Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 8:19 - ಕನ್ನಡ ಸತ್ಯವೇದವು C.L. Bible (BSI)

19 ನೀವು ನಿಮ್ಮ ದೇವರಾದ ಸರ್ವೇಶ್ವರನನ್ನು ಮರೆತು, ಇತರ ದೇವರುಗಳನ್ನು ಅವಲಂಬಿಸಿ, ಪೂಜಿಸಿದರೆ ನೀವು ತಪ್ಪದೆ ನಾಶವಾಗಿಹೋಗುವಿರೆಂದು ನಿಮ್ಮನ್ನು ಈಗ ಖಂಡಿತವಾಗಿ ಎಚ್ಚರಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ನೀವು ನಿಮ್ಮ ದೇವರಾದ ಯೆಹೋವನನ್ನು ಮರೆತು, ಇತರ ದೇವರುಗಳನ್ನು ಅವಲಂಬಿಸಿ ಪೂಜಿಸಿದರೆ ನೀವು ತಪ್ಪದೆ ನಾಶವಾಗಿ ಹೋಗುವಿರೆಂದು ನಿಮ್ಮನ್ನು ಈಗ ಖಂಡಿತವಾಗಿ ಎಚ್ಚರಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ನೀವು ನಿಮ್ಮ ದೇವರಾದ ಯೆಹೋವನನ್ನು ಮರೆತು ಇತರ ದೇವರುಗಳನ್ನು ಅವಲಂಬಿಸಿ ಪೂಜಿಸಿದರೆ ನೀವು ತಪ್ಪದೆ ನಾಶವಾಗಿ ಹೋಗುವಿರೆಂದು ನಿಮ್ಮನ್ನು ಈಗ ಖಂಡಿತವಾಗಿ ಎಚ್ಚರಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 “ನಿಮ್ಮ ದೇವರಾದ ಯೆಹೋವನನ್ನು ಮರೆತುಬಿಡಬೇಡಿ. ಅನ್ಯದೇವರುಗಳನ್ನು ಅನುಸರಿಸಬೇಡಿ. ಅವುಗಳನ್ನು ಪೂಜಿಸಬೇಡಿ; ಅವುಗಳ ಸೇವೆ ಮಾಡಬೇಡಿ. ಇಲ್ಲವಾದರೆ ನೀವು ಖಂಡಿತವಾಗಿ ನಾಶವಾಗುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಒಂದು ವೇಳೆ ನೀವು ನಿಮ್ಮ ಯೆಹೋವ ದೇವರನ್ನು ಮರೆತು, ಬೇರೆ ದೇವರುಗಳನ್ನು ಹಿಂಬಾಲಿಸಿ, ಅವುಗಳನ್ನು ಸೇವಿಸಿ, ಅವುಗಳಿಗೆ ಅಡ್ಡಬಿದ್ದರೆ, ನಿಶ್ಚಯವಾಗಿ ನಾಶವಾಗುವಿರೆಂದು ನಿಮಗೆ ವಿರೋಧವಾಗಿ ಈ ಹೊತ್ತು ಸಾಕ್ಷಿ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 8:19
18 ತಿಳಿವುಗಳ ಹೋಲಿಕೆ  

ಇಗೋ, ಇಂದೇ ನಿಮಗೆ ವಿರುದ್ಧ ಭೂಮ್ಯಾಕಾಶಗಳನ್ನು ಸಾಕ್ಷಿಗಳಾಗಿಟ್ಟು ಹೇಳುತ್ತಿದ್ದೇನೆ: ನೀವು ಜೋರ್ಡನ್ ನದಿಯನ್ನು ದಾಟಿ ಸ್ವಾಧೀನಮಾಡಿಕೊಳ್ಳುವ ಆ ನಾಡಿನಲ್ಲಿ ಉಳಿಯದೆ ಬೇಗನೆ ನಾಶವಾಗಿ ಹೋಗುವಿರಿ.


ಹಾಗಲ್ಲ, ನೀವು ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖರಾಗಿ ದೇವರಿಗೆ ಅಭಿಮುಖರಾಗದಿದ್ದರೆ, ಅವರ ಹಾಗೆಯೇ ನೀವೂ ನಾಶವಾಗುವಿರಿ,” ಎಂದರು.


ಹಾಗೆ ಭಾವಿಸಕೂಡದು. ನೀವು ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖರಾಗಿ ದೇವರಿಗೆ ಅಭಿಮುಖರಾಗದೆಹೋದರೆ, ಅವರ ಹಾಗೆಯೇ ನೀವೂ ನಾಶವಾಗುವಿರಿ.


ಸರ್ವೇಶ್ವರ ಇಂತೆನ್ನುತ್ತಾರೆ: “ನಾನು ರಾಷ್ಟ್ರಗಳನ್ನು ಧ್ವಂಸಮಾಡಿದ್ದೇನೆ. ಅವುಗಳ ಕೋಟೆಕೊತ್ತಲಗಳು ಪಾಳುಬಿದ್ದಿವೆ. ಅವುಗಳ ಹಾದಿಬೀದಿಗಳನ್ನು ನಿರ್ಜನವಾಗಿಸಿದ್ದೇನೆ. ಯಾರೂ ಅವುಗಳಲ್ಲಿ ಹಾದುಹೋಗುವಂತಿಲ್ಲ. ಅವರ ಪಟ್ಟಣಗಳು ನಾಶವಾಗಿವೆ; ನಿರ್ನಿವಾಸವಾಗಿ ಶೂನ್ಯವಾಗಿವೆ.


ಸ್ವಾಮಿಯ ಆ ರೌದ್ರದಿನದಂದು, ಅವರ ಬೆಳ್ಳಿಯಾಗಲೀ ಬಂಗಾರವಾಗಲೀ ಅವರನ್ನು ರಕ್ಷಿಸಲಾರದು. ಸ್ವಾಮಿಯ ರೋಷಾಗ್ನಿ ಧರೆಯನ್ನೆಲ್ಲಾ ದಹಿಸಿಬಿಡುವುದು; ಹೌದು, ಭೂನಿವಾಸಿಗಳೆಲ್ಲರನ್ನೂ ತಟ್ಟನೆ ಕೊನೆಗಾಣಿಸುವುದು.


“ಜಗದ ಜನಾಂಗಗಳಲ್ಲಿ ನನಗೆ ಆಪ್ತರಾದವರೆಂದರೆ ನೀವು. ಆದಕಾರಣ ನೀವು ಮಾಡಿರುವ ಎಲ್ಲಾ ಪಾಪಗಳಿಗೆ ತಕ್ಕ ಪ್ರಾಯಶ್ಚಿತ್ತವನ್ನು ಸವಿಯುವಂತೆ ಮಾಡುವೆನು.”


ದಾನಿಯೇಲನಾದ ನಾನು ಪವಿತ್ರಗ್ರಂಥಗಳನ್ನು ಪರೀಕ್ಷಿಸಿ, ಸರ್ವೇಶ್ವರಸ್ವಾಮಿ ಪ್ರವಾದಿ ಯೆರೆಮೀಯನಿಗೆ ದಯಪಾಲಿಸಿದ ವಾಕ್ಯಾನುಸಾರ ಜೆರುಸಲೇಮ್ ಪಾಳುಬಿದ್ದಿರಬೇಕಾದ ಪೂರ್ಣಕಾಲಾವಧಿ ಎಪ್ಪತ್ತು ವರ್ಷಗಳೆಂದು ತಿಳಿದುಕೊಂಡೆ.


ನೀವು ದ್ರೋಹಿಗಳಾಗಿಯೇ ಇದ್ದರೆ ನಿಮ್ಮ ಅರಸನ ಸಮೇತ ನಾಶವಾಗುವಿರಿ,” ಎಂದು ಹೇಳಿದನು.


ಮಿಶ್ರವಾದರೆ ನಿಮ್ಮ ದೇವರಾದ ಸರ್ವೇಶ್ವರ ಅವರನ್ನು ನಿಮ್ಮ ಮಧ್ಯೆಯಿಂದ ಹೊರಡಿಸುವುದೇ ಇಲ್ಲವೆಂಬುದು ನಿಮಗೆ ತಿಳಿದಿರಲಿ. ಆ ಜನರೇ ನಿಮಗೆ ಉರುಳೂ ಬೋನೂ ಆಗುವರು; ಪಕ್ಕೆಗೆ ಬಡಿಯುವ ಕೊರಡಾಗಿಯೂ ಇರಿಯುವ ಶೂಲವಾಗಿಯೂ ಕಣ್ಣಿಗೆ ಚುಚ್ಚುವ ಮುಳ್ಳಾಗಿಯೂ ಮಾರ್ಪಡುವರು. ಕಡೆಗೆ ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಕೊಟ್ಟ ಈ ಚೆಲುವ ನಾಡಲ್ಲಿ ನೀವೇ ಇಲ್ಲದಂತಾಗುವಿರಿ.


ನಾನು ಪ್ರಮಾಣಮಾಡಿ ಕೊಟ್ಟ ನಾಡಿಗೆ ಇವರು ಸೇರುವುದಕ್ಕಿಂತ ಮುಂಚಿತವಾಗಿಯೇ ಇವರು ಈಗಲೂ ಮಾಡುವ ದುರಾಲೋಚನೆಗಳನ್ನು ನಾನು ಬಲ್ಲೆ. ನಾನು ಇವರ ಪಿತೃಗಳಿಗೆ ಪ್ರಮಾಣಮಾಡಿದಂತೆ ಹಾಲೂ ಜೇನೂ ಹರಿಯುವ ನಾಡಿಗೆ ಇವರನ್ನು ಸೇರಿಸಿದ ಮೇಲೆ ಇವರು ಚೆನ್ನಾಗಿ ಉಂಡು ಕೊಬ್ಬಿದವರಾದಾಗ, ಇತರ ದೇವರುಗಳನ್ನು ಅವಲಂಬಿಸಿ, ಪೂಜಿಸಿ, ನನ್ನನ್ನು ತಾತ್ಸಾರಮಾಡಿ, ನನ್ನ ನಿಬಂಧನೆಯನ್ನು ಮೀರುವರು. ಅನಂತರ ಅನೇಕ ಕಷ್ಟಗಳೂ ವಿಪತ್ತುಗಳೂ ಸಂಭವಿಸಿದಾಗ ಈ ಗೀತೆ ಇವರ ಸಂತತಿಯವರ ಬಾಯಲ್ಲಿದ್ದು ಅವರ ಮುಂದೆ ಸಾಕ್ಷಿಕೊಡುವುದು,” ಎಂದು ಹೇಳಿದರು.


ಅನ್ಯರನ್ನಾಗಲಿ, ಅನಾಥರನ್ನಾಗಲಿ, ವಿಧವೆಯರನ್ನೇ ಆಗಲಿ ಶೋಷಣೆಗೆ ಗುರಿಪಡಿಸಬೇಡಿ! ಇಲ್ಲೆಲ್ಲೂ ನಿರ್ದೋಷಿಗಳ ರಕ್ತವನ್ನು ಸುರಿಸಬೇಡಿ. ನಿಮಗೆ ಹಾನಿಕರವಾದ ಅನ್ಯದೇವತಾ ಭಕ್ತಿಯನ್ನು ಬಿಟ್ಟುಬಿಡಿ.


ಬೇರೆ ದೇವರುಗಳನ್ನು ಹಿಂಬಾಲಿಸಿ, ಅವರನ್ನು ಸೇವಿಸಿ ಪೂಜಿಸಬೇಡಿ. ನಿಮ್ಮ ಕೈ ಕೃತಿಗಳಾದ ವಿಗ್ರಹಗಳನ್ನು ಆರಾಧಿಸಿ, ನನ್ನನ್ನು ರೇಗಿಸಬೇಡಿ. ಆಗ ನಾನು ನಿಮಗೆ ಯಾವ ಕೇಡನ್ನೂ ಮಾಡೆನು.’


“ನಾನು ನನ್ನ ದಾಸನಾದ ಮೋಶೆಗೆ ಬೋಧಿಸಿದ ಧರ್ಮಶಾಸ್ತ್ರವನ್ನು ಜ್ಞಾಪಕಕ್ಕೆ ತಂದುಕೊಳ್ಳಿ. ಆ ವಿಧಿನಿಯಮಗಳನ್ನು ಆತನಿಗೆ ಹೋರೇಬ್ ಬೆಟ್ಟದಲ್ಲಿ ಕೊಟ್ಟದ್ದು ಇಸ್ರಯೇಲರು ಅವುಗಳನ್ನು ಅನುಸರಿಸಲೆಂದೇ.”


ಆದರೆ ನೀವು ಎಚ್ಚರಿಕೆಯಿಂದಿರಬೇಕು; ಮರುಳುಗೊಂಡು ಸರ್ವೇಶ್ವರ ಹೇಳಿದ ಮಾರ್ಗವನ್ನು ಬಿಟ್ಟು, ಇತರ ದೇವರುಗಳನ್ನು ಅವಲಂಬಿಸಿ, ಪೂಜಿಸಿದರೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು