Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 6:2 - ಕನ್ನಡ ಸತ್ಯವೇದವು C.L. Bible (BSI)

2 ನೀವು ಹಾಗು ನಿಮ್ಮ ಪುತ್ರಪೌತ್ರಾದಿ ಸಂತತಿಯವರು ಜೀವಮಾನದಲ್ಲೆಲ್ಲಾ ನಿಮ್ಮ ದೇವರಾದ ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವರಾಗಿರಬೇಕು; ನಾನು ಈಗ ಬೋಧಿಸುವ ಅವರ ವಿಧಿನಿರ್ಣಯಗಳನ್ನೆಲ್ಲಾ ಅನುಸರಿಸಬೇಕು; ಆಗ ನೀವು ದೀರ್ಘಕಾಲ ಬಾಳುವಿರಿ. ಅದಕ್ಕಾಗಿಯೇ ಇವುಗಳನ್ನು ಆಜ್ಞಾಪಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನೀವೂ, ನಿಮ್ಮ ಮಕ್ಕಳು, ಅವರ ಮಕ್ಕಳು ಮತ್ತು ಅವರ ಸಂತತಿಯವರು ಜೀವಮಾನದಲ್ಲೆಲ್ಲಾ ನಿಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿದ್ದುಕೊಂಡು, ನಾನು ಈಗ ಬೋಧಿಸುವ ಆತನ ವಿಧಿನಿಯಮಗಳನ್ನೆಲ್ಲಾ ಅನುಸರಿಸಬೇಕೆಂದೂ ಮತ್ತು ನೀವು ಬಹುಕಾಲ ಬಾಳಬೇಕೆಂದೂ ಇವುಗಳನ್ನು ಆಜ್ಞಾಪಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನೀವೂ ನಿಮ್ಮ ಪುತ್ರಪೌತ್ರಾದಿಸಂತತಿಯವರೂ ಜೀವಮಾನದಲ್ಲೆಲ್ಲಾ ನಿಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿದ್ದುಕೊಂಡು ನಾನು ಈಗ ಬೋಧಿಸುವ ಆತನ ವಿಧಿನಿರ್ಣಯಗಳನ್ನೆಲ್ಲಾ ಅನುಸರಿಸಬೇಕೆಂದೂ ನೀವು ಬಹುಕಾಲ ಬಾಳಬೇಕೆಂದೂ ಇವುಗಳನ್ನು ಆಜ್ಞಾಪಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನೀವೂ ಮತ್ತು ನಿಮ್ಮ ಸಂತತಿಯವರೂ ಜೀವಿಸುವ ದಿನಗಳಲ್ಲೆಲ್ಲಾ ದೇವರಾದ ಯೆಹೋವನನ್ನು ಗೌರವಿಸಬೇಕು. ನಾನೀಗ ಕೊಡುವ ಎಲ್ಲಾ ಆಜ್ಞೆಗಳನ್ನೂ ಕಟ್ಟಳೆಗಳನ್ನೂ ಅನುಸರಿಸಬೇಕು. ಹಾಗೆ ಮಾಡಿದ್ದಲ್ಲಿ ನೀವು ನೆಲೆಸುವ ಜಾಗದಲ್ಲಿ ನೀವು ಬಹುಕಾಲ ಜೀವಿಸುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ನೀವೂ, ನಿಮ್ಮ ಮಕ್ಕಳೂ, ನಿಮ್ಮ ಮೊಮ್ಮಕ್ಕಳೂ ತಮ್ಮ ಜೀವನದ ದಿವಸಗಳಲ್ಲೆಲ್ಲಾ ನಿಮ್ಮ ದೇವರಾದ ಯೆಹೋವ ದೇವರಿಗೆ ಭಯಪಟ್ಟು, ಕೈಗೊಳ್ಳುವ ಹಾಗೆಯೂ, ನಿಮ್ಮ ದಿವಸಗಳು ಬಹಳವಾಗುವ ಹಾಗೆಯೂ ನಾನು ನಿಮಗೆ ಕೊಡುವ ದೇವರ ಎಲ್ಲಾ ತೀರ್ಪುಗಳನ್ನು ಮತ್ತು ಆಜ್ಞೆಗಳನ್ನು ಅನುಸರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 6:2
37 ತಿಳಿವುಗಳ ಹೋಲಿಕೆ  

ನಾನು ಇಂದು ನಿಮಗೆ ತಿಳಿಸಿದ ಅವರ ಆಜ್ಞಾವಿಧಿಗಳನ್ನು ಅನುಸರಿಸಿ ನಡೆಯಿರಿ. ಆಗ ನಿಮಗೂ ನಿಮ್ಮ ಸಂತತಿಗೂ ಶುಭವುಂಟಾಗುವುದು; ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಶಾಶ್ವತವಾಗಿ ಕೊಡುವ ನಾಡಿನಲ್ಲಿ ನೀವು ದೀರ್ಘಕಾಲ ಬಾಳುವಿರಿ.”


ವಿಷಯ ಮುಗಿಯಿತು; ಎಲ್ಲವನ್ನು ಕೇಳಿ ಆಯಿತು. ದೇವರಿಗೆ ಭಯಪಟ್ಟು ಅವರ ಆಜ್ಞೆಗಳನ್ನು ಕೈಗೊಳ್ಳು. ಇದೇ ಪ್ರತಿಯೊಬ್ಬ ಮಾನವನ ಕರ್ತವ್ಯ.


ಸರ್ವೇಶ್ವರ ಹೇಳುವ ಮಾರ್ಗದಲ್ಲೇ ನೀವು ನಡೆದು, ಅವರಲ್ಲಿಯೇ ಭಯಭಕ್ತಿ ಯಳ್ಳವರಾಗಿ, ಅವರ ಆಜ್ಞೆಗಳನ್ನೇ ಅನುಸರಿಸಿ, ಅವರಿಗೇ ವಿಧೇಯರಾಗಿ, ಅವರ ಸೇವೇಮಾಡುತ್ತಾ ಅವರನ್ನೇ ಹೊಂದಿಕೊಂಡಿರಬೇಕು.


ಅದಕ್ಕೆ ಮೋಶೆ, “ಭಯಪಡಬೇಡಿ; ದೇವರು ನಿಮ್ಮನ್ನು ಪರೀಕ್ಷಿಸುವುದಕ್ಕಾಗಿ ಬಂದಿದ್ದಾರೆ; ಹೀಗೆ ದೈವಭೀತಿ ನಿಮ್ಮ ಕಣ್ಮುಂದಿದ್ದು ನೀವು ಪಾಪಮಾಡದೆ ಇರುವಿರಿ,” ಎಂದನು.


ಧನ್ಯನು, ಪ್ರಭುವಿನಲಿ ಭಯಭಕ್ತಿಯುಳ್ಳವನು I ಧನ್ಯನು, ಆತನ ಮಾರ್ಗಗಳಲೇ ನಡೆಯುವವನು II


‘ನಿನ್ನ ದೇವರಾದ ಸರ್ವೇಶ್ವರ ಆಜ್ಞಾಪಿಸಿದಂತೆ, ನಿನ್ನ ತಂದೆತಾಯಿಗಳನ್ನು ಗೌರವಿಸು; ಗೌರವಿಸಿದರೆ ನಿನ್ನ ದೇವರೂ ಸರ್ವೇಶ್ವರನೂ ಆದ ನಾನು ನಿನಗೆ ಅನುಗ್ರಹಿಸುವ ನಾಡಿನಲ್ಲಿ ಬಹುಕಾಲ ಸುಕ್ಷೇಮವಾಗಿ ಬಾಳುವೆ.


ದೀರ್ಘಾಯುಷ್ಯ, ಜ್ಞಾನವೆಂಬ ಆಕೆಯ ಬಲಗೈಯಲ್ಲಿದೆ; ಘನತೆ, ಶ್ರೀಮಂತಿಕೆಯೂ ಆಕೆಯ ಎಡಗೈಯಲ್ಲಿವೆ.


ಬಳಿಕ ಮಾನವನಿಗೆ ಇಂತೆಂದನು: ‘ಸರ್ವೇಶ್ವರನಲ್ಲಿ ಭಯಭಕ್ತಿ ಇಡುವುದೇ ಸುಜ್ಞಾನ ದುಷ್ಟತನವನ್ನು ಬಿಟ್ಟುಬಿಡುವುದೇ ವಿವೇಕ’.”


ನೀವು ದೇವರಿಗೆ ಪ್ರಾರ್ಥನೆಮಾಡುವಾಗ, ಅವರನ್ನು “ತಂದೆಯೇ” ಎಂದು ಸಂಬೋಧಿಸುತ್ತೀರಿ. ಅವರು ಪಕ್ಷಪಾತಿ ಅಲ್ಲ. ಎಲ್ಲರಿಗೂ ಅವರವರ ಕೃತ್ಯಗಳಿಗೆ ತಕ್ಕಂತೆ ನ್ಯಾಯತೀರ್ಪು ನೀಡುವವರು. ಆದ್ದರಿಂದ ನಿಮ್ಮ ಇಹಲೋಕದ ಯಾತ್ರೆಯನ್ನು ಭಯಭಕ್ತಿಯಿಂದ ಸಾಗಿಸಿರಿ.


ಸುಜ್ಞಾನಕ್ಕೆ ಮೂಲವು ದೈವಭಯವು I ಅದರ ಪಾಲನೆಯು ವಿವೇಕತನವು I ಪ್ರಭುವಿಗೆ ಸ್ತೋತ್ರ ಸದಾಕಾಲವು II


ನಿಮ್ಮ ದೇವರಾದ ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವರಾಗಿ ಅವರಿಗೇ ಸೇವೆಸಲ್ಲಿಸಿ. ಅವರನ್ನು ಹೊಂದಿಕೊಂಡು ಅವರ ಹೆಸರಿನ ಮೇಲೆಯೇ ಪ್ರಮಾಣಮಾಡಬೇಕು.


ನೀವು ಯಾರಿಗೆ ಭಯಪಡಬೇಕೆಂದು ಹೇಳುತ್ತೇನೆ, ಕೇಳಿ: ಸತ್ತಮೇಲೆ ನರಕದೊಳಕ್ಕೆ ದಬ್ಬಲು ಅಧಿಕಾರವುಳ್ಳಾತನಿಗೆ ಭಯಪಡಿ. ಹೌದು, ಆತನಿಗೆ ಭಯಪಡಿರೆಂದು ನಿಮಗೆ ಒತ್ತಿಹೇಳುತ್ತೇನೆ.


ಪ್ರೀತಿ ಸತ್ಯತೆಗಳಿಂದ ಪಾಪನಿವಾರಣೆ; ಸರ್ವೇಶ್ವರನ ಭಯಭಕ್ತಿಯಿಂದ ಹಾನಿ ನಿವಾರಣೆ.


ನೀವು ಹೀಗೆ ನಡೆದುಕೊಂಡರೆ, ನಿಮಗೆ ಶ್ರೇಯಸ್ಸುಂಟಾಗುವುದು, ಮತ್ತು ಬಹುಕಾಲ ಬಾಳುವಿರಿ.


ಇವುಗಳನ್ನು ನಿನ್ನ ಮಕ್ಕಳಿಗೆ ಮನದಟ್ಟಾಗಿಸು; ಮನೆಯಲ್ಲಿರುವಾಗಲು, ಪ್ರಯಾಣದಲ್ಲಿರುವಾಗಲು, ಮಲಗುವಾಗಲು, ಏಳುವಾಗಲು ಇವುಗಳನ್ನು ಕುರಿತು ಪಾಠಹೇಳು.


ಹೋರೇಬಿನಲ್ಲಿ ನಿಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ ನೀವು ನಿಂತಿದ್ದಾಗ ಅವರು ನನಗೆ, ‘ಜನರೆಲ್ಲರನ್ನು ನನ್ನ ಹತ್ತಿರಕ್ಕೆ ಕರೆ; ಅವರೇ ನನ್ನ ಆಜ್ಞೆಗಳನ್ನು ಕೇಳಿಸಿಕೊಳ್ಳಲಿ; ಆಗ ಅವರು ತಮ್ಮ ಜೀವಮಾನದಲ್ಲೆಲ್ಲಾ ನನ್ನಲ್ಲಿ ಭಯಭಕ್ತಿಯಿಂದಿರಲು ಕಲಿತುಕೊಳ್ಳುವರು; ಅಂತೆಯೇ ತಮ್ಮ ಮಕ್ಕಳಿಗೂ ಕಲಿಸಿಕೊಡುವರು,’ ಎಂದರು.


ದೂತನು ಅವನಿಗೆ, "ಹುಡುಗನ ಮೇಲೆ ಕೈಯೆತ್ತಬೇಡ; ಅವನಿಗೆ ಯಾವ ಹಾನಿಯನ್ನೂ ಮಾಡಬೇಡ; ನೀನು ನಿನ್ನ ಒಬ್ಬನೇ ಮಗನನ್ನು ನನಗೆ ಬಲಿಕೊಡಲು ಹಿಂತೆಗೆಯಲಿಲ್ಲ; ಎಂತಲೇ, ನೀನು ದೇವರಲ್ಲಿ ಭಯಭಕ್ತಿಯುಳ್ಳವನೆಂದು ಈಗ ನನಗೆ ಚೆನ್ನಾಗಿ ಗೊತ್ತಾಯಿತು,” ಎಂದು ಹೇಳಿದನು.


ಅವನು ತನ್ನ ಪುತ್ರಪೌತ್ರರಿಗೆ, ‘ನೀವು ನ್ಯಾಯನೀತಿಯನ್ನು ಪಾಲಿಸುತ್ತಾ ಸರ್ವೇಶ್ವರ ಸ್ವಾಮಿಯ ಮಾರ್ಗದಲ್ಲೇ ನಡೆಯಬೇಕು; ಹಾಗೆ ಮಾಡಿದರೆ ವಾಗ್ದಾನ ಮಾಡಿದುದನ್ನೆಲ್ಲ ಈಡೇರಿಸುವರು,’ ಎಂದು ಬೋಧಿಸಲೆಂದೇ ನಾನು ಅವನನ್ನು ಆರಿಸಿಕೊಂಡಿದ್ದೇನೆ".


ಆಗ, ನೀವು ಸ್ವಾಧೀನಪಡಿಸಿಕೊಳ್ಳಲಿರುವ ನಾಡಿನಲ್ಲಿ ದೀರ್ಘಕಾಲ ಸುಕ್ಷೇಮದಿಂದ ಬಾಳುವಿರಿ.”


ನಿನ್ನ ತಂದೆತಾಯಿಗಳನ್ನು ಗೌರವಿಸು; ಗೌರವಿಸಿದರೆ ನಿನ್ನ ದೇವರೂ ಸರ್ವೇಶ್ವರನೂ ಆದ ನಾನು ನಿನಗೆ ಅನುಗ್ರಹಿಸುವ ನಾಡಿನಲ್ಲಿ ಬಹುಕಾಲ ಬಾಳುವೆ.


ಹೀಗಿರುವಲ್ಲಿ, ನೀವು ಬಹಳ ಜಾಗರೂಕತೆಯಿಂದಿರಿ; ನಿಮ್ಮ ಕಣ್ಣುಗಳಿಂದಲೇ ನೋಡಿದ ಘಟನೆಗಳನ್ನು ಎಷ್ಟು ಮಾತ್ರಕ್ಕೂ ಮರೆಯದಿರಿ; ಜೀವಮಾನಪರ್ಯಂತ ಇವುಗಳನ್ನು ನೆನಪಿನಲ್ಲಿ ಇಡಿ; ನಿಮ್ಮ ಮಕ್ಕಳಿಗೂ ಮೊಮ್ಮಕ್ಕಳಿಗೂ ತಿಳಿಸುತ್ತಾ ಹೋಗಿ,


“ನಿಮ್ಮ ದೇವರಾದ ಸರ್ವೇಶ್ವರ ಸ್ವಾಮಿ ನಿಮಗೆ ಬೋಧಿಸಲು ನನಗೆ ಆಜ್ಞಾಪಿಸಿದ ಈ ಧರ್ಮೋಪದೇಶವನ್ನೂ ವಿಧಿನಿರ್ಣಯಗಳನ್ನೂ ನೀವು ನದಿದಾಟಿ ಸ್ವಾಧೀನಪಡಿಸಿಕೊಳ್ಳಲಿರುವ ಆ ನಾಡಿನಲ್ಲಿ ಅನುಸರಿಸಬೆಕು.


ಸರ್ವೇಶ್ವರ ನಿಮ್ಮ ಪಿತೃಗಳಿಗೂ ಅವರ ಸಂತತಿಗೂ ಕೊಡುತ್ತೇನೆಂದು ಪ್ರಮಾಣಮಾಡಿದ ಆ ನಾಡಿನಲ್ಲಿ ನೀವು ಬಹುಕಾಲ ಬಾಳುವಿರಿ; ಅದು ಹಾಲೂ ಜೇನೂ ಹರಿಯುವ ನಾಡು.


ದೀರ್ಘಾಯುಸ್ಸನ್ನಿತ್ತು ತೃಪ್ತಿಪಡಿಸುವೆನು I ನಾನು ನೀಡುವ ಮುಕ್ತಿಯನವನಿಗೆ ಮನಗಾಣಿಸುವೆನು” II


ನಾನು ನಿಮ್ಮ ದೇವರಾದ ಸರ್ವೇಶ್ವರ; ನೀವು ನನ್ನ ಆಜ್ಞೆಗಳನ್ನು ಅನುಸರಿಸಿ ನನ್ನ ವಿಧಿಗಳನ್ನು ಕೈಗೊಂಡು ನಡೆಯಿರಿ.


ಈ ಕಾರಣದಿಂದಲೇ ಈ ನಿಯಮಗಳನ್ನೆಲ್ಲಾ ಆಚರಿಸಬೇಕೆಂದು ನಮಗೆ ಅಪ್ಪಣೆಮಾಡಿದ್ದಾರೆ. ಸದಾ ಶುಭವುಂಟಾಗಬೇಕಾದರೆ, ಅವರು ಎಂದಿನಂತೆ ನಮ್ಮ ಪ್ರಾಣಗಳನ್ನು ಕಾಪಾಡಬೇಕಾದರೆ ನಾವು ನಮ್ಮ ದೇವರಾದ ಸರ್ವೇಶ್ವರನಿಗೆ ಭಯಭಕ್ತಿಯುಳ್ಳವರಾಗಿರಬೇಕು.


ನಾನು ಸಾವುಜೀವಗಳನ್ನೂ ಶಾಪಾಶೀರ್ವಾದಗಳನ್ನೂ ಈಗ ನಿಮ್ಮ ಮುಂದೆ ಇಟ್ಟಿದ್ದೇನೆ; ಇದಕ್ಕೆ ಭೂಮಿ ಆಕಾಶಗಳೇ ಸಾಕ್ಷಿಗಳಾಗಿರಲಿ; ಆದುದರಿಂದ ನೀವೂ ನಿಮ್ಮ ಸಂತತಿಯವರೂ ಬದುಕಿಬಾಳುವಂತೆ ಜೀವವನ್ನೇ ಆರಿಸಿಕೊಳ್ಳಿ;


ನಿಮ್ಮ ದೇವರಾದ ಸರ್ವೇಶ್ವರನನ್ನು ಪ್ರೀತಿಸಿ ಅವರ ಮಾತಿಗೆ ವಿಧೇಯರಾಗಿರಿ; ಅವರನ್ನು ಹೊಂದಿಕೊಂಡೇ ಇರಿ. ಸರ್ವೇಶ್ವರ ನಿಮ್ಮ ಪಿತೃಗಳಾದ ಅಬ್ರಹಾಮ್, ಇಸಾಕ್, ಯಕೋಬರಿಗೆ ಪ್ರಮಾಣಮಾಡಿ ಕೊಟ್ಟ ನಾಡಿನಲ್ಲಿ ನೀವು ಬದುಕಿ ಬಾಳುವುದಕ್ಕೂ ಬಹುಕಾಲ ಇರುವುದಕ್ಕೂ ಅವರೇ ಆಧಾರ.”


ಇದರಿಂದ ಭೂನಿವಾಸಿಗಳೆಲ್ಲರು ಸರ್ವೇಶ್ವರನ ಹಸ್ತವು ಪರಾಕ್ರಮವುಳ್ಳದ್ದೆಂದು ತಿಳಿದುಕೊಳ್ಳುವರು. ನಿಮ್ಮ ದೇವರಾದ ಸರ್ವೇಶ್ವರನಲ್ಲಿ ಯಾವಾಗಲೂ ಭಯಭಕ್ತಿಯುಳ್ಳವರಾಗಿರುವರು.


ಆಗ ನಮ್ಮ ಪಿತೃಗಳಿಗೆ ನೀವು ಕೊಟ್ಟ ಈ ನಾಡಿನಲ್ಲಿ ಅವರು ವಾಸಿಸುವ ಕಾಲವೆಲ್ಲಾ ನಿಮ್ಮಲ್ಲಿ ಭಯಭಕ್ತಿಯುಳ್ಳವರಾಗಿರುವರು.


ನನ್ನಿಂದ ನಿನಗೆ ಸಿಗುವುದು ದೀರ್ಘಾಯುಸ್ಸು; ವೃದ್ಧಿಯಾಗುವುದು ನಿನ್ನ ಜೀವದ ಅವಧಿ.


ಅವರಿಗೆ ಒಂದೇ ಮನಸ್ಸನ್ನೂ ಒಂದೇ ಮಾರ್ಗವನ್ನೂ ಅನುಗ್ರಹಿಸುವೆನು. ಇದರಿಂದ ಅವರು ತಮ್ಮ ಹಿತಕ್ಕಾಗಿಯೂ ತಮ್ಮ ಅನಂತರ ತಮ್ಮ ಸಂತಾನದ ಹಿತಕ್ಕಾಗಿಯೂ ನನ್ನಲ್ಲಿ ಸದಾ ಭಯಭಕ್ತಿ ಉಳ್ಳವರಾಗಿರುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು