Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 8:3 - ಕನ್ನಡ ಸತ್ಯವೇದವು C.L. Bible (BSI)

3 ಮಾನವರು ಆಹಾರ ಮಾತ್ರದಿಂದಲ್ಲ, ಸರ್ವೇಶ್ವರ ಆಡುವ ಪ್ರತಿಯೊಂದು ಮಾತಿನಿಂದಲೂ ಜೀವಿಸುತ್ತಾರೆಂಬುದು ನಿಮಗೆ ತಿಳಿಯುವಂತೆ ಅವರು ನಿಮ್ಮನ್ನು ಕಷ್ಟಕ್ಕೆ ಒಳಪಡಿಸಿದರು. ಹಸಿವೆಯಿಂದ ಬಳಲಿಸಿದರು. ನಿಮಗೂ ನಿಮ್ಮ ಪೂರ್ವಿಕರಿಗೂ ಗೊತ್ತಿಲ್ಲದ ಮನ್ನವನ್ನು ಕೊಟ್ಟು ಪೋಷಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಮನುಷ್ಯರು ಆಹಾರದಿಂದ ಮಾತ್ರವಲ್ಲ, ಯೆಹೋವನ ಬಾಯಿಂದ ಹೊರಡುವ ಪ್ರತಿಯೊಂದು ನುಡಿಯಿಂದಲೂ ಬದುಕುತ್ತಾರೆ ಎಂಬುದು ನಿಮಗೆ ತಿಳಿಯುವಂತೆ ಆತನು ನಿಮ್ಮನ್ನು ಕಷ್ಟಕ್ಕೆ ಒಳಪಡಿಸಿ, ಹಸಿವೆಯಿಂದ ಬಳಲಿಸಿ, ನಿಮಗೂ, ನಿಮ್ಮ ಪೂರ್ವಿಕರಿಗೂ ಗೊತ್ತಿಲ್ಲದ ಮನ್ನವನ್ನು ಕೊಟ್ಟು ಪೋಷಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಮನುಷ್ಯರು ಆಹಾರಮಾತ್ರದಿಂದಲ್ಲ, ಯೆಹೋವನ ಬಾಯಿಂದ ಹೊರಡುವ ಪ್ರತಿಯೊಂದು ಮಾತಿನಿಂದಲೂ ಬದುಕುತ್ತಾರೆಂಬದು ನಿಮಗೆ ತಿಳಿಯುವಂತೆ ಆತನು ನಿಮ್ಮನ್ನು ಕಷ್ಟಕ್ಕೆ ಒಳಪಡಿಸಿ ಹಸಿವೆಯಿಂದ ಬಳಲಿಸಿ ನಿಮಗೂ ನಿಮ್ಮ ಪೂರ್ವಿಕರಿಗೂ ಗೊತ್ತಿಲ್ಲದ ಮನ್ನವನ್ನು ಕೊಟ್ಟು ಪೋಷಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಯೆಹೋವನು ನಿಮ್ಮನ್ನು ದೀನರನ್ನಾಗಿ ಮಾಡಿ ನಿಮಗೆ ಹಸಿವೆಯಾಗುವಂತೆ ಮಾಡಿದನು. ಆ ಬಳಿಕ ಮನ್ನದ ಮೂಲಕ ನಿಮ್ಮ ಹಸಿವೆಯನ್ನು ನೀಗಿದನು. ಇದರ ವಿಷಯವಾಗಿ ನೀವು ಹಿಂದೆಂದೂ ಕೇಳಿರಲಿಲ್ಲ. ನಿಮ್ಮ ಪೂರ್ವಿಕರೂ ನೋಡಿರಲಿಲ್ಲ. ಆತನು ಹೀಗೇಕೆ ಮಾಡಿದನು? ಯಾಕೆಂದರೆ ಕೇವಲ ರೊಟ್ಟಿ ತಿಂದ ಮಾತ್ರದಿಂದ ಮನುಷ್ಯರು ಬದುಕದೆ ಯೆಹೋವನ ಬಾಯಿಂದ ಹೊರಡುವ ಪ್ರತಿಯೊಂದು ಮಾತಿನಿಂದಲೇ ಬದುಕುವರೆಂಬುದನ್ನು ನೀವು ತಿಳಿಯಬೇಕೆಂದು ಹೀಗೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಮನುಷ್ಯನು ಜೀವಿಸುವುದು ರೊಟ್ಟಿಯಿಂದ ಮಾತ್ರವಲ್ಲ ಯೆಹೋವ ದೇವರ ಬಾಯಿಂದ ಹೊರಡುವ ಪ್ರತಿಯೊಂದು ಮಾತಿನಿಂದಲೂ ಬದುಕುತ್ತಾನೆಂದು ನಿಮಗೆ ಬೋಧಿಸುವಂತೆ ದೇವರು ನಿಮ್ಮನ್ನು ಹಸಿವೆಯಿಂದ ಬಳಲುವಂತೆ ಮಾಡಿದರು. ನೀವು ತಿಳಿಯದಂಥ ಮತ್ತು ನಿಮ್ಮ ಪಿತೃಗಳು ತಿಳಿಯದಂಥ ಮನ್ನವನ್ನು ನಿಮಗೆ ಉಣ್ಣಲು ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 8:3
15 ತಿಳಿವುಗಳ ಹೋಲಿಕೆ  

ಅದಕ್ಕೆ ಯೇಸುಸ್ವಾಮಿ, “ಪವಿತ್ರಗ್ರಂಥದಲ್ಲಿ ಹೇಳಿರುವ ಪ್ರಕಾರ, ‘ಮಾನವನು ಜೀವಿಸುವುದು ಆಹಾರದಿಂದ ಮಾತ್ರವಲ್ಲ; ದೇವರಾಡುವ ಪ್ರತಿಯೊಂದು ನುಡಿಯಿಂದ’,” ಎಂದರು.


ಅದಕ್ಕೆ ಯೇಸು, “ಪವಿತ್ರಗ್ರಂಥದಲ್ಲಿ ಹೇಳಿರುವ ಪ್ರಕಾರ, ‘ಮಾನವನು ಜೀವಿಸುವುದು ಆಹಾರದಿಂದ ಮಾತ್ರವಲ್ಲ’,” ಎಂದು ಉತ್ತರಿಸಿದರು.


ಎಲ್ಲರೂ ಒಂದೇ ದೈವಿಕ ಪಾನೀಯವನ್ನು ಕುಡಿದರು;


ಒಳಿತನು ಮಾಡು ಪ್ರಭುವಿನಲಿ ಭರವಸೆ ಇಟ್ಟು I ಸುರಕ್ಷಿತನಾಗಿ ಬಾಳು ಸಿರಿನಾಡಿನಲ್ಲಿದ್ದು II


ಕೂಳನು ಕೇಳಿದಾಗ ಬರಮಾಡಿದನು ಲಾವಕ್ಕಿಗಳನು I ತೃಪ್ತಿಪಡಿಸಿದನು ಆಗಸದ ಆಹಾರಗಳಿಂದವರನು II


ಸರ್ವೇಶ್ವರ ನಿಮ್ಮ ಸಂಗಡ ಮಾಡಿದ ಒಡಂಬಡಿಕೆಯನ್ನು ಬರೆದ ಆ ಕಲ್ಲಿನ ಹಲಗೆಗಳನ್ನು ತೆಗೆದುಕೊಳ್ಳುವುದಕ್ಕೆ ನಾನು ಬೆಟ್ಟವನ್ನು ಹತ್ತಿದಾಗ ಅನ್ನಪಾನಗಳನ್ನು ಬಿಟ್ಟು ಹಗಲಿರುಳು ನಲವತ್ತು ದಿನ ಆ ಬೆಟ್ಟದಲ್ಲಿದ್ದೆ.


ನೀವು ರೊಟ್ಟಿ ತಿನ್ನಲಿಲ್ಲ; ದ್ರಾಕ್ಷಾರಸವನ್ನಾಗಲಿ ಯಾವ ಮದ್ಯವನ್ನಾಗಲಿ ಕುಡಿಯಲೇ ಇಲ್ಲ. ಸರ್ವೇಶ್ವರನೇ ನಿಮ್ಮ ದೇವರು ಎಂಬುದು ನಿಮಗೆ ತಿಳಿಯಬೇಕೆಂಬ ಉದ್ದೇಶದಿಂದ ಹೀಗಾಯಿತು.


ಇದು ನಿರರ್ಥಕವೆಂದು ಭಾವಿಸಬೇಡಿ; ಇದರಿಂದ ನೀವು ಬಾಳುವಿರಿ; ನೀವು ಜೋರ್ಡನ್ ನದಿಯನ್ನು ದಾಟಿ ಸ್ವಾಧೀನಮಾಡಿಕೊಳ್ಳಲು ಹೋಗುವ ನಾಡಿನಲ್ಲಿ ಇದನ್ನು ಅನುಸರಿಸುವುದರಿಂದಲೇ ಬಹುಕಾಲ ಇರುವಿರಿ,” ಎಂದು ಹೇಳಿದನು.


ನಲವತ್ತು ವರ್ಷ ನಾನು ನಿಮ್ಮನ್ನು ಮರುಭೂಮಿಯಲ್ಲಿ ನಡೆಸಿಕೊಂಡು ಬಂದಿದ್ದೇನೆ. ನಿಮ್ಮ ಮೈಮೇಲಿದ್ದ ಉಡುಪಾಗಲಿ, ಕಾಲಲ್ಲಿದ್ದ ಕೆರವಾಗಲಿ ಸವೆದುಹೋಗಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು