬ್ಬತ್’ ದಿನ. ಆಹಾರಕ್ಕೆ ಸುಡಬೇಕಾದುದನ್ನು ಸುಟ್ಟು, ಬೇಯಿಸಬೇಕಾದುದನ್ನು ಬೇಯಿಸಿದ ನಂತರ ಮಿಕ್ಕಿದ್ದನ್ನು ನಾಳೆಯ ತನಕ ಇಟ್ಟುಕೊಳ್ಳಿ,” ಎಂದನು.


ಆರು ದಿನಗಳು ಕೆಲಸ ಮಾಡಬಹುದು. ಏಳನೆಯ ದಿನ ವಿಶ್ರಾಂತಿದಿನವಾದ ಸಬ್ಬತ್, ಸರ್ವೇಶ್ವರನಾದ ನನಗೆ ಪರಿಶುದ್ಧ ದಿನ. ಇಂಥ ಸಬ್ಬತ್ ದಿನದಲ್ಲಿ ದುಡಿಯುವವನಿಗೆ ಮರಣ ಶಿಕ್ಷೆಯಾಗಬೇಕು.


ಆರು ದಿನಗಳು ದುಡಿದು ನಿನ್ನ ಕೆಲಸವನ್ನೆಲ್ಲ ಮಾಡು.


ಆ ಕಾಲದಲ್ಲಿ, ಜನರು ಸಬ್ಬತ್‍ದಿನ ಜುದೇಯನಾಡಿನಲ್ಲಿ ತೊಟ್ಟಿಯೊಳಗೆ ದ್ರಾಕ್ಷಿ ತುಳಿಯುವುದನ್ನು ಕಂಡೆ; ಅಂತೆಯೇ ಕಣದ ಕಾಳನ್ನು ಕೂಡಿಸಿ ಆ ಕಾಳು, ದ್ರಾಕ್ಷಾರಸ, ದ್ರಾಕ್ಷಿ, ಅಂಜೂರದ ಹಣ್ಣು, ಈ ಮುಂತಾದವುಗಳನ್ನು ಕತ್ತೆಗಳ ಮೇಲೆ ಹೇರಿಕೊಂಡು ಆ ದಿನದಲ್ಲೇ ಜೆರುಸಲೇಮಿಗೆ ತರುವುದನ್ನು ಗಮನಿಸಿದೆ. ಅವರು ಆ ಆಹಾರ ಪದಾರ್ಥಗಳನ್ನು ಮಾರುವುದಕ್ಕೆ ಬಂದಾಗ ಅವರನ್ನು ಗದರಿಸಿದೆ.


ಆ ಸಬ್ಬತ್ ದಿನದಲ್ಲಿ ನಿಮ್ಮ ಮನೆಗಳಿಂದ ಯಾವ ಹೊರೆಯನ್ನೂ ಈಚೆಗೆ ತೆಗೆದುಕೊಂಡು ಬರಬೇಡಿ. ಯಾವ ಕೆಲಸವನ್ನೂ ಮಾಡದಿರಿ. ನಾನು ನಿಮ್ಮ ಪೂರ್ವಜರಿಗೆ ಆಜ್ಞೆಮಾಡಿದಂತೆ ಸಬ್ಬತ್ ದಿನವನ್ನು ಪವಿತ್ರ ದಿನವನ್ನಾಗಿ ಆಚರಿಸಿರಿ.


ಆದುದರಿಂದ ಏಳನೆಯ ದಿನದಲ್ಲಿ ಜನರು ಕೆಲಸಮಾಡದೆ ವಿಶ್ರಮಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು