Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 5:3 - ಕನ್ನಡ ಸತ್ಯವೇದವು C.L. Bible (BSI)

3 ನಮ್ಮ ಪೂರ್ವಿಕರ ಸಂಗಡ ಈ ಒಡಂಬಡಿಕೆಯನ್ನು ಮಾಡದೆ ಈಗ ಇಲ್ಲಿ ಜೀವದಿಂದಿರುವ ನಮ್ಮ ಸಂಗಡವೇ ಇದನ್ನು ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆತನು ನಮ್ಮ ಪೂರ್ವಿಕರ ಸಂಗಡ ಈ ನಿಬಂಧನೆಯನ್ನು ಮಾಡದೆ, ಈಗ ಇಲ್ಲಿ ಜೀವದಿಂದಿರುವ ನಮ್ಮ ಸಂಗಡಲೇ ಇದನ್ನು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆತನು ನಮ್ಮ ಪೂರ್ವಿಕರ ಸಂಗಡ ಈ ನಿಬಂಧನೆಯನ್ನು ಮಾಡದೆ ಈಗ ಇಲ್ಲಿ ಜೀವದಿಂದಿರುವ ನಮ್ಮ ಸಂಗಡಲೇ ಇದನ್ನು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಯೆಹೋವನು ನಮ್ಮ ಪೂರ್ವಿಕರೊಂದಿಗೆ ಒಡಂಬಡಿಕೆ ಮಾಡದೆ ಈಗ ಇಲ್ಲಿ ಜೀವಂತರಾಗಿರುವ ನಮ್ಮೊಂದಿಗೆ ಮಾಡಿರುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಯೆಹೋವ ದೇವರು ಆ ಒಡಂಬಡಿಕೆಯನ್ನು ನಮ್ಮ ಪಿತೃಗಳ ಸಂಗಡ ಅಲ್ಲ, ನಮ್ಮ ಸಂಗಡವೇ ಮಾಡಿದರು. ನಾವೆಲ್ಲರೂ ಈ ಹೊತ್ತು ಇಲ್ಲಿ ಜೀವದಿಂದಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 5:3
12 ತಿಳಿವುಗಳ ಹೋಲಿಕೆ  

ಎಷ್ಟೋ ಪ್ರವಾದಿಗಳು ಹಾಗೂ ಸತ್ಪುರುಷರು ನೀವು ನೋಡುವುದನ್ನು ನೋಡುವುದಕ್ಕೂ, ಕೇಳುವುದನ್ನು ಕೇಳುವುದಕ್ಕೂ ಅಪೇಕ್ಷಿಸಿದರು. ಆದರೆ ಅವರು ನೋಡಲೂ ಇಲ್ಲ, ಕೇಳಲೂ ಇಲ್ಲ ಎಂಬುದು ನಿಮಗೆ ತಿಳಿದಿರಲಿ.


ಆದರೆ ಆ ನನ್ನ ಒಡಂಬಡಿಕೆಯನ್ನು ಇಸಾಕನಲ್ಲಿಯೇ ಊರ್ಜಿತಗೊಳಿಸುತ್ತೇನೆ.


ನಿನಗೂ ನಿನ್ನ ಸಂತತಿಗೂ ನಾನು ದೇವರಾಗಿರುತ್ತೇನೆ. ಈ ನನ್ನ ಒಡಂಬಡಿಕೆಯನ್ನು ನಿನಗೋಸ್ಕರವೂ ನಿನ್ನ ಸಂತತಿಗೋಸ್ಕರವೂ ತಲತಲಾಂತರದವರೆಗೂ ಚಿರಒಡಂಬಡಿಕೆಯಾಗಿ ಸ್ಥಿರಪಡಿಸುತ್ತೇನೆ.


ಸರ್ವೇಶ್ವರಸ್ವಾಮಿ ಹೋರೇಬಿನಲ್ಲಿ ಇಸ್ರಯೇಲರೊಡನೆ ಮಾಡಿದ ಒಡಂಬಡಿಕೆ ಅಲ್ಲದೆ ಅವರು ಮೋವಾಬ್ ನಾಡಿನಲ್ಲಿ ಅವರೊಡನೆ ಮಾಡಬೇಕೆಂದು ಮೋಶೆಗೆ ಆಜ್ಞಾಪಿಸಿದ ಒಡಂಬಡಿಕೆಯ ವಚನಗಳು ಇವು:


ಈ ಒಡಂಬಡಿಕೆ, ನಾನು ಅವರ ಪೂರ್ವಜರನ್ನು ಕೈ ಹಿಡಿದು ಈಜಿಪ್ಟಿನಿಂದ ಕರೆದು ತಂದಾಗ ಅವರೊಡನೆ ಮಾಡಿಕೊಂಡ ಒಡಂಬಡಿಕೆ ಅಂಥದಾಗಿ ಇರುವುದಿಲ್ಲ. ನಾನು ಅವರಿಗೆ ಯಜಮಾನನಾಗಿ ಇದ್ದರೂ ಆ ನನ್ನ ಒಡಂಬಡಿಕೆಯನ್ನು ಅವರು ಮೀರಿನಡೆದರು.


“ಇಸ್ರಯೇಲರ ದೇವರಾದ ಸರ್ವೇಶ್ವರನ ವಾಣಿ ಇದು - ಈಜಿಪ್ಟ್ ದೇಶದಲ್ಲಿ ಗುಲಾಮರಾಗಿದ್ದ ನಿಮ್ಮ ಪೂರ್ವಜರನ್ನು ನಾನು ಅಲ್ಲಿಂದ ಕರೆದುತಂದಾಗ ನಾನು ಅವರೊಡನೆ ಒಂದು ಒಪ್ಪಂದಮಾಡಿಕೊಂಡೆ.


ಈ ಸಂಗತಿಗಳನ್ನೆಲ್ಲಾ ನೀವು ಜ್ಞಾಪಕಮಾಡಿಕೊಂಡು ಈ ಒಡಂಬಡಿಕೆಯ ವಾಕ್ಯಗಳನ್ನು ಅನುಸರಿಸಿ ನಡೆಯಬೇಕು; ಆಗ ನೀವು ನಡೆಸುವ ಕೆಲಸಕಾರ್ಯಗಳಲ್ಲಿ ಜಾಣರಾಗಿ ಅಭಿವೃದ್ಧಿ ಹೊಂದುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು