Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 5:29 - ಕನ್ನಡ ಸತ್ಯವೇದವು C.L. Bible (BSI)

29 ನನ್ನಲ್ಲಿ ಭಯಭಕ್ತಿಯುಳ್ಳವರಾಗಿ, ನನ್ನ ಆಜ್ಞೆಗಳನ್ನು ಅನುಸರಿಸುವ ಮನಸ್ಸು ಸದಾ ಅವರಲ್ಲಿದ್ದರೆ ಎಷ್ಟೋ ಒಳ್ಳೆಯದು; ಆಗ ಅವರಿಗೂ ಅವರ ಸಂತತಿಗೂ ಯಾವಾಗಲೂ ಶುಭವುಂಟಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ನನ್ನಲ್ಲಿ ಭಯಭಕ್ತಿಯುಳ್ಳವರಾಗಿ, ನನ್ನ ಆಜ್ಞೆಗಳನ್ನು ಅನುಸರಿಸುವ ಮನಸ್ಸು ಯಾವಾಗಲೂ ಅವರಲ್ಲಿ ಇದ್ದರೆ ಒಳ್ಳೇಯದು. ಆಗ ಅವರಿಗೂ ಅವರ ಸಂತತಿಯವರಿಗೂ ಯಾವಾಗಲೂ ಶುಭವುಂಟಾಗುವುದು”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ನನ್ನಲ್ಲಿ ಭಯಭಕ್ತಿಯುಳ್ಳವರಾಗಿ ನನ್ನ ಆಜ್ಞೆಗಳನ್ನು ಅನುಸರಿಸುವ ಮನಸ್ಸು ಯಾವಾಗಲೂ ಅವರಲ್ಲಿ ಇದ್ದರೆ ಎಷ್ಟೋ ಮೇಲು; ಆಗ ಅವರಿಗೂ ಅವರ ಸಂತತಿಯವರಿಗೂ ಯಾವಾಗಲೂ ಶುಭವುಂಟಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಆದರೆ ಅವರು ಆಲೋಚಿಸುವ ರೀತಿಯನ್ನು ನಾನು ಬದಲಾಯಿಸಬೇಕಾಗಿದೆ. ಅವರು ನನಗೆ ವಿಧೇಯರಾಗಿ ನನ್ನ ಆಜ್ಞೆಗಳನ್ನೆಲ್ಲಾ ಅನುಸರಿಸಿ ತಮ್ಮ ಹೃದಯಗಳಿಂದ ನನ್ನನ್ನು ಗೌರವಿಸಬೇಕು. ಆಗ ಅವರಿಗೂ ಅವರ ಸಂತತಿಯವರಿಗೂ ಶಾಶ್ವತವಾಗಿ ಶುಭವಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಅವರು ನನಗೆ ಭಯಪಟ್ಟು, ನನ್ನ ಆಜ್ಞೆಗಳನ್ನೆಲ್ಲಾ ಎಂದೆಂದಿಗೂ ಕೈಗೊಳ್ಳುವಂಥ ಹೃದಯವು ಅವರಲ್ಲಿದ್ದರೆ ಎಷ್ಟೋ ಒಳ್ಳೆಯದು. ಆಗ ಅವರಿಗೂ, ಅವರ ಮಕ್ಕಳಿಗೂ ಎಂದೆಂದಿಗೂ ಒಳ್ಳೆಯದಾಗುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 5:29
43 ತಿಳಿವುಗಳ ಹೋಲಿಕೆ  

ಎಷ್ಟೋ ಚೆನ್ನಾಗಿರುತ್ತಿತ್ತು ನೀ ನನ್ನ ಆಜ್ಞೆಗಳನ್ನು ಪಾಲಿಸಿದ್ದರೆ ಇರುತ್ತಿತ್ತು ನಿನಗೆ ಸುಖಶಾಂತಿ ಮಹಾನದಿಯಂತೆ ನಿನ್ನ ಸತ್ಯಸಂಧತೆ ಸಮುದ್ರ ಅಲೆಗಳಂತೆ.


“ಆದುದರಿಂದ ನಿಮ್ಮ ದೇವರಾದ ಸರ್ವೇಶ್ವರನಲ್ಲಿ ಪ್ರೀತಿಯಿಟ್ಟು, ಅವರ ನಿಯಮಗಳನ್ನು ಕೈಕೊಂಡು ಅವರ ಆಜ್ಞಾವಿಧಿನಿರ್ಣಯಗಳನ್ನು ಯಾವಾಗಲೂ ಅನುಸರಿಸಬೇಕು.


“ಜೆರುಸಲೇಮೇ, ಜೆರುಸಲೇಮೇ, ಪ್ರವಾದಿಗಳ ಕೊಲೆಪಾತಕಿಯೇ, ದೇವರು ನಿನ್ನ ಬಳಿಗೆ ಕಳುಹಿಸಿದವರನ್ನು ಕಲ್ಲುಗಳಿಂದ ಹೊಡೆಯುವವಳೇ, ಕೋಳಿಯು ತನ್ನ ಮರಿಗಳನ್ನು ರೆಕ್ಕೆಗಳಡಿ ಸೇರಿಸಿಕೊಳ್ಳುವಂತೆ, ನಾನು ನಿನ್ನ ಮಕ್ಕಳನ್ನು ಒಂದಾಗಿ ಸೇರಿಸಿ ಅಪ್ಪಿಕೊಳ್ಳಲು ಎಷ್ಟೋ ಬಾರಿ ಅಪೇಕ್ಷಿಸಿದೆನು. ಆದರೆ ನೀವು ಒಪ್ಪಲಿಲ್ಲ.


“ಇಂದಾದರೂ ನೀನು ಶಾಂತಿಮಾರ್ಗವನ್ನು ಅರಿತುಕೊಂಡಿದ್ದರೆ ಎಷ್ಟೋ ಚೆನ್ನಾಗಿರುತ್ತಿತ್ತು. ಆದರೆ ಅದು ಈಗ ನಿನ್ನ ಕಣ್ಣಿಗೆ ಮರೆಯಾಗಿದೆ.


ನಾನು ಇಂದು ನಿಮಗೆ ತಿಳಿಸಿದ ಅವರ ಆಜ್ಞಾವಿಧಿಗಳನ್ನು ಅನುಸರಿಸಿ ನಡೆಯಿರಿ. ಆಗ ನಿಮಗೂ ನಿಮ್ಮ ಸಂತತಿಗೂ ಶುಭವುಂಟಾಗುವುದು; ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಶಾಶ್ವತವಾಗಿ ಕೊಡುವ ನಾಡಿನಲ್ಲಿ ನೀವು ದೀರ್ಘಕಾಲ ಬಾಳುವಿರಿ.”


‘ನಿನ್ನ ದೇವರಾದ ಸರ್ವೇಶ್ವರ ಆಜ್ಞಾಪಿಸಿದಂತೆ, ನಿನ್ನ ತಂದೆತಾಯಿಗಳನ್ನು ಗೌರವಿಸು; ಗೌರವಿಸಿದರೆ ನಿನ್ನ ದೇವರೂ ಸರ್ವೇಶ್ವರನೂ ಆದ ನಾನು ನಿನಗೆ ಅನುಗ್ರಹಿಸುವ ನಾಡಿನಲ್ಲಿ ಬಹುಕಾಲ ಸುಕ್ಷೇಮವಾಗಿ ಬಾಳುವೆ.


ಆದ್ದರಿಂದಲೇ ನಾವು ಕ್ರಿಸ್ತಯೇಸುವಿನ ರಾಯಭಾರಿಗಳು. ದೇವರೇ ನಮ್ಮ ಮುಖಾಂತರ ಕರೆ ನೀಡುತ್ತಿದ್ದಾರೆ. ಅವರೊಡನೆ ಸಂಧಾನಮಾಡಿಕೊಳ್ಳಿರೆಂದು ಕ್ರಿಸ್ತಯೇಸುವಿನ ಹೆಸರಿನಲ್ಲಿ ನಾವು ನಿಮ್ಮನ್ನು ವಿನಂತಿಸುತ್ತೇವೆ.


“ತಮ್ಮ ನಿಲುವಂಗಿಗಳನ್ನು ತೊಳೆದು ಶುಭ್ರವಾಗಿಟ್ಟುಕೊಂಡಿರುವವರು ಭಾಗ್ಯವಂತರು. ಜೀವವೃಕ್ಷದ ಫಲವನ್ನು ಸವಿಯುವ ಹಕ್ಕು ಅವರಿಗಿರುತ್ತದೆ. ಹೆಬ್ಬಾಗಿಲಿನ ಮೂಲಕ ಅವರು ಆ ನಗರವನ್ನು ಸೇರುವರು.


ಆದರೆ ನಮಗೆ ವಿಮೋಚನೆಯನ್ನು ತರುವ ಸರ್ವೋತ್ತಮ ಧರ್ಮಶಾಸ್ತ್ರವನ್ನು ಲಕ್ಷ್ಯವಿಟ್ಟು ನೋಡಿ ಅದರಲ್ಲೇ ಧ್ಯಾನಾಸಕ್ತನಾಗಿರುವವನು ಅದನ್ನು ಮರೆಯುವುದಿಲ್ಲ. ಅವನು ಕೇಳುವವನು ಮಾತ್ರ ಆಗಿರದೆ, ವಾಕ್ಯದ ಪ್ರಕಾರ ನಡೆಯುವವನೂ ಆಗಿರುತ್ತಾನೆ. ಇಂಥವನು ಭಾಗ್ಯವಂತನು!


ಇದನ್ನು ಪಾಲಿಸಿದರೆ ನಿನಗೆ ಶುಭವಾಗುವುದು; ನೀನು ಬಹುಕಾಲ ಬಾಳುವೆ.


ದೇವರೊಡನೆ ದುಡಿಯುತ್ತಿರುವ ನಾವು ನಿಮ್ಮಲ್ಲಿ ವಿಜ್ಞಾಪಿಸುವುದೇನೆಂದರೆ: ದೇವರಿಂದ ನೀವು ಪಡೆದ ವರಪ್ರಸಾದಗಳನ್ನು ವ್ಯರ್ಥಮಾಡಬೇಡಿ.


ನಾನು ಆಜ್ಞಾಪಿಸಿದಂತೆ ನಡೆದರೆ ನೀವು ನನ್ನ ಗೆಳೆಯರು.


ಅದಕ್ಕೆ ಯೇಸು, “ಅದಕ್ಕಿಂತಲೂ ದೇವರ ವಾಕ್ಯವನ್ನು ಕೇಳಿ, ಅದನ್ನು ಅನುಸರಿಸುವವನು ಹೆಚ್ಚು ಭಾಗ್ಯವಂತನು!” ಎಂದರು.


ನಾನು ನನ್ನ ದಾಸರಾದ ಪ್ರವಾದಿಗಳನ್ನೆಲ್ಲಾ ಅವರ ಬಳಿಗೆ ತಡಮಾಡದೆ ಕಳುಹಿಸುತ್ತಾಬಂದೆ. ‘ಎಚ್ಚರಿಕೆ, ನಾನು ಹೇಸುವ ಈ ಅಸಹ್ಯಕಾರ್ಯಗಳನ್ನು ಮಾಡಬೇಡಿ’ ಎಂದು ಪ್ರಕಟಿಸುತ್ತಾ ಬಂದೆ.


ಸಜ್ಜನರಿಗೆ ಶುಭವೆಂದು ಸಾರಿರಿ. ಅವರು ತಮ್ಮ ಕ್ರಿಯೆಗಳ ಸತ್ಫಲವನ್ನು ಸವಿಯುತ್ತಾರೆ.


ನ್ಯಾಯದಂತೆ ನಡೆಯುವವರು ಧನ್ಯರು I ಅವಿರತವಾಗಿ ನೀತಿವಂತರು ಧನ್ಯರು II


ಜಾಗೃತಗೊಳ್ಳುವನು ನಿನ್ನ ದಾಸನು ಅವುಗಳಿಂದ I ಸಂಭಾವಿತನಾಗುವನು ಅವುಗಳ ಪಾಲನೆಯಿಂದ II


ಒಂದು ದಿನ ನವೊಮಿ ರೂತಳಿಗೆ, “ಮಗಳೇ, ನೀನು ಮತ್ತೆ ಗೃಹಿಣಿಯಾಗಿ ಸುಖದಿಂದ ಬಾಳುವಂತೆ ಏರ್ಪಾಟು ಮಾಡುವುದು ನನ್ನ ಕರ್ತವ್ಯವಲ್ಲವೇ?


ನೀವು ಹೀಗೆ ನಡೆದುಕೊಂಡರೆ, ನಿಮಗೆ ಶ್ರೇಯಸ್ಸುಂಟಾಗುವುದು, ಮತ್ತು ಬಹುಕಾಲ ಬಾಳುವಿರಿ.


ನೀವು ಅವನನ್ನು ಕನಿಕರಿಸಬಾರದು. ನಿಮಗೆ ಶುಭವುಂಟಾಗುವಂತೆ ನಿರಪರಾಧಿಯ ಪ್ರಾಣವನ್ನು ತೆಗೆದವನು ಇಸ್ರಯೇಲರಲ್ಲಿ ಉಳಿಯದಂತೆ ಮಾಡಬೇಕು.


“ನಾನು ಬೋಧಿಸುವ ಈ ಎಲ್ಲಾ ಆಜ್ಞೆಗಳಿಗೆ ನೀವು ಚೆನ್ನಾಗಿ ಕಿವಿಗೊಟ್ಟು, ಅವುಗಳನ್ನು ಅನುಸರಿಸಿದರೆ ನಿಮಗೂ ನಿಮ್ಮ ಸಂತತಿಯವರಿಗೂ ಸದಾಕಾಲ ಶುಭವುಂಟಾಗುವುದು. ಏಕೆಂದರೆ ಹೀಗೆ ಮಾಡುವುದರಿಂದ ನಿಮ್ಮ ದೇವರಾದ ಸರ್ವೇಶ್ವರನ ದೃಷ್ಟಿಯಲ್ಲಿ ಸರಿಯಾದುದನ್ನೂ ಸೂಕ್ತವಾದುದನ್ನೂ ಮಾಡುತ್ತೀರಿ.


ನೀವು ಅದನ್ನು ಸೇವಿಸದೆ ಸರ್ವೇಶ್ವರನಿಗೆ ಮೆಚ್ಚಿಗೆಯಾಗಿರುವುದನ್ನೇ ಮಾಡಿದರೆ ನಿಮಗೂ ನಿಮ್ಮ ಸಂತತಿಯವರಿಗೂ ಶುಭವುಂಟಾಗುವುದು.


ಸರ್ವೇಶ್ವರನ ದೃಷ್ಟಿಯಲ್ಲಿ ಯಾವುದು ನ್ಯಾಯವೋ, ಯೋಗ್ಯವೋ ಅದನ್ನೇ ಮಾಡಬೇಕು. ಹೀಗೆ ನಡೆದರೆ ನಿಮಗೆ ಶುಭ ಉಂಟಾಗುವುದು ಮತ್ತು ಸರ್ವೇಶ್ವರ ನಿಮ್ಮ ಪಿತೃಗಳಿಗೆ ಪ್ರಮಾಣಪೂರ್ವಕವಾಗಿ ಕೊಟ್ಟ ಉತ್ತಮ ನಾಡನ್ನು ನೀವು ಸೇರಿ ಸ್ವಾಧೀನಮಾಡಿಕೊಳ್ಳುವಿರಿ.


ಆದುದರಿಂದ ಇಸ್ರಯೇಲರೇ, ನಿಮ್ಮ ಪಿತೃಗಳ ದೇವರಾದ ಸರ್ವೇಶ್ವರ ವಾಗ್ದಾನ ಮಾಡಿದ ಪ್ರಕಾರ, ಹಾಲೂಜೇನೂ ಹರಿಯುವ ಆ ನಾಡಿನಲ್ಲಿ ನಿಮಗೆ ಶುಭವುಂಟಾಗುವಂತೆ, ನೀವು ಬಹಳವಾಗಿ ಹೆಚ್ಚಿ, ಅಭಿವೃದ್ಧಿಯಾಗುವಂತೆ, ಈ ಆಜ್ಞೆಗಳನ್ನು ಲಕ್ಷ್ಯವಿಟ್ಟು ಕೇಳಿ ಅನುಸರಿಸಿರಿ.


ಆದ್ದರಿಂದ ನಿಮ್ಮೊಡನೆ ಮಾತಾಡುವ ದೇವರ ಧ್ವನಿಯನ್ನು ಕಡೆಗಣಿಸಬೇಡಿ. ಭೂಮಿಯ ಮೇಲೆ ತಮಗೆ ಬುದ್ಧಿವಾದ ಹೇಳಿದವರನ್ನು ಕಡೆಗಣಿಸಿದವರು ದಂಡನೆಯಿಂದ ತಪ್ಪಿಸಿಕೊಳ್ಳಲಿಲ್ಲ. ಹೀಗಿರುವಲ್ಲಿ, ನಮಗೆ ಸ್ವರ್ಗಲೋಕದಿಂದ ಬುದ್ಧಿವಾದ ಹೇಳಿದಾತನನ್ನು ಕಡೆಗಣಿಸಿದರೆ ಹೇಗೆತಾನೆ ದಂಡನೆಯಿಂದ ತಪ್ಪಿಸಿಕೊಂಡೇವು?


ನೀನು ಹೋಗಿ ಅವರಿಗೆ, ‘ನಿಮ್ಮ ನಿಮ್ಮ ಡೇರೆಗಳಿಗೆ ಹಿಂದಿರುಗಿರಿ’, - ಎಂದು ಆಜ್ಞಾಪಿಸು.


ಆಗ, ನೀವು ಸ್ವಾಧೀನಪಡಿಸಿಕೊಳ್ಳಲಿರುವ ನಾಡಿನಲ್ಲಿ ದೀರ್ಘಕಾಲ ಸುಕ್ಷೇಮದಿಂದ ಬಾಳುವಿರಿ.”


ಆಗ ತಮ್ಮ ಪ್ರಾಚೀನ ಪೂರ್ವಿಕರಂತೆ ಅವರಾಗರು I ಮೊಂಡರು, ಅವಿಧೇಯರು, ದೈವದ್ರೋಹಿಗಳು, ಚಪಲಚಿತ್ತರು II


ನಮ್ಮ ದೇವರಾದ ಸರ್ವೇಶ್ವರನ ಮಾತು ಹಿತವಾಗಿರಲಿ, ಅಹಿತವಾಗಿರಲಿ ಅದನ್ನು ಕೈಗೊಳ್ಳುತ್ತೇವೆ. ಅವರ ಸನ್ನಿಧಿಯಲ್ಲಿ ವಿಚಾರಿಸುವುದಕ್ಕೆ ನಿಮ್ಮನ್ನು ನಾವು ಕಳುಹಿಸಿದ್ದೇವೆ. ನಮ್ಮ ದೇವರಾದ ಸರ್ವೇಶ್ವರನ ಮಾತನ್ನು ಕೇಳಿದರೆ ನಮಗೇ ಶುಭವಾಗುವುದು,” ಎಂದು ಹೇಳಿದರು.


ನಿಮ್ಮ ದೇವರಾದ ಸರ್ವೇಶ್ವರ ಕೊಟ್ಟ ಆಜ್ಞೆಗಳನ್ನೇ ನಾನು ನಿಮಗೆ ತಿಳಿಸುತ್ತಾ ಇದ್ದೇನೆ. ಈ ಆಜ್ಞೆಗಳನ್ನು ನೀವು ಕೈಗೊಳ್ಳಬೇಕೇ ಹೊರತು ಅವುಗಳಿಗೆ ಏನೂ ಕೂಡಿಸಬಾರದು, ಅವುಗಳಿಂದ ಏನೂ ತೆಗೆದುಬಿಡಬಾರದು.


ಹೋರೇಬಿನಲ್ಲಿ ನಿಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ ನೀವು ನಿಂತಿದ್ದಾಗ ಅವರು ನನಗೆ, ‘ಜನರೆಲ್ಲರನ್ನು ನನ್ನ ಹತ್ತಿರಕ್ಕೆ ಕರೆ; ಅವರೇ ನನ್ನ ಆಜ್ಞೆಗಳನ್ನು ಕೇಳಿಸಿಕೊಳ್ಳಲಿ; ಆಗ ಅವರು ತಮ್ಮ ಜೀವಮಾನದಲ್ಲೆಲ್ಲಾ ನನ್ನಲ್ಲಿ ಭಯಭಕ್ತಿಯಿಂದಿರಲು ಕಲಿತುಕೊಳ್ಳುವರು; ಅಂತೆಯೇ ತಮ್ಮ ಮಕ್ಕಳಿಗೂ ಕಲಿಸಿಕೊಡುವರು,’ ಎಂದರು.


ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ನೇಮಿಸಿದ ಆಜ್ಞಾವಿಧಿನಿರ್ಣಯಗಳನ್ನು ಅನುಸರಿಸಲೇಬೇಕು.


ಅವರ ಆಜ್ಞೆಗಳನ್ನು ಅನುಸರಿಸುತ್ತಾ ಅವರು ಹೇಳಿದ ಮಾರ್ಗದಲ್ಲೇ ನಡೆದು ಅವರಲ್ಲಿ ಭಯಭಕ್ತಿಯುಳ್ಳವರಾಗಿರಬೇಕು.


“ಆದುದರಿಂದ ಇಸ್ರಯೇಲರೇ, ನೀವು ನಿಮ್ಮ ದೇವರಾದ ಸರ್ವೇಶ್ವರನಲ್ಲಿ ಭಯಭಕ್ತಿ ಉಳ್ಳವರಾಗಿರಬೇಕು; ಎಲ್ಲ ವಿಷಯಗಳಲ್ಲೂ ಅವರು ಹೇಳುವ ಮಾರ್ಗದಲ್ಲೇ ನಡೆಯಬೇಕು; ಅವರನ್ನು ಪ್ರೀತಿಸುತ್ತಾ ಸಂಪೂರ್ಣವಾದ ಹೃದಯದಿಂದಲೂ ಮನಸ್ಸಿನಿಂದಲೂ ಸೇವೆಮಾಡಬೇಕು;


ನಿಮ್ಮ ದೇವರಾದ ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವರಾಗಿ ಅವರಿಗೇ ಸೇವೆಸಲ್ಲಿಸಿ. ಅವರನ್ನು ಹೊಂದಿಕೊಂಡು ಅವರ ಹೆಸರಿನ ಮೇಲೆಯೇ ಪ್ರಮಾಣಮಾಡಬೇಕು.


ನಮ್ಮ ಪಿತೃಗಳಾದ ಅಬ್ರಹಾಮ್, ಇಸಾಕ್, ಯಕೋಬರ ದೇವರೇ, ಸರ್ವೇಶ್ವರಾ, ನಿಮ್ಮ ಪ್ರಜೆಗಳಲ್ಲಿ ಇಂಥ ಮನೋಭಾವ ಸದಾ ಇರುವಂತೆ ಮಾಡಿರಿ; ನಿಮ್ಮಲ್ಲಿ ಭಯಭಕ್ತಿಯುಳ್ಳವರಾಗಿ ಇರಲು ಅವರಿಗೆ ಸ್ಥಿರಚಿತ್ತವನ್ನು ಅನುಗ್ರಹಿಸಿರಿ.


ತನ್ನ ತಪ್ಪನು ತಾನರಿತುಕೊಳ್ಳುವವನಾರಯ್ಯಾ I ಗುಪ್ತವಾದ ಪಾಪಗಳಿಂದೆನ್ನ ಮುಕ್ತಗೊಳಿಸಯ್ಯಾ II


“ನಿಮಗಾದರೋ ಬಡಿಸುತ್ತಿದ್ದೆ ಅತ್ಯುತ್ತಮ ಗೋದಿಯನು I ಉಣಿಸುತ್ತಿದ್ದೆ ನಾ ನಿಮಗೆ ಬೆಟ್ಟದ ಜೇನುತುಪ್ಪವನು” II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು