ಧರ್ಮೋಪದೇಶಕಾಂಡ 5:25 - ಕನ್ನಡ ಸತ್ಯವೇದವು C.L. Bible (BSI)25 ಹಾಗಿದ್ದರೂ ಈಗ ನಾವೇಕೆ ಪ್ರಾಣಾಪಾಯಕ್ಕೆ ಗುರಿಯಾಗಬೇಕು? ಬಹುಶಃ ಈ ಘೋರ ಬೆಂಕಿ ನಮ್ಮನ್ನು ದಹಿಸಿಬಿಡಬಹುದು; ನಮ್ಮ ದೇವರಾದ ಸರ್ವೇಶ್ವರನ ಸ್ವರವನ್ನು ನಾವು ಮತ್ತೆ ಕೇಳಿದರೆ ಸಾಯಬಹುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಆದರೂ ಈ ಘೋರವಾದ ಅಗ್ನಿಜ್ವಾಲೆಯು ನಮ್ಮನ್ನು ದಹಿಸಿ ಬಿಟ್ಟಿತು, ಮತ್ತು ನಮ್ಮ ದೇವರಾದ ಯೆಹೋವನ ಸ್ವರವನ್ನು ನಾವು ಪುನಃ ಕೇಳಿದರೆ ಸತ್ತೇವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಆದರೂ ಈ ಘೋರವಾದ ಅಗ್ನಿಜ್ವಾಲೆಯು ನಮ್ಮನ್ನು ದಹಿಸಿಬಿಟ್ಟೀತು, ಮತ್ತು ನಮ್ಮ ದೇವರಾದ ಯೆಹೋವನ ಸ್ವರವನ್ನು ನಾವು ತಿರಿಗಿ ಕೇಳಿದರೆ ಸತ್ತೇವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಆದರೆ ನಮ್ಮ ದೇವರಾದ ಯೆಹೋವನು ಮಾತನಾಡುವುದನ್ನು ನಾವು ಮತ್ತೆ ಕೇಳಿದರೆ ಖಂಡಿತವಾಗಿ ಸಾಯುವೆವು. ಆ ಭಯಂಕರವಾದ ಬೆಂಕಿಯು ನಮ್ಮನ್ನು ದಹಿಸುವುದು. ನಮಗೆ ಸಾಯಲು ಇಷ್ಟವಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಹಾಗಾದರೆ ಈಗ ನಾವು ಏಕೆ ಸಾಯಬೇಕು? ಈ ದೊಡ್ಡ ಬೆಂಕಿಯು ನಿಶ್ಚಯವಾಗಿ ನಮ್ಮನ್ನು ದಹಿಸಿಬಿಡುವುದು. ನಾವು ಇನ್ನೂ ನಮ್ಮ ದೇವರಾದ ಯೆಹೋವ ದೇವರ ಸ್ವರವನ್ನು ಕೇಳಿದರೆ ಸಾಯುತ್ತೇವೆ. ಅಧ್ಯಾಯವನ್ನು ನೋಡಿ |