Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 6:23 - ಕನ್ನಡ ಸತ್ಯವೇದವು C.L. Bible (BSI)

23 ನಮ್ಮ ಪಿತೃಗಳಿಗೆ ಪ್ರಮಾಣಪೂರ್ವಕವಾಗಿ ಕೊಟ್ಟ ನಾಡಿಗೆ ನಮ್ಮನ್ನು ಸೇರಿಸುವುದಕ್ಕೆ ಈಜಿಪ್ಟಿನಿಂದ ನಮ್ಮನ್ನು ಬರಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ತಾನು ನಮ್ಮ ಪೂರ್ವಿಕರಿಗೆ ಪ್ರಮಾಣಮಾಡಿಕೊಟ್ಟ ದೇಶದಲ್ಲಿ ನಮ್ಮನ್ನು ಸೇರಿಸುವುದಕ್ಕಾಗಿ ಐಗುಪ್ತದೇಶದೊಳಗಿಂದ ಬರಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ತಾನು ನಮ್ಮ ಪಿತೃಗಳಿಗೆ ಪ್ರಮಾಣಮಾಡಿಕೊಟ್ಟ ದೇಶದಲ್ಲಿ ನಮ್ಮನ್ನು ಸೇರಿಸುವದಕ್ಕಾಗಿ ಐಗುಪ್ತದೇಶದೊಳಗಿಂದ ಬರಮಾಡಿದನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಯೆಹೋವನು ನಮ್ಮ ಪೂರ್ವಿಕರಿಗೆ ಮಾಡಿದ ವಾಗ್ದಾನದಂತೆ ನಮಗೆ ಆ ದೇಶವನ್ನು ಕೊಡುವುದಕ್ಕಾಗಿ ನಮ್ಮನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಆದರೆ ದೇವರು ನಮ್ಮ ಪಿತೃಗಳಿಗೆ ಪ್ರಮಾಣ ಮಾಡಿದ ದೇಶವನ್ನು ನಮಗೆ ಕೊಡುವಂತೆಯೂ ನಾವು ಅದರಲ್ಲಿ ಪ್ರವೇಶ ಮಾಡುವಂತೆಯೂ ನಮ್ಮನ್ನು ಈಜಿಪ್ಟಿನಿಂದ ಬರಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 6:23
7 ತಿಳಿವುಗಳ ಹೋಲಿಕೆ  

ಸರ್ವೇಶ್ವರನ ದೃಷ್ಟಿಯಲ್ಲಿ ಯಾವುದು ನ್ಯಾಯವೋ, ಯೋಗ್ಯವೋ ಅದನ್ನೇ ಮಾಡಬೇಕು. ಹೀಗೆ ನಡೆದರೆ ನಿಮಗೆ ಶುಭ ಉಂಟಾಗುವುದು ಮತ್ತು ಸರ್ವೇಶ್ವರ ನಿಮ್ಮ ಪಿತೃಗಳಿಗೆ ಪ್ರಮಾಣಪೂರ್ವಕವಾಗಿ ಕೊಟ್ಟ ಉತ್ತಮ ನಾಡನ್ನು ನೀವು ಸೇರಿ ಸ್ವಾಧೀನಮಾಡಿಕೊಳ್ಳುವಿರಿ.


“ನಿನ್ನ ಪಿತೃಗಳಾದ ಅಬ್ರಹಾಮ್, ಇಸಾಕ್, ಯಕೋಬರಿಗೆ ನಿನ್ನ ದೇವರಾದ ಸರ್ವೇಶ್ವರ ಪ್ರಮಾಣಮಾಡಿದ ನಾಡಿಗೆ ನಿನ್ನನ್ನು ಸೇರಿಸಿದಾಗ,


ಆ ನಾಡನ್ನು ನಿಮಗೆ ಕೊಟ್ಟಿದ್ದೇನೆ. ಸರ್ವೇಶ್ವರನೆಂಬ ನಾನು ನಿಮ್ಮ ಪಿತೃಗಳಾದ ಅಬ್ರಹಾಮ, ಇಸಾಕ, ಯಕೋಬರಿಗೂ ಅವರ ಸಂತತಿಯವರಿಗೂ ಆ ನಾಡನ್ನು ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದ್ದೆನು. ಅದನ್ನು ಸೇರಿ ಸ್ವಾಧೀನಮಾಡಿಕೊಳ್ಳಿ,’ ಎಂದು ಆಜ್ಞಾಪಿಸಿದರು.


ಸರ್ವೇಶ್ವರ ನಿಮ್ಮ ಪೂರ್ವಜರಿಗೆ ಪ್ರಮಾಣವಾಗಿ ಹೇಳಿದಂತೆ ನಿಮ್ಮನ್ನು ಹಾಲೂ ಜೇನೂ ಹರಿಯುವ ನಾಡಿಗೆ, ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಹಿವ್ವಿಯರು ಹಾಗು ಯೆಬೂಸಿಯರು ವಾಸವಾಗಿರುವ ನಾಡಿಗೆ ಕರೆದು ತಂದು ಅದನ್ನು ನಿಮಗೆ ಕೊಟ್ಟಾಗ, ನೀವು ಈ ಆಚರಣೆಯನ್ನು ಈ ತಿಂಗಳಿನಲ್ಲೇ ನಡೆಸಬೇಕು.


ಭಯಂಕರ ಆದ ಮಹತ್ಕಾರ್ಯಗಳಿಂದ ಮತ್ತು ಸೂಚಕಕಾರ್ಯಗಳಿಂದ ಈಜಿಪ್ಟಿನವರನ್ನೂ ಫರೋಹನನ್ನೂ ಅವನ ಮನೆಯವರನ್ನೂ ನಮ್ಮ ಕಣ್ಣೆದುರಿನಲ್ಲೇ ಶಿಕ್ಷಿಸಿದರು.


ಈ ಕಾರಣದಿಂದಲೇ ಈ ನಿಯಮಗಳನ್ನೆಲ್ಲಾ ಆಚರಿಸಬೇಕೆಂದು ನಮಗೆ ಅಪ್ಪಣೆಮಾಡಿದ್ದಾರೆ. ಸದಾ ಶುಭವುಂಟಾಗಬೇಕಾದರೆ, ಅವರು ಎಂದಿನಂತೆ ನಮ್ಮ ಪ್ರಾಣಗಳನ್ನು ಕಾಪಾಡಬೇಕಾದರೆ ನಾವು ನಮ್ಮ ದೇವರಾದ ಸರ್ವೇಶ್ವರನಿಗೆ ಭಯಭಕ್ತಿಯುಳ್ಳವರಾಗಿರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು