Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 8:8 - ಕನ್ನಡ ಸತ್ಯವೇದವು C.L. Bible (BSI)

8 ಆ ನಾಡಿನಲ್ಲಿ ಗೋದಿ, ಜವೆಗೋದಿ, ದ್ರಾಕ್ಷಿ, ಅಂಜೂರ, ದಾಳಿಂಬೆ ಇವುಗಳು ಬೆಳೆಯುತ್ತವೆ; ಎಣ್ಣೆಮರಗಳು ಹಾಗು ಜೇನುತುಪ್ಪ ಸಿಕ್ಕುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆ ದೇಶದಲ್ಲಿ ಗೋದಿ, ಜವೆಗೋದಿ, ದ್ರಾಕ್ಷಿ, ಅಂಜೂರ, ದಾಳಿಂಬ ಇವುಗಳು ಬೆಳೆಯುತ್ತವೆ; ಎಣ್ಣೆ ಮರಗಳೂ ಮತ್ತು ಜೇನೂ ಸಿಕ್ಕುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಆ ದೇಶದಲ್ಲಿ ಗೋದಿ, ಜವೆಗೋದಿ, ದ್ರಾಕ್ಷೆ, ಅಂಜೂರ, ದಾಳಿಂಬ ಇವುಗಳು ಬೆಳೆಯುತ್ತವೆ; ಎಣ್ಣೆ ಮರಗಳೂ ಜೇನೂ ಸಿಕ್ಕುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆ ದೇಶವು ಗೋಧಿ, ಜವೆಗೋಧಿ, ದ್ರಾಕ್ಷಾಲತೆಗಳು, ಅಂಜೂರ, ದಾಳಿಂಬೆ ಮರಗಳಿಂದ ತುಂಬಿದೆ. ಅಲ್ಲಿ ಎಣ್ಣೆ, ಜೇನುತುಪ್ಪ ಧಾರಾಳವಾಗಿ ಸಿಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆ ದೇಶದಲ್ಲಿ ಗೋಧಿಯೂ, ಜವೆಗೋಧಿಯೂ, ದ್ರಾಕ್ಷೆಯೂ, ಅಂಜೂರ ಮರಗಳೂ, ದಾಳಿಂಬೆಗಳೂ ಇರುತ್ತವೆ. ಅದು ಓಲಿವ್ ಎಣ್ಣೆಯೂ, ಜೇನೂ ಉಳ್ಳ ದೇಶವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 8:8
23 ತಿಳಿವುಗಳ ಹೋಲಿಕೆ  

ತಿಂದುಳಿದ ಆ ಐದು ರೊಟ್ಟಿಗಳ ತುಂಡುಗಳನ್ನು ಒಟ್ಟುಗೂಡಿಸಲು ಅವು ಹನ್ನೆರಡು ಬುಟ್ಟಿಗಳ ತುಂಬಾ ಆದವು.


ನಿನ್ನ ಪ್ರಾಂತದೊಳಗೆಲ್ಲಾ ಇರುವುದು ನೆಮ್ಮದಿ I ನೀಡುವನು ನಿನಗೆ ಅತ್ಯುತ್ತಮ ಗೋದಿ II


ಆಹಾರಕ್ಕಿತ್ತು, ಆಕಳಿನ ಮೊಸರೋಗರ ಆಡುಕುರಿಗಳ ಕ್ಷೀರ ಬಾಷಾನಿನ ಪುಷ್ಟಪಶು, ಹೋತ, ಕೊಬ್ಬಿದ ಕುರಿಟಗರಿನ ಮಾಂಸ, ಉತ್ತಮವಾದ ಗೋಧೂಮ; ಪಾನಕ್ಕಿತ್ತು ರಕ್ತಗೆಂಪಾದ ದ್ರಾಕ್ಷಾರಸ.


“ಇಲ್ಲಿ ಒಬ್ಬ ಹುಡುಗನ ಬಳಿ ಜವೆಗೋದಿಯ ಐದು ರೊಟ್ಟಿಗಳೂ ಎರಡು ಮೀನುಗಳೂ ಇವೆ. ಆದರೆ ಈ ಜನಸಮೂಹಕ್ಕೆ ಇವೆಲ್ಲಿ ಸಾಕಾಗುತ್ತದೆ?” ಎಂದನು.


ಅಂಜೂರದ ಮರ ಚಿಗುರದೆಹೋದರೂ ದ್ರಾಕ್ಷಾಲತೆಗಳಲ್ಲಿ ಹಣ್ಣು ಕಾಣದೆಹೋದರೂ ಎಣ್ಣೆಮರಗಳ ಉತ್ಪತ್ತಿಯು ಶೂನ್ಯವಾದರೂ ಹೊಲಗದ್ದೆಗಳು ಆಹಾರ ಕೊಡದೆಹೋದರೂ ಕುರಿಹಟ್ಟಿಗಳು ಬರಿದಾಗಿಹೋದರೂ ಕೊಟ್ಟಿಗೆಗಳಲ್ಲಿ ದನಕರುಗಳು ಇಲ್ಲವಾದರೂ,


ನಿಲ್ಲದು ರಾಷ್ಟ್ರಕೆ ವಿರುದ್ಧ ರಾಷ್ಟ್ರ ಯುದ್ಧಕ್ಕೆ ಅವಶ್ಯವಿರದವಕ್ಕೆ ಯುದ್ಧವಿದ್ಯೆಯ ಕಲಿಕೆ. ಕೂರುವರು ಪ್ರತಿಯೋರ್ವರು ತಂತಮ್ಮ ದ್ರಾಕ್ಷಾಲತೆಗಳಡಿಯಲೆ ಕೂರುವರವರು ತಂತಮ್ಮ ಅಂಜೂರ ಗಿಡಗಳ ನೆರಳಲೆ ಈ ಪರಿ ನುಡಿದಿಹನು ಸೇನಾಧೀಶ್ವರನಾದ ಸರ್ವೇಶ್ವರನೆ.


ಆಗಸವು ಆಲಿಸುವುದು ಭೂಮಿಯ ಮೊರೆಯನು ಇವು ಆಲಿಸುವುವು ಇಸ್ರಯೇಲಿನ ಮೊರೆಯನು.


ಅವಳಿಗೆ ದವಸಧಾನ್ಯ, ದ್ರಾಕ್ಷಾರಸ, ತೈಲಗಳನ್ನು ಕೊಟ್ಟವನು ನಾನೇ ಎಂಬುದನ್ನು ಅರಿತುಕೊಳ್ಳದೆಹೋದಳು. ನಾನು ಧಾರಾಳವಾಗಿ ಕೊಟ್ಟ ಬೆಳ್ಳಿಬಂಗಾರಗಳನ್ನು ಬಾಳನ ಪೂಜೆಗೆ ಉಪಯೋಗಿಸಿದಳು.


ಯೆಹೂದ್ಯರೂ, ಇಸ್ರಯೇಲ್ ನಾಡಿನವರೂ ನಿನ್ನ ಕಡೆಯ ವರ್ತಕರಾಗಿ ಮಿನ್ನೀಥಿನ, ಗೋಧಿ, ‘ಪನ್ನಗ್’, ಜೇನು, ಎಣ್ಣೆ, ಸುಗಂಧತೈಲ, ಈ ಸಾಮಗ್ರಿಗಳನ್ನು ನಿನಗೆ ಸೇರಿಸುತ್ತಿದ್ದರು.


ಅವರು ನಿನ್ನ ದವಸಧಾನ್ಯಗಳನ್ನು ತಿಂದುಬಿಡುವರು. ನಿನ್ನ ಗಂಡುಹೆಣ್ಣುಮಕ್ಕಳನ್ನು ಕೊಲ್ಲುವರು. ನಿನ್ನ ದನಕುರಿಗಳನ್ನು ಕಬಳಿಸಿಬಿಡುವರು. ದ್ರಾಕ್ಷಾಲತೆಗಳನ್ನೂ ಅಂಜೂರದ ಗಿಡಗಳನ್ನೂ ಹಾಳುಮಾಡುವರು. ನೀನು ನಂಬಿಕೊಂಡಿರುವ ಕೋಟೆಕೊತ್ತಲಗಳುಳ್ಳ ಪಟ್ಟಣಗಳನ್ನು ಅಸ್ತ್ರಗಳಿಂದ ಹಾಳುಮಾಡುವರು.


ಆ ದಿನದಂದು ಸಾವಿರ ಬೆಳ್ಳಿನಾಣ್ಯಗಳಷ್ಟು ಬೆಲೆಬಾಳುವ ಸಹಸ್ರ ದ್ರಾಕ್ಷಿಬಳ್ಳಿಗಳು ಬೆಳೆಯುವಂಥ ಪ್ರತಿಯೊಂದು ಪ್ರದೇಶದಲ್ಲೂ ಮುಳ್ಳುಪೊದೆಗಳು ಬೆಳೆದುಕೊಳ್ಳುವುವು.


ಸೊಲೊಮೋನನಾದರೋ ಪ್ರತಿವರ್ಷ ಅವನ ಮನೆಯವರ ಆಹಾರಕ್ಕಾಗಿ ಎರಡು ಸಾವಿರ ಮೆಟ್ರಿಕ್ ಟನ್ ಗೋದಿಯನ್ನೂ ನಾಲ್ಕು ಸಾವಿರ ಲೀಟರ್ ಅಪ್ಪಟ ಎಣ್ಣೆಯನ್ನೂ ಕೊಡುತ್ತಿದ್ದನು.


ಆಗ ಬಾಗಿಲು ಕಾಯುವವಳು ಗೋದಿ ಕೇರುತ್ತಿದ್ದು ಹಾಗೆಯೇ ತೂಗಡಿಸಿ ನಿದ್ರೆಮಾಡುತ್ತಿರುವುದನ್ನು ಕಂಡು ಅವರು ಗುಟ್ಟಾಗಿ ಒಳಗೆ ಜಾರಿಕೊಂಡರು.


“ನಿಮಗಾದರೋ ಬಡಿಸುತ್ತಿದ್ದೆ ಅತ್ಯುತ್ತಮ ಗೋದಿಯನು I ಉಣಿಸುತ್ತಿದ್ದೆ ನಾ ನಿಮಗೆ ಬೆಟ್ಟದ ಜೇನುತುಪ್ಪವನು” II


ಕಟ್ಟುವನು ತನ್ನ ವಾಹನಪಶುವನು ದ್ರಾಕ್ಷಾಲತೆಗೆ ಬಿಗಿಯುವನು ತನ್ನ ಹೇಸರಕತ್ತೆಯನು ರಾಜದ್ರಾಕ್ಷೆಗೆ ಒಗೆಯುವನು ತನ್ನ ಬಟ್ಟೆಯನು ದ್ರಾಕ್ಷಾರಸದಲಿ ತೊಳೆವನು ಮೇಲಂಗಿಯನು ಆ ರಕ್ತಗೆಂಪು ರಸದಲಿ.


“ನಿಮ್ಮ ದೇವರಾದ ಸರ್ವೇಶ್ವರ ಉತ್ತಮವಾದ ನಾಡಿಗೆ ನಿಮ್ಮನ್ನು ಸೇರಿಸುತ್ತಾರೆ. ಆ ನಾಡಿನ ಹಳ್ಳಗಳಲ್ಲಿ ನೀರು ಯಾವಾಗಲೂ ಹರಿಯುತ್ತಿರುತ್ತದೆ; ತಗ್ಗುಗಳಲ್ಲಾಗಲಿ, ಗುಡ್ಡಗಳಲ್ಲಿ ಆಗಲಿ, ಎಲ್ಲಾ ಕಡೆಯು ಬಾವಿಗಳಿಂದಲೂ ಬುಗ್ಗೆಗಳಿಂದಲೂ ನೀರು ಉಕ್ಕುತ್ತಿರುತ್ತದೆ.


ಅಲ್ಲಿ ನೀವು ದುರ್ಭಿಕ್ಷವನ್ನೇ ಕಾಣದೆ, ಸಮೃದ್ಧಿ ಆಗಿ ಉಂಡು, ಯಾವ ಕೊರತೆಯೂ ಇಲ್ಲದೆ ಇರುವಿರಿ. ಆ ನಾಡಿನಲ್ಲಿ ಕಬ್ಬಿಣದ ಕಲ್ಲು ಸಿಕ್ಕುತ್ತದೆ. ಅಲ್ಲಿಯ ಬೆಟ್ಟಗಳಲ್ಲಿ ತಾಮ್ರದ ಗಣಿಗಳಿವೆ.


ಹತ್ತಿಸಿದವರನು ಎತ್ತರದ ಪ್ರದೇಶಗಳಿಗೆ ಇತ್ತನವರಿಗೆ ಅಲ್ಲಿಯೆ ಬೆಳೆದ ಪೈರುಫಸಲನೆ. ಗಿಟ್ಟಿತವರಿಗೆ ಗುಡ್ಡದ ಜೇನು, ಗಿರಿಯ ಎಣ್ಣೆಯು.


ಎಷ್ಕೋಲ್ ಎಂಬ ತಗ್ಗಿಗೆ ಬಂದು ಅಲ್ಲಿ ದ್ರಾಕ್ಷಿ ಹಣ್ಣಿನ ಗೊಂಚಲಿದ್ದ ಒಂದು ಕೊಂಬೆಯನ್ನು ಕೊಯ್ದರು. ಅದನ್ನು ಅಡ್ಡದಂಡಿಗೆಯಲ್ಲಿ ಇಬ್ಬರು ಹೊತ್ತು ತಂದರು. ಕೆಲವು ದಾಳಿಂಬೆ ಹಣ್ಣುಗಳನ್ನೂ ಅಂಜೂರದ ಹಣ್ಣುಗಳನ್ನು ತಂದರು.


ಆದುದರಿಂದ ಇಸ್ರಯೇಲರೇ, ನಿಮ್ಮ ಪಿತೃಗಳ ದೇವರಾದ ಸರ್ವೇಶ್ವರ ವಾಗ್ದಾನ ಮಾಡಿದ ಪ್ರಕಾರ, ಹಾಲೂಜೇನೂ ಹರಿಯುವ ಆ ನಾಡಿನಲ್ಲಿ ನಿಮಗೆ ಶುಭವುಂಟಾಗುವಂತೆ, ನೀವು ಬಹಳವಾಗಿ ಹೆಚ್ಚಿ, ಅಭಿವೃದ್ಧಿಯಾಗುವಂತೆ, ಈ ಆಜ್ಞೆಗಳನ್ನು ಲಕ್ಷ್ಯವಿಟ್ಟು ಕೇಳಿ ಅನುಸರಿಸಿರಿ.


ಸ್ವಲ್ಪಕಾಲವಾದ ನಂತರ ನಾನು ಬಂದು ನಿಮ್ಮನ್ನು ಇನ್ನೊಂದು ನಾಡಿಗೆ ಕರೆದುಕೊಂಡು ಹೋಗುವೆನು. ಅಲ್ಲಿ ಧಾನ್ಯ, ದ್ರಾಕ್ಷಾರಸ, ಆಹಾರ, ದ್ರಾಕ್ಷೀತೋಟ, ಎಣ್ಣೇಮರ, ಜೇನುತುಪ್ಪ ಸಮೃದ್ಧಿಯಾಗಿರುವುವು. ನಿಮ್ಮ ನಾಡಿಗೆ ಸರಿಸಮಾನವಾಗಿರುವುವು; ನೀವು ಸಾಯುವುದಿಲ್ಲ, ಬದುಕುವಿರಿ; ‘ಸರ್ವೇಶ್ವರ ನಮ್ಮನ್ನು ರಕ್ಷಿಸುವರು’ ಎಂಬ ನಂಬಿಕೆಯನ್ನು ಹಿಜ್ಕೀಯನು ನಿಮ್ಮಲ್ಲಿ ಮೂಡಿಸದಂತೆ ಎಚ್ಚರಿಕೆಯಾಗಿರಿ.


ನಾನು ನಿಮ್ಮನ್ನು ಫಲವತ್ತಾದ ನಾಡಿಗೆ ಕರೆತಂದೆ. ಅದರ ಫಲವನ್ನೂ ಸಾರವನ್ನೂ ಅನುಭವಿಸುವ ಹಾಗೆ ಮಾಡಿದೆ. ಆದರೆ ನೀವು ಒಳನುಗ್ಗಿ ಬಂದು ಆ ನನ್ನ ನಾಡನ್ನು ಹೊಲೆಮಾಡಿದಿರಿ; ಆ ನನ್ನ ಸೊತ್ತನ್ನು ಅಸಹ್ಯಪಡಿಸಿದಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು