Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 7:6 - ಕನ್ನಡ ಸತ್ಯವೇದವು C.L. Bible (BSI)

6 ಏಕೆಂದರೆ ನೀವು ನಿಮ್ಮ ದೇವರಾದ ಸರ್ವೇಶ್ವರನಿಗೆ ಮೀಸಲಾದ ಜನರು; ಜಗದಲ್ಲಿರುವ ಸಮಸ್ತ ಜನಾಂಗಗಳಲ್ಲಿ ನಿಮ್ಮನ್ನೇ ಸ್ವಕೀಯಜನರಾಗಲು ಅವರು ಆಯ್ದುಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಯಾಕೆಂದರೆ ನೀವು ನಿಮ್ಮ ದೇವರಾದ ಯೆಹೋವನಿಗೆ ಮೀಸಲಾದ ಪರಿಶುದ್ಧ ಜನರಾಗಿದ್ದೀರಲ್ಲವೇ; ಆತನು ಭೂಲೋಕದಲ್ಲಿರುವ ಸಮಸ್ತ ಜನಾಂಗಗಳಲ್ಲಿ ನಿಮ್ಮನ್ನೇ ಸ್ವಕೀಯಜನವಾಗುವುದಕ್ಕೆ ಆರಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಯಾಕಂದರೆ ನೀವು ನಿಮ್ಮ ದೇವರಾದ ಯೆಹೋವನಿಗೆ ಮೀಸಲಾದ ಜನರಾಗಿದ್ದೀರಲ್ಲವೇ; ಆತನು ಭೂಲೋಕದಲ್ಲಿರುವ ಸಮಸ್ತ ಜನಾಂಗಗಳಲ್ಲಿ ನಿಮ್ಮನ್ನೇ ಸ್ವಕೀಯ ಜನವಾಗುವದಕ್ಕೆ ಆದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಯಾಕೆಂದರೆ ನೀವು ಯೆಹೋವನ ಪ್ರಜೆಗಳಾಗಿದ್ದೀರಿ. ಭೂಲೋಕದಲ್ಲಿರುವ ಎಲ್ಲಾ ಜನಾಂಗಗಳಿಂದ ಆತನು ನಿಮ್ಮನ್ನು ಆರಿಸಿಕೊಂಡಿದ್ದಾನೆ. ನೀವು ಆತನ ಸ್ವಕೀಯ ಪ್ರಜೆಯಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಏಕೆಂದರೆ ನೀವು ನಿಮ್ಮ ದೇವರಾದ ಯೆಹೋವ ದೇವರಿಗೆ ಪರಿಶುದ್ಧ ಜನರು. ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ಭೂಮಿಯ ಮೇಲಿರುವ ಎಲ್ಲಾ ಜನರೊಳಗಿಂದ ತಮಗೆ ಸ್ವಂತ ಜನರಾಗಿರಲು ತಮ್ಮ ಆಸ್ತಿಯಾಗಿ ಆರಿಸಿಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 7:6
33 ತಿಳಿವುಗಳ ಹೋಲಿಕೆ  

ಏಕೆಂದರೆ ನೀವು ನಿಮ್ಮ ದೇವರಾದ ಸರ್ವೇಶ್ವರನಿಗೆ ಮೀಸಲು ಜನ. ಅವರು ಜಗದಲ್ಲಿರುವ ಸಮಸ್ತಜನಾಂಗಗಳಲ್ಲಿ ನಿಮ್ಮನ್ನೇ ಸ್ವಕೀಯಜನರಾಗುವುದಕ್ಕೆ ಆರಿಸಿಕೊಂಡಿದ್ದಾರೆ.


ನೀವು ದೇವರು ಆಯ್ದುಕೊಂಡ ಜನಾಂಗ, ರಾಜಯಾಜಕರು, ಪವಿತ್ರ ಪ್ರಜೆ, ದೇವರ ಸ್ವಕೀಯ ಜನ; ಅವರ ಅದ್ಭುತ ಕಾರ್ಯಗಳನ್ನು ಪ್ರಚುರಪಡಿಸುವುದಕ್ಕಾಗಿಯೇ ಆಯ್ಕೆಯಾದವರು. ಕಾರ್ಗತ್ತಲಿನಿಂದ ತಮ್ಮ ಅದ್ಭುತಕರವಾದ ಬೆಳಕಿಗೆ ನಿಮ್ಮನ್ನು ಕರೆತಂದವರು ಅವರೇ.


ಸೇನಾಧೀಶ್ವರ ಸರ್ವೇಶ್ವರ ಇಂತೆನ್ನುತ್ತಾರೆ: “ಇವರು ನನ್ನ ಜನರು; ನಾನು ಕಾರ್ಯತತ್ಪರನಾಗುವ ದಿನದಂದು ಅವರು ನನಗೆ ಸ್ವಕೀಯಜನರಾಗಿರುವರು. ತಂದೆಯೊಬ್ಬನು ತನಗೆ ಸೇವೆಮಾಡುವ ಮಗನನ್ನು ಕಾಪಾಡುವಂತೆ ನಾನು ಅವರನ್ನು ಕಾಪಾಡುವೆನು.


ಯೇಸುಕ್ರಿಸ್ತರು ನಮ್ಮನ್ನು ಸಕಲ ಅಪರಾಧಗಳಿಂದ ವಿಮೋಚಿಸಿ, ಪರಿಶುದ್ಧರನ್ನಾಗಿಸಿ, ಸತ್ಕಾರ್ಯಗಳಲ್ಲಿ ಆಸಕ್ತರಾದ ಒಂದು ಜನಾಂಗವನ್ನಾಗಿ ಮಾಡಿದರು. ನಮ್ಮನ್ನು ತಮ್ಮ ಸ್ವಂತದವರನ್ನಾಗಿಸಿಕೊಳ್ಳಲೆಂದು ತಮ್ಮನ್ನೇ ನಮಗಾಗಿ ಸಮರ್ಪಿಸಿಕೊಟ್ಟನು.


ನಾನು ನಿರ್ಮಿಸಿದ ಬೇರೆ ಎಲ್ಲಾ ಜನಾಂಗಗಳಿಗಿಂತ ಇವರಿಗೆ ಹೆಚ್ಚಾದ ಕೀರ್ತಿಘನಮಾನಗಳನ್ನುಂಟು ಮಾಡುವೆನು ಹಾಗು ಇವರು ನನ್ನ ಮಾತಿನ ಮೇರೆಗೆ ತಮ್ಮ ದೇವರಾದ ಸರ್ವೇಶ್ವರನಿಗೆ ಮೀಸಲಾದ ಜನರಾಗಲು ಒಡಂಬಟ್ಟಿದ್ದಾರೆ,’ ಎನ್ನುವರು,” ಎಂದು ಹೇಳಿದನು.


“ಎಲೈ ಇಸ್ರಯೇಲ್, ನೀನು ನನಗೆ ಮೀಸಲಾದವಳು, ನನ್ನ ಬೆಳೆಯ ಪ್ರಥಮ ಫಲ. ಯಾರು ಯಾರು ಅದನ್ನು ತಿಂದರೋ ಅವರು ದ್ರೋಹಿಗಳು, ಕೇಡಿಗೆ ಗುರಿಯಾದವರು, ಎನ್ನುತ್ತಾರೆ ಸರ್ವೇಶ್ವರ.”


“ಜಗದ ಜನಾಂಗಗಳಲ್ಲಿ ನನಗೆ ಆಪ್ತರಾದವರೆಂದರೆ ನೀವು. ಆದಕಾರಣ ನೀವು ಮಾಡಿರುವ ಎಲ್ಲಾ ಪಾಪಗಳಿಗೆ ತಕ್ಕ ಪ್ರಾಯಶ್ಚಿತ್ತವನ್ನು ಸವಿಯುವಂತೆ ಮಾಡುವೆನು.”


“ಬಲಿ ಮೂಲಕ ಒಡಂಬಡಿಕೆ ಗೈದ ಭಕ್ತರನು I ಸಭೆ ಸೇರಿಸಿ ಇಲ್ಲೆನ್ನ ಮುಂದೆ,” ಎನ್ನುತಿಹನು II


ಪುರಾತನ ಕಾಲದ ಜನರನ್ನೂ ಸಹ ದೇವರು ದಂಡಿಸದೆ ಬಿಡಲಿಲ್ಲ. ನೀತಿಮಾರ್ಗವನ್ನು ಸಾರಿದ ನೋವನನ್ನು ಮತ್ತು ಅವನೊಂದಿಗಿದ್ದ ಇತರ ಏಳು ಜನರನ್ನು ಮಾತ್ರ ಕಾಪಾಡಿ, ದುರ್ಜನರಿಂದ ಕೂಡಿದ್ದ ಜಗತ್ತಿನ ಮೇಲೆ ಜಲಪ್ರಳಯವನ್ನು ಬರಮಾಡಿದರು.


“ನೀವು ನಿಮ್ಮ ದೇವರಾದ ಸರ್ವೇಶ್ವರನ ಆಜ್ಞೆಗಳನ್ನು ಅನುಸರಿಸಿ, ಅವರು ಹೇಳಿದ ಮಾರ್ಗದಲ್ಲೇ ನಡೆದರೆ ಅವರು ವಾಗ್ದಾನಮಾಡಿದಂತೆ ನಿಮ್ಮನ್ನು ತಮ್ಮ ಮೀಸಲಾದ ಜನರನ್ನಾಗಿ ನೆಲೆಗೊಳಿಸುವರು.


ಹೀಗೆ, ಸಜ್ಜನರನ್ನು ಸಂಕಟಶೋಧನೆಗಳಿಂದ ಸಂರಕ್ಷಿಸಲು, ದುರ್ಜನರನ್ನು ಅಂತಿಮ ನ್ಯಾಯತೀರ್ಪಿನ ದಿನದವರೆಗೂ ಶಿಕ್ಷಾವಸ್ಥೆಯಲ್ಲಿರಿಸಲು ಪ್ರಭುವಿಗೆ ತಿಳಿದಿದೆ.


ಇಸ್ರಯೇಲ್ ಜನರ ದೇವರು ನಮ್ಮ ಪೂರ್ವಜರನ್ನು ಆರಿಸಿಕೊಂಡರು. ಈಜಿಪ್ಟಿನಲ್ಲಿ ಪರಕೀಯರಾಗಿ ವಾಸಿಸುತ್ತಿದ್ದ ನಮ್ಮ ಜನರನ್ನು ಪ್ರಬಲ ಜನಾಂಗವನ್ನಾಗಿ ಮಾಡಿದರು. ತಮ್ಮ ಮಹಾಶಕ್ತಿಯನ್ನು ಪ್ರಯೋಗಿಸಿ ಅವರನ್ನು ಈಜಿಪ್ಟಿನಿಂದ ಹೊರಗೆ ತಂದರು.


ಅವರೇ ಇಸ್ರಯೇಲರು. ದೇವರೇ ಇವರನ್ನು ಮಕ್ಕಳನ್ನಾಗಿ ಆರಿಸಿಕೊಂಡರು; ಇವರಿಗೆ ತಮ್ಮ ಮಹಿಮೆಯನ್ನು ವ್ಯಕ್ತಪಡಿಸಿದರು; ಇವರೊಡನೆ ಒಡಂಬಡಿಕೆಯನ್ನು ಮಾಡಿಕೊಂಡರು; ಇವರಿಗೆ ಧರ್ಮಶಾಸ್ತ್ರವನ್ನೂ ಸಭಾರಾಧನೆಯನ್ನೂ ವಾಗ್ದಾನಗಳನ್ನೂ ದಯಪಾಲಿಸಿದರು.


ನಾನು ನಿಮ್ಮನ್ನು ನನ್ನ ಪ್ರಜೆಯಾಗಿ ಮಾಡುವೆನು; ನಾನು ನಿಮ್ಮ ದೇವರಾಗಿರುವೆನು. ಈಜಿಪ್ಟಿನವರು ಹೊರಿಸುವ ದುಡಿಮೆಯನ್ನು ನಾನು ನಿಮ್ಮಿಂದ ಬಿಡಿಸಿದಾಗ ಸರ್ವೇಶ್ವರ ಎಂಬ ನಾನೇ ನಿಮ್ಮ ದೇವರೆಂದು ನಿಮಗೆ ತಿಳಿದುಬರುವುದು.


ಆದರೆ ನಿಮ್ಮನ್ನು ತಮ್ಮ ಸ್ವಕೀಯ ಜನರನ್ನಾಗಿಸಿಕೊಳ್ಳಲು ಸಂಕಲ್ಪಿಸಿ ಕಬ್ಬಿಣ ಕರಗಿಸುವ ಕುಲುಮೆಯಂತಿದ್ದ ಆ ಈಜಿಪ್ಟ್ ದೇಶದಿಂದ ನಿಮ್ಮನ್ನು ಕರೆದುತಂದು ಇದ್ದಾರೆ ಆ ಸರ್ವೇಶ್ವರ. ಅಂತೆಯೇ ನೀವು ಇಂದಿಗೂ ಅವರ ಸ್ವಂತ ಜನರಾಗಿದ್ದೀರಿ.


“ಸತ್ತುಬಿದ್ದದ್ದನ್ನು ನೀವು ತಿನ್ನಕೂಡದು; ನಿಮ್ಮ ಊರಲ್ಲಿರುವ ಪರದೇಶಿಯರಿಗೆ ಅದನ್ನು ತಿನ್ನುವುದಕ್ಕೆ ಕೊಡಬಹುದು, ಅನ್ಯರಿಗೆ ಮಾರಬಹುದು; ನೀವಾದರೋ ನಿಮ್ಮ ದೇವರಾದ ಸರ್ವೇಶ್ವರನಿಗೆ ಪ್ರತಿಷ್ಠಿತರಾದವರು. “ಆಡುಮರಿಯ ಮಾಂಸವನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಕೂಡದು.


ಸರ್ವೇಶ್ವರ ಸ್ವಾಮಿ ಆದರೋ ನಿಮ್ಮ ವಿಷಯದಲ್ಲಿ, ‘ಇವರು ನನ್ನ ಆಜ್ಞೆಗಳನ್ನೆಲ್ಲ ಅನುಸರಿಸುವವರಾದರೆ ನನ್ನ ವಾಗ್ದಾನಾನುಸಾರ ನನಗೆ ಸ್ವಕೀಯಜನರಾಗಿರುವರು.


ಹೌದು, ಆತ ಪ್ರೀತಿಸುತ್ತಾನೆ ತನ್ನ ಪ್ರಜೆಯನ್ನು, ಆಶ್ರಯ ನೀಡುತ್ತಾನೆ ತನ್ನ ಭಕ್ತರೆಲ್ಲರಿಗು. ಎಂದೇ ಆತನ ಆಜ್ಞೆಗಳಿಗೆ ತಲೆಬಾಗುವೆವು, ಆತನ ಪಾದಚರಣದಲೆ ಕುಳಿತಿರುವೆವು.


ವ್ಯವಹಾರಜ್ಞಾನ ಇಲ್ಲದವನು; ನಿಮ್ಮ ದಾಸನಾದ ನಾನು ಅಸಂಖ್ಯಾತ ಮಹಾಜನಾಂಗವಾದ ನಿಮ್ಮ ಸ್ವಕೀಯ ಪ್ರಜೆಯ ಮಧ್ಯೆ ಇದ್ದೇನೆ.


“ನಾಡಿನ ಹತ್ತನೇ ಒಂದು ಭಾಗ ಉಳಿದಿದ್ದರೂ ಅದು ಕೂಡ ನಾಶವಾಗುವುದು. ಏಲಾ ಮರವನ್ನಾಗಲೀ ಅಲ್ಲೋನ್ ಮರವನ್ನಾಗಲೀ ಕಡಿದ ಮೇಲೆ ಉಳಿಯುವುದು ಬುಡ ಮಾತ್ರ” ಎಂದರು. ಹೀಗೆ ಉಳಿದ ಬುಡವು ಮುಂದೆ ದೇವಜನರಾಗಿ ಚಿಗುರುವುದು.


ಬರಮಾಡಿದೆ ನಾನು ನಿನ್ನನ್ನು ಭೂಮಿಯ ಕಟ್ಟಕಡೆಯಿಂದ ಕರೆದುತಂದೆ ನಿನ್ನನ್ನು ದಿಗಂತದಿಂದ. ನಿನಗೆ ನಾನು ಇಂತೆಂದೆ : ನೀನೆನ್ನ ದಾಸ, ನಿನ್ನ ನಾ ತಿರಸ್ಕರಿಸದೆ ಆರಿಸಿಕೊಂಡೆ !


‘ಪವಿತ್ರ ಪ್ರಜೆ’ ಎನಿಸಿಕೊಳ್ಳುವುದು ನಿಮ್ಮ ಜನತೆ ‘ಸರ್ವೇಶ್ವರ ಸ್ವಾಮಿಯೇ ಉದ್ಧರಿಸಿದ ಜನತೆ’. ನಿನ್ನ ಹೆಸರೋ, ‘ಪ್ರಾಪ್ತ ನಗರಿ’ ಪತಿ ವರಿಸಿ ಕೈ ಬಿಡದ ಪುರಿ.


ನಿಮಗಾದರೋ - ನೀವು ಅವರ ದೇಶವನ್ನು ಸ್ವಾಧೀನಪಡಿಸಿಕೊಳ್ಳುವಿರಿ; ಹಾಲೂ ಜೇನೂ ಹರಿಯುವಂಥ ಆ ದೇಶವನ್ನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವೆನು ಎಂದು ನಾನು ಮಾತುಕೊಟ್ಟೆನಲ್ಲವೇ? ನಾನು ನಿಮ್ಮನ್ನು ಇತರ ಜನಾಂಗಗಳಿಂದ ಪ್ರತ್ಯೇಕಿಸಿದ ನಿಮ್ಮ ದೇವರಾದ ಸರ್ವೇಶ್ವರ.


ಸರ್ವೇಶ್ವರನೆಂಬ ನಾನು ಪರಿಶುದ್ಧನಾಗಿದ್ದೇನೆ, ಮತ್ತು ನೀವು ನನ್ನ ಜನರಾಗುವಂತೆ ನಿಮ್ಮನ್ನು ಇತರ ಜನಾಂಗಗಳಿಂದ ಪ್ರತ್ಯೇಕಿಸಿದ್ದೇನೆ; ಆದ್ದರಿಂದ ನೀವು ನನಗೆ ಮೀಸಲಾಗಿರಬೇಕು.


ನಿಮ್ಮ ಪಿತೃಗಳನ್ನು ಪ್ರೀತಿಸಿ, ತರುವಾಯ ಅವರ ಸಂತತಿಯಾದ ನಿಮ್ಮನ್ನೂ ಆರಿಸಿಕೊಂಡರು.


ಸರ್ವೇಶ್ವರನ ದಯೆ ನಿಮ್ಮನ್ನು ಸ್ವಕೀಯ ಜನರನ್ನಾಗಿ ಆರಿಸಿಕೊಂಡ ಮೇಲೆ, ಅವರು ತಮ್ಮ ಮಹೋನ್ನತ ನಾಮದ ನಿಮಿತ್ತ, ನಿಮ್ಮನ್ನು ಖಂಡಿತವಾಗಿ ಕೈಬಿಡುವುದಿಲ್ಲ.


ಇಸ್ರಯೇಲರಲ್ಲಿ ಸಾಧಾರಣಜನರು, ಯಾಜಕರು, ಲೇವಿಯರು ತಮಗೆ ಹಾಗು ತಮ್ಮ ಗಂಡುಮಕ್ಕಳಿಗೆ ಅವರಿಂದ ಹೆಣ್ಣುಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ದೇವಕುಲವು ಅನ್ಯದೇಶಗಳವರೊಡನೆ ಮಿಶ್ರವಾಗುತ್ತಿದೆ; ನಾಯಕರೇ, ಮುಖ್ಯಸ್ಥರೇ, ಈ ದ್ರೋಹಕ್ಕೆ ಮುಂದಾಳುಗಳಾಗುತ್ತಿದ್ದಾರೆ,” ಎಂದು ತಿಳಿಸಿದರು.


ಜುದೇಯ ಆಯಿತಾತನಿಗೆ ದೇವಾಲಯ I ಇಸ್ರಯೇಲ್ ಆಯಿತಾತನಿಗೆ ಸ್ವರಾಜ್ಯ II


ಆಯ್ದುಕೊಂಡನಾತ ಯಕೋಬ್ಯ ವಂಶವನು I ಸ್ವಕೀಯ ಜನರನ್ನಾಗಿ ಇಸ್ರಯೇಲರನು II


ಇಂತಿರಲು ನನ್ನ ದಾಸನಾದ ಇಸ್ರಯೇಲೇ, ನಾನು ಆಯ್ದುಕೊಂಡ ಯಕೋಬೇ, ನನ್ನ ಗೆಳೆಯ ಅಬ್ರಹಾಮನ ಸಂತತಿಯೇ,


ಸರ್ವೇಶ್ವರ ದೇವರು ಇಂತೆನ್ನುತ್ತಾರೆ - ನಾನು ಇಸ್ರಯೇಲರನ್ನು ಆರಿಸಿಕೊಂಡ ದಿನದಂದು ಯಕೋಬ ಸಂತಾನದವರಿಗೆ ಮಾತುಕೊಟ್ಟು, ‘ನಾನೇ ನಿಮ್ಮ ದೇವರಾದ ಸರ್ವೇಶ್ವರ’ ಎಂದು ಈಜಿಪ್ಟ್ ದೇಶದಲ್ಲಿ ಪ್ರಮಾಣಪೂರ್ವಕವಾಗಿ ತಿಳಿಯಪಡಿಸಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು