Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 7:10 - ಕನ್ನಡ ಸತ್ಯವೇದವು C.L. Bible (BSI)

10 ತಮ್ಮನ್ನು ತಿರಸ್ಕರಿಸಿದವರಿಗೆ ಪ್ರತಿಯಾಗಿ ನಾಶವನ್ನು ಉಂಟುಮಾಡುವರು. ಇದನ್ನು ನೀವು ತಿಳಿದುಕೊಳ್ಳಬೇಕು. ಹಗೆಯವರ ವಿಷಯದಲ್ಲಿ ಅವರು ತಡಮಾಡದೆ ಆಗಲೇ ಮುಯ್ಯಿತೀರಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ತನ್ನನ್ನು ತಿರಸ್ಕರಿಸಿದವರಿಗೆ ಪ್ರತಿಯಾಗಿ ನಾಶವನ್ನು ಉಂಟುಮಾಡುವವನಾಗಿಯೂ ಇದ್ದಾನೆಂದು ತಿಳಿದುಕೊಳ್ಳಿರಿ. ಹಗೆ ಮಾಡುವವರ ವಿಷಯದಲ್ಲಿ ತಡಮಾಡದೆ ಆಗಲೇ ಮುಯ್ಯಿತೀರಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ತನ್ನನ್ನು ತಿರಸ್ಕರಿಸಿದವರಿಗೆ ಪ್ರತಿಯಾಗಿ ನಾಶವನ್ನುಂಟುಮಾಡುವವನಾಗಿಯೂ ಇದ್ದಾನೆಂದು ತಿಳಿದುಕೊಳ್ಳಿರಿ. ಹಗೆಯವರ ವಿಷಯದಲ್ಲಿ ತಡಮಾಡದೆ ಆಗಲೇ ಮುಯ್ಯಿತೀರಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆದರೆ ಆತನು ತನ್ನನ್ನು ದ್ವೇಷಿಸುವವರನ್ನು ಶಿಕ್ಷಿಸುತ್ತಾನೆ. ತನ್ನನ್ನು ದ್ವೇಷಿಸುವ ಜನರನ್ನು ಶಿಕ್ಷಿಸಲು ಆತನು ನಿಧಾನ ಮಾಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆದರೆ, ತಮ್ಮನ್ನು ಹಗೆಮಾಡುವವರಿಗೆ ಮುಯ್ಯಿಗೆ ಮುಯ್ಯಿ ತೀರಿಸಿ, ಅವರನ್ನು ತೆಗೆದುಹಾಕುತ್ತಾರೆ. ದೇವರು ತಮ್ಮನ್ನು ಹಗೆಮಾಡುವವರಿಗೆ ತಡಮಾಡದೆ ಮುಯ್ಯಿಗೆ ಮುಯ್ಯಿ ತೀರಿಸುತ್ತಾರೆ ಎಂದು ತಿಳಿದುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 7:10
18 ತಿಳಿವುಗಳ ಹೋಲಿಕೆ  

ಅವರವರ ಕೃತ್ಯಗಳಿಗೆ ತಕ್ಕಂತೆ ದೂರದ ನಾಡುಗಳವರೆಗೂ ಮುಯ್ಯಿ ತೀರಿಸುವರು. ವಿರೋಧಿಗಳಿಗೆ ಪ್ರತೀಕಾರ ಎಸಗುವರು; ಶತ್ರುಗಳಿಗೆ ಸೇಡನ್ನು ತೀರಿಸುವರು.


ಪ್ರಿಯರೇ, ಮುಯ್ಯಿಗೆ ಮುಯ್ಯಿ ತೀರಿಸಬೇಡಿ. ಅದನ್ನು ದೇವರಿಗೇ ಬಿಟ್ಟುಬಿಡಿ. ಏಕೆಂದರೆ, “ಮುಯ್ಯಿಗೆ ಮುಯ್ಯಿ ತೀರಿಸುವುದು ನನ್ನ ಕೆಲಸ, ಎಲ್ಲರಿಗೂ ತಕ್ಕ ಪ್ರತಿಫಲವನ್ನು ಕೊಡುವವನು ನಾನೇ,” ಎಂಬ ಪ್ರಭುವಿನ ವಾಕ್ಯ ಪವಿತ್ರಗ್ರಂಥದಲ್ಲಿ ಲಿಖಿತವಾಗಿದೆ.


ಸರ್ವೇಶ್ವರ ಸ್ವಗೌರವವನು ಕಾಪಾಡಿಕೊಳ್ಳುವ ದೇವರು ಮುಯ್ಯಿತೀರಿಸುವ, ಹೌದು, ಕಡುಕೋಪದಿಂದ ಮುಯ್ಯಿತೀರಿಸುವ ದೇವರು. ಸರ್ವೇಶ್ವರ ಮುಯ್ಯಿತೀರಿಸುತ್ತಾರೆ ತನ್ನ ವಿರೋಧಿಗಳಿಗೆ ದೀರ್ಘರೋಷವಿಡುತ್ತಾರೆ, ತಮ್ಮ ಶತ್ರುಗಳ ಮೇಲೆ.


ಸಜ್ಜನರೇ ಜಗದೊಳು ತಮ್ಮ ಕರ್ಮದ ಫಲವನ್ನು ಅನುಭವಿಸುವಲ್ಲಿ; ಹೇಳಬೇಕೆ ಇನ್ನು ದುರ್ಜನರ, ಹಾಗೂ ಪಾಪಿಗಳ ಪರಿಸ್ಥಿತಿ?


ಅವನ ಶತ್ರುಗಳಿಗೆ ಮುಯ್ಯಿತೀರಿಸುವುದು ನನ್ನ ಕೆಲಸ; ಸಮೀಪಿಸಿತವರಿಗೆ ಜಾರಿಬೀಳುವ ಸಮಯ, ವಿಪತ್ಕಾಲ; ಬೇಗಬರುವುದು ಅವರಿಗೆ ಸಿದ್ಧವಾದ ದುರ್ಗತಿಕಾಲ!


ಹೊರಗೆ ಕತ್ತಿ, ಒಳಗೆ ಭಯಭೀತಿ ಇವರಲ್ಲಿರುವುವು. ಯುವಕ ಯುವತಿಯರು, ಮಕ್ಕಳು ಮುದುಕರು ಕತ್ತಿಕಠಾರಿಗಳಿಗೆ ತುತ್ತಾಗುವರು ಇವರೆಲ್ಲರು.


ಆದುದರಿಂದ ನಿಮ್ಮ ದೇವರಾದ ಸರ್ವೇಶ್ವರಸ್ವಾಮಿಯೊಬ್ಬರೇ ದೇವರೆಂದು ತಿಳಿದುಕೊಳ್ಳಬೇಕು. ಅವರೇ ನಂಬಿಕಸ್ತರಾದ ದೇವರು; ತಮ್ಮನ್ನು ಪ್ರೀತಿಸಿ ತಮ್ಮ ಆಜ್ಞೆಗಳನ್ನು ಅನುಸರಿಸುವವರಿಗೆ ತಾವು ಮಾಡಿದ ವಾಗ್ದಾನವನ್ನು ನೆರವೇರಿಸಿ, ತಮ್ಮ ಅಚಲಪ್ರೀತಿಯನ್ನು ಅವರ ಸಂತತಿಯವರಲ್ಲಿ ಸಾವಿರ ತಲೆಗಳವರೆಗೂ ತೋರಿಸುವರು.


ಅವುಗಳಿಗೆ ಅಡ್ಡಬೀಳಬೇಡ, ಅವುಗಳನ್ನು ಆರಾಧಿಸಬೇಡ. ಏಕೆಂದರೆ ನಾನೇ ನಿನ್ನ ದೇವರಾದ ಸರ್ವೇಶ್ವರ. ನನಗೆ ಸಲ್ಲತಕ್ಕ ಗೌರವವನ್ನು ನಾನು ಮತ್ತೊಬ್ಬರಿಗೆ ಸಲ್ಲಗೊಡಿಸುವುದಿಲ್ಲ. ನನ್ನನ್ನು ದ್ವೇಷಿಸುವವರನ್ನು ದಂಡಿಸುತ್ತೇನೆ; ಅವರ ದೋಷಫಲವನ್ನು ಅವರ ಮಕ್ಕಳ ಮೇಲೆ ಮೂರು ನಾಲ್ಕು ತಲೆಗಳವರೆಗೆ ಬರಮಾಡುತ್ತೇನೆ.


ಥಳಥಳಿಸುವ ಕತ್ತಿಯನು ಹದಮಾಡಿ ನ್ಯಾಯಸ್ಥಾಪಿಸುವೆನು ಮುನ್ನುಗ್ಗಿ. ಮುಯ್ಯಿ ತೀರಿಸುವೆನು ನನ್ನ ಶತ್ರುಗಳಿಗೆ ಪ್ರತಿದಂಡಿಸುವೆನು ನನ್ನ ದ್ವೇಷಿಸಿದವಗೆ.


ಸಾವಿರಾರು ತಲೆಗಳವರೆಗೂ ಅಚಲಪ್ರೀತಿ ತೋರುವವನು, ದೋಷಾಪರಾಧಗಳನ್ನೂ ಪಾಪಗಳನ್ನೂ ಕ್ಷಮಿಸುವವನು; ಆದರೂ ತಪ್ಪಿತಸ್ಥರನ್ನು ಶಿಕ್ಷಿಸದೆ ಬಿಡದವನು. ಹೆತ್ತವರ ದೋಷಪರಿಣಾಮಗಳನ್ನು ಮಕ್ಕಳ ಮೇಲೆ ಮೂರುನಾಲ್ಕು ತಲೆಗಳವರೆಗೆ ಬರಮಾಡುವವರು.


ಸರ್ವೇಶ್ವರನ ಮಂಜೂಷ ಹೊರಡುವಾಗ ಮೋಶೆ, “ಹೊರಡೋಣವಾಗಲಿ ಸರ್ವೇಶ್ವರಾ, ಎಚ್ಚೆತ್ತು ಚದರಿಹೋಗಲಿ ನಿಮ್ಮ ಶತ್ರುಗಳು ಬೆಂಗೊಟ್ಟು ಓಡಿಹೋಗಲಿ ನಿಮ್ಮ ಹಗೆಗಾರರು” ಎಂದು ಹೇಳುತ್ತಿದ್ದನು.


‘ಸರ್ವೇಶ್ವರ ದೀರ್ಘಶಾಂತನು, ಪ್ರೀತಿಮಯನು, ಪಾಪ-ಅಪರಾಧಗಳನ್ನು ಕ್ಷಮಿಸುವವನು, ಆದರೂ ಶಿಕ್ಷಿಸದೆ ಬಿಡದವನು, ತಂದೆಗಳ ಪಾಪಫಲವನ್ನು ಮಕ್ಕಳ ಮೇಲೆ ಮೂರು ನಾಲ್ಕು ತಲೆಗಳವರೆಗೆ ಬರಮಾಡುವವನು,’ ಎಂದು ಹೇಳಿದ್ದೀರಿ. ಆ ಮಾತನ್ನು ನೆನಪಿಗೆ ತಂದುಕೊಳ್ಳಿ.


ಅವುಗಳಿಗೆ ಅಡ್ಡಬೀಳಬೇಡ. ಅವುಗಳನ್ನು ಆರಾಧಿಸಬೇಡ. ಏಕೆಂದರೆ ನಾನೇ ನಿನ್ನ ದೇವರಾದ ಸರ್ವೇಶ್ವರ, ನನಗೆ ಸಲ್ಲತಕ್ಕ ಗೌರವವನ್ನು ನಾನು ಮತ್ತೊಬ್ಬನಿಗೆ ಸಲ್ಲಗೊಡಿಸುವುದಿಲ್ಲ. ನನ್ನನ್ನು ದ್ವೇಷಿಸುವವರನ್ನು ದಂಡಿಸುತ್ತೇನೆ; ಹೆತ್ತವರ ದೋಷಫಲವನ್ನು ಅವರ ಮಕ್ಕಳ ಮೇಲೆ ಮೂರು ನಾಲ್ಕು ತಲೆಗಳವರೆಗೆ ಬರಮಾಡುತ್ತೇನೆ.


ಆದಕಾರಣ ನಾನು ಈ ದಿನ ನಿಮಗೆ ಬೋಧಿಸುವ ಧರ್ಮೋಪದೇಶವನ್ನೂ ಆಜ್ಞಾವಿಧಿಗಳನ್ನೂ ನೀವು ಅನುಸರಿಸಿ ನಡೆಯಬೇಕು.


ನೀವು ಸಾವಿರಾರು ತಲಾಂತರಗಳವರೆಗೂ ದಯೆತೋರುವವರು. ಆದರೆ ಹೆತ್ತವರ ದೋಷಫಲವನ್ನು ಅವರ ತರುವಾಯ ಮಕ್ಕಳ ಮಡಲಿಗೆ ಹಾಕುವವರು. ನೀವು ಮಹಾಪರಾಕ್ರಮಿಯಾದ ದೇವರು, ‘ಸೇನಾಧೀಶ್ವರ ಸರ್ವೇಶ್ವರ’ ಎಂಬುದು ನಿಮ್ಮ ನಾಮಧೇಯ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು