ಧರ್ಮೋಪದೇಶಕಾಂಡ 7:19 - ಕನ್ನಡ ಸತ್ಯವೇದವು C.L. Bible (BSI)19 ಆಗ ನೀವೇ ಕಣ್ಣಾರೆ ನೋಡಿದಂತೆ ಸರ್ವೇಶ್ವರ ವಿಶೇಷ ಪರಿಶೋಧನೆ, ಪವಾಡ, ಮಹತ್ಕಾರ್ಯ, ಭುಜಪರಾಕ್ರಮ, ಶಿಕ್ಷೆ ಇವುಗಳನ್ನು ಪ್ರಯೋಗಿಸಿ ನಿಮ್ಮನ್ನು ಬಿಡುಗಡೆಮಾಡಿದರಲ್ಲವೆ? ನೀವು ಹೆದರಿಕೊಳ್ಳುವ ಆ ಎಲ್ಲ ಜನಾಂಗಗಳಿಗೂ ಅವರು ಹಾಗೆಯೇ ಮಾಡುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಆಗ ನೀವು ಕಣ್ಣಾರೆ ನೋಡಿದ ಪ್ರಕಾರ ಆತನು ವಿಶೇಷ ಪರಿಶೋಧನೆ, ಮಹತ್ಕಾರ್ಯ, ಉತ್ಪಾತ, ಭುಜಪರಾಕ್ರಮ, ಶಿಕ್ಷೆ ಇವುಗಳನ್ನು ಪ್ರಯೋಗಿಸಿ ನಿಮ್ಮನ್ನು ಬಿಡುಗಡೆಮಾಡಿದನಲ್ಲಾ. ನೀವು ಹೆದರಿಕೊಳ್ಳುವ ಆ ಎಲ್ಲಾ ಜನಾಂಗಗಳಿಗೂ ಆತನು ಹಾಗೆಯೇ ಮಾಡುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ನೀವು ಆಗ ಕಣ್ಣಾರೆ ನೋಡಿದ ಪ್ರಕಾರ ಆತನು ವಿಶೇಷ ಮನಶ್ಶೋಧನೆ, ಮಹತ್ಕಾರ್ಯ, ಉತ್ಪಾತ, ಭುಜಪರಾಕ್ರಮ, ಶಿಕ್ಷೆ ಇವುಗಳನ್ನು ಪ್ರಯೋಗಿಸಿ ನಿಮ್ಮನ್ನು ಬಿಡುಗಡೆಮಾಡಿದನಲ್ಲಾ. ನೀವು ಹೆದರಿಕೊಳ್ಳುವ ಆ ಎಲ್ಲಾ ಜನಾಂಗಗಳಿಗೂ ಆತನು ಹಾಗೆಯೇ ಮಾಡುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಆತನು ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ನಡೆಸಿದ್ದನ್ನು ನೀವು ನೋಡಿದಿರಿ. ಆತನು ನಿಮ್ಮನ್ನು ಈಜಿಪ್ಟಿನಿಂದ ಕರೆದುಕೊಂಡು ಬರಲು ತನ್ನ ಮಹಾಶಕ್ತಿಯನ್ನೂ ಬಲವನ್ನೂ ಬಳಸಿದ್ದನ್ನು ನೀವು ನೋಡಿದಿರಿ. ನೀವು ಭಯಪಡುವ ಎಲ್ಲಾ ಜನರ ಮೇಲೆ ದೇವರಾದ ಯೆಹೋವನು ಅದೇ ಶಕ್ತಿಯನ್ನು ಬಳಸುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಕಣ್ಣಾರೆ ನೋಡಿದ ದೊಡ್ಡ ಉಪದ್ರವಗಳನ್ನೂ, ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ಹೊರಗೆ ಬರಮಾಡಿದಾಗ ಉಂಟಾದ ಗುರುತುಗಳನ್ನೂ, ಅದ್ಭುತಗಳನ್ನೂ, ದೇವರ ಬಲವಾದ ಹಸ್ತವನ್ನೂ, ಚಾಚಿದ ತೋಳನ್ನೂ ನೀವು ಚೆನ್ನಾಗಿ ಜ್ಞಾಪಕಮಾಡಿಕೊಳ್ಳಬೇಕು. ನೀವು ಯಾವ ಜನರಿಗೆ ಭಯಪಡುತ್ತೀರೋ, ಆ ಜನರಿಗೆಲ್ಲಾ ನಿಮ್ಮ ದೇವರಾದ ಯೆಹೋವ ದೇವರು ಹಾಗೆಯೇ ಮಾಡುವರು. ಅಧ್ಯಾಯವನ್ನು ನೋಡಿ |