ಧರ್ಮೋಪದೇಶಕಾಂಡ 6:11 - ಕನ್ನಡ ಸತ್ಯವೇದವು C.L. Bible (BSI)11 ನೀನು ಕಟ್ಟದ ಸುಂದರವಾದ ದೊಡ್ಡ ಪಟ್ಟಣಗಳನ್ನು, ನೀನು ಕೂಡಿಸದ ಉತ್ತಮೋತ್ತಮ ವಸ್ತುಗಳಿಂದ ತುಂಬಿದ ಮನೆಗಳನ್ನು, ನೀನು ತೋಡದ ನೀರುಗುಂಡಿಗಳನ್ನು, ನೀನು ಬೆಳಸದ ದ್ರಾಕ್ಷಿತೋಟಗಳನ್ನು ಹಾಗು ಎಣ್ಣೆಮರಗಳನ್ನು ಅನುಭವಿಸುತ್ತಾ ತೃಪ್ತನಾಗಿ ಇರುವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ತುಂಬಿದ ಮನೆಗಳನ್ನೂ, ನೀವು ತೋಡದ ನೀರುಗುಂಡಿಗಳನ್ನೂ, ನೀವು ಬೆಳಸದ ದ್ರಾಕ್ಷಿತೋಟಗಳನ್ನೂ ಮತ್ತು ಎಣ್ಣೆಮರಗಳನ್ನೂ ಅನುಭವಿಸುತ್ತಾ ತೃಪ್ತರಾಗಿರುವಾಗ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ನೀವು ಕೂಡಿಸದ ಉತ್ತಮವಸ್ತುಗಳಿಂದ ತುಂಬಿದ ಮನೆಗಳನ್ನೂ ನೀವು ಅಗೆಯದ ನೀರಗುಂಡಿಗಳನ್ನೂ ನೀವು ಬೆಳಸದ ದ್ರಾಕ್ಷೇತೋಟಗಳನ್ನೂ ಎಣ್ಣೆಮರಗಳನ್ನೂ ಅನುಭವಿಸುತ್ತಾ ತೃಪ್ತರಾಗಿರುವಾಗ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ನೀವು ಕೂಡಿಸಿಡದ ಉತ್ತಮ ವಸ್ತುಗಳಿಂದ ತುಂಬಿರುವ ಮನೆಗಳನ್ನು ಯೆಹೋವನು ನಿಮಗೆ ಕೊಡುತ್ತಾನೆ. ನೀವು ತೋಡದಿರುವ ಬಾವಿಗಳನ್ನು ನಿಮಗೆ ಕೊಡುವನು. ನೀವು ನೆಡದಿರುವ ದ್ರಾಕ್ಷಾತೋಟಗಳನ್ನೂ ಎಣ್ಣೆಮರಗಳ ತೋಪುಗಳನ್ನೂ ನಿಮಗೆ ಕೊಡುವನು. ನಿಮಗೆ ತಿನ್ನಲು ಯಾವ ಕೊರತೆಯೂ ಇರುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ನೀವು ಕೂಡಿಸದ ಉತ್ತಮ ವಸ್ತುಗಳಿಂದ ತುಂಬಿದ ಮನೆಗಳನ್ನೂ, ನೀವು ಅಗೆಯದಿರುವ ಬಾವಿಗಳನ್ನೂ, ನೀವು ನೆಡದ ದ್ರಾಕ್ಷಿತೋಟಗಳನ್ನೂ, ಓಲಿವ್ ತೋಟಗಳನ್ನೂ ನಿಮಗೆ ಕೊಡಲಾಗಿ, ನೀವು ತಿಂದು ತೃಪ್ತರಾಗಿರುವಿರಿ. ಅಧ್ಯಾಯವನ್ನು ನೋಡಿ |