Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 5:16 - ಕನ್ನಡ ಸತ್ಯವೇದವು C.L. Bible (BSI)

16 ‘ನಿನ್ನ ದೇವರಾದ ಸರ್ವೇಶ್ವರ ಆಜ್ಞಾಪಿಸಿದಂತೆ, ನಿನ್ನ ತಂದೆತಾಯಿಗಳನ್ನು ಗೌರವಿಸು; ಗೌರವಿಸಿದರೆ ನಿನ್ನ ದೇವರೂ ಸರ್ವೇಶ್ವರನೂ ಆದ ನಾನು ನಿನಗೆ ಅನುಗ್ರಹಿಸುವ ನಾಡಿನಲ್ಲಿ ಬಹುಕಾಲ ಸುಕ್ಷೇಮವಾಗಿ ಬಾಳುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 “ನಿನ್ನ ದೇವರಾದ ಯೆಹೋವನು ಆಜ್ಞಾಪಿಸಿದಂತೆ ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು; ಸನ್ಮಾನಿಸಿದರೆ ನಿನ್ನ ದೇವರಾದ ಯೆಹೋವನು ನಿನಗೆ ಅನುಗ್ರಹಿಸುವ ದೇಶದಲ್ಲಿ ನೀನು ಬಹುಕಾಲ ಕ್ಷೇಮವಾಗಿ ಇರುವಿ, ಮತ್ತು ನಿನಗೆ ಒಳ್ಳೆಯದಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ನಿನ್ನ ದೇವರಾದ ಯೆಹೋವನು ಆಜ್ಞಾಪಿಸಿದಂತೆ ನಿನ್ನ ತಂದೆ ತಾಯಿಗಳನ್ನು ಸನ್ಮಾನಿಸಬೇಕು; ಸನ್ಮಾನಿಸಿದರೆ ನಿನ್ನ ದೇವರಾದ ಯೆಹೋವನು ನಿನಗೆ ಅನುಗ್ರಹಿಸುವ ದೇಶದಲ್ಲಿ ನೀನು ಬಹುಕಾಲ ಇರುವಿ, ಮತ್ತು ನಿನಗೆ ಮೇಲಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ‘ನಿಮ್ಮ ತಂದೆತಾಯಿಗಳನ್ನು ನೀವು ಸನ್ಮಾನಿಸಬೇಕು. ಇದು ನಿಮ್ಮ ದೇವರ ಆಜ್ಞೆ. ನೀವು ಇದಕ್ಕೆ ವಿಧೇಯರಾದರೆ ದೇವರು ನಿಮಗೆ ಕೊಡುವ ದೇಶದಲ್ಲಿ ನೀವು ಬಹುಕಾಲ ಬಾಳುವಿರಿ ಮತ್ತು ನಿಮಗೆ ಯಾವಾಗಲೂ ಶುಭವಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ನಿನ್ನ ದಿವಸಗಳು ಹೆಚ್ಚಾಗುವ ಹಾಗೆಯೂ, ನಿನ್ನ ದೇವರಾದ ಯೆಹೋವ ದೇವರು ನಿನಗೆ ಕೊಡುವ ದೇಶದಲ್ಲಿ ನಿನಗೆ ಒಳ್ಳೆಯದಾಗುವ ಹಾಗೆಯೂ, ನಿನ್ನ ದೇವರಾದ ಯೆಹೋವ ದೇವರು ಆಜ್ಞಾಪಿಸಿದಂತೆ ನಿನ್ನ ತಂದೆಯನ್ನೂ, ನಿನ್ನ ತಾಯಿಯನ್ನೂ ಗೌರವಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 5:16
17 ತಿಳಿವುಗಳ ಹೋಲಿಕೆ  

ನಿನ್ನ ತಂದೆತಾಯಿಗಳನ್ನು ಗೌರವಿಸು; ಗೌರವಿಸಿದರೆ ನಿನ್ನ ದೇವರೂ ಸರ್ವೇಶ್ವರನೂ ಆದ ನಾನು ನಿನಗೆ ಅನುಗ್ರಹಿಸುವ ನಾಡಿನಲ್ಲಿ ಬಹುಕಾಲ ಬಾಳುವೆ.


ಮಕ್ಕಳೇ, ಎಲ್ಲದರಲ್ಲೂ ನಿಮ್ಮ ತಂದೆತಾಯಿಗಳ ಮಾತು ಕೇಳಿರಿ. ಹೀಗೆ ಮಾಡಿದರೆ ಪ್ರಭುವಿಗೆ ಮೆಚ್ಚುಗೆಯಾಗುತ್ತದೆ.


“ಲೇವಿಯರು, ‘ತಂದೆತಾಯಿಗಳನ್ನು ಅವಮಾನಪಡಿಸಿದವನು ಶಾಪಗ್ರಸ್ತ,’ ಎನ್ನಲು ಜನರೆಲ್ಲರು, ‘ಆಮೆನ್’, ಎನ್ನಬೇಕು.


ನಾನು ಇಂದು ನಿಮಗೆ ತಿಳಿಸಿದ ಅವರ ಆಜ್ಞಾವಿಧಿಗಳನ್ನು ಅನುಸರಿಸಿ ನಡೆಯಿರಿ. ಆಗ ನಿಮಗೂ ನಿಮ್ಮ ಸಂತತಿಗೂ ಶುಭವುಂಟಾಗುವುದು; ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಶಾಶ್ವತವಾಗಿ ಕೊಡುವ ನಾಡಿನಲ್ಲಿ ನೀವು ದೀರ್ಘಕಾಲ ಬಾಳುವಿರಿ.”


ದೈವಾಜ್ಞೆಗಳು ನಿನಗೆ ತಿಳಿದೇ ಇವೆ; ‘ವ್ಯಭಿಚಾರ ಮಾಡಬೇಡ, ನರಹತ್ಯೆ ಮಾಡಬೇಡ, ಕದಿಯಬೇಡ, ಸುಳ್ಳುಸಾಕ್ಷಿ ಹೇಳಬೇಡ, ನಿನ್ನ ತಂದೆತಾಯಿಗಳನ್ನು ಗೌರವಿಸು’,” ಎಂದು ಯೇಸು ಅವನಿಗೆ ಉತ್ತರವಿತ್ತರು.


ಪ್ರತಿಯೊಬ್ಬ ವ್ಯಕ್ತಿಯು ತನ್ನ ತಂದೆತಾಯಿಗಳ ವಿಷಯ಼ದಲ್ಲಿ ಭಯಭಕ್ತಿಯಿಂದ ನಡೆದುಕೊಳ್ಳಬೇಕು. ನಾನು ನೇಮಿಸಿರುವ ಸಬ್ಬತ್ ದಿನಗಳನ್ನು ಆಚರಿಸಬೇಕು. ನಾನೇ ನಿಮ್ಮ ದೇವರಾದ ಸರ್ವೇಶ್ವರ.


ನರಹತ್ಯೆ ಮಾಡಬೇಡ, ವ್ಯಭಿಚಾರ ಮಾಡಬೇಡ, ಕದಿಯಬೇಡ, ಸುಳ್ಳುಸಾಕ್ಷಿ ಹೇಳಬೇಡ, ಮೋಸಮಾಡಬೇಡ, ನಿನ್ನ ತಂದೆತಾಯಿಗಳನ್ನು ಗೌರವಿಸು,” ಎಂದು ಯೇಸು ಉತ್ತರವಿತ್ತರು.


‘ನಿಮ್ಮ ತಂದೆತಾಯಿಗಳನ್ನು ಗೌರವಿಸಬೇಕು; ತಂದೆಯನ್ನಾಗಲೀ ತಾಯಿಯನ್ನಾಗಲೀ ದೂಷಿಸುವವನಿಗೆ ಮರಣದಂಡನೆ ಆಗಲೇಬೇಕು,’ ಎಂಬುದು ಮೋಶೆ ವಿಧಿಸಿದ ಆಜ್ಞೆ.


ನಿನ್ನನ್ನು ನೀನೇ ಪ್ರೀತಿಸಿಕೊಳ್ಳುವಂತೆ ನಿನ್ನ ನೆರೆಯವನನ್ನೂ ಪ್ರೀತಿಸಬೇಕು,” ಎಂದರು.


ನನ್ನಲ್ಲಿ ಭಯಭಕ್ತಿಯುಳ್ಳವರಾಗಿ, ನನ್ನ ಆಜ್ಞೆಗಳನ್ನು ಅನುಸರಿಸುವ ಮನಸ್ಸು ಸದಾ ಅವರಲ್ಲಿದ್ದರೆ ಎಷ್ಟೋ ಒಳ್ಳೆಯದು; ಆಗ ಅವರಿಗೂ ಅವರ ಸಂತತಿಗೂ ಯಾವಾಗಲೂ ಶುಭವುಂಟಾಗುವುದು.


ಸರ್ವೇಶ್ವರ ನಿಮ್ಮ ಪಿತೃಗಳಿಗೂ ಅವರ ಸಂತತಿಗೂ ಕೊಡುತ್ತೇನೆಂದು ಪ್ರಮಾಣಮಾಡಿದ ಆ ನಾಡಿನಲ್ಲಿ ನೀವು ಬಹುಕಾಲ ಬಾಳುವಿರಿ; ಅದು ಹಾಲೂ ಜೇನೂ ಹರಿಯುವ ನಾಡು.


ನಿನ್ನವರು ತಾಯಿತಂದೆಗಳನ್ನು ತುಚ್ಛೀಕರಿಸಿದ್ದಾರೆ, ನಿನ್ನವರು ವಿದೇಶಿಯರನ್ನು ಬಾದಿಸಿದ್ದಾರೆ, ನಿನ್ನವರು ಅನಾಥರನ್ನೂ ವಿಧವೆಯರನ್ನೂ ಹಿಂಸಿಸಿದ್ದಾರೆ.


ಆಗ, ನೀವು ಸ್ವಾಧೀನಪಡಿಸಿಕೊಳ್ಳಲಿರುವ ನಾಡಿನಲ್ಲಿ ದೀರ್ಘಕಾಲ ಸುಕ್ಷೇಮದಿಂದ ಬಾಳುವಿರಿ.”


ನೀವು ಹಾಗು ನಿಮ್ಮ ಪುತ್ರಪೌತ್ರಾದಿ ಸಂತತಿಯವರು ಜೀವಮಾನದಲ್ಲೆಲ್ಲಾ ನಿಮ್ಮ ದೇವರಾದ ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವರಾಗಿರಬೇಕು; ನಾನು ಈಗ ಬೋಧಿಸುವ ಅವರ ವಿಧಿನಿರ್ಣಯಗಳನ್ನೆಲ್ಲಾ ಅನುಸರಿಸಬೇಕು; ಆಗ ನೀವು ದೀರ್ಘಕಾಲ ಬಾಳುವಿರಿ. ಅದಕ್ಕಾಗಿಯೇ ಇವುಗಳನ್ನು ಆಜ್ಞಾಪಿಸಿದ್ದಾರೆ.


ಮಗನೇ, ನನ್ನ ಉಪದೇಶವನ್ನು ಮರೆಯಬೇಡ, ನನ್ನ ಆಜ್ಞೆಗಳನ್ನು ನಿನ್ನ ಹೃದಯದಲ್ಲಿಡು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು