Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 7:13 - ಕನ್ನಡ ಸತ್ಯವೇದವು C.L. Bible (BSI)

13 ನಿಮ್ಮನ್ನು ಅಚಲವಾಗಿ ಪ್ರೀತಿಸಿ, ಅಭಿವೃದ್ಧಿಗೊಳಿಸುವರು; ನಿಮ್ಮ ಪಿತೃಗಳಿಗೆ ಪ್ರಮಾಣಮಾಡಿಕೊಟ್ಟ ನಾಡಿನಲ್ಲಿ ನಿಮ್ಮ ಸಂತಾನವನ್ನು, ವ್ಯವಸಾಯವನ್ನು, ದವಸಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳನ್ನು ಹಾಗು ದನಕುರಿಗಳ ಮಂದೆಯನ್ನು ವೃದ್ಧಿಗೊಳಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆತನು ನಿಮ್ಮನ್ನು ಪ್ರೀತಿಸಿ, ಅಭಿವೃದ್ಧಿಪಡಿಸಿ ಹೆಚ್ಚಿಸುವನು. ಆತನು ನಿಮ್ಮ ಪೂರ್ವಿಕರಿಗೆ ಪ್ರಮಾಣಮಾಡಿಕೊಟ್ಟ ದೇಶದಲ್ಲಿ ನಿಮ್ಮ ಸಂತಾನವನ್ನೂ, ವ್ಯವಸಾಯವನ್ನೂ, ನಿಮಗಿರುವ ದವಸ ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳನ್ನೂ, ನಿಮ್ಮ ದನ ಮತ್ತು ಕುರಿಗಳಲ್ಲಿ ಹುಟ್ಟಿದ್ದನ್ನೂ ಅಭಿವೃದ್ಧಿಪಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನಿಮ್ಮನ್ನು ಪ್ರೀತಿಸಿ ಅಭಿವೃದ್ಧಿಪಡಿಸಿ ಹೆಚ್ಚಿಸುವನು. ಆತನು ನಿಮ್ಮ ಪಿತೃಗಳಿಗೆ ಪ್ರಮಾಣಮಾಡಿಕೊಟ್ಟ ದೇಶದಲ್ಲಿ ನಿಮ್ಮ ಸಂತಾನವನ್ನೂ ವ್ಯವಸಾಯವನ್ನೂ ನಿಮಗಿರುವ ಧಾನ್ಯದ್ರಾಕ್ಷಾರಸ, ಎಣ್ಣೆ ಇವುಗಳನ್ನೂ ನಿಮ್ಮ ದನಕುರಿಗಳಲ್ಲಿ ಹುಟ್ಟಿದ್ದನ್ನೂ ಅಭಿವೃದ್ಧಿಪಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಮತ್ತು ಆತನು ಆಶೀರ್ವದಿಸುವನು. ನಿಮ್ಮ ಜನಾಂಗವು ವೃದ್ಧಿಯಾಗುವಂತೆ ಮಾಡುವನು. ನಿಮ್ಮನ್ನೂ ನಿಮ್ಮ ಮಕ್ಕಳನ್ನೂ ಆಶೀರ್ವದಿಸುವನು. ನಿಮ್ಮ ಹೊಲಗಳಲ್ಲಿ ಸಮೃದ್ಧಿಯಾದ ಬೆಳೆಯು ಉಂಟಾಗುವಂತೆ ಆಶೀರ್ವದಿಸುವನು. ಆತನು ನಿಮಗೆ ಧಾನ್ಯ, ಹೊಸ ದ್ರಾಕ್ಷಾರಸ ಮತ್ತು ಎಣ್ಣೆಗಳನ್ನು ಕೊಡುವನು. ನಿಮ್ಮ ದನಕುರಿಗಳು ಮರಿಗಳನ್ನು ಈಯುವಂತೆ ಆಶೀರ್ವದಿಸುವನು. ನಿಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಿದ ದೇಶದಲ್ಲಿ ನೀವು ನೆಲೆಸಿರುವಾಗ ನಿಮಗೆ ಈ ಆಶೀರ್ವಾದಗಳೆಲ್ಲಾ ಪ್ರಾಪ್ತವಾಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಅವರು ನಿಮ್ಮನ್ನು ಪ್ರೀತಿಸಿ, ನಿಮ್ಮನ್ನು ಆಶೀರ್ವದಿಸಿ, ನಿಮ್ಮನ್ನು ಅಭಿವೃದ್ಧಿಗೊಳಿಸಿ ಮತ್ತು ನಿಮಗೆ ಕೊಡುತ್ತೇನೆಂದು ಅವರು ನಿಮ್ಮ ಪಿತೃಗಳಿಗೆ ಪ್ರಮಾಣ ಮಾಡಿದ ಆ ದೇಶದಲ್ಲಿ ನಿಮ್ಮ ಗರ್ಭದ ಫಲವನ್ನೂ ಅಂದರೆ, ಭೂಮಿಯ ಹುಟ್ಟುವಳಿಯನ್ನೂ, ನಿಮ್ಮ ಧಾನ್ಯವನ್ನೂ, ನಿಮ್ಮ ಹೊಸ ದ್ರಾಕ್ಷಾರಸವನ್ನೂ, ನಿಮ್ಮ ಎಣ್ಣೆಯನ್ನೂ, ನಿಮ್ಮ ಪಶುಗಳನ್ನೂ, ನಿಮ್ಮ ಕುರಿಗಳ ಮಂದೆಗಳನ್ನೂ ಆಶೀರ್ವದಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 7:13
26 ತಿಳಿವುಗಳ ಹೋಲಿಕೆ  

ನನ್ನ ಆಜ್ಞೆಗಳನ್ನು ಅಂಗೀಕರಿಸಿ ಅವುಗಳ ಪ್ರಕಾರ ನಡೆಯುವವನೇ ನನ್ನನ್ನು ಪ್ರೀತಿಸುವವನು. ನನ್ನನ್ನು ಪ್ರೀತಿಸುವವನು ನನ್ನ ಪಿತನಿಗೂ ಪ್ರಿಯನಾಗಿರುವನು. ನಾನೂ ಅವನನ್ನು ಪ್ರೀತಿಸಿ ನನ್ನನ್ನೇ ಅವನಿಗೆ ಸಾಕ್ಷಾತ್ಕರಿಸಿಕೊಡುವೆನು.”


ನನ್ನ ಪಿತನು ಕೊಟ್ಟ ಆಜ್ಞೆಗಳನ್ನು ಪಾಲಿಸಿ ಅವರ ಪ್ರೀತಿಯಲ್ಲಿ ನಾನು ನೆಲೆಗೊಂಡಿರುವ ಹಾಗೆ ನೀವು ಕೂಡ ನಾನು ಕೊಟ್ಟ ಆಜ್ಞೆಗಳನ್ನು ಪಾಲಿಸಿದರೆ ನನ್ನ ಪ್ರೀತಿಯಲ್ಲಿ ನೆಲೆಗೊಂಡಿರುವಿರಿ.


ಕಾರಣ, ಪಿತನೇ ನಿಮ್ಮನ್ನು ಪ್ರೀತಿಸುತ್ತಾರೆ. ನೀವು ನನ್ನನ್ನು ಪ್ರೀತಿಸಿ ನಾನು ಅವರಿಂದ ಬಂದವನೆಂದು ವಿಶ್ವಾಸಿಸಿದ್ದರಿಂದ ಪಿತನಿಗೆ ನಿಮ್ಮ ಮೇಲೆ ಅಕ್ಕರೆಯಿದೆ.


ನಿಮ್ಮ ದೇವರೂ ಸರ್ವೇಶ್ವರನೂ ಆದ ನನ್ನೊಬ್ಬನನ್ನೇ ಆರಾಧಿಸಬೇಕು. ಆಗ ನಿಮ್ಮ ಅನ್ನಪಾನಗಳನ್ನು ಆಶೀರ್ವದಿಸುವೆನು. ನಿಮ್ಮೊಳಗೆ ಯಾವ ವ್ಯಾಧಿಯೂ ಇರದಂತೆ ಮಾಡುವೆನು.


ನೀವಾದರೋ ಮೊದಲು ದೇವರ ಸಾಮ್ರಾಜ್ಯಕ್ಕಾಗಿ, ಅವರ ಸತ್ಸಂಬಂಧಕ್ಕಾಗಿ ತವಕಪಡಿ. ಇದರೊಂದಿಗೆ ಅವೆಲ್ಲವೂ ನಿಮಗೆ ನೀಡಲಾಗುವುದು.


ಸರ್ವೇಶ್ವರನ ಆಶೀರ್ವಾದ ಭಾಗ್ಯದಾಯಕ; ಅದಕ್ಕೆ ಬಾಹಿರವಾದುದು ಕಷ್ಟದುಃಖ.


ಸರ್ವೇಶ್ವರ ಯೋಬನ ಮೊದಲನೆಯ ಸ್ಥಿತಿಗಿಂತಲೂ ಅವನ ಕಡೆಯ ಸ್ಥಿತಿಯನ್ನು ಹೀಗೆ ಅಧಿಕಗೊಳಿಸಿ ಆಶೀರ್ವದಿಸಿದರು.


“ಸರ್ವೇಶ್ವರ ನಿಮ್ಮ ಪಿತೃಗಳಿಗೆ ಪ್ರಮಾಣ ಮಾಡಿದ ಮೇರೆಗೆ, ನಿಮಗೆ ಕೊಡುವ ನಾಡಿನಲ್ಲಿ ಅವರು ನಿಮಗೆ ಸಂತಾನ, ಪಶು, ವ್ಯವಸಾಯಗಳ ಸಮೃದ್ಧಿಯನ್ನುಂಟುಮಾಡುವರು.


ನದಿಯ ಬದಿಯಲೇ ಬೆಳೆದಿಹ ಮರದಂತೆ I ಸಕಾಲಕೆ ಫಲವೀವ ವೃಕ್ಷದಂತೆ I ಎಲೆಬಾಡದೆ ಪಸಿರಿರುವ ತರುವಂತೆ I ಸಿಗುವುದು ಅವನ ಕಾರ್ಯಗಳಿಗೆ ಸಫಲತೆ II


“ನೀವು ಸಂಖ್ಯೆಯಲ್ಲಿ ಜನಾಂಗಗಳಿಗೆಲ್ಲಾ ಹೆಚ್ಚುಮಂದಿ ಎಂದು ಪ್ರೀತಿಸಿ, ಆಯ್ದುಕೊಳ್ಳಲಿಲ್ಲ; ನಿಜವಾಗಿಯೂ ನೀವು ಎಲ್ಲಾ ಜನಾಂಗಗಳಿಗಿಂತ ಅಲ್ಪಸಂಖ್ಯಾತರು.


ಸತ್ಯಸ್ವರೂಪನಾದ ಪ್ರಭು ಸತ್ಯ ಪ್ರಿಯನು I ಸತ್ಪುರುಷನು ಸೇರುವನು ಆತನ ಸನ್ನಿಧಿಯನು II


ನಾನು ನಿಮ್ಮ ಮೇಲೆ ಕರುಣೆಯಿಟ್ಟು, ಹೆಚ್ಚು ಸಂತಾನ, ಪ್ರಾಪ್ತಿಯನ್ನು ಕೊಟ್ಟು ಅಭಿವೃದ್ಧಿಗೊಳಿಸಿ, ನಿಮಗೆ ಮಾಡಿದ ವಾಗ್ದಾನವನ್ನು ನೆರವೇರಿಸುವೆನು.


ಆ ಶಾಪಗ್ರಸ್ತ ವಸ್ತುಗಳಲ್ಲಿ ನೀವು ಸ್ವಲ್ಪವನ್ನಾದರೂ ತೆಗೆದುಕೊಳ್ಳಬಾರದು.


ನಿಮ್ಮ ಪಿತೃಗಳಿಗೆ ಸ್ವಂತವಾಗಿದ್ದ ನಾಡಿನಲ್ಲಿ ಸೇರಿಸುವರು. ಅದು ನಿಮಗೂ ಸ್ವದೇಶವಾಗುವಂತೆ ಮಾಡಿ ನಿಮಗೆ ಒಳಿತನ್ನುಂಟುಮಾಡುವರು; ಪಿತೃಗಳಿಗಿಂತಲೂ ಅಧಿಕವಾಗಿ ನಿಮ್ಮನ್ನು ಹೆಚ್ಚಿಸುವರು.


ಪ್ರಭುವಿನಿಂದ ಬಂದ ಸೊತ್ತು - ಪುತ್ರಸಂತಾನ I ಕರುಳ ಕುಡಿಯು ಆತ ನೀಡುವ ಬಹುಮಾನ II


ಕಣ್ಣನ್ನೀಯುವನು ಪ್ರಭು ಕುರುಡರಿಗೆ I ಉದ್ಧಾರಕನಾ ಪ್ರಭು ಕುಗ್ಗಿದವರಿಗೆ I ಆತನ ಒಲವಿರುವುದು ಸಾಧು ಸಜ್ಜನರಿಗೆ II


ದುರುಳರ ನಡತೆ ಸರ್ವೇಶ್ವರನಿಗೆ ಹೇಯ; ನೀತಿವಂತರ ನಡತೆ ಆತನಿಗೆ ಸುಪ್ರಿಯ.


ಆ ನಾಡನ್ನು ನಿಮಗೆ ಕೊಟ್ಟಿದ್ದೇನೆ. ಸರ್ವೇಶ್ವರನೆಂಬ ನಾನು ನಿಮ್ಮ ಪಿತೃಗಳಾದ ಅಬ್ರಹಾಮ, ಇಸಾಕ, ಯಕೋಬರಿಗೂ ಅವರ ಸಂತತಿಯವರಿಗೂ ಆ ನಾಡನ್ನು ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದ್ದೆನು. ಅದನ್ನು ಸೇರಿ ಸ್ವಾಧೀನಮಾಡಿಕೊಳ್ಳಿ,’ ಎಂದು ಆಜ್ಞಾಪಿಸಿದರು.


“ನೀವು ನಿಮ್ಮ ದೇವರಾದ ಸರ್ವೇಶ್ವರನ ಮಾತನ್ನು ಶ್ರದ್ಧೆಯಿಂದ ಕೇಳಿ, ನಾನು ಈಗ ನಿಮಗೆ ಬೋಧಿಸುವ ಅವರ ಆಜ್ಞೆಗಳನ್ನೆಲ್ಲಾ ಅನುಸರಿಸಿ ನಡೆದರೆ, ಅವರು ಜಗದ ಎಲ್ಲ ಜನಾಂಗಗಳಿಗಿಂತ ನಿಮ್ಮನ್ನು ಉನ್ನತಸ್ಥಿತಿಗೆ ತರುವರು.


ಓ ನಮ್ಮ ದೇವರೇ, ನೀವು ಮಹೋನ್ನತರು, ಶಕ್ತಿಸಾಮರ್ಥ್ಯರು, ಭಯಭಕ್ತಿಗೆ ಪಾತ್ರರು, ಕೃಪಾವಾಗ್ದಾನಗಳ ನೆರವೇರಿಸುವವರು. ಅಲ್ಪವೆಂದೆಣಿಸಬೇಡಿ - ನಮ್ಮ ರಾಜರು, ರಾಜ್ಯಪಾಲರು. ಯಾಜಕರು, ಪ್ರವಾದಿಗಳು, ಹಿರಿಯರು, ಪ್ರಜೆಗಳು ಸಹಿಸಬೇಕಾಗಿಬಂದಿರುವ ಈ ಕಷ್ಟಕಾರ್ಪಣ್ಯಗಳನು.


ನೀವು ಆತನಿಗೂ ಆತನ ಎಲ್ಲ ಆಸ್ತಿಪಾಸ್ತಿಗೂ ಬೇಲಿ ಹಾಕಿ ಭದ್ರಪಡಿಸಿದ್ದೀರಲ್ಲವೇ? ಆತನು ಕೈ ಹಾಕಿದ ಕೆಲಸ ಸಫಲವಾಗುವಂತೆ ಮಾಡಿದ್ದೀರಲ್ಲವೆ? ಎಂದೇ ಆತನ ಸಿರಿಸಂಪತ್ತು ಈ ನಾಡಿನಲ್ಲಿ ಬೆಳೆಯುತ್ತಾ ಬಂದಿದೆ.


ಅಭಿವೃದ್ಧಿಯಾದರು ಆತನಾಶೀರ್ವಾದದಿಂದಲೆ I ಅವರಿಗಿರಲಿಲ್ಲ ದನಕರುಗಳಾವುದರ ಕೊರತೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು