Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 7:18 - ಕನ್ನಡ ಸತ್ಯವೇದವು C.L. Bible (BSI)

18 ಅವರಿಗೆ ಹೆದರಬೇಡಿ. ನಿಮ್ಮ ದೇವರಾದ ಸರ್ವೇಶ್ವರ ಫರೋಹನಿಗೂ ಈಜಿಪ್ಟರೆಲ್ಲರಿಗೂ ಮಾಡಿದ್ದನ್ನು ನೆನಪಿಗೆ ತಂದುಕೊಳ್ಳಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ನಿಮ್ಮ ದೇವರಾದ ಯೆಹೋವನು ಫರೋಹನಿಗೂ ಮತ್ತು ಐಗುಪ್ತ್ಯರೆಲ್ಲರಿಗೂ ಮಾಡಿದ್ದನ್ನು ನೆನಪಿಗೆ ತಂದುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ನಿಮ್ಮ ದೇವರಾದ ಯೆಹೋವನು ಫರೋಹನಿಗೂ ಐಗುಪ್ತ್ಯರೆಲ್ಲರಿಗೂ ಮಾಡಿದ್ದನ್ನು ನೆನಪಿಗೆ ತಂದುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ನೀವು ಅವರಿಗೆ ಭಯಪಡಬಾರದು. ನಿಮ್ಮ ದೇವರಾದ ಯೆಹೋವನು ಫರೋಹನಿಗೂ ಈಜಿಪ್ಟಿನ ಎಲ್ಲಾ ಜನರಿಗೂ ಮಾಡಿದ್ದನ್ನು ನೆನಪು ಮಾಡಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ನೀವು ಅವರಿಗೆ ಭಯಪಡಬೇಡಿರಿ. ನಿಮ್ಮ ದೇವರಾದ ಯೆಹೋವ ದೇವರು ಫರೋಹನಿಗೂ, ಎಲ್ಲಾ ಈಜಿಪ್ಟಿನವರಿಗೂ ಮಾಡಿದ್ದನ್ನು

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 7:18
25 ತಿಳಿವುಗಳ ಹೋಲಿಕೆ  

ಆತನ ದಾಸ ಅಬ್ರಹಾಮನ ಸಂತತಿಯವರೇ I ಆತನಾರಿಸಿಕೊಂಡ ಯಕೋಬನ ವಂಶದವರೇ II


ನೀವು ಶೂರರಾಗಿ ಧೈರ್ಯದಿಂದಿರಿ; ಅವರಿಗೆ ಅಂಜಬೇಡಿ, ಕಳವಳಪಡಬೇಡಿ. ನಿಮ್ಮ ದೇವರಾದ ಸರ್ವೇಶ್ವರನೇ ನಿಮ್ಮ ಸಂಗಡ ಇರುತ್ತಾರೆ; ಅವರು ನಿಮ್ಮನ್ನು ಕೈಬಿಡುವುದಿಲ್ಲ, ಅಪಜಯಕ್ಕೆ ಗುರಿಪಡಿಸುವುದೇ ಇಲ್ಲ,” ಎಂದು ಹೇಳಿದನು.


ವರ್ಣಿಸುವೆನು ಪ್ರಭುವಿನ ಮಹತ್ಕಾರ್ಯಗಳೆಲ್ಲವನು I ಸ್ಮರಿಸುವೆ ನೀನಾದಿಯಿಂದ ನಡೆಸಿದ ಅದ್ಭುತಗಳನು II


“ಅದಕ್ಕೆ ನಾನು, ‘ಕಳವಳಪಡಬೇಡಿ, ಅವರಿಗೆ ಭಯಪಡಬೇಡಿ.


ಮರೆತುಬಿಟ್ಟರವರು ಆತನ ಮಹತ್ಕಾರ್ಯಗಳನು I ತಮ್ಮೆದುರಿನಲ್ಲೇ ಸಾಧಿಸಿದ ಅದ್ಭುತಗಳನು : II


ಆಗ ಗಿದ್ಯೋನನು ಅವನಿಗೆ, “ಸ್ವಾಮೀ, ಸರ್ವೇಶ್ವರ ನನ್ನೊಡನೆ ಇದ್ದರೆ ನಮಗೆ ಇದೆಲ್ಲಾ ಏಕೆ ಸಂಭವಿಸಿತು? ನಮ್ಮ ಹಿರಿಯರು, ಸರ್ವೇಶ್ವರ ಅದ್ಭುತಗಳನ್ನು ನಡಿಸಿ ತಮ್ಮನ್ನು ಈಜಿಪ್ಟಿನಿಂದ ಬಿಡಿಸಿದರೆಂಬುದಾಗಿ ವಿವರಿಸುತ್ತಿದ್ದರು. ಅಂಥ ಅದ್ಭುತಗಳು ಈಗೆಲ್ಲಿವೆ? ಅವರು ನಮ್ಮನ್ನು ತಿರಸ್ಕರಿಸಿ ಮಿದ್ಯಾನ್ಯರ ಕೈಗೆ ಒಪ್ಪಿಸಿಬಿಟ್ಟಿದ್ದಾರಲ್ಲಾ,” ಎನ್ನಲು,


ನಾವು ಹೆಷ್ಬೋನಿನ ಅರಸನಾದ ಸೀಹೋನನ ಪಟ್ಟಣಗಳಲ್ಲಿದ್ದ ಗಂಡಸರನ್ನು, ಹೆಂಗಸರನ್ನು, ಮಕ್ಕಳನ್ನು ನಿಶ್ಯೇಷವಾಗಿ ನಾಶಮಾಡಿದೆವು.


“ನೀವು ಶತ್ರುಗಳ ವಿರುದ್ಧ ಯುದ್ಧಕ್ಕೆ ಹೊರಟಾಗ ಅವರ ಕಡೆ ಕುದುರೆಗಳು, ರಥಗಳು ಹಾಗು ನಿಮಗಿಂತ ಹೆಚ್ಚಾದ ಕಾಲ್ಬಲವು ಇರುವುದನ್ನು ಕಂಡರೆ, ಹೆದರಬೇಡಿ. ಏಕೆಂದರೆ ಈಜಿಪ್ಟ್ ದೇಶದಿಂದ ನಿಮ್ಮನ್ನು ಬಿಡಿಸಿದ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮೊಂದಿಗೆ ಇದ್ದಾರೆ.


ಬೆನ್ಯಾಮೀನ್ ಕುಲದ ರಾಫೂವನ ಮಗ ಪಲ್ಟೀ


ಸರ್ವೇಶ್ವರ ಮೋಶೆಗೆ, “ಅವನಿಗೆ ಭಯಪಡಬೇಡ; ಅವನನ್ನೂ ಅವನ ಸಮಸ್ತ ಪ್ರಜೆಯನ್ನೂ ನಾಡನ್ನೂ ನಿನ್ನ ಕೈವಶಮಾಡಿದ್ದೇನೆ. ನೀನು ಹೆಷ್ಬೋನಿನಲ್ಲಿ ಅಮೋರಿಯರ ಅರಸ ಸೀಹೋನನಿಗೆ ಮಾಡಿದಂತೆಯೇ ಇವನಿಗೂ ಮಾಡು,” ಎಂದು ಹೇಳಿದರು.


ನಿಮ್ಮ ದೇವರಾದ ಸರ್ವೇಶ್ವರ ಆ ನಾಡನ್ನು ನಿಮಗೇ ಕೊಟ್ಟಿದ್ದಾರೆ; ನಿಮ್ಮ ಪಿತೃಗಳ ದೇವರಾದ ಸರ್ವೇಶ್ವರ ಹೇಳಿದಂತೆ ಅದನ್ನು ಏರಿ ಸ್ವಾಧೀನಮಾಡಿಕೊಳ್ಳಿ; ನೀವು ದಿಗಿಲುಪಡದೆ ಧೈರ್ಯವಾಗಿಯೇ ಇರಬೇಕು,’ ಎಂದು ಹೇಳಿದೆ.


ನಿಮ್ಮ ಮುಂದುಗಡೆಯಲ್ಲೇ ಹೋಗುವ ನಿಮ್ಮ ದೇವರಾದ ಸರ್ವೇಶ್ವರ ಈಜಿಪ್ಟ್ ದೇಶದಲ್ಲೂ ನೀವು ನೋಡಿದ ಮರುಭೂಮಿಯಲ್ಲೂ ಪ್ರತ್ಯಕ್ಷರಾಗಿ ನಿಮ್ಮ ಪರವಾಗಿ ಯುದ್ಧಮಾಡಿದಂತೆಯೇ, ಈಗಲೂ ನಿಮ್ಮ ಕಡೆಯವರಾಗಿದ್ದು ಯುದ್ಧಮಾಡುವರು.


ಸರ್ವೇಶ್ವರ ಅವರನ್ನು ನಿಮ್ಮಿಂದ ಪರಾಜಯಪಡಿಸಿದಾಗ ನೀವು ಅವರ ವಿಷಯದಲ್ಲಿ ನನ್ನ ಆಜ್ಞೆಗಳನ್ನೆಲ್ಲಾ ಅನುಸರಿಸಿ ನಡೆದುಕೊಳ್ಳಬೇಕು.


ಸರ್ವೇಶ್ವರಸ್ವಾಮಿ ಯೆಹೋಶುವನಿಗೆ, “ಅಂಜಬೇಡ, ಕಳವಳಗೊಳ್ಳಬೇಡ; ಯೋಧರೆಲ್ಲರನ್ನು ನಿನ್ನೊಡನೆ ಕರೆದುಕೊಂಡು ಆಯಿಗೆ ಹೋಗು. ಆಯಿ ಎಂಬ ಊರಿನ ರಾಜ, ಪ್ರಜೆ, ನಗರ, ನಾಡು ಇವೆಲ್ಲವನ್ನು ನಿನಗೆ ಕೊಟ್ಟಿದ್ದೇನೆ, ಹೋಗು.


ಧ್ಯಾನಿಸುವೆ ನಾನಿನ್ನ ಕಾರ್ಯಗಳನೆಲ್ಲ I ಮಾಡುವೆ ಮನನ ನಿನ್ನ ಪವಾಡಗಳನೆಲ್ಲ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು