Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 8:4 - ಕನ್ನಡ ಸತ್ಯವೇದವು C.L. Bible (BSI)

4 ಈ ನಲವತ್ತು ವರ್ಷ ನಿಮ್ಮ ಮೈಮೇಲಿದ್ದ ಉಡುಪು ಹರಿದುಹೋಗಲಿಲ್ಲ; ನಿಮ್ಮ ಕಾಲುಗಳು ಊದುಹೋಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆ ನಲವತ್ತು ವರ್ಷ ನಿಮ್ಮ ಮೈಮೇಲಿದ್ದ ಉಡುಪು ಹಳೇಯದಾಗಲಿಲ್ಲ; ನಿಮ್ಮ ಕಾಲುಗಳು ಬಾತುಹೋಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಈ ನಾಲ್ವತ್ತು ವರುಷ ನಿಮ್ಮ ಮೈಮೇಲಿದ್ದ ಉಡುಪು ಜೀರ್ಣವಾಗಲಿಲ್ಲ; ನಿಮ್ಮ ಕಾಲುಗಳು ಬಾತುಹೋಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆತನು ನಿಮ್ಮನ್ನು ಕಾಪಾಡಿ ಸಂರಕ್ಷಿಸಿದ್ದರಿಂದ ಈ ನಲವತ್ತು ವರ್ಷ ನಿಮ್ಮ ಬಟ್ಟೆಗಳು ಹರಿದುಹೋಗಲಿಲ್ಲ; ನಿಮ್ಮ ಕಾಲುಗಳು ಊದಿಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಈ ನಲವತ್ತು ವರ್ಷ ನಿಮ್ಮ ಮೇಲಿರುವ ವಸ್ತ್ರಗಳು ಹಳೆಯದಾಗಲಿಲ್ಲ, ನಿಮ್ಮ ಕಾಲುಗಳು ಬಾತುಹೋಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 8:4
6 ತಿಳಿವುಗಳ ಹೋಲಿಕೆ  

ಈ ಪರಿ ಸಲಹಿದಿರಿ ಮರುಭೂಮಿಯಲಿ ನಾಲ್ವತ್ತು ವರ್ಷ ಅಲ್ಲವರಿಗಿರಲಿಲ್ಲ ಯಾವುದೊಂದು ಸಂಕಷ್ಟ. ಊದಿಹೋಗಲಿಲ್ಲ ಕಾಲು, ಹರಿದುಹೋಗಲಿಲ್ಲ ಅವರ ವಸ್ತ್ರ.


ನಲವತ್ತು ವರ್ಷ ನಾನು ನಿಮ್ಮನ್ನು ಮರುಭೂಮಿಯಲ್ಲಿ ನಡೆಸಿಕೊಂಡು ಬಂದಿದ್ದೇನೆ. ನಿಮ್ಮ ಮೈಮೇಲಿದ್ದ ಉಡುಪಾಗಲಿ, ಕಾಲಲ್ಲಿದ್ದ ಕೆರವಾಗಲಿ ಸವೆದುಹೋಗಲಿಲ್ಲ.


ನಿಮ್ಮ ಮಕ್ಕಳು ನೀವು ಮಾಡಿದ ದ್ರೋಹದ ಫಲವನ್ನು ಅನುಭವಿಸುವವರಾಗಿ ನಾಲ್ವತ್ತು ವರ್ಷ ಮರುಭೂಮಿಯಲ್ಲೇ ಅಲೆದಾಡುವರು.


ಇಸ್ರಯೇಲರು ಜನವಾಸವಿರುವ ಪ್ರದೇಶಕ್ಕೆ ಬರುವ ತನಕ ಅಂದರೆ ಕಾನಾನ್ ನಾಡಿನ ಮೇರೆಯನ್ನು ಸೇರುವ ತನಕ ನಾಲ್ವತ್ತು ವರ್ಷ ಮನ್ನವನ್ನೇ ಊಟ ಮಾಡುತ್ತಿದ್ದರು.


“ನೀವು ಕೈಹಾಕಿದ ಎಲ್ಲ ಕೆಲಸಗಳನ್ನೂ ನಿಮ್ಮ ದೇವರಾದ ಸರ್ವೇಶ್ವರ ಸಫಲಪಡಿಸಿದ್ದಾರೆ. ಈ ದೊಡ್ಡ ಮರುಭೂಮಿಯಲ್ಲಿ ನೀವು ಸಂಚರಿಸುತ್ತಿರುವಾಗಲೆಲ್ಲ ಅವರು ನಿಮ್ಮನ್ನು ಪರಾಂಬರಿಸುತ್ತಾ ಬಂದರು. ಈ ನಲವತ್ತು ವರ್ಷ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮೊಂದಿಗೆ ಇದ್ದುದರಿಂದಲೆ ನಿಮಗೆ ಏನೂ ಕಡಿಮೆಯಾಗಲಿಲ್ಲ,” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು