Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 6:12 - ಕನ್ನಡ ಸತ್ಯವೇದವು C.L. Bible (BSI)

12 ಈಜಿಪ್ಟ್ ದೇಶದಲ್ಲಿ ಗುಲಾಮನಾಗಿದ್ದ ನಿನ್ನನ್ನು ಬಿಡುಗಡೆ ಮಾಡಿದ ಸರ್ವೇಶ್ವರನನ್ನು ಆಗ ಮರೆತುಬಿಡದಂತೆ ಎಚ್ಚರಿಕೆಯಿಂದಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಐಗುಪ್ತದೇಶದಲ್ಲಿ ದಾಸರಾಗಿದ್ದ ನಿಮ್ಮನ್ನು ಬಿಡುಗಡೆ ಮಾಡಿದ ಯೆಹೋವನನ್ನು ಮರೆಯದೇ ಎಚ್ಚರದಿಂದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಐಗುಪ್ತದೇಶದಲ್ಲಿ ದಾಸರಾಗಿದ್ದ ನಿಮ್ಮನ್ನು ಬಿಡುಗಡೆ ಮಾಡಿದ ಯೆಹೋವನನ್ನು ಮರೆಯಬಾರದು, ನೋಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 “ನಿಮ್ಮ ದೇವರಾದ ಯೆಹೋವನನ್ನು ಸನ್ಮಾನಿಸಿ ಆತನನ್ನೇ ಸೇವಿಸಿರಿ. ಆತನನ್ನು ಮರೆತುಬಿಡಬೇಡಿರಿ. ಈಜಿಪ್ಟ್ ದೇಶದಲ್ಲಿ ಗುಲಾಮರಾಗಿದ್ದಾಗ ಆತನೇ ನಿಮ್ಮನ್ನು ವಿಮೋಚಿಸಿದನಲ್ಲಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಈಜಿಪ್ಟ್ ದೇಶದ ದಾಸತ್ವದ ಮನೆಯೊಳಗಿಂದ ನಿಮ್ಮನ್ನು ಹೊರಗೆ ಬರಮಾಡಿದ ಯೆಹೋವ ದೇವರನ್ನು ಮರೆಯದ ಹಾಗೆ ನೋಡಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 6:12
22 ತಿಳಿವುಗಳ ಹೋಲಿಕೆ  

ಆದುದರಿಂದ ನೀನು ಇಸ್ರಯೇಲರಿಗೆ ನನ್ನ ಪರವಾಗಿ ಹೀಗೆಂದು ಹೇಳು: ‘ನಾನೇ ಸರ್ವೇಶ್ವರ. ಈಜಿಪ್ಟಿನವರು ನಿಮ್ಮ ಮೇಲೆ ಹೊರಿಸಿರುವ ದುಡಿಮೆಯನ್ನು ನೀಗಿಸುವೆನು, ದಾಸತ್ವವನ್ನು ತೊಲಗಿಸುವೆನು. ಅವರಿಗೆ ಕಠಿಣಶಿಕ್ಷೆಗಳನ್ನು ವಿಧಿಸುವೆನು, ನಿಮ್ಮನ್ನು ಸಂರಕ್ಷಿಸುವೆನು.


ಆ ಗೊಂಡೆಗಳ ಪ್ರಯೋಜನವಿದು - ನೀವು ಅವುಗಳನ್ನು ನೋಡುವಾಗ ಸರ್ವೇಶ್ವರನ ಆಜ್ಞೆಗಳನ್ನೆಲ್ಲಾ ನೆನಪಿಗೆ ತಂದುಕೊಂಡು ಅವುಗಳನ್ನು ಪಾಲಿಸಬೇಕು. ಹಿಂದೆ ನೀವು ನನಗೆ ದ್ರೋಹಿಗಳಾಗಿ ನಿಮ್ಮ ಮನಸ್ಸಿಗೆ ಬಂದಂತೆ, ಕಣ್ಣಿಗೆ ತೋರಿದಂತೆ ದಾರಿತಪ್ಪಿ ನಡೆದಿರಿ.


ಹೀಗಿರುವಲ್ಲಿ, ನೀವು ಬಹಳ ಜಾಗರೂಕತೆಯಿಂದಿರಿ; ನಿಮ್ಮ ಕಣ್ಣುಗಳಿಂದಲೇ ನೋಡಿದ ಘಟನೆಗಳನ್ನು ಎಷ್ಟು ಮಾತ್ರಕ್ಕೂ ಮರೆಯದಿರಿ; ಜೀವಮಾನಪರ್ಯಂತ ಇವುಗಳನ್ನು ನೆನಪಿನಲ್ಲಿ ಇಡಿ; ನಿಮ್ಮ ಮಕ್ಕಳಿಗೂ ಮೊಮ್ಮಕ್ಕಳಿಗೂ ತಿಳಿಸುತ್ತಾ ಹೋಗಿ,


ಅನ್ಯದೇವತೆಗಳನ್ನು ಪೂಜಿಸಬಾರದು; ನನ್ನ ನಿಬಂಧನೆಯನ್ನು ಮರೆತು ಅನ್ಯದೇವತೆಗಳನ್ನು ಪೂಜಿಸಬಾರದು.


ಕೊಲಬೇಡಾ ದ್ರೋಹಿಗಳನು ಫಕ್ಕನೆ I ಮರೆತಾರೆನ್ನ ಜನತೆ ಪಾಠ ಕಲಿಯದೆ II ಚದರಿಸು ಶಕ್ತಿಯಿಂದ, ಅಲೆಯಲಿ ದಿಕ್ಕುತೋಚದೆ I ಆ ಪರಿ ತಗ್ಗಿಸು ಅವರನು; ಪ್ರಭು, ನೀಡೆನಗೆ ರಕ್ಷೆ II


ಆಗ ತಮ್ಮ ಪ್ರಾಚೀನ ಪೂರ್ವಿಕರಂತೆ ಅವರಾಗರು I ಮೊಂಡರು, ಅವಿಧೇಯರು, ದೈವದ್ರೋಹಿಗಳು, ಚಪಲಚಿತ್ತರು II


ಭಜಿಸು ನನ್ನ ಮನವೇ, ಭಜಿಸು ಪ್ರಭುವನು I ಮರೆಯದಿರು ಆತನ ಉಪಕಾರಗಳೊಂದನು II


ಆಕಾಶವನು ಹರಡಿ ಭೂಮಿಯನು ಸ್ಥಾಪಿಸಿದಾ ನಿನ್ನ ಸೃಷ್ಟಿಕರ್ತ ಸರ್ವೇಶ್ವರನನು ಮರೆತುಬಿಟ್ಟೆಯಾ? ನಾಶಮಾಡಲು ಹವಣಿಸುವ ಹಿಂಸಕನ ಕ್ರೋಧಕೆ ನೀ ಎಡೆಬಿಡದೆ ದಿನವೆಲ್ಲ ಅಂಜುತ್ತಿರಬೇಕೆ? ಆ ಹಿಂಸಕನ ಕ್ರೋಧವು ಈಗ ಹೋದುದೆಲ್ಲಿಗೆ?


ಮೋಶೆ ಇಸ್ರಯೇಲರಿಗೆ, “ಗುಲಾಮತನದಲ್ಲಿದ್ದು ಈಜಿಪ್ಟ್ ದೇಶದಿಂದ ಬಿಡುಗಡೆಯಾದ ಈ ದಿನವನ್ನು ನೀವು ಸ್ಮರಿಸಬೇಕು. ಈ ದಿನದಲ್ಲೇ ಸರ್ವೇಶ್ವರ ಸ್ವಾಮಿ ತಮ್ಮ ಭುಜಬಲ ಪ್ರಯೋಗಿಸಿ ನಿಮ್ಮನ್ನು ಅಲ್ಲಿಂದ ವಿಮೋಚಿಸಿದರು. ಈ ದಿನದಂದು ನೀವು ಹುಳಿಬೆರತದ್ದನ್ನು ತಿನ್ನಕೂಡದು.


ಇನ್ನು ಮುಂದೆ ನಿಮ್ಮ ಮಕ್ಕಳು, ಇದರ ಅರ್ಥವೇನೆಂದು ವಿಚಾರಿಸುವಾಗ ನೀವು ಅವರಿಗೆ, ‘ನಾವು ಗುಲಾಮತನದಲ್ಲಿದ್ದಾಗ ಸರ್ವೇಶ್ವರ ತಮ್ಮ ಭುಜಬಲವನ್ನು ಪ್ರದರ್ಶಿಸಿ ಈಜಿಪ್ಟಿನಿಂದ ನಮ್ಮನ್ನು ಬಿಡುಗಡೆ ಮಾಡಿದರು.


“ಎಚ್ಚರಿಕೆಯಾಗಿರಿ; ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ಮರೆತುಬಿಡಬೇಡಿ. ಅವರು ಪೂಜಿಸಬೇಡಿರೆಂದು ನಿಷೇಧಿಸಿದ ಯಾವ ವಿಗ್ರಹ ವಸ್ತುಗಳನ್ನೂ ಮಾಡಿಕೊಳ್ಳಬೇಡಿ.


ನೀವು ಹೊಟ್ಟೆತುಂಬ ಉಂಡು ಸುಖದಿಂದಿರುವಾಗ ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಇಂಥ ಉತ್ತಮ ನಾಡನ್ನು ಕೊಟ್ಟದ್ದಕ್ಕಾಗಿ ಅವರನ್ನು ಸ್ತುತಿಸಬೇಕು.


ಎಲೈ ಇಸ್ರಯೇಲರೇ, ಮರೆತಿರಾ ಜನ್ಮವಿತ್ತ ಪೊರೆಬಂಡೆಯನು ಸ್ಮರಿಸಲಿಲ್ಲ ನೀವು ಹೆತ್ತತಾಯಂತಿದ್ದಾ ದೇವರನು.


ತಮ್ಮ ಪೂರ್ವಜರನ್ನು ಈಜಿಪ್ಟಿನಿಂದ ಕರೆದುತಂದ ದೇವರಾದ ಸರ್ವೇಶ್ವರನನ್ನು ಬಿಟ್ಟು ಅನ್ಯದೇವತೆಗಳನ್ನು ಅಂದರೆ, ತಮ್ಮ ಸುತ್ತಮುತ್ತಲಿನ ಜನಾಂಗಗಳ ದೇವರುಗಳನ್ನು ಅವಲಂಬಿಸಿ ಅವುಗಳಿಗೆ ಅಡ್ಡಬಿದ್ದು ಸರ್ವೇಶ್ವರನನ್ನು ರೇಗಿಸಿದರು.


ನಿಮ್ಮನ್ನು ಮಹಾಶಕ್ತಿ ಹಾಗು ಭುಜಪರಾಕ್ರಮಗಳ ಮೂಲಕ ಈಜಿಪ್ಟ್ ದೇಶದಿಂದ ಕರೆದುಕೊಂಡು ಬಂದ ಸರ್ವೇಶ್ವರನಾದ ನನ್ನಲ್ಲೇ ಭಯಭಕ್ತಿಯುಳ್ಳವರಾಗಿ ನನಗೊಬ್ಬನಿಗೇ ಕೈಮುಗಿದು ಬಲಿಯರ್ಪಿಸಬೇಕು.


ದೇವರನ್ನು ಮರೆಯುವವರೆಲ್ಲರ ಗತಿ ಇದುವೆ ಭಕ್ತಿಹೀನನ ನಿರೀಕ್ಷೆ ನಿರರ್ಥಕವೆ.


ನಿನ್ನ ಮರೆಯಲಿಲ್ಲ, ನಿನ್ನ ಒಪ್ಪಂದವನು ಮೀರಲಿಲ್ಲ I ಆದರೂ ಒದಗಿವೆಯಲ್ಲ ನಮಗೀ ಅನಾಹುತಗಳೆಲ್ಲ II


ಎಲ್ಲವೂ ಇದ್ದರೆ “ಸರ್ವೇಶ್ವರನು ಯಾರು?” ಎಂದು ನಿನ್ನನ್ನೆ ನಾನು ತಿರಸ್ಕರಿಸೇನು. ಬಡವನಾದರೆ ಕಳ್ಳತನಮಾಡಿ ನನ್ನ ದೇವರಾದ ನಿನ್ನ ಹೆಸರಿಗೆ ಅಪಕೀರ್ತಿ ತಂದೇನು.


ಇಸ್ರಯೇಲೇ, ನಿನ್ನ ಉದ್ಧಾರಕನಾದ ದೇವರನ್ನು ನೀನು ಸ್ಮರಿಸಲಿಲ್ಲ. ನಿನಗೆ ಆಶ್ರಯವಿತ್ತ ಪೊರೆಬಂಡೆಯನ್ನು ಮರೆತುಹೋದೆ. ಬದಲಿಗೆ ಅನ್ಯದೇವರ ಆರಾಧನೆಗಾಗಿ ನಿನಗಿಷ್ಟವಾದ ಉದ್ಯಾನವನಗಳನ್ನು ನೆಟ್ಟೆ.


“ಇಸ್ರಯೇಲರ ದೇವರಾದ ಸರ್ವೇಶ್ವರನ ವಾಣಿ ಇದು - ಈಜಿಪ್ಟ್ ದೇಶದಲ್ಲಿ ಗುಲಾಮರಾಗಿದ್ದ ನಿಮ್ಮ ಪೂರ್ವಜರನ್ನು ನಾನು ಅಲ್ಲಿಂದ ಕರೆದುತಂದಾಗ ನಾನು ಅವರೊಡನೆ ಒಂದು ಒಪ್ಪಂದಮಾಡಿಕೊಂಡೆ.


ಅವಳು ನನ್ನನ್ನು ಮರೆತುಬಿಟ್ಟಿದ್ದಾಳೆ; ಬಂಗಾರದ ಮೂಗುತಿ ಮುಂತಾದ ಒಡವೆಗಳಿಂದ ಶೃಂಗರಿಸಿಕೊಂಡು ನಲ್ಲರನ್ನು ವರಿಸುತ್ತಾ ಹೋಗಿದ್ದಾಳೆ. ಅಷ್ಟೇ ಅಲ್ಲ, ಬಾಳ್ ದೇವತೆಗಳ ಹಬ್ಬದಲ್ಲಿ ಧೂಪಾರತಿಯನ್ನು ಬೆಳಗಿದ್ದಾಳೆ. ಈ ಕಾರಣ ನಾನು ಅವಳನ್ನು ದಂಡಿಸುವೆನು. ಇದು ಸರ್ವೇಶ್ವರಸ್ವಾಮಿಯ ನುಡಿ.


ಪ್ರಪಂಚದ ಪ್ರಬಲ ಶಕ್ತಿಗಳಿಂದಲೂ ಮಾನವ ವಿವೇಚನೆಯ ಶುಷ್ಕತರ್ಕ ಸಿದ್ಧಾಂತಗಳಿಂದಲೂ ಯಾರೂ ನಿಮ್ಮನ್ನು ಮೋಸಗೊಳಿಸಿ ವಶಪಡಿಸಿಕೊಳ್ಳದಂತೆ ಎಚ್ಚರಿಕೆಯಿಂದಿರಿ. ಇವುಗಳು ಪ್ರಾಪಂಚಿಕ ಪಾರಂಪರ್ಯಕ್ಕೆ ಮತ್ತು ವಿಶ್ವದ ಮೂಲಭೂತ ಶಕ್ತಿಗಳಿಗೆ ಸಂಬಂಧಿಸಿದವುಗಳೇ ಹೊರತು ಯೇಸುಕ್ರಿಸ್ತರಿಗಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು