Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 5:21 - ಕನ್ನಡ ಸತ್ಯವೇದವು C.L. Bible (BSI)

21 ‘ನೆರೆಯವನ ಹೆಂಡತಿಯನ್ನು ಅಪೇಕ್ಷಿಸಬೇಡ; ಅವನ ಮನೆ, ಹೊಲ, ಗಂಡಾಳು, ಹೆಣ್ಣಾಳು, ಎತ್ತು, ಕತ್ತೆ ಮುಂತಾದ ಯಾವುದನ್ನೂ ಬಯಸಬಾರದು,.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 “ಮತ್ತೊಬ್ಬನ ಹೆಂಡತಿಯನ್ನು ಅಪೇಕ್ಷಿಸಬಾರದು; ಮತ್ತೊಬ್ಬನ ಹೊಲ, ಮನೆ, ಗಂಡಾಳು, ಹೆಣ್ಣಾಳು, ಎತ್ತು ಮತ್ತು ಕತ್ತೆ ಮುಂತಾದವುಗಳನ್ನು ಆಶಿಸಬಾರದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಮತ್ತೊಬ್ಬನ ಹೆಂಡತಿಯನ್ನು ಅಪೇಕ್ಷಿಸಬಾರದು; ಮತ್ತೊಬ್ಬನ ಹೊಲ ಮನೆ ಗಂಡಾಳು ಹೆಣ್ಣಾಳು ಎತ್ತು ಕತ್ತೆ ಮುಂತಾದ ಯಾವದನ್ನೂ ಆಶಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ‘ಇನ್ನೊಬ್ಬನ ಹೆಂಡತಿಯನ್ನು ಆಶಿಸಬಾರದು. ಅವನ ಮನೆಯನ್ನಾಗಲಿ ಹೊಲವನ್ನಾಗಲಿ ಸೇವಕರನ್ನಾಗಲಿ ದನವನ್ನಾಗಲಿ ಕತ್ತೆಯನ್ನಾಗಲಿ ನೀವು ಅಪೇಕ್ಷಿಸಬಾರದು. ಇನ್ನೊಬ್ಬನ ವಸ್ತುಗಳಲ್ಲಿ ಯಾವುದನ್ನೂ ಆಶಿಸಬಾರದು!’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ನಿನ್ನ ನೆರೆಯವನ ಹೆಂಡತಿಯನ್ನು ಆಶಿಸಬೇಡ. ನಿನ್ನ ನೆರೆಯವನ ಮನೆಯನ್ನೂ, ಅವನ ಹೊಲವನ್ನೂ, ಅವನ ದಾಸನನ್ನಾಗಲಿ, ಅವನ ದಾಸಿಯನ್ನಾಗಲಿ, ಅವನ ಎತ್ತನ್ನಾಗಲಿ, ಅವನ ಕತ್ತೆಯನ್ನಾಗಲಿ, ನಿನ್ನ ನೆರೆಯವನಿಗೆ ಇರುವ ಯಾವುದನ್ನೂ ಆಶಿಸಬೇಡ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 5:21
12 ತಿಳಿವುಗಳ ಹೋಲಿಕೆ  

ನೆರೆಯವನ ಮನೆಯನ್ನು ಬಯಸಬೇಡ; ಅವನ ಹೆಂಡತಿ, ಗಂಡಾಳು, ಹೆಣ್ಣಾಳು, ಎತ್ತು, ಕತ್ತೆ ಮುಂತಾದ ಯಾವುದನ್ನೂ ಬಯಸಬೇಡ.


“ವ್ಯಭಿಚಾರ ಮಾಡಬೇಡ, ಕೊಲಬೇಡ, ಕಳಬೇಡ, ದುರಾಶೆ ಪಡಬೇಡ,” - ಈ ಮುಂತಾದ ಆಜ್ಞೆಗಳೆಲ್ಲವೂ “ನೀನು ನಿನ್ನನ್ನೇ ಪ್ರೀತಿಸಿಕೊಳ್ಳುವಂತೆ ನಿನ್ನ ನೆರೆಯವರನ್ನೂ ಪ್ರೀತಿಸು,” ಎಂಬ ಒಂದೇ ಆಜ್ಞೆಯಲ್ಲಿ ಅಡಗಿವೆ.


ಅನಂತರ ಜನರನ್ನುದ್ದೇಶಿಸಿ, “ಎಚ್ಚರಿಕೆ, ಯಾವ ವಿಧವಾದ ಲೋಭಕ್ಕೂ ಒಳಗಾಗದಂತೆ ಜಾಗರೂಕರಾಗಿರಿ. ಏಕೆಂದರೆ, ಒಬ್ಬನಿಗೆ ಎಷ್ಟೇ ಸಿರಿಸಂಪತ್ತಿರಲಿ, ಅವನ ನಿಜವಾದ ಜೀವನ ಅದನ್ನು ಅವಲಂಬಿಸಿಲ್ಲ,” ಎಂದು ಹೇಳಿದರು.


ಕೇಡಿನಿಂದ ತಪ್ಪಿಸಿಕೊಳ್ಳುವ ಸಲುವಾಗಿ ನಿನ್ನ ನಿವಾಸವನ್ನು ಎತ್ತರವಾಗಿ ಕಟ್ಟಿಕೊಂಡೆ. ನಿನ್ನ ಕುಟುಂಬಕ್ಕಾಗಿ ಇತರರ ಆಸ್ತಿಯನ್ನು ಅನ್ಯಾಯವಾಗಿ ದೋಚಿಕೊಂಡೆ, ನಿನ್ನಗೆ ಧಿಕ್ಕಾರ!


ಇತರರ ಹೊಲಗದ್ದೆಗಳನ್ನು ದುರಾಸೆಯಿಂದ ಆಕ್ರಮಿಸಿಕೊಳ್ಳುತ್ತಾರೆ. ಅಂತೆಯೇ ಮನೆಗಳನ್ನು ಅಪಹರಿಸುತ್ತಾರೆ. ಈ ರೀತಿಯಲ್ಲಿ ಮನೆಯನ್ನೂ ಮಾಲೀಕನನ್ನೂ ಸ್ವತ್ತನ್ನೂ ಹಕ್ಕುದಾರನನ್ನೂ ತುಳಿದುಬಿಡುತ್ತಾರೆ.


ಹಣದಾಶೆಗೆ ಬಲಿಯಾಗಬೇಡಿ. ನಿಮಗೆ ಇರುವುದರಲ್ಲಿಯೇ ತೃಪ್ತರಾಗಿರಿ. “ಎಂದೆಂದಿಗೂ ನಾನು ನಿನ್ನ ಕೈಬಿಡಲಾರೆ; ತ್ಯಜಿಸಲಾರೆ,” ಎಂದು ದೇವರೇ ಹೇಳಿದ್ದಾರೆ.


ಒಂದು ದಿನ ಸಂಜೆ ಹೊತ್ತಿನಲ್ಲಿ ದಾವೀದನು ಮಂಚದಿಂದೆದ್ದು ಅರಮನೆಯ ಮಾಳಿಗೆಯ ಮೇಲೆ ತಿರುಗಾಡುತ್ತಿದ್ದನು. ಆಗ ಅಲ್ಲಿಂದ ಬಹು ಸುಂದರಿಯಾದ ಒಬ್ಬ ಸ್ತ್ರೀ ಸ್ನಾನಮಾಡುವುದನ್ನು ಕಂಡನು.


ನನ್ನ ಹೃದಯ ಪರಸ್ತ್ರೀಗೆ ಮಾರುಹೋಗಿದ್ದರೆ ನೆರೆಯವಳ ಬಾಗಿಲ ಬಳಿ ನಾನು ಹೊಂಚುಹಾಕಿದ್ದರೆ,


ನಿನ್ನ ಹೃದಯ ಅವಳ ಬೆಡಗನ್ನು ಮೋಹಿಸದಿರಲಿ; ಕಣ್ಣು ಮಿಟುಕಿಸಿ ಅವಳು ನಿನ್ನನ್ನು ವಶಮಾಡಿಕೊಳ್ಳದಿರಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು