Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 5:9 - ಕನ್ನಡ ಸತ್ಯವೇದವು C.L. Bible (BSI)

9 ಅವುಗಳಿಗೆ ಅಡ್ಡಬೀಳಬೇಡ. ಅವುಗಳನ್ನು ಆರಾಧಿಸಬೇಡ. ಏಕೆಂದರೆ ನಾನೇ ನಿನ್ನ ದೇವರಾದ ಸರ್ವೇಶ್ವರ, ನನಗೆ ಸಲ್ಲತಕ್ಕ ಗೌರವವನ್ನು ನಾನು ಮತ್ತೊಬ್ಬನಿಗೆ ಸಲ್ಲಗೊಡಿಸುವುದಿಲ್ಲ. ನನ್ನನ್ನು ದ್ವೇಷಿಸುವವರನ್ನು ದಂಡಿಸುತ್ತೇನೆ; ಹೆತ್ತವರ ದೋಷಫಲವನ್ನು ಅವರ ಮಕ್ಕಳ ಮೇಲೆ ಮೂರು ನಾಲ್ಕು ತಲೆಗಳವರೆಗೆ ಬರಮಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅವುಗಳಿಗೆ ಅಡ್ಡಬೀಳಲೂ ಬಾರದು, ಪೂಜೆಮಾಡಲೂ ಬಾರದು. ನಿನ್ನ ದೇವರಾದ ಯೆಹೋವನೆಂಬ ನಾನು ನನಗೆ ಸಲ್ಲತಕ್ಕ ಗೌರವವನ್ನು ಮತ್ತೊಬ್ಬನಿಗೆ ಸಲ್ಲಗೊಡಿಸದವನಾದ್ದರಿಂದ, ನನ್ನನ್ನು ದ್ವೇಷಿಸುವವರ ವಿಷಯದಲ್ಲಿ ಪೂರ್ವಿಕರ ದೋಷಫಲವನ್ನು ಮಕ್ಕಳ ಮೇಲೆ ಮೂರು ನಾಲ್ಕು ತಲೆಗಳ ವರೆಗೆ ಬರಮಾಡುವವನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಅವುಗಳಿಗೆ ಅಡ್ಡ ಬೀಳಲೂಬಾರದು, ಪೂಜೆಮಾಡಲೂಬಾರದು. ನಿನ್ನ ದೇವರಾದ ಯೆಹೋವನೆಂಬ ನಾನು ನನಗೆ ಸಲ್ಲತಕ್ಕ ಗೌರವವನ್ನು ಮತ್ತೊಬ್ಬನಿಗೆ ಸಲ್ಲಗೊಡಿಸದವನಾದದರಿಂದ ನನ್ನನ್ನು ದ್ವೇಷಿಸುವವರ ವಿಷಯದಲ್ಲಿ ತಂದೆಗಳ ದೋಷಫಲವನ್ನು ಮಕ್ಕಳ ಮೇಲೆ ಮೂರು ನಾಲ್ಕು ತಲೆಗಳವರೆಗೆ ಬರಮಾಡುವವನಾಗಿಯೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನಾನೇ ನಿಮ್ಮ ದೇವರಾದ ಯೆಹೋವನು. ಆದ್ದರಿಂದ ನೀವು ಯಾವ ವಿಗ್ರಹವನ್ನೂ ಪೂಜಿಸಬಾರದು ಮತ್ತು ಅದರ ಸೇವೆ ಮಾಡಬಾರದು. ನನ್ನ ಜನರು ಇತರ ದೇವರುಗಳನ್ನು ಆರಾಧಿಸುವುದನ್ನು ನಾನು ದ್ವೇಷಿಸುತ್ತೇನೆ. ನನಗೆ ವಿರುದ್ಧವಾಗಿ ಪಾಪ ಮಾಡಿದವರನ್ನು ನಾನು ಶಿಕ್ಷಿಸುತ್ತೇನೆ. ಅವರ ಮಕ್ಕಳು, ಮೊಮ್ಮಕ್ಕಳು ಮತ್ತು ಮರಿಮೊಮ್ಮಕ್ಕಳು ನನ್ನ ದಂಡನೆಗೆ ಗುರಿಯಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ನೀನು ಅವುಗಳಿಗೆ ಅಡ್ಡ ಬೀಳಬಾರದು ಮತ್ತು ಆರಾಧಿಸಲೂಬಾರದು. ಏಕೆಂದರೆ ನಿನ್ನ ದೇವರಾದ ನಾನು, ನನಗೆ ಸಲ್ಲಬೇಕಾದ ಗೌರವವನ್ನು ಮತ್ತೊಬ್ಬರಿಗೆ ಸಲ್ಲಗೊಡಿಸದ ಸ್ವಾಮ್ಯಾಸಕ್ತನಾದ ಯೆಹೋವ ದೇವರಾಗಿದ್ದೇನೆ. ನನ್ನನ್ನು ಹಗೆ ಮಾಡುವ ತಂದೆತಾಯಿಗಳ ಅಪರಾಧವನ್ನು ಮಕ್ಕಳ ಮೇಲೆಯೂ ಮೂರನೆಯ ನಾಲ್ಕನೆಯ ತಲೆಗಳವರೆಗೂ ಬರಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 5:9
13 ತಿಳಿವುಗಳ ಹೋಲಿಕೆ  

ಸಾವಿರಾರು ತಲೆಗಳವರೆಗೂ ಅಚಲಪ್ರೀತಿ ತೋರುವವನು, ದೋಷಾಪರಾಧಗಳನ್ನೂ ಪಾಪಗಳನ್ನೂ ಕ್ಷಮಿಸುವವನು; ಆದರೂ ತಪ್ಪಿತಸ್ಥರನ್ನು ಶಿಕ್ಷಿಸದೆ ಬಿಡದವನು. ಹೆತ್ತವರ ದೋಷಪರಿಣಾಮಗಳನ್ನು ಮಕ್ಕಳ ಮೇಲೆ ಮೂರುನಾಲ್ಕು ತಲೆಗಳವರೆಗೆ ಬರಮಾಡುವವರು.


‘ಸರ್ವೇಶ್ವರ ದೀರ್ಘಶಾಂತನು, ಪ್ರೀತಿಮಯನು, ಪಾಪ-ಅಪರಾಧಗಳನ್ನು ಕ್ಷಮಿಸುವವನು, ಆದರೂ ಶಿಕ್ಷಿಸದೆ ಬಿಡದವನು, ತಂದೆಗಳ ಪಾಪಫಲವನ್ನು ಮಕ್ಕಳ ಮೇಲೆ ಮೂರು ನಾಲ್ಕು ತಲೆಗಳವರೆಗೆ ಬರಮಾಡುವವನು,’ ಎಂದು ಹೇಳಿದ್ದೀರಿ. ಆ ಮಾತನ್ನು ನೆನಪಿಗೆ ತಂದುಕೊಳ್ಳಿ.


ನೀವು ಬೇರೆ ದೇವರ ಮುಂದೆ ಅಡ್ಡಬೀಳಬಾರದು; ಏಕೆಂದರೆ ಸ್ವಾಭಿಮಾನಿಯೆಂಬ ಹೆಸರುಳ್ಳ ಸರ್ವೇಶ್ವರನಾದ ನಾನು ನನಗೆ ಸಲ್ಲಬೇಕಾದ ಅಭಿಮಾನವನ್ನು ಮತ್ತೊಬ್ಬನಿಗೆ ಸಲ್ಲಗೊಡಿಸುವುದಿಲ್ಲ.


ನೀವು ಸಾವಿರಾರು ತಲಾಂತರಗಳವರೆಗೂ ದಯೆತೋರುವವರು. ಆದರೆ ಹೆತ್ತವರ ದೋಷಫಲವನ್ನು ಅವರ ತರುವಾಯ ಮಕ್ಕಳ ಮಡಲಿಗೆ ಹಾಕುವವರು. ನೀವು ಮಹಾಪರಾಕ್ರಮಿಯಾದ ದೇವರು, ‘ಸೇನಾಧೀಶ್ವರ ಸರ್ವೇಶ್ವರ’ ಎಂಬುದು ನಿಮ್ಮ ನಾಮಧೇಯ.


ನೀವು ಭ್ರಷ್ಟರಾಗದಂತೆ ವಿಗ್ರಹಗಳನ್ನು ಮಾಡಿಕೊಳ್ಳಬೇಡಿ. ಸ್ತ್ರೀಪುರುಷರ ರೂಪದಲ್ಲಾಗಲಿ,


ಏಕೆಂದರೆ ನಿಮ್ಮ ದೇವರಾದ ಸರ್ವೇಶ್ವರ ಕಬಳಿಸಿಬಿಡುವ ಅಗ್ನಿಯಂಥವರು; ತಮಗೆ ಸಲ್ಲಬೇಕಾದ ಗೌರವವನ್ನು ಮತ್ತೊಬ್ಬನಿಗೆ ಸಲ್ಲಗೊಡದ ದೇವರು.


ನಿಮ್ಮ ಮಧ್ಯೆಯಿರುವ ನಿಮ್ಮ ದೇವರಾದ ಸರ್ವೇಶ್ವರ ತಮಗೆ ಸಲ್ಲಬೇಕಾದ ಗೌರವವನ್ನು ಇನ್ನೊಬ್ಬನಿಗೆ ಸಲ್ಲಗೊಡಿಸದ ದೇವರು; ಅವರು ನಿಮ್ಮ ಮೇಲೆ ಕೋಪಗೊಂಡರೆ ನಿಮ್ಮನ್ನು ಭೂಮಿಯ ಮೇಲೆ ಉಳಿಯದಂತೆ ನಾಶಮಾಡಬಹುದು.


ತಮ್ಮನ್ನು ತಿರಸ್ಕರಿಸಿದವರಿಗೆ ಪ್ರತಿಯಾಗಿ ನಾಶವನ್ನು ಉಂಟುಮಾಡುವರು. ಇದನ್ನು ನೀವು ತಿಳಿದುಕೊಳ್ಳಬೇಕು. ಹಗೆಯವರ ವಿಷಯದಲ್ಲಿ ಅವರು ತಡಮಾಡದೆ ಆಗಲೇ ಮುಯ್ಯಿತೀರಿಸುವರು.


ಇಸ್ರಯೇಲರಿಗೆ ಸರ್ವೇಶ್ವರ, “ನೀವು ಅನ್ಯದೇವತೆಗಳನ್ನು ಆರಾಧಿಸಬಾರದು, ಅವುಗಳಿಗೆ ಕೈಮುಗಿಯಲೂಬಾರದು. ಸೇವೆಮಾಡಬಾರದು, ಬಲಿ ಅರ್ಪಿಸಲೂಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು