Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 8:12 - ಕನ್ನಡ ಸತ್ಯವೇದವು C.L. Bible (BSI)

12 ನೀವು ಹೊಟ್ಟೆ ತುಂಬ ಉಂಡು, ಸುಖವಾಗಿದ್ದು, ಒಳ್ಳೊಳ್ಳೆಯ ಮನೆಗಳನ್ನು ಕಟ್ಟಿಸಿಕೊಂಡು, ಅವುಗಳಲ್ಲಿ ವಾಸವಾಗಿರುವ ಕಾಲದಲ್ಲಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನೀವು ಹೊಟ್ಟೆತುಂಬಾ ಊಟಮಾಡಿ, ಸುಖವಾಗಿದ್ದು ಒಳ್ಳೇ ಮನೆಗಳನ್ನು ಕಟ್ಟಿಸಿಕೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನೀವು ಹೊಟ್ಟೆತುಂಬಾ ಉಂಡು ಸುಖವಾಗಿದ್ದು ಒಳ್ಳೇ ಮನೆಗಳನ್ನು ಕಟ್ಟಿಸಿಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆಗ ನಿಮಗೆ ಸಮೃದ್ಧಿಯಾಗಿ ಆಹಾರವಿರುವುದು. ನೀವು ಒಳ್ಳೆಯ ಮನೆಗಳನ್ನು ಕಟ್ಟಿಕೊಂಡು ವಾಸಿಸುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ನೀವು ತಿಂದು ತೃಪ್ತಿಹೊಂದಿ, ಒಳ್ಳೆಯ ಮನೆಗಳನ್ನು ಕಟ್ಟಿ ಅವುಗಳಲ್ಲಿ ವಾಸಮಾಡುವಾಗಲೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 8:12
13 ತಿಳಿವುಗಳ ಹೋಲಿಕೆ  

ಎಲ್ಲವೂ ಇದ್ದರೆ “ಸರ್ವೇಶ್ವರನು ಯಾರು?” ಎಂದು ನಿನ್ನನ್ನೆ ನಾನು ತಿರಸ್ಕರಿಸೇನು. ಬಡವನಾದರೆ ಕಳ್ಳತನಮಾಡಿ ನನ್ನ ದೇವರಾದ ನಿನ್ನ ಹೆಸರಿಗೆ ಅಪಕೀರ್ತಿ ತಂದೇನು.


“ತೃಪ್ತಿಯಾಗಿ ತಿಂದನು ಯಕೋಬನು, ಕೊಬ್ಬಿಹೋದನು ಆ ಯೆಶೂರನು; ತೊರೆದುಬಿಟ್ಟನು ತನ್ನ ಪೊರೆಬಂಡೆಯನು ಮರೆತುಬಿಟ್ಟನು ತನ್ನ ಸೃಷ್ಟಿಕರ್ತನನು.


“ನಿಮಗೆ ಸರ್ವಸಮೃದ್ಧಿಯುಂಟಾದ ಕಾಲದಲ್ಲಿ ನೀವು ನಿಮ್ಮ ದೇವರಾದ ಸರ್ವೇಶ್ವರನಿಗೆ ಹರ್ಷಾನಂದದಿಂದ ಸೇವೆಮಾಡದೆಹೋದಿರಿ.


ಅಂತೆಯೇ, ಲೋತನ ಕಾಲದಲ್ಲೂ ನಡೆಯಿತು. ಜನರು ಅನ್ನಪಾನೀಯಗಳಲ್ಲಿ ಆಸಕ್ತರಾಗಿದ್ದರು; ಲೇವಾದೇವಿಯಲ್ಲಿ ತೊಡಗಿದ್ದರು; ನೆಡುವುದರಲ್ಲೂ ನಿರ್ಮಿಸುವುದರಲ್ಲೂ ನಿರತರಾಗಿದ್ದರು.


“ನನ್ನ ಆಲಯ ಹಾಳುಬಿದ್ದಿರುವಾಗ ನೀವು ಸೊಗಸಾದ ಹಲಗೆ ಹೊದಿಸಿದ ಮನೆಗಳಲ್ಲಿ ವಾಸಿಸುವುದು ಸರಿಯೋ?


ಬಡಬಗ್ಗರನ್ನು ತುಳಿಯುತ್ತೀರಿ; ಅವರ ದವಸಧಾನ್ಯಗಳನ್ನು ಕಸಿದುಕೊಳ್ಳುತ್ತೀರಿ. ಆದ್ದರಿಂದ ನೀವು ಕಟ್ಟಿರುವ ಕೆತ್ತನೆಯ ಕಲ್ಲುಮನೆಗಳಲ್ಲಿ ವಾಸಮಾಡಲಾರಿರಿ. ನೀವು ನೆಟ್ಟಿರುವ ಫಲಭರಿತ ದ್ರಾಕ್ಷಾಬಳ್ಳಿಗಳಿಂದ ರಸವನ್ನು ಕುಡಿಯಲಾರಿರಿ.


ಮಹತ್ಕಾರ್ಯಗಳನ್ನು ಎಸಗಿದೆ; ಮನೆಮಾರುಗಳನ್ನು ಕಟ್ಟಿಸಿಕೊಂಡೆ;


ನಾನು ಪ್ರಮಾಣಮಾಡಿ ಕೊಟ್ಟ ನಾಡಿಗೆ ಇವರು ಸೇರುವುದಕ್ಕಿಂತ ಮುಂಚಿತವಾಗಿಯೇ ಇವರು ಈಗಲೂ ಮಾಡುವ ದುರಾಲೋಚನೆಗಳನ್ನು ನಾನು ಬಲ್ಲೆ. ನಾನು ಇವರ ಪಿತೃಗಳಿಗೆ ಪ್ರಮಾಣಮಾಡಿದಂತೆ ಹಾಲೂ ಜೇನೂ ಹರಿಯುವ ನಾಡಿಗೆ ಇವರನ್ನು ಸೇರಿಸಿದ ಮೇಲೆ ಇವರು ಚೆನ್ನಾಗಿ ಉಂಡು ಕೊಬ್ಬಿದವರಾದಾಗ, ಇತರ ದೇವರುಗಳನ್ನು ಅವಲಂಬಿಸಿ, ಪೂಜಿಸಿ, ನನ್ನನ್ನು ತಾತ್ಸಾರಮಾಡಿ, ನನ್ನ ನಿಬಂಧನೆಯನ್ನು ಮೀರುವರು. ಅನಂತರ ಅನೇಕ ಕಷ್ಟಗಳೂ ವಿಪತ್ತುಗಳೂ ಸಂಭವಿಸಿದಾಗ ಈ ಗೀತೆ ಇವರ ಸಂತತಿಯವರ ಬಾಯಲ್ಲಿದ್ದು ಅವರ ಮುಂದೆ ಸಾಕ್ಷಿಕೊಡುವುದು,” ಎಂದು ಹೇಳಿದರು.


ಇವರು, ‘ಮನೆಗಳನ್ನು ಕಟ್ಟಿಕೊಳ್ಳುವ ಕಾಲವು ಬಂದಿಲ್ಲ; ಈ ಪಟ್ಟಣವು ಒಂದು ಹಂಡೆ, ನಾವು ಅದರಲ್ಲಿನ ಮಾಂಸ’ ಎಂದು ಹೇಳುತ್ತಾರೆ.


ನಿಮ್ಮ ದನಕರುಗಳು, ಆಡುಕುರಿಗಳು, ಬೆಳ್ಳಿಬಂಗಾರ ಹಾಗು ಆಸ್ತಿಯೆಲ್ಲವೂ ಹೆಚ್ಚುತ್ತಿರುವಾಗ,


“ನಿನ್ನ ಪಿತೃಗಳಾದ ಅಬ್ರಹಾಮ್, ಇಸಾಕ್, ಯಕೋಬರಿಗೆ ನಿನ್ನ ದೇವರಾದ ಸರ್ವೇಶ್ವರ ಪ್ರಮಾಣಮಾಡಿದ ನಾಡಿಗೆ ನಿನ್ನನ್ನು ಸೇರಿಸಿದಾಗ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು