Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 8:15 - ಕನ್ನಡ ಸತ್ಯವೇದವು C.L. Bible (BSI)

15-16 ಅವರು ನಿಮ್ಮನ್ನು ಕಷ್ಟಕ್ಕೆ ಒಳಪಡಿಸಿ ಪರೀಕ್ಷಿಸಿದ ನಂತರ ನಿಮಗೆ ಒಳಿತನ್ನು ಉಂಟುಮಾಡಬೇಕೆಂಬ ಉದ್ದೇಶದಿಂದ ಈಜಪ್ಟ್ ದೇಶದಲ್ಲಿ ಗುಲಾಮರಾಗಿದ್ದ ನಿಮ್ಮನ್ನು ಬಿಡುಗಡೆ ಮಾಡಿದರು. ವಿಷಸರ್ಪಗಳೂ ಚೇಳುಗಳೂ ಇದ್ದ ಆ ಘೋರವಾದ ಮಹಾಮರುಭೂಮಿಯನ್ನೂ ನೀರು ಬತ್ತಿಹೋಗಿದ್ದ ಭೂಮಿಗಳನ್ನೂ ದಾಟಿಸಿದರು; ಗಟ್ಟಿಯಾದ ಬಂಡೆಯೊಳಗಿಂದ ನೀರನ್ನು ಹೊರಡಿಸಿಕೊಟ್ಟರು. ನಿಮ್ಮ ಪೂರ್ವಿಕರಿಗೆ ತಿಳಿಯದೆ ಇದ್ದ ಮನ್ನವನ್ನು ಕೊಟ್ಟು ಪೋಷಿಸಿದರು. ಅಂಥವರನ್ನು ಮರೆತು ಮನಸ್ಸಿನಲ್ಲೇ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆತನು ಐಗುಪ್ತ ದೇಶದಲ್ಲಿ ದಾಸರಾಗಿದ್ದ ನಿಮ್ಮನ್ನು ಬಿಡುಗಡೆಮಾಡಿ, ವಿಷಸರ್ಪಗಳೂ ಮತ್ತು ಚೇಳುಗಳೂ ಇದ್ದ ಆ ಘೋರವಾದ ಮಹಾ ಅರಣ್ಯವನ್ನೂ, ನೀರು ಬತ್ತಿಹೋದ ಭೂಮಿಗಳನ್ನೂ ದಾಟಿಸಿದ್ದನ್ನು ಮತ್ತು ಗಟ್ಟಿಯಾದ ಬಂಡೆಯೊಳಗಿಂದ ನೀರು ಹೊರಡಿಸಿದ್ದನ್ನು ಮರೆಯಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15-16 ಆತನು ನಿಮ್ಮನ್ನು ಕಷ್ಟಕ್ಕೆ ಒಳಪಡಿಸಿ ಪರೀಕ್ಷಿಸಿದನಂತರ ನಿಮಗೆ ಮೇಲನ್ನುಂಟುಮಾಡಬೇಕೆಂಬ ಉದ್ದೇಶದಿಂದ ಐಗುಪ್ತದೇಶದಲ್ಲಿ ದಾಸರಾಗಿದ್ದ ನಿಮ್ಮನ್ನು ಬಿಡುಗಡೆಮಾಡಿ ವಿಷಸರ್ಪಗಳೂ ಚೇಳುಗಳೂ ಇದ್ದ ಆ ಘೋರವಾದ ಮಹಾರಣ್ಯವನ್ನೂ ನೀರು ಬತ್ತಿಹೋದ ಭೂವಿುಗಳನ್ನೂ ದಾಟಿಸಿ ಗಟ್ಟಿಯಾದ ಬಂಡೆಯೊಳಗಿಂದ ನೀರನ್ನು ಹೊರಡಿಸಿಕೊಟ್ಟು ನಿಮ್ಮ ಪೂರ್ವಿಕರಿಗೆ ತಿಳಿಯದೆ ಇದ್ದ ಮನ್ನವನ್ನು ಕೊಟ್ಟು ಪೋಷಿಸಿದಾತನನ್ನು ನೀವು ಮರೆತು ಮನಸ್ಸಿನೊಳಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಆತನು ನಿಮ್ಮನ್ನು ಭಯಂಕರವಾದ ಆ ಅಡವಿಯಲ್ಲಿ ಮೊದಲು ನಡೆಸಿದನು. ಅಲ್ಲಿ ವಿಷದ ಹಾವುಗಳು, ಚೇಳುಗಳು ಇದ್ದವು. ನೆಲವು ಕಾದಿದ್ದು ಎಲ್ಲಿಯೂ ನೀರು ಸಿಗುತ್ತಿರಲಿಲ್ಲ. ಆದರೆ ನಿಮ್ಮ ದೇವರಾದ ಯೆಹೋವನು ಬಂಡೆಯೊಳಗಿಂದ ನೀರನ್ನು ನಿಮಗೆ ಒದಗಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ದೇವರು ಅಗ್ನಿಸರ್ಪಗಳೂ, ಚೇಳುಗಳೂ ತುಂಬಿದ ಮತ್ತು ನೀರಿಲ್ಲದ ಆ ಭಯಂಕರವಾದ ವಿಶಾಲ ಮರುಭೂಮಿಯಲ್ಲಿ ನಿಮ್ಮನ್ನು ನಡೆಸಿ, ಗಟ್ಟಿಯಾದ ಬಂಡೆಯೊಳಗಿಂದ ನಿಮಗೆ ನೀರು ಬರಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 8:15
16 ತಿಳಿವುಗಳ ಹೋಲಿಕೆ  

ಅದಕ್ಕೆ ಸರ್ವೇಶ್ವರ ವಿಷಸರ್ಪಗಳನ್ನು ಅವರ ನಡುವೆ ಬರಮಾಡಿದರು. ಅವು ಆ ಜನರನ್ನು ಕಚ್ಚಿದವು. ಬಹುಜನ ಸತ್ತುಹೋದರು.


ಕೈಯೆತ್ತಿ ತನ್ನ ಕೈಯಲ್ಲಿದ್ದ ಕೋಲಿನಿಂದ ಆ ಬಂಡೆಯನ್ನು ಎರಡು ಸಾರಿ ಹೊಡೆದನು. ನೀರು ಪ್ರವಾಹವಾಗಿ ಹೊರಟಿತು. ಜನಸಮೂಹದವರೂ ಅವರ ಜಾನುವಾರಗಳೂ ಕುಡಿದರು.


ಅವರು - ‘ನಮ್ಮನ್ನು ಈಜಿಪ್ಟ್ ದೇಶದಿಂದ ಬರಮಾಡಿ, ಕಾಡುಮೇಡು, ಹಳ್ಳಕೊಳ್ಳ, ಕಗ್ಗತ್ತಲು, ನಿರ್ಜಲ, ನಿರ್ಜನ ಹಾಗೂ ಯಾರೂ ಹಾದುಹೋಗದ ಬೆಂಗಾಡಿನ ಮಾರ್ಗವಾಗಿ ನಡೆಸಿಬಂದ ಆ ಸರ್ವೇಶ್ವರ ಎಲ್ಲಿ?’ ಎಂದುಕೊಳ್ಳಲಿಲ್ಲವೆ?


ಮಾರ್ಪಡಿಸಿಹನು ಗೋರ್ಕಲ್ಲನು ಕೊಳವಾಗಿ I ಕಲ್ಲು ಬಂಡೆಯನು ನೀರಿನ ಬುಗ್ಗೆಯಾಗಿ II


“ನಾವು ಹೋರೇಬಿನಿಂದ ಹೊರಟು ನಮ್ಮ ದೇವರಾದ ಸರ್ವೇಶ್ವರ ಆಜ್ಞಾಪಿಸಿದಂತೆ ಅಮೋರಿಯರ ಮಲೆನಾಡಿನ ಮಾರ್ಗವನ್ನು ಹಿಡಿದು, ನೀವು ನೋಡಿದ ಆ ಘೋರ ಮಹಾ ಅರಣ್ಯದಲ್ಲಿ ನಡೆದು, ಕಾದೇಶ್ ಬರ್ನೇಯಕ್ಕೆ ಸೇರಿದೆವು.


ಬೆಂಗಾಡಿನಲ್ಲಿ, ಘೋರ ಮರುಭೂಮಿಯಲ್ಲಿ ನಿನ್ನನ್ನು ಕಾಪಾಡಿದವನು ನಾನೇ.


ಅದೂ ತಮ್ಮೊಡನೆ ಬರುತ್ತಿದ್ದ ದೈವಿಕ ಬಂಡೆಯಿಂದ ಕುಡಿದರು. ಕ್ರಿಸ್ತಯೇಸುವೇ ಆ ಬಂಡೆ.


ಸರೋವರವಾಗುವುದಾ ಉರಿಗಾಡು ಬುಗ್ಗೆಯಾಗುವುದಾ ಬುವಿ ಬರಡು. ನರಿಗಳು ನಿವಾಸಿಸುವ ಗುಹೆಗಳು ಆಗುವುವು ಹುಲುಸಾದ ಹುಲ್ಲುಗಾವಲುಗಳು.


ತನ್ನ ಪ್ರಜೆಯನು ಅರಣ್ಯಮಾರ್ಗವಾಗಿ ಕರೆತಂದವನಿಗೆ ಧನ್ಯವಾದ, ಆತನ ಪ್ರೀತಿ ಶಾಶ್ವತ.


ಬಂಡೆಯನಾತ ಸೀಳಲು ನೀರು ಹರಿದು ಬಂದಿತು I ನಿರ್ಜಲ ಪ್ರದೇಶದಲದು ನದಿಯಾಗಿ ಹರಿಯಿತು II


ಹತ್ತಿಸಿದವರನು ಎತ್ತರದ ಪ್ರದೇಶಗಳಿಗೆ ಇತ್ತನವರಿಗೆ ಅಲ್ಲಿಯೆ ಬೆಳೆದ ಪೈರುಫಸಲನೆ. ಗಿಟ್ಟಿತವರಿಗೆ ಗುಡ್ಡದ ಜೇನು, ಗಿರಿಯ ಎಣ್ಣೆಯು.


ನೆಗೇಬಿನ ಮೃಗಗಳನ್ನು ಕುರಿತ ದೈವವಾಣಿ : ಸಿಂಹಸಿಂಹಿಣಿಗಳಿಂದಲೂ ವಿಷಸರ್ಪ - ಘಟಸರ್ಪಗಳಿಂದಲೂ ಕೂಡಿದ ಭಯಂಕರ ಹಾಗೂ ಸಂಕಟಕರವಾದ ಆ ನಾಡಿನ ಮಾರ್ಗವಾಗಿ ತಮ್ಮ ಧನಕನಕಗಳನ್ನು ಕತ್ತೆಗಳ ಮೇಲೂ ಆಸ್ತಿಪಾಸ್ತಿಗಳನ್ನು ಒಂಟೆಗಳ ಮೇಲೂ ಹೊರಿಸಿಕೊಂಡು ನಿಷ್ಪ್ರಯೋಜಕವಾದ ಆ ರಾಷ್ಟ್ರಕ್ಕೆ ಹೋಗುತ್ತಾರೆ.


ಇಗೋ, ನೂತನ ಕಾರ್ಯವನು ನಾನೆಸಗುವೆ ಈಗಲೇ ಅದು ತಲೆದೋರುತಲಿದೆ, ನಿಮಗೆ ಕಾಣುವುದಿಲ್ಲವೇ? ಮಾರ್ಗವನ್ನು ಏರ್ಪಡಿಸುವೆ ಮರುಭೂಮಿಯಲಿ, ಹರಿಸುವೆ ತೊರೆಗಳನ್ನು ಅರಣ್ಯದಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು