Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 6:14 - ಕನ್ನಡ ಸತ್ಯವೇದವು C.L. Bible (BSI)

14 ಸುತ್ತಮುತ್ತಲಿರುವ ಜನಾಂಗಗಳು ಹಿಂಬಾಲಿಸುವ ದೇವರುಗಳನ್ನು ನೀನು ಆರಾಧಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಸುತ್ತಮುತ್ತಲಿರುವ ಜನಾಂಗಗಳು ಸೇವಿಸುವ ದೇವರುಗಳನ್ನು ನೀವು ಆರಾಧಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಸುತ್ತಲಿರುವ ಜನಾಂಗಗಳು ಸೇವಿಸುವ ದೇವರುಗಳನ್ನು ನೀವು ಆರಾಧಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಇತರ ದೇವರುಗಳನ್ನು ಅವಲಂಭಿಸಬಾರದು. ನಿಮ್ಮ ಸುತ್ತಲೂ ಇರುವವರ ದೇವರುಗಳನ್ನು ಪೂಜಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನಿಮ್ಮ ಸುತ್ತಲಿರುವ ಜನರ ದೇವರುಗಳಾಗಿರುವ ಬೇರೆ ದೇವರುಗಳನ್ನು ನೀವು ಹಿಂಬಾಲಿಸಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 6:14
13 ತಿಳಿವುಗಳ ಹೋಲಿಕೆ  

ಬೇರೆ ದೇವರುಗಳನ್ನು ಹಿಂಬಾಲಿಸಿ, ಅವರನ್ನು ಸೇವಿಸಿ ಪೂಜಿಸಬೇಡಿ. ನಿಮ್ಮ ಕೈ ಕೃತಿಗಳಾದ ವಿಗ್ರಹಗಳನ್ನು ಆರಾಧಿಸಿ, ನನ್ನನ್ನು ರೇಗಿಸಬೇಡಿ. ಆಗ ನಾನು ನಿಮಗೆ ಯಾವ ಕೇಡನ್ನೂ ಮಾಡೆನು.’


ಪ್ರಿಯ ಮಕ್ಕಳೇ, ಮಿಥ್ಯ ದೇವರುಗಳಿಂದ ನೀವು ದೂರವಿರಿ.


ಆ ದೇವರುಗಳು ಹತ್ತಿರವಿರುವ ಜನಾಂಗಗಳ ದೇವರುಗಳಾಗಿದ್ದರೂ ದೂರವಾದವರ ದೇವರುಗಳಾಗಿದ್ದರೂ ಭೂಲೋಕದ ಯಾವ ಭಾಗದವರ ದೇವರುಗಳಾಗಿದ್ದರೂ


ನೀವು ನಿಮ್ಮ ದೇವರಾದ ಸರ್ವೇಶ್ವರನನ್ನು ಮರೆತು, ಇತರ ದೇವರುಗಳನ್ನು ಅವಲಂಬಿಸಿ, ಪೂಜಿಸಿದರೆ ನೀವು ತಪ್ಪದೆ ನಾಶವಾಗಿಹೋಗುವಿರೆಂದು ನಿಮ್ಮನ್ನು ಈಗ ಖಂಡಿತವಾಗಿ ಎಚ್ಚರಿಸುತ್ತೇನೆ.


ಈ ಆಜ್ಞೆಗಳಿಗೆ ವಿಧೇಯರಾಗದೆ, ನಾನು ಈಗ ಬೋಧಿಸುವ ಮಾರ್ಗವನ್ನು ಬಿಟ್ಟು ನಿಮಗೆ ಗೊತ್ತಿಲ್ಲದ ಇತರ ದೇವರುಗಳನ್ನು ಅವಲಂಬಿಸಿದರೆ, ನಿಮಗೆ ಶಾಪ ತಗಲುವುದು.


ನಾನಲ್ಲದೆ ನಿನಗೆ ಬೇರೆ ದೇವರುಗಳು ಇರಕೂಡದು.


ನಮ್ಮ ದೇವನ ನಾಮವನು ಮರೆತಿದ್ದೆವಾದರೆ I ಅನ್ಯದೇವರಿಗೆ ನಾವು ಕೈ ಮುಗಿದಿದ್ದೆವಾದರೆ, II


ಅನ್ಯರನ್ನಾಗಲಿ, ಅನಾಥರನ್ನಾಗಲಿ, ವಿಧವೆಯರನ್ನೇ ಆಗಲಿ ಶೋಷಣೆಗೆ ಗುರಿಪಡಿಸಬೇಡಿ! ಇಲ್ಲೆಲ್ಲೂ ನಿರ್ದೋಷಿಗಳ ರಕ್ತವನ್ನು ಸುರಿಸಬೇಡಿ. ನಿಮಗೆ ಹಾನಿಕರವಾದ ಅನ್ಯದೇವತಾ ಭಕ್ತಿಯನ್ನು ಬಿಟ್ಟುಬಿಡಿ.


ಇದಲ್ಲದೆ, ನಾನು ನನ್ನ ದಾಸರಾದ ಪ್ರವಾದಿಗಳನ್ನೆಲ್ಲ ನಿಮ್ಮ ಬಳಿಗೆ ನಿರಂತರವಾಗಿ ಕಳಿಸುತ್ತಾ ಬಂದೆ. ನೀವೆಲ್ಲರು ನಿಮ್ಮ ನಿಮ್ಮ ದುರ್ಮಾರ್ಗಗಳಿಂದ ಹಿಂದಿರುಗಿ ನಿಮ್ಮ ನಡತೆಗಳನ್ನು ಸರಿಪಡಿಸಿಕೊಳ್ಳಿರಿ. ಅನ್ಯದೇವತೆಗಳನ್ನು ಹಿಂಬಾಲಿಸಿ ಪೂಜಿಸದಿರಿ. ಹಾಗೆ ಮಾಡಿದರೆ ನಾನು ನಿಮಗೂ ನಿಮ್ಮ ಪೂರ್ವಜರಿಗೂ ಅನುಗ್ರಹಿಸಿದ ನಾಡಿನಲ್ಲಿ ಸುಖವಾಸಿಗಳಾಗಿರುವಿರಿ ಎಂದು ಅವರ ಮುಖಾಂತರ ಎಚ್ಚರಿಸಿದೆ. ಆದರೆ ನೀವು ಕೇಳಲಿಲ್ಲ, ಕಿವಿಗೊಡಲೂ ಇಲ್ಲ.


ನಾನಲ್ಲದೆ ನಿನಗೆ ಬೇರೆ ದೇವರುಗಳು ಇರಕೂಡದು.


ಉಳಿದಿರುವ ಈ ಜನಾಂಗಗಳ ಜೊತೆ ಸೇರಿಕೊಳ್ಳಬೇಡಿ. ಅವರ ದೇವತೆಗಳ ಹೆಸರು ಹೇಳಿ ಆರಾಧಿಸಬಾರದು, ಪ್ರಮಾಣ ಮಾಡಬಾರದು, ಅವುಗಳನ್ನು ಪೂಜಿಸಬಾರದು. ಅವುಗಳಿಗೆ ಸೇವೆ ಮಾಡಬಾರದು.


ಇಸ್ರಯೇಲರಿಗೆ ಸರ್ವೇಶ್ವರ, “ನೀವು ಅನ್ಯದೇವತೆಗಳನ್ನು ಆರಾಧಿಸಬಾರದು, ಅವುಗಳಿಗೆ ಕೈಮುಗಿಯಲೂಬಾರದು. ಸೇವೆಮಾಡಬಾರದು, ಬಲಿ ಅರ್ಪಿಸಲೂಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು