Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 8:9 - ಕನ್ನಡ ಸತ್ಯವೇದವು C.L. Bible (BSI)

9 ಅಲ್ಲಿ ನೀವು ದುರ್ಭಿಕ್ಷವನ್ನೇ ಕಾಣದೆ, ಸಮೃದ್ಧಿ ಆಗಿ ಉಂಡು, ಯಾವ ಕೊರತೆಯೂ ಇಲ್ಲದೆ ಇರುವಿರಿ. ಆ ನಾಡಿನಲ್ಲಿ ಕಬ್ಬಿಣದ ಕಲ್ಲು ಸಿಕ್ಕುತ್ತದೆ. ಅಲ್ಲಿಯ ಬೆಟ್ಟಗಳಲ್ಲಿ ತಾಮ್ರದ ಗಣಿಗಳಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅಲ್ಲಿ ನೀವು ದುರ್ಭಿಕ್ಷವನ್ನು ಕಾಣದೆ ಸಮೃದ್ಧಿಯಾಗಿ ಊಟಮಾಡಿ, ಯಾವ ಕೊರತೆಯೂ ಇಲ್ಲದೆ ಇರುವಿರಿ. ಆ ದೇಶದಲ್ಲಿ ಕಬ್ಬಿಣದ ಕಲ್ಲು ಸಿಕ್ಕುತ್ತದೆ; ಅಲ್ಲಿಯ ಬೆಟ್ಟಗಳಲ್ಲಿ ತಾಮ್ರದ ಗಣಿಗಳುಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಅಲ್ಲಿ ನೀವು ದುರ್ಭಿಕ್ಷವನ್ನೇ ಕಾಣದೆ ಸಮೃದ್ಧಿಯಾಗಿ ಉಂಡು ಯಾವ ಕೊರತೆಯೂ ಇಲ್ಲದೆ ಇರುವಿರಿ. ಆ ದೇಶದಲ್ಲಿ ಕಬ್ಬಿಣದ ಕಲ್ಲು ಸಿಕ್ಕುತ್ತದೆ; ಅಲ್ಲಿಯ ಬೆಟ್ಟಗಳಲ್ಲಿ ತಾಮ್ರದ ಗಣಿಗಳುಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಅಲ್ಲಿ ನೀವು ಯಥೇಚ್ಛವಾಗಿ ತಿನ್ನುವಿರಿ. ನಿಮಗೆ ಬೇಕಾದದ್ದೆಲ್ಲಾ ನಿಮಗಿರುವುದು. ಅಲ್ಲಿಯ ಕಲ್ಲುಗಳು ಕಬ್ಬಿಣದಂತಿವೆ. ಬೆಟ್ಟಗಳಿಂದ ನೀವು ತಾಮ್ರವನ್ನು ಅಗೆದು ತೆಗೆಯುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆ ದೇಶದಲ್ಲಿ ನಿಮಗೆ ಆಹಾರಕ್ಕೆ ಕೊರತೆ ಇರುವುದಿಲ್ಲ. ಅಲ್ಲಿ ಯಾವುದರ ಕೊರತೆ ನಿಮಗೆ ಆಗದು. ಅದರ ಕಲ್ಲುಗಳಲ್ಲಿ ಕಬ್ಬಿಣವನ್ನೂ, ಅದರ ಬೆಟ್ಟಗಳಲ್ಲಿ ತಾಮ್ರದ ಗಣಿಗಳನ್ನೂ ಅಗೆಯಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 8:9
8 ತಿಳಿವುಗಳ ಹೋಲಿಕೆ  

ಇಗೋ, ನಾನು ಬಹಳ ಪ್ರಯಾಸಪಟ್ಟು ಸರ್ವೇಶ್ವರನ ಆಲಯಕ್ಕಾಗಿ 3,400 ಮೆಟ್ರಿಕ್ ಟನ್ ಬಂಗಾರವನ್ನು 34,000 ಮೆಟ್ರಿಕ್ ಟನ್ ಬೆಳ್ಳಿಯನ್ನು ಹಾಗು ಲೆಕ್ಕವಿಲ್ಲದಷ್ಟು ತಾಮ್ರ, ಕಬ್ಬಿಣ, ಕಲ್ಲುಮರಗಳನ್ನೂ ಕೂಡಿಸಿದ್ದೇನೆ.


“ನೀವು ಬಹಳ ಆಸ್ತಿಯುಳ್ಳವರಾಗಿ ದನಕರು, ಬೆಳ್ಳಿಬಂಗಾರ, ಕಂಚು ಕಬ್ಬಿಣ, ವಸ್ತ್ರ ಮೊದಲಾದ ವಸ್ತುಗಳನ್ನು ತೆಗೆದುಕೊಂಡು ನಿಮ್ಮ ನಿಮ್ಮ ನಿವಾಸಗಳಿಗೆ ತೆರಳಿರಿ. ನೀವು ಶತ್ರುಗಳಿಂದ ಪಡೆದ ಕೊಳ್ಳೆಯಲ್ಲಿ ನಿಮ್ಮ ಸಹೋದರರಿಗೂ ಪಾಲುಕೊಡಿ,” ಎಂದನು.


ನಿನ್ನ ಕೋಟೆಯ ಬಾಗಿಲು ಕಬ್ಬಿಣದವು ಅವುಗಳ ಅಗುಳಿಗಳು ಕಂಚಿನವು ನೀನಿರುವಷ್ಟು ಕಾಲ ನಿನಗಿರುವುದು ಬಲವು.”


ಕಬ್ಬಿಣವನ್ನು ತೆಗೆಯುತ್ತಾರೆ ಮಣ್ಣಿನಿಂದ ತಾಮ್ರವನ್ನು ಕಡೆಯುತ್ತಾರೆ ಕಲ್ಲನ್ನು ಕರಗಿಸುತಾ.


ಆ ನಾಡಿನಲ್ಲಿ ಗೋದಿ, ಜವೆಗೋದಿ, ದ್ರಾಕ್ಷಿ, ಅಂಜೂರ, ದಾಳಿಂಬೆ ಇವುಗಳು ಬೆಳೆಯುತ್ತವೆ; ಎಣ್ಣೆಮರಗಳು ಹಾಗು ಜೇನುತುಪ್ಪ ಸಿಕ್ಕುತ್ತವೆ.


ನೀವು ಹೊಟ್ಟೆತುಂಬ ಉಂಡು ಸುಖದಿಂದಿರುವಾಗ ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಇಂಥ ಉತ್ತಮ ನಾಡನ್ನು ಕೊಟ್ಟದ್ದಕ್ಕಾಗಿ ಅವರನ್ನು ಸ್ತುತಿಸಬೇಕು.


ನೀವು ಅಲ್ಲಿಗೆ ಹೋಗುವುದಾದರೆ ಅಲ್ಲಿನ ಜನರು ನಿರ್ಭಯದಿಂದ ಜೀವಿಸುವವರೆಂದೂ ಅವರ ದೇಶ ಬಹು ವಿಸ್ತಾರವಾಗಿದೆಯೆಂದೂ ತಿಳಿದುಕೊಳ್ಳುವಿರಿ. ದೇವರು ಅದನ್ನು ನಿಮ್ಮ ಕೈಗೆ ಒಪ್ಪಿಸಿದ್ದಾರೆ. ಅದರಲ್ಲಿ ದೊರಕದಿರುವ ಪದಾರ್ಥಗಳು ಲೋಕದಲ್ಲೇ ಇಲ್ಲ,” ಎಂದರು.


ಇದಲ್ಲದೆ, ಬಾಗಿಲುಗಳ ಕದಗಳಿಗೆ ಬೇಕಾದ ಮೊಳೆಗಳನ್ನು ಹಾಗು ಪಟ್ಟಿಗಳನ್ನು ಮಾಡುವುದಕ್ಕೆ ಬಹಳ ಕಬ್ಬಿಣವನ್ನೂ ತೂಕ ಮಾಡಲಾಗದಷ್ಟು ತಾಮ್ರವನ್ನೂ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು