Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 5:6 - ಕನ್ನಡ ಸತ್ಯವೇದವು C.L. Bible (BSI)

6 ‘ನಾನೇ ನಿನ್ನ ದೇವರಾದ ಸರ್ವೇಶ್ವರ; ಗುಲಾಮತನದ ನಾಡಾಗಿದ್ದು, ಈಜಿಪ್ಟಿನಿಂದ ನಿನ್ನನ್ನು ಬಿಡುಗಡೆ ಮಾಡಿದವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 “ನೀನು ದಾಸತ್ವದಲ್ಲಿದ್ದ ಐಗುಪ್ತದೇಶದೊಳಗಿಂದ ನಿನ್ನನ್ನು ಬಿಡುಗಡೆಮಾಡಿದ ಯೆಹೋವನೆಂಬ ನಿನ್ನ ದೇವರು ನಾನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನೀನು ದಾಸತ್ವದಲ್ಲಿದ್ದ ಐಗುಪ್ತದೇಶದೊಳಗಿಂದ ನಿನ್ನನ್ನು ಬಿಡುಗಡೆ ಮಾಡಿದ ಯೆಹೋವನೆಂಬ ನಿನ್ನ ದೇವರು ನಾನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 “ಯೆಹೋವನು ಹೇಳಿದ್ದೇನೆಂದರೆ: ‘ನಾನು ನಿಮ್ಮ ದೇವರಾದ ಯೆಹೋವನು. ನೀವು ಈಜಿಪ್ಟಿನಲ್ಲಿ ಗುಲಾಮರಾಗಿದ್ದಾಗ ನಿಮ್ಮನ್ನು ಅಲ್ಲಿಂದ ಬಿಡುಗಡೆ ಮಾಡಿದೆನು. ಆದ್ದರಿಂದ ನೀವು ಈ ಆಜ್ಞೆಗಳಿಗೆ ವಿಧೇಯರಾಗಬೇಕು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 “ನಿನ್ನನ್ನು ಈಜಿಪ್ಟ್ ದೇಶದಿಂದಲೂ, ದಾಸತ್ವದ ನಾಡಿನೊಳಗಿಂದಲೂ ಹೊರಗೆ ತಂದ ನಿನ್ನ ದೇವರಾದ ಯೆಹೋವ ದೇವರು ನಾನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 5:6
13 ತಿಳಿವುಗಳ ಹೋಲಿಕೆ  

ನಿಮ್ಮ ದೇವರಾದ ಸರ್ವೇಶ್ವರನನ್ನು ಅವಲಂಭಿಸಿದ ನೀವಾದರೋ ಇಂದಿನವರೆಗೂ ಉಳಿದುಕೊಂಡಿದ್ದೀರಿ.


“ಇಸ್ರಯೇಲ್ ಜನಾಂಗವೇ ಕೇಳು; ನಿನ್ನ ದೇವರಾದ ಸರ್ವೇಶ್ವರ ಸ್ವಾಮಿ ಒಬ್ಬರೇ ದೇವರು.


ಮೋಶೆ ಇಸ್ರಯೇಲರಿಗೆ, “ಗುಲಾಮತನದಲ್ಲಿದ್ದು ಈಜಿಪ್ಟ್ ದೇಶದಿಂದ ಬಿಡುಗಡೆಯಾದ ಈ ದಿನವನ್ನು ನೀವು ಸ್ಮರಿಸಬೇಕು. ಈ ದಿನದಲ್ಲೇ ಸರ್ವೇಶ್ವರ ಸ್ವಾಮಿ ತಮ್ಮ ಭುಜಬಲ ಪ್ರಯೋಗಿಸಿ ನಿಮ್ಮನ್ನು ಅಲ್ಲಿಂದ ವಿಮೋಚಿಸಿದರು. ಈ ದಿನದಂದು ನೀವು ಹುಳಿಬೆರತದ್ದನ್ನು ತಿನ್ನಕೂಡದು.


ಇನ್ನು ಮುಂದೆ ನಿಮ್ಮ ಮಕ್ಕಳು, ಇದರ ಅರ್ಥವೇನೆಂದು ವಿಚಾರಿಸುವಾಗ ನೀವು ಅವರಿಗೆ, ‘ನಾವು ಗುಲಾಮತನದಲ್ಲಿದ್ದಾಗ ಸರ್ವೇಶ್ವರ ತಮ್ಮ ಭುಜಬಲವನ್ನು ಪ್ರದರ್ಶಿಸಿ ಈಜಿಪ್ಟಿನಿಂದ ನಮ್ಮನ್ನು ಬಿಡುಗಡೆ ಮಾಡಿದರು.


ದೇವರು ಕೊಟ್ಟ ಆಜ್ಞೆಗಳು ಇವು:


ಆದರೂ ಸರ್ವೇಶ್ವರ ನಿಮ್ಮನ್ನು ಪ್ರೀತಿಸಿ, ತಾವು ನಿಮ್ಮ ಪಿತೃಗಳಿಗೆ ಮಾಡಿದ ಪ್ರಮಾಣವನ್ನು ನೆರವೇರಿಸಬೇಕೆಂದು, ಈಜಿಪ್ಟಿನ ರಾಜ ಫರೋಹನ ಕೈಕೆಳಗೆ ಗುಲಾಮರಾಗಿದ್ದ ನಿಮ್ಮನ್ನು ಬಿಡುಗಡೆಮಾಡಿ, ತಮ್ಮ ಭುಜಬಲ ಪ್ರಯೋಗಿಸಿ, ಆ ದೇಶದಿಂದ ಬರಮಾಡಿದ್ದಾರೆ.


ನೀವು ಗರ್ವಗೊಂಡು ನಿಮ್ಮ ದೇವರಾದ ಸರ್ವೇಶ್ವರನನ್ನು ಮರೆತುಬಿಟ್ಟೀರಿ!


“ಆದರೆ ಕೇಳಲಿಲ್ಲಾ ಜನತೆ ನನ್ನ ಮಾತುಗಳನು I ತೋರಲಿಲ್ಲ ಇಸ್ರಯೇಲರು ನನಗೆ ವಿಧೇಯತೆಯನು, II


ಈಜಿಪ್ಟ್ ದೇಶದಿಂದ ನಾನು ನಿನ್ನನ್ನು ಕರೆತಂದೆ; ದಾಸತ್ವದ ಬಂಧನದಿಂದ ನಿನ್ನನ್ನು ಬಿಡುಗಡೆ ಮಾಡಿದೆ. ನಿನಗೆ ಮೋಶೆ, ಆರೋನ್ ಮತ್ತು ಮಿರ್ಯಾಮಳನ್ನು ನಾಯಕರನ್ನಾಗಿ ಕಳುಹಿಸಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು