Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 5:33 - ಕನ್ನಡ ಸತ್ಯವೇದವು C.L. Bible (BSI)

33 ಆಗ, ನೀವು ಸ್ವಾಧೀನಪಡಿಸಿಕೊಳ್ಳಲಿರುವ ನಾಡಿನಲ್ಲಿ ದೀರ್ಘಕಾಲ ಸುಕ್ಷೇಮದಿಂದ ಬಾಳುವಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಆಗ ನೀವು ಸ್ವತಂತ್ರಿಸಿಕೊಳ್ಳುವ ದೇಶದಲ್ಲಿ ಬಹುಕಾಲ ಸುಕ್ಷೇಮದಿಂದ ಬದುಕಿಕೊಳ್ಳುವಂತೆ, ನಿಮ್ಮ ದೇವರಾದ ಯೆಹೋವನು ಆಜ್ಞಾಪಿಸಿದ ಮಾರ್ಗದಲ್ಲೇ ನಡೆಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ನೀವು ಸ್ವತಂತ್ರಿಸಿಕೊಳ್ಳುವ ದೇಶದಲ್ಲಿ ಬಹುಕಾಲ ಶುಭವುಳ್ಳವರಾಗಿ ಬದುಕಿಕೊಳ್ಳುವಂತೆ ನಿಮ್ಮ ದೇವರಾದ ಯೆಹೋವನು ಆಜ್ಞಾಪಿಸಿದ ಮಾರ್ಗದಲ್ಲೇ ನಡೆಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ನಿಮ್ಮ ದೇವರಾದ ಯೆಹೋವನು ಹೇಳಿದ ಆಜ್ಞೆಗಳಿಗನುಸಾರವಾಗಿ ನಡೆದರೆ ನೀವು ಜೀವಿಸುವಿರಿ. ಆಗ ನೀವು ಶುಭವನ್ನೇ ಹೊಂದುವಿರಿ. ನಿಮಗೆ ದೊರಕಿದ ಸ್ವಾಸ್ತ್ಯಭೂಮಿಯಲ್ಲಿ ನೀವು ಬಹುಕಾಲ ಬಾಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ನೀವು ಬದುಕುವ ಹಾಗೆಯೂ, ನಿಮಗೆ ಒಳ್ಳೆಯದಾಗುವ ಹಾಗೆಯೂ, ನೀವು ಸ್ವತಂತ್ರಿಸಿಕೊಳ್ಳುವ ದೇಶದಲ್ಲಿ ನಿಮ್ಮ ದಿವಸಗಳು ಬಹಳವಾಗುವ ಹಾಗೆಯೂ ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಆಜ್ಞಾಪಿಸಿದ ಮಾರ್ಗಗಳಲ್ಲೇ ನಡೆದುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 5:33
32 ತಿಳಿವುಗಳ ಹೋಲಿಕೆ  

ನಾನು ಕೊಟ್ಟ ಒಂದು ಕಟ್ಟಳೆಯೆಂದರೆ ಇದು - ನನ್ನ ಮಾತಿಗೆ ಕಿವಿಗೊಡಿ, ನಾನು ನಿಮ್ಮ ದೇವರಾಗಿರುತ್ತೇನೆ, ನೀವು ನನ್ನ ಪ್ರಜೆಯಾಗಿರಿ. ನಿಮಗೆ ಹಿತವಾಗುವಂತೆ ನಾನು ವಿಧಿಸುವ ಮಾರ್ಗದಲ್ಲೆ ನಡೆಯಿರಿ.


ನಾನು ಇಂದು ನಿಮಗೆ ತಿಳಿಸಿದ ಅವರ ಆಜ್ಞಾವಿಧಿಗಳನ್ನು ಅನುಸರಿಸಿ ನಡೆಯಿರಿ. ಆಗ ನಿಮಗೂ ನಿಮ್ಮ ಸಂತತಿಗೂ ಶುಭವುಂಟಾಗುವುದು; ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಶಾಶ್ವತವಾಗಿ ಕೊಡುವ ನಾಡಿನಲ್ಲಿ ನೀವು ದೀರ್ಘಕಾಲ ಬಾಳುವಿರಿ.”


ದಂಪತಿಗಳಿಬ್ಬರೂ ದೇವರ ದೃಷ್ಟಿಯಲ್ಲಿ ಭಯಭಕ್ತಿಯುಳ್ಳವರಾಗಿದ್ದರು; ಸರ್ವೇಶ್ವರನ ವಿಧಿನಿಯಮಗಳನ್ನು ನಿಷ್ಠೆಯಿಂದ ಪಾಲಿಸಿಕೊಂಡು ಬರುತ್ತಿದ್ದರು.


“ಆದುದರಿಂದ ಇಸ್ರಯೇಲರೇ, ನೀವು ನಿಮ್ಮ ದೇವರಾದ ಸರ್ವೇಶ್ವರನಲ್ಲಿ ಭಯಭಕ್ತಿ ಉಳ್ಳವರಾಗಿರಬೇಕು; ಎಲ್ಲ ವಿಷಯಗಳಲ್ಲೂ ಅವರು ಹೇಳುವ ಮಾರ್ಗದಲ್ಲೇ ನಡೆಯಬೇಕು; ಅವರನ್ನು ಪ್ರೀತಿಸುತ್ತಾ ಸಂಪೂರ್ಣವಾದ ಹೃದಯದಿಂದಲೂ ಮನಸ್ಸಿನಿಂದಲೂ ಸೇವೆಮಾಡಬೇಕು;


ಅಂಗಸಾಧನೆಯು ಸ್ವಲ್ಪಮಟ್ಟಿಗೆ ಪ್ರಯೋಜನಕರವಾದುದು; ಭಕ್ತಿಸಾಧನೆಯಾದರೋ ಎಲ್ಲಾ ದೃಷ್ಟಿಯಿಂದಲೂ ಪ್ರಯೋಜನಕರವಾದುದು. ಭಕ್ತಿಸಾಧನೆಯಿಂದ ಇಹಪರಗಳೆರಡರಲ್ಲೂ ನಿತ್ಯಜೀವವನ್ನು ಪಡೆಯುವ ಭರವಸೆ ನಮಗಿದೆ.


ಸತ್ಕಾರ್ಯಗಳಲ್ಲಿ ನಿರತರಾಗಿದ್ದು, ಮಹಿಮೆಯನ್ನು, ಗೌರವವನ್ನು, ಅಮರತ್ವವನ್ನು ಅರಸುತ್ತಾ ಬಾಳುವವರಿಗೆ ದೇವರು ನಿತ್ಯಜೀವವನ್ನು ದಯಪಾಲಿಸುತ್ತಾರೆ.


ಲಕ್ಷ್ಯ ಕೊಟ್ಟೆನಾದರೆ ನಿನ್ನೆಲ್ಲ ಆಜ್ಞೆಗಳಿಗೆ I ಆಸ್ಪದವಿರದು ಎನಗೆ ಪ್ರಭು, ಆಶಾಭಂಗಕೆ II


ನನ್ನಲ್ಲಿ ಭಯಭಕ್ತಿಯುಳ್ಳವರಾಗಿ, ನನ್ನ ಆಜ್ಞೆಗಳನ್ನು ಅನುಸರಿಸುವ ಮನಸ್ಸು ಸದಾ ಅವರಲ್ಲಿದ್ದರೆ ಎಷ್ಟೋ ಒಳ್ಳೆಯದು; ಆಗ ಅವರಿಗೂ ಅವರ ಸಂತತಿಗೂ ಯಾವಾಗಲೂ ಶುಭವುಂಟಾಗುವುದು.


ಇದನ್ನು ಪಾಲಿಸಿದರೆ ನಿನಗೆ ಶುಭವಾಗುವುದು; ನೀನು ಬಹುಕಾಲ ಬಾಳುವೆ.


ನಿನ್ನ ತಂದೆತಾಯಿಗಳನ್ನು ಗೌರವಿಸು; ಗೌರವಿಸಿದರೆ ನಿನ್ನ ದೇವರೂ ಸರ್ವೇಶ್ವರನೂ ಆದ ನಾನು ನಿನಗೆ ಅನುಗ್ರಹಿಸುವ ನಾಡಿನಲ್ಲಿ ಬಹುಕಾಲ ಬಾಳುವೆ.


“ಇಸ್ರಯೇಲರೇ, ಕೇಳಿ; ನೀವು ಜೀವದಿಂದುಳಿದು ನಿಮ್ಮ ಪಿತೃಗಳ ದೇವರಾದ ಸರ್ವೇಶ್ವರ ನಿಮಗೆ ಕೊಡುವ ನಾಡನ್ನು ಸೇರಿ ಸ್ವಾಧೀನಮಾಡಿಕೊಳ್ಳಬೇಕಾದರೆ ನಾನು ಈಗ ಬೋಧಿಸುವ ಆಜ್ಞಾವಿಧಿಗಳನ್ನು ಗಮನದಿಂದ ಅನುಸರಿಸಬೇಕು.


“ನಿಮ್ಮ ದೇವರಾದ ಸರ್ವೇಶ್ವರ ಸ್ವಾಮಿ ನಿಮಗೆ ಬೋಧಿಸಲು ನನಗೆ ಆಜ್ಞಾಪಿಸಿದ ಈ ಧರ್ಮೋಪದೇಶವನ್ನೂ ವಿಧಿನಿರ್ಣಯಗಳನ್ನೂ ನೀವು ನದಿದಾಟಿ ಸ್ವಾಧೀನಪಡಿಸಿಕೊಳ್ಳಲಿರುವ ಆ ನಾಡಿನಲ್ಲಿ ಅನುಸರಿಸಬೆಕು.


ಆದುದರಿಂದ ಇಸ್ರಯೇಲರೇ, ನಿಮ್ಮ ಪಿತೃಗಳ ದೇವರಾದ ಸರ್ವೇಶ್ವರ ವಾಗ್ದಾನ ಮಾಡಿದ ಪ್ರಕಾರ, ಹಾಲೂಜೇನೂ ಹರಿಯುವ ಆ ನಾಡಿನಲ್ಲಿ ನಿಮಗೆ ಶುಭವುಂಟಾಗುವಂತೆ, ನೀವು ಬಹಳವಾಗಿ ಹೆಚ್ಚಿ, ಅಭಿವೃದ್ಧಿಯಾಗುವಂತೆ, ಈ ಆಜ್ಞೆಗಳನ್ನು ಲಕ್ಷ್ಯವಿಟ್ಟು ಕೇಳಿ ಅನುಸರಿಸಿರಿ.


ಸರ್ವೇಶ್ವರ ನಿಮ್ಮ ಪಿತೃಗಳಿಗೂ ಅವರ ಸಂತತಿಗೂ ಕೊಡುತ್ತೇನೆಂದು ಪ್ರಮಾಣಮಾಡಿದ ಆ ನಾಡಿನಲ್ಲಿ ನೀವು ಬಹುಕಾಲ ಬಾಳುವಿರಿ; ಅದು ಹಾಲೂ ಜೇನೂ ಹರಿಯುವ ನಾಡು.


ನೀವು ಅದನ್ನು ಸೇವಿಸದೆ ಸರ್ವೇಶ್ವರನಿಗೆ ಮೆಚ್ಚಿಗೆಯಾಗಿರುವುದನ್ನೇ ಮಾಡಿದರೆ ನಿಮಗೂ ನಿಮ್ಮ ಸಂತತಿಯವರಿಗೂ ಶುಭವುಂಟಾಗುವುದು.


“ನಾನು ಬೋಧಿಸುವ ಈ ಎಲ್ಲಾ ಆಜ್ಞೆಗಳಿಗೆ ನೀವು ಚೆನ್ನಾಗಿ ಕಿವಿಗೊಟ್ಟು, ಅವುಗಳನ್ನು ಅನುಸರಿಸಿದರೆ ನಿಮಗೂ ನಿಮ್ಮ ಸಂತತಿಯವರಿಗೂ ಸದಾಕಾಲ ಶುಭವುಂಟಾಗುವುದು. ಏಕೆಂದರೆ ಹೀಗೆ ಮಾಡುವುದರಿಂದ ನಿಮ್ಮ ದೇವರಾದ ಸರ್ವೇಶ್ವರನ ದೃಷ್ಟಿಯಲ್ಲಿ ಸರಿಯಾದುದನ್ನೂ ಸೂಕ್ತವಾದುದನ್ನೂ ಮಾಡುತ್ತೀರಿ.


ನೀವು ಹೀಗೆ ನಡೆದುಕೊಂಡರೆ, ನಿಮಗೆ ಶ್ರೇಯಸ್ಸುಂಟಾಗುವುದು, ಮತ್ತು ಬಹುಕಾಲ ಬಾಳುವಿರಿ.


ನಮ್ಮ ದೇವರಾದ ಸರ್ವೇಶ್ವರನ ಮಾತು ಹಿತವಾಗಿರಲಿ, ಅಹಿತವಾಗಿರಲಿ ಅದನ್ನು ಕೈಗೊಳ್ಳುತ್ತೇವೆ. ಅವರ ಸನ್ನಿಧಿಯಲ್ಲಿ ವಿಚಾರಿಸುವುದಕ್ಕೆ ನಿಮ್ಮನ್ನು ನಾವು ಕಳುಹಿಸಿದ್ದೇವೆ. ನಮ್ಮ ದೇವರಾದ ಸರ್ವೇಶ್ವರನ ಮಾತನ್ನು ಕೇಳಿದರೆ ನಮಗೇ ಶುಭವಾಗುವುದು,” ಎಂದು ಹೇಳಿದರು.


ನಾನು ನಿಮ್ಮ ದೇವರಾದ ಸರ್ವೇಶ್ವರ; ನೀವು ನನ್ನ ಆಜ್ಞೆಗಳನ್ನು ಅನುಸರಿಸಿ ನನ್ನ ವಿಧಿಗಳನ್ನು ಕೈಗೊಂಡು ನಡೆಯಿರಿ.


‘ನಿನ್ನ ದೇವರಾದ ಸರ್ವೇಶ್ವರ ಆಜ್ಞಾಪಿಸಿದಂತೆ, ನಿನ್ನ ತಂದೆತಾಯಿಗಳನ್ನು ಗೌರವಿಸು; ಗೌರವಿಸಿದರೆ ನಿನ್ನ ದೇವರೂ ಸರ್ವೇಶ್ವರನೂ ಆದ ನಾನು ನಿನಗೆ ಅನುಗ್ರಹಿಸುವ ನಾಡಿನಲ್ಲಿ ಬಹುಕಾಲ ಸುಕ್ಷೇಮವಾಗಿ ಬಾಳುವೆ.


“ನಾನು ಈಗ ನಿಮಗೆ ಬೋಧಿಸುವ ಧರ್ಮೋಪದೇಶವನ್ನೆಲ್ಲಾ ನೀವು ಅನುಸರಿಸಬೇಕು. ಅನುಸರಿಸಿದರೆ ನೀವು ಬಾಳಿ ಅಭಿವೃದ್ಧಿಯಾಗುವಿರಿ. ಸರ್ವೇಶ್ವರ ನಿಮ್ಮ ಪಿತೃಗಳಿಗೆ ಪ್ರಮಾಣರೂಪವಾಗಿ ಕೊಟ್ಟ ನಾಡನ್ನು ಸೇರಿ ಸ್ವಾಧೀನಮಾಡಿಕೊಳ್ಳುವಿರಿ.


ನಾವು ಅವರನ್ನು ಸೋಲಿಸಿ ಅವರ ರಾಜ್ಯಗಳನ್ನು ಸ್ವಾಧೀನಮಾಡಿಕೊಂಡು ರೂಬೇನ್ಯರಿಗೂ ಗಾದ್ಯರಿಗೂ ಮನಸ್ಸೆಕುಲದವರಲ್ಲಿ ಅರ್ಧಜನರಿಗೂ ಸೊತ್ತಾಗಿ ಕೊಟ್ಟೆವಷ್ಟೆ.


ನಾನು ಈಗ ನಿಮಗೆ ಬೋಧಿಸುವಂತೆ ನೀವು ನಿಮ್ಮ ದೇವರಾದ ಸರ್ವೇಶ್ವರನನ್ನು ಪ್ರೀತಿಸಿ, ಅವರು ಹೇಳಿದ ಮಾರ್ಗದಲ್ಲಿ ನಡೆದು, ಅವರ ಆಜ್ಞಾವಿಧಿನಿರ್ಣಯಗಳನ್ನು ಅನುಸರಿಸಿದರೆ ನೀವು ಬದುಕಿಬಾಳುವಿರಿ, ಅಭಿವೃದ್ಧಿಯಾಗುವಿರಿ, ಮತ್ತು ನೀವು ಸ್ವಾಧೀನ ಮಾಡಿಕೊಳ್ಳಲು ಹೋಗುವ ನಾಡಿನಲ್ಲಿ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ಆಶೀರ್ವದಿಸುವರು.


ನೀನು ನಿನ್ನ ತಂದೆ ದಾವೀದನಂತೆ ನನ್ನ ಮಾರ್ಗದಲ್ಲೇ ನಡೆದು ನನ್ನ ಆಜ್ಞಾವಿಧಿಗಳನ್ನು ಕೈಗೊಳ್ಳುವುದಾದರೆ ನಿನ್ನ ಆಯುಷ್ಯವನ್ನೂ ಹೆಚ್ಚಿಸುವೆನು,” ಎಂದರು.


ನಾನು ನಿಮಗೆ ಬರೆಯಿಸಿಕೊಟ್ಟ ಆಜ್ಞಾನಿಯಮವಿಧಿ ಧರ್ಮಶಾಸ್ತ್ರಗಳನ್ನು ತಪ್ಪದೆ ಕೈಗೊಳ್ಳಬೇಕು.


“ನಿಮ್ಮ ದೇವರಾದ ಸರ್ವೇಶ್ವರನ ಎಲ್ಲಾ ಆಜ್ಞೆಗಳನ್ನು ಧ್ಯಾನಿಸಿ ಕೈಗೊಳ್ಳಬೇಕೆಂದು ಸರ್ವೇಶ್ವರನ ಸಮಾಜವಾದ ಸಮಸ್ತ ಇಸ್ರಯೇಲರ ಮುಂದೆ, ನಮ್ಮ ದೇವರಿಗೆ ಕೇಳಿಸುವಂತೆ, ನಿಮ್ಮನ್ನು ಎಚ್ಚರಿಸುತ್ತೇನೆ. ಹಾಗೆ ಮಾಡಿದರೆ ಈ ಒಳ್ಳೆಯ ನಾಡು ಸದಾಕಾಲ ನಿಮ್ಮ ಮತ್ತು ನಿಮ್ಮ ಸಂತಾನದವರ ಸೊತ್ತಾಗಿರುವುದು.


ವಧಿತರಾಗಿ ನಾಶವಾಗುವರು, ಕೇಡು ಮಾಡುವವರು I ಪ್ರಭುವಿಗಾಗಿ ಕಾಯುವವರು ನಾಡಿಗೊಡೆಯರಾಗುವರು II


ದೀನದಲಿತರು ಬಾಧ್ಯಸ್ಥರಾಗುವರು ನಾಡಿಗೆ I ಆನಂದಿಸುವರು ಅಲ್ಲಿ ದೊರಕುವ ಸುಖಶಾಂತಿಗೆ II


ಪ್ರಭುವಿನಿಂದ ಆಶೀರ್ವದಿತರು ನಾಡಿಗೆ ಬಾಧ್ಯಸ್ಥರು I ಆತನಿಂದ ಶಾಪಗ್ರಸ್ಥರು ಬಹಿಷ್ಕೃತರು II


ಸಜ್ಜನರು ಸಿರಿನಾಡಿಗೆ ಬಾಧ್ಯಸ್ಥರು I ಅಲ್ಲವರು ಶಾಶ್ವತವಾಗಿ ಬಾಳುವರು II


ಪ್ರಭುವನು ನಂಬಿ ನಡೆ ಆತನ ಪಥದಲೇ I ಉದ್ಧಾರವಾಗುವೆ, ನಾಡಿಗೊಡೆಯನಾಗುವೆ I ದುಷ್ಟರ ವಿನಾಶವನು ಕಣ್ಣಾರೆ ಕಾಣುವೆ II


ಮಗನೇ, ನನ್ನ ಉಪದೇಶವನ್ನು ಮರೆಯಬೇಡ, ನನ್ನ ಆಜ್ಞೆಗಳನ್ನು ನಿನ್ನ ಹೃದಯದಲ್ಲಿಡು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು