Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 5:23 - ಕನ್ನಡ ಸತ್ಯವೇದವು C.L. Bible (BSI)

23 “ಆ ಬೆಟ್ಟ ಬೆಂಕಿಯಿಂದ ಪ್ರಜ್ವಲಿಸುತ್ತಿರುವಾಗ, ಆ ಕತ್ತಲೊಳಗಿಂದ ದೇವರ ಸ್ವರ ಕೇಳಿ ಬಂದಾಗ, ನೀವು, ನಿಮ್ಮ ಕುಲಾಧಿಪತಿಗಳು, ಹಿರಿಯರು ನನ್ನ ಬಳಿಗೆ ಬಂದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಆ ಬೆಟ್ಟವು ಬೆಂಕಿಯಿಂದ ಪ್ರಜ್ವಲಿಸುತ್ತಿರುವಾಗ ಆ ಕತ್ತಲೊಳಗಿಂದ ದೇವರ ಸ್ವರವನ್ನು ಕೇಳಿ, ನೀವು ಅಂದರೆ ನಿಮ್ಮ ಕುಲಾಧಿಪತಿಗಳೂ ಮತ್ತು ಹಿರಿಯರೂ ನನ್ನ ಬಳಿಗೆ ಬಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಆ ಬೆಟ್ಟವು ಬೆಂಕಿಯಿಂದ ಪ್ರಜ್ವಲಿಸುತ್ತಿರುವಾಗ ಆ ಕತ್ತಲೊಳಗಿಂದ ದೇವರ ಸ್ವರವನ್ನು ಕೇಳಿ ನೀವು ಅಂದರೆ ನಿಮ್ಮ ಕುಲಾಧಿಪತಿಗಳೂ ಹಿರಿಯರೂ ನನ್ನ ಬಳಿಗೆ ಬಂದು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 “ಬೆಟ್ಟವು ಬೆಂಕಿಯಿಂದ ಉರಿಯುತ್ತಿರುವಾಗ ಕಾರ್ಗತ್ತಲೆಯಿಂದ ಬಂದ ಸ್ವರವನ್ನು ನೀವು ಕೇಳಿದಿರಿ. ಆಗ ನಿಮ್ಮ ಹಿರಿಯರು, ಕುಲಪ್ರಧಾನರು ನನ್ನ ಬಳಿಗೆ ಬಂದು ಹೇಳಿದ್ದೇನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಆ ಬೆಟ್ಟವು ಬೆಂಕಿಯಿಂದ ಉರಿಯುತ್ತಿರಲಾಗಿ, ನೀವು ಕತ್ತಲೆಯಿಂದ ಆ ಸ್ವರವನ್ನು ಕೇಳಿದಾಗ, ನಿಮ್ಮ ಗೋತ್ರಗಳ ಮುಖ್ಯಸ್ಥರೂ, ನಿಮ್ಮ ಹಿರಿಯರೂ ನನ್ನ ಬಳಿಗೆ ಬಂದು ನನಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 5:23
6 ತಿಳಿವುಗಳ ಹೋಲಿಕೆ  

“ಈ ಮಾತುಗಳನ್ನು ಸರ್ವೇಶ್ವರ ಆ ಬೆಟ್ಟದ ಮೇಲೆ ಬೆಂಕಿ, ಮೋಡ, ಕಾರ್ಗತ್ತಲು, ಇವುಗಳ ಮಧ್ಯೆ ನಿಮ್ಮ ಸರ್ವಸಮೂಹಕ್ಕೆ ಕೇಳಿಸುವಂತೆ ಮಹಾಸ್ವರದಿಂದ ನುಡಿದರು; ಬೇರೆ ಏನನ್ನೂ ಕೂಡಿಸದೆ, ಈ ಮಾತುಗಳನ್ನು ಎರಡು ಕಲ್ಲಿನ ಹಲಗೆಗಳಲ್ಲಿ ಬರೆದು ನನಗೆ ಕೊಟ್ಟರು.


‘ಇಗೋ, ನಮ್ಮ ದೇವರಾದ ಸರ್ವೇಶ್ವರ ತಮ್ಮ ಪ್ರತಿಭೆಯನ್ನೂ ಮಹಿಮೆಯನ್ನೂ ನಮಗೆ ತೋರಿಸಿದ್ದಾರೆ; ಅಗ್ನಿಜ್ವಾಲೆಯೊಳಗಿಂದ ತಮ್ಮ ಸ್ವರವನ್ನು ನಮಗೆ ಕೇಳಿಸಿದ್ದಾರೆ; ದೇವರು ಮನುಷ್ಯನೊಡನೆ ಮಾತಾಡಿದ್ದನ್ನೂ, ಆದರೂ ಆ ಮನುಷ್ಯ ಸಾಯದೆ ಬದುಕಿರುವುದನ್ನೂ ಇಂದು ನಾವು ಕಂಡೆವು.


ಹೋರೇಬಿನಲ್ಲಿ ನೀವು ಸಭೆಕೂಡಿದ ದಿನದಂದು ಇದನ್ನೇ ನೀವು ಕೋರಿಕೊಂಡಿರಿ; ‘ನಮ್ಮ ದೇವರಾದ ಸರ್ವೇಶ್ವರನ ಸ್ವರವನ್ನು ಇನ್ನು ಕೇಳಲು ಹಾಗು ಈ ಘೋರವಾದ ಅಗ್ನಿಜ್ವಾಲೆಯನ್ನು ಇನ್ನು ನೋಡಲು ನಮಗೆ ಮನಸ್ಸಿಲ್ಲ; ಹಾಗೇನಾದರು ಕೇಳಿ, ನೋಡಿದರೆ ಸತ್ತೇವು’ ಎಂದು ನೀವು ಹೇಳಿದಿರಿ.


ಆಗ ನಾನು ಆ ಎರಡು ಆಜ್ಞಾಶಾಸನಗಳನ್ನು ನನ್ನ ಎರಡು ಕೈಗಳಲ್ಲಿ ಹಿಡಿದುಕೊಂಡು ಬೆಂಕಿಯಿಂದ ಉರಿಯುತ್ತಿದ್ದ ಆ ಬೆಟ್ಟದಿಂದ ಇಳಿದುಬಂದು ನೋಡಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು