Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 7:7 - ಕನ್ನಡ ಸತ್ಯವೇದವು C.L. Bible (BSI)

7 “ನೀವು ಸಂಖ್ಯೆಯಲ್ಲಿ ಜನಾಂಗಗಳಿಗೆಲ್ಲಾ ಹೆಚ್ಚುಮಂದಿ ಎಂದು ಪ್ರೀತಿಸಿ, ಆಯ್ದುಕೊಳ್ಳಲಿಲ್ಲ; ನಿಜವಾಗಿಯೂ ನೀವು ಎಲ್ಲಾ ಜನಾಂಗಗಳಿಗಿಂತ ಅಲ್ಪಸಂಖ್ಯಾತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನಿಮ್ಮನ್ನು ಎಲ್ಲಾ ಜನಾಂಗಗಳಲ್ಲಿ ಹೆಚ್ಚು ಜನರು ಎಂದು ಇಷ್ಟಪಟ್ಟು ಆರಿಸಿಕೊಳ್ಳಲಿಲ್ಲ; ನೀವು ಎಲ್ಲಾ ಜನಾಂಗಗಳಿಗಿಂತಲೂ ಅಲ್ಪಸಂಖ್ಯಾತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನಿಮ್ಮನ್ನು ಎಲ್ಲಾ ಜನಾಂಗಗಳಲ್ಲಿ ಹೆಚ್ಚು ಮಂದಿ ಎಂದು ಇಷ್ಟಪಟ್ಟು ಆದುಕೊಳ್ಳಲಿಲ್ಲ; ನೀವು ಎಲ್ಲಾ ಜನಾಂಗಗಳಿಗಿಂತಲೂ ಸ್ವಲ್ಪಮಂದಿಯಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ದೇವರು ನಿಮ್ಮನ್ನೇ ಯಾಕೆ ಪ್ರೀತಿಸಿ ಆರಿಸಿಕೊಂಡನು? ನೀವು ದೊಡ್ಡ ಜನಾಂಗವಾಗಿರುವ ಕಾರಣದಿಂದಲ್ಲ, ನಿಜವಾಗಿಯೂ ನೀವು ಚಿಕ್ಕ ಜನಾಂಗವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನೀವು ಎಲ್ಲಾ ಜನರಿಗಿಂತ ಹೆಚ್ಚಾಗಿರುವ ಕಾರಣ ಯೆಹೋವ ದೇವರು ನಿಮ್ಮನ್ನು ಪ್ರೀತಿಸಿ ಆರಿಸಿಕೊಳ್ಳಲಿಲ್ಲ. ನೀವು ಎಲ್ಲಾ ಜನರಿಗಿಂತ ಸಂಖ್ಯಾತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 7:7
22 ತಿಳಿವುಗಳ ಹೋಲಿಕೆ  

ನಿಮ್ಮ ಪಿತೃಗಳು, ಎಪ್ಪತ್ತುಮಂದಿ ಮಾತ್ರ. ಈಜಿಪ್ಟ್ ದೇಶಕ್ಕೆ ಹೋದರು; ಈಗಲಾದರೋ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ಆಕಾಶದ ನಕ್ಷತ್ರಗಳಷ್ಟು ಅಸಂಖ್ಯರಾಗುವಂತೆ ಮಾಡಿದ್ದಾರೆ.


ಅವರು ಆಯ್ಕೆಯಾದುದು ತಮ್ಮ ಸತ್ಕಾರ್ಯಗಳ ಆಧಾರದಿಂದಲ್ಲ, ದೈವಾನುಗ್ರಹದಿಂದಲೇ. ಇಲ್ಲದಿದ್ದರೆ, ದೈವಾನುಗ್ರಹ ನಿಜವಾಗಿ ದೈವಾನುಗ್ರಹ ಎನಿಸಿಕೊಳ್ಳುತ್ತಿರಲಿಲ್ಲ.


ನಾವು ದೇವರನ್ನು ಪ್ರೀತಿಸಿದ್ದರಲ್ಲಿ ಅಲ್ಲ, ಅವರು ನಮ್ಮನ್ನು ಪ್ರೀತಿಸಿ ನಮ್ಮ ಪಾಪನಿವಾರಣಾರ್ಥವಾಗಿ ತಮ್ಮ ಪುತ್ರನನ್ನು ಕಳುಹಿಸಿದ್ದರಲ್ಲಿಯೇ ಪ್ರೀತಿಯ ನಿಜಗುಣ ತೋರಿಬರುತ್ತದೆ.


ಒಂದೇ ಮಣ್ಣಿನ ಮುದ್ದೆಯಿಂದ ಎರಡು ಕುಡಿಕೆಗಳನ್ನು ಅಂದರೆ ಒಂದನ್ನು ವಿಶೇಷ ಬಳಕೆಗೂ ಇನ್ನೊಂದನ್ನು ಸಾಮಾನ್ಯ ಬಳಕೆಗೂ ಮಾಡುವ ಅಧಿಕಾರ ಕುಂಬಾರನಿಗೆ ಇಲ್ಲವೆ?


ನಮಗಲ್ಲ ಹೇ ಪ್ರಭು, ನಮಗಲ್ಲ ಮಹಿಮೆ I ನಿನ್ನ ನಾಮಕೇ ಸಲ್ಲಲಿ ಆ ಮಹಿಮೆ I ನಿನ್ನ ನೀತಿ ಸತ್ಯತೆಗಳ ನಿಮಿತ್ತವೆ II


ದೇವರ ಇಚ್ಛೆಗೆ ಅನುಗುಣವಾಗಿ ಮಾನವರಿಗೆ ಕರುಣೆಯೂ ಲಭಿಸುತ್ತದೆ, ಕಾಠಿಣ್ಯವೂ ಲಭಿಸುತ್ತದೆ.


“ಪುಟ್ಟಮಂದೆಯೇ, ಭಯಪಡಬೇಡ. ನಿನ್ನ ತಂದೆ ತಮ್ಮ ಸಾಮ್ರಾಜ್ಯವನ್ನು ನಿನಗೆ ನೀಡಲು ಇಷ್ಟಪಟ್ಟಿದ್ದಾರೆ.


ಅಮರ ಜೀವಕ್ಕೆ ಕೊಂಡೊಯ್ಯುವ ಮಾರ್ಗ ದುರ್ಭರ, ಅದರ ಬಾಗಿಲು ಕಿರಿದು; ಅದನ್ನು ಗುರುತಿಸುವವರೋ ಕೆಲವರು.”


ನೆನೆಯಿರಿ ನಿಮ್ಮ ಮೂಲಪುರುಷ ಅಬ್ರಹಾಮನನು ಅವನ ಸತಿ ಸಾರಳನು. ಅಬ್ರಹಾಮನನ್ನು ನಾ ಕರೆದಾಗ ಆತನು ಒಬ್ಬಂಟಿಗನು ಆಶೀರ್ವಾದದಿ ನಾ ಬೆಳೆಸಿದೆ ಆತನ ಸಂತಾನವನು.


ನಾವು ದೇವರ ಮಕ್ಕಳು ಎನಿಸಿಕೊಂಡಿರಬೇಕಾದರೆ ಪಿತನು ನಮ್ಮನ್ನು ಎಷ್ಟಾಗಿ ಪ್ರೀತಿಸುತ್ತಾರೆಂಬುದನ್ನು ಗಮನಿಸಿರಿ. ನಿಜಕ್ಕೂ ನಾವು ದೇವರ ಮಕ್ಕಳೇ. ಲೋಕವು ಅವರನ್ನು ಅರಿತುಕೊಳ್ಳಲಿಲ್ಲವಾದ ಕಾರಣ ನಾವು ಎಂಥವರೆಂದು ಅದು ಅರಿತಿಲ್ಲ.


ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ಸಂಖ್ಯೆಯಲ್ಲಿ ಹೆಚ್ಚಿಸಿದ್ದಾರೆ; ನೀವು ಆಕಾಶದ ನಕ್ಷತ್ರಗಳಷ್ಟಾಗಿದ್ದೀರಿ;


ನಿಮ್ಮ ಪಿತೃಗಳನ್ನು ಪ್ರೀತಿಸಿ, ತರುವಾಯ ಅವರ ಸಂತತಿಯಾದ ನಿಮ್ಮನ್ನೂ ಆರಿಸಿಕೊಂಡರು.


ಅಲ್ಪಸಂಖ್ಯಾತರೂ ಆಗಂತುಕರೂ ಅವರಾಗಿರಲು I ನಾಡಿಂದ ನಾಡಿಗೆ ರಾಜ್ಯದಿಂದ ರಾಜ್ಯಕ್ಕೆ ಅಲೆಯುತ್ತಿರಲು II


ನಾಡ ಗೆದ್ದುದು ನಮ್ಮವರ ಕತ್ತಿಯಲ್ಲ I ಜಯ ದೊರೆತದು ತಮ್ಮ ಭುಜಬಲದಿಂದಲ್ಲ II ಜಯ ತಂದಿತು ನಿನ್ನ ಬಲಹಸ್ತ, ನಿನ್ನ ಮುಖಕಾಂತಿ I ನಿನ್ನ ಭುಜಬಲ, ನೀ ತೋರಿದಾ ಅಚಲಪ್ರೀತಿ II


ಅಲ್ಪಸಂಖ್ಯಾತರೂ ಆಗಂತುಕರೂ ಅವರಾಗಿರಲು I ನಾಡಿಂದ ನಾಡಿಗೆ ರಾಜ್ಯದಿಂದ ರಾಜ್ಯಕೆ ಅಲೆಯುತ್ತಿರಲು II


ಆ ಜನರ ಕಷ್ಟದುಃಖಗಳಲ್ಲಿ ಸಂರಕ್ಷಿಸಿದರು. ದಯೆಯಿಂದಲೂ ಪ್ರೀತಿಯಿಂದಲೂ ಅವರಿಗೆ ಬಿಡುಗಡೆ ನೀಡಿದರು. ಪುರಾತನ ಕಾಲದಲ್ಲೆಲ್ಲಾ ಅವರನ್ನು ಎತ್ತಿ ಹೊತ್ತು ಆದರಿಸಿದರು.


“ಆದಕಾರಣ - ನೀನು ಇಸ್ರಯೇಲ್ ವಂಶದವರಿಗೆ ಹೀಗೆ ನುಡಿ - ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಇಸ್ರಯೇಲ್ ವಂಶದವರೇ, ನಿಮ್ಮ ನಿಮಿತ್ತವಲ್ಲ, ನೀವು ಜನಾಂಗಗಳೊಳಗೆ ಸೇರಿ ಅಪಕೀರ್ತಿಗೆ ಗುರಿಮಾಡಿದ ನನ್ನ ಪರಿಶುದ್ಧ ನಾಮದ ನಿಮಿತ್ತವೆ, ಈ ರಕ್ಷಣಾಕಾರ್ಯವನ್ನು ಮಾಡುತ್ತೇನೆ.


ಏಕೆಂದರೆ ನೀವು ನಿಮ್ಮ ದೇವರಾದ ಸರ್ವೇಶ್ವರನಿಗೆ ಮೀಸಲು ಜನ. ಅವರು ಜಗದಲ್ಲಿರುವ ಸಮಸ್ತಜನಾಂಗಗಳಲ್ಲಿ ನಿಮ್ಮನ್ನೇ ಸ್ವಕೀಯಜನರಾಗುವುದಕ್ಕೆ ಆರಿಸಿಕೊಂಡಿದ್ದಾರೆ.


ನೆನೆಯಿರಿ ಆತನದ್ಭುತಗಳನು, ಮಹತ್ಕಾರ್ಯಗಳನು I ಆತನ ವದನ ವಿಧಿಸಿದಾ ನ್ಯಾಯನಿರ್ಣಯಗಳನು II


ಸರ್ವೇಶ್ವರ ದೇವರು ಇಂತೆನ್ನುತ್ತಾರೆ - ನಾನು ಇಸ್ರಯೇಲರನ್ನು ಆರಿಸಿಕೊಂಡ ದಿನದಂದು ಯಕೋಬ ಸಂತಾನದವರಿಗೆ ಮಾತುಕೊಟ್ಟು, ‘ನಾನೇ ನಿಮ್ಮ ದೇವರಾದ ಸರ್ವೇಶ್ವರ’ ಎಂದು ಈಜಿಪ್ಟ್ ದೇಶದಲ್ಲಿ ಪ್ರಮಾಣಪೂರ್ವಕವಾಗಿ ತಿಳಿಯಪಡಿಸಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು