Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 9:1 - ಕನ್ನಡ ಸತ್ಯವೇದವು C.L. Bible (BSI)

1 “ಇಸ್ರಯೇಲರೇ ಕೇಳಿ : ನಿಮಗಿಂತ ಮಹಾಬಲಿಷ್ಠ ಜನಾಂಗಗಳನ್ನು ಹಾಗು ಗಗನ ಮುಟ್ಟುವ ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನು ಸ್ವಾಧೀನಮಾಡಿಕೊಳ್ಳಲು, ನೀವು ಈ ಜೋರ್ಡನ್ ನದಿಯನ್ನು ಇಂದು ದಾಟಲಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಇಸ್ರಾಯೇಲರೇ ಕೇಳಿರಿ, ನಿಮಗಿಂತ ಮಹಾ ಬಲಿಷ್ಠ ಜನಾಂಗಗಳನ್ನೂ ಮತ್ತು ಆಕಾಶವನ್ನು ಮುಟ್ಟುವ ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನೂ ಸ್ವಾಧೀನ ಮಾಡಿಕೊಳ್ಳುವುದಕ್ಕೆ ನೀವು ಈ ಯೊರ್ದನ್ ನದಿಯನ್ನು ಇಂದು ದಾಟಲಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಇಸ್ರಾಯೇಲ್ಯರೇ ಕೇಳಿರಿ. ನಿಮಗಿಂತ ಮಹಾಬಲಿಷ್ಠ ಜನಾಂಗಗಳನ್ನೂ ಆಕಾಶವನ್ನು ಮುಟ್ಟುವ ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನೂ ಸ್ವಾಧೀನಮಾಡಿಕೊಳ್ಳುವದಕ್ಕೆ ನೀವು ಈ ಯೊರ್ದನ್ ಹೊಳೆಯನ್ನು ಇಂದು ದಾಟುವವರಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 “ಇಸ್ರೇಲ್ ಜನರೇ, ಕೇಳಿರಿ. ಈ ದಿನ ನೀವು ಜೋರ್ಡನ್ ನದಿಯನ್ನು ದಾಟಿ ಆ ದೇಶವನ್ನು ಪ್ರವೇಶಿಸಿ ನಿಮಗಿಂತ ಬಲಿಷ್ಠವಾದ ಜನಾಂಗಗಳನ್ನು ಹೊಡೆದೋಡಿಸುವಿರಿ. ಅವರ ಪಟ್ಟಣಗಳು ದೊಡ್ಡದಾಗಿವೆ; ಅದರ ಗೋಡೆಗಳು ಆಕಾಶದಷ್ಟು ಎತ್ತರವಾಗಿವೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಇಸ್ರಾಯೇಲರೇ, ಕೇಳಿರಿ, ನೀವು ಹೋಗಿ ನಿಮಗಿಂತ ದೊಡ್ಡ, ಬಲಿಷ್ಠ ಜನಾಂಗಗಳನ್ನೂ, ಆಕಾಶದವರೆಗೆ ಭದ್ರಮಾಡಿದ ದೊಡ್ಡ ಪಟ್ಟಣಗಳನ್ನೂ ಸ್ವಾಧೀನಮಾಡಿಕೊಳ್ಳುವುದಕ್ಕೆ ಈ ಹೊತ್ತು ಯೊರ್ದನ್ ನದಿಯನ್ನು ದಾಟಲಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 9:1
24 ತಿಳಿವುಗಳ ಹೋಲಿಕೆ  

“ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಕೊಡುವ ನಾಡನ್ನು ಸ್ವಾಧೀನಮಾಡಿಕೊಳ್ಳುವುದಕ್ಕೆ ನೀವು ಜೋರ್ಡನ್ ನದಿಯನ್ನು ದಾಟಬೇಕಾಗಿದೆ. ನೀವು ಆ ನಾಡನ್ನು ವಶಪಡಿಸಿಕೊಂಡು, ಅದರಲ್ಲಿ ವಾಸಮಾಡುವಾಗ,


ಈಗ ನಮಗೆ ತಿಳಿದಿರುವಂತೆ ನಿಮಗಿಂತ ದೊಡ್ಡವೂ ಬಲಿಷ್ಠವೂ ಆದ ಜನಾಂಗಗಳನ್ನು ಹೊರಡಿಸಿ ಅವರ ನಾಡಲ್ಲೆ ನಿಮ್ಮನ್ನು ಸೇರಿಸಿ, ಆ ನಾಡನ್ನು ನಿಮಗೇ ಸ್ವಂತ ನಾಡನ್ನಾಗಿ ಕೊಡಲು ಸಂಕಲ್ಪಿಸಿದ್ದಾರೆ. ತಾವೇ ನಿಮ್ಮೊಂದಿಗಿದ್ದು, ತಮ್ಮ ಅಪಾರ ಸಾಮರ್ಥ್ಯದಿಂದ ನಿಮ್ಮನ್ನು ಈಜಿಪ್ಟ್ ದೇಶದಿಂದ ಕರೆದುತಂದಿದ್ದಾರೆ.


ನಾವು ಹೋಗಬೇಕಾದ ಆ ಸೀಮೆ ಎಂಥದೆಂದು ಆಲೋಚಿಸಿ ನೋಡಬೇಕು; ಅಲ್ಲಿಗೆ ಹೋಗಿದ್ದ ನಮ್ಮ ಸಹೋದರರು ಬಂದು ಆ ನಾಡಿನ ಜನರು ನಮಗಿಂತ ಬಲಿಷ್ಠರೂ ಎತ್ತರವಾಗಿಯೂ ಇದ್ದಾರೆ. ಅವರಿರುವ ಪಟ್ಟಣಗಳು ದೊಡ್ಡವು, ಆಕಾಶವನ್ನು ಮುಟ್ಟುವಂಥ ಕೋಟೆಕೊತ್ತಲುಳ್ಳವು; ಅಲ್ಲಿ ‘ಅನಾಕಿಮ್’ ವಂಶಸ್ಥರನ್ನು ಕಂಡೆವೆಂದು ಹೇಳಿ ನಮ್ಮ ಧೈರ್ಯವನ್ನು ಕೆಡಿಸಿದ್ದಾರೆ,’ ಎಂದುಕೊಳ್ಳುತ್ತಿದ್ದಿರಿ.


“ನೀವು ಪಾಳೆಯದ ಎಲ್ಲೆಡೆಗೆ ಹೋಗಿ ಜನರಿಗೆ, ‘ನೀವು ಇನ್ನು ಮೂರು ದಿನಗಳಲ್ಲಿ ಈ ಜೋರ್ಡನ್ ನದಿಯನ್ನು ದಾಟಿ ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಸ್ವಂತ ಸೊತ್ತಾಗಿ ಕೊಡುವ ನಾಡನ್ನು ವಶಪಡಿಸಿಕೊಳ್ಳಲು ಹೋಗಬೇಕು. ಆದುದರಿಂದ ನಿಮಗೆ ಬೇಕಾದ ಆಹಾರ ಪದಾರ್ಥಗಳನ್ನು ಸಿದ್ಧಮಾಡಿಕೊಳ್ಳಿ’ ಎಂದು ತಿಳಿಸಿರಿ,” ಎಂದನು.


ಅವರು ಆ ಜನಾಂಗಗಳನ್ನೆಲ್ಲ ನಿಮ್ಮ ಬಳಿಯಿಂದ ಹೊರದೂಡುವರು; ನಿಮಗಿಂತಲೂ ಮಹಾಬಲಿಷ್ಠಜನಾಂಗಗಳ ನಾಡನ್ನು ಸ್ವಾಧೀನಮಾಡಿಕೊಳ್ಳುವಿರಿ.


“ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ನಾಡಿಗೆ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ಸೇರಿಸಿ, ಸಂಖ್ಯೆಯಲ್ಲೂ ಶಕ್ತಿಯಲ್ಲೂ ನಿಮ್ಮನ್ನು ಮೀರುವ ಜನಾಂಗಗಳನ್ನು ಅಲ್ಲಿಂದ ನಿಮ್ಮ ಮುಂದೆಯೆ ಹೊರಡಿಸುವರು.


“ಆ ಕಾಲದಲ್ಲಿ ನಾನು ನಿಮಗೆ, ‘ನಿಮ್ಮ ದೇವರಾದ ಸರ್ವೇಶ್ವರ ಈ ಪ್ರದೇಶವನ್ನೇ ನಿಮಗೆ ಸೊತ್ತಾಗಿ ಕೊಟ್ಟಿದ್ದಾರೆ. ಆದರೆ ನಿಮ್ಮ ಯೋಧರೆಲ್ಲರು ಯುದ್ಧಸನ್ನದ್ಧರಾಗಿ ನಿಮ್ಮ ಸಹೋದರರಾದ ಇಸ್ರಯೇಲರ ಮುಂದೇ ಹೊರಟು ನದಿ ದಾಟಿ ಹೋಗಬೇಕು.


ಜನರು ಮೊದಲನೇ ತಿಂಗಳಿನ ಹತ್ತನೆಯ ದಿನ ಜೋರ್ಡನನ್ನು ದಾಟಿ ಜೆರಿಕೋವಿನ ಪೂರ್ವಗಡಿಯಲ್ಲಿರುವ ಗಿಲ್ಗಾಲೆಂಬಲ್ಲಿಗೆ ಬಂದು ತಂಗಿದರು.


“ನೀವು ನಮ್ಮ ದೇವರಾದ ಸರ್ವೇಶ್ವರನ ಮಂಜೂಷದ ಮುಂದಾಗಿ ಜೋರ್ಡನಿನ ಮಧ್ಯಕ್ಕೆ ಹೋಗಿ ಇಸ್ರಯೇಲ್ ಕುಲಗಳ ಸಂಖ್ಯೆಗೆ ಸರಿಯಾಗಿ ಪ್ರತಿಯೊಬ್ಬನು ಒಂದೊಂದು ಕಲ್ಲನ್ನು ಹೆಗಲ ಮೇಲೆ ಹೊತ್ತುಕೊಂಡು ಬನ್ನಿ.


ಮೇಲಿಂದ ಬರುತ್ತಿದ್ದ ನೀರು ಬಹು ದೂರದಲ್ಲಿದ್ದ ಚಾರೆತಾನಿನ ಬಳಿಯಿರುವ ಆದಾಮ್ ಊರಿನ ತನಕ ರಾಶಿಯಾಗಿ ನಿಂತುಕೊಂಡಿತು. ಕೆಳಗಿನ ನೀರು ಅರಾಬಾ ತಗ್ಗಿನಲ್ಲಿರುವ ಲವಣಸಮುದ್ರಕ್ಕೆ ಹರಿದುಹೋಯಿತು. ಜನರು ಜೆರಿಕೋವಿನ ಎದುರಿನಲ್ಲಿ ನದಿ ದಾಟಿದರು.


ಜನರು ಜೋರ್ಡನ್ ನದಿಯನ್ನು ದಾಟಲು ತಮ್ಮ ತಮ್ಮ ಡೇರೆಗಳಿಂದ ಹೊರಟರು. ಒಡಂಬಡಿಕೆಯ ಮಂಜೂಷವನ್ನು ಹೊತ್ತ ಯಾಜಕರು ಅವರ ಮುಂದೆ ಇದ್ದರು.


ಯಾಜಕರಿಗೆ, “ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಜನರ ಮುಂದಾಗಿ ನಡೆದು ನದಿದಾಟಿರಿ,” ಎಂದು ಆಜ್ಞಾಪಿಸಿದನು. ಅವರು ಅಂತೆಯೇ ಮಂಜೂಷವನ್ನು ಹೊತ್ತುಕೊಂಡು ಹೋದರು.


ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಕೊಡುವ ನಾಡನ್ನು ಪ್ರವೇಶಿಸುವುದಕ್ಕೆ ನೀವು ಜೋರ್ಡನ್ ನದಿಯನ್ನು ದಾಟುವಾಗ ಅಂದರೆ, ನಿಮ್ಮ ಪಿತೃಗಳ ದೇವರಾದ ಸರ್ವೇಶ್ವರ ತಾವು ವಾಗ್ದಾನ ಮಾಡಿದಂತೆ ನಿಮಗೆ ಕೊಡುವ ಹಾಲೂ ಜೇನೂ ಹರಿಯುವ ನಾಡನ್ನು ಪ್ರವೇಶಿಸುವುದಕ್ಕೆ ನೀವು ಜೋರ್ಡನ್ ನದಿಯನ್ನು ದಾಟುವಾಗ, ನೀವು ದೊಡ್ಡ ಕಲ್ಲುಗಳನ್ನು ನಿಲ್ಲಿಸಬೇಕು. ಅವುಗಳಿಗೆ ಗಿಲಾವು ಮಾಡಿಸಿ ಈ ಧರ್ಮಶಾಸ್ತ್ರದ ವಾಕ್ಯಗಳನ್ನೆಲ್ಲಾ ಅವುಗಳ ಮೇಲೆ ಬರೆಯಿಸಬೇಕು.


ಅವರು ಬೆಟ್ಟವನ್ನು ಹತ್ತಿ ನೆಗೆಬನ್ನು ದಾಟಿ, ಹೆಬ್ರೋನಿಗೆ ಬಂದರು. ಅಲ್ಲಿ ‘ಅನಕಿಮ್’ ವಂಶಸ್ಥರಾದ ಅಹೀಮನ್, ಶೇಷೈ, ತಲ್ಮೈ ಎಂಬವರು ಇದ್ದರು. (ಹೆಬ್ರೋನ್ ಪಟ್ಟಣ ಈಜಿಪ್ಟ್ ದೇಶದಲ್ಲಿರುವ ಚೋಮ್ ಪಟ್ಟಣಕ್ಕಿಂತ ಏಳು ವರ್ಷ ಮೊದಲೆ ಕಟ್ಟಲ್ಪಟ್ಟಿತ್ತು)


ಒಂದು ಪಟ್ಟಣವನ್ನು ಕಟ್ಟೋಣ; ಆಕಾಶವನ್ನು ಮುಟ್ಟುವಂಥ ಗೋಪುರವನ್ನು ನಿರ್ಮಿಸಿ ಪ್ರಖ್ಯಾತಿ ಪಡೆಯೋಣ. ಹೀಗೆ ಮಾಡಿದರೆ ನಾವು ಜಗದಲ್ಲೆಲ್ಲಾ ಚದರಿಹೋಗುವುದಕ್ಕೆ ಆಸ್ಪದವಿರುವುದಿಲ್ಲ” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು. ಕಟ್ಟುವಾಗ ಕಲ್ಲಿಗೆ ಬದಲಾಗಿ ಇಟ್ಟಿಗೆಯನ್ನೂ ಗಾರೆಗೆ (ಸುಣ್ಣಕ್ಕೆ) ಬದಲಾಗಿ ಕಲ್ಲರಗನ್ನೂ ಉಪಯೋಗಿಸಿದರು.


“ನಿನ್ನ ಪಿತೃಗಳಾದ ಅಬ್ರಹಾಮ್, ಇಸಾಕ್, ಯಕೋಬರಿಗೆ ನಿನ್ನ ದೇವರಾದ ಸರ್ವೇಶ್ವರ ಪ್ರಮಾಣಮಾಡಿದ ನಾಡಿಗೆ ನಿನ್ನನ್ನು ಸೇರಿಸಿದಾಗ,


ಆ ಮರ ಬೆಳೆದು ಬಲಗೊಂಡಿತ್ತು. ಅದರ ತುದಿ ಆಕಾಶವನ್ನು ಮುಟ್ಟುತ್ತಿತ್ತು. ಅದು ಭೂಲೋಕದ ಕಟ್ಟಕಡೆಗೂ ಕಾಣಿಸುತ್ತಿತ್ತು.


‘ಮೋಶೆ ಬೆಟ್ಟದಿಂದ ಇಳಿಯದೆ ತಡಮಾಡಿದ್ದನ್ನು ಇಸ್ರಯೇಲರು ನೋಡಿ, ಆರೋನನ ಬಳಿಗೆ ಕೂಡಿಬಂದರು. ಅವನಿಗೆ, “ಈಜಿಪ್ಟ್ ದೇಶದಿಂದ ನಮ್ಮನ್ನು ಕರೆದುಕೊಂಡು ಬಂದ ಆ ಮೋಶೆ ಏನಾದನೋ ಗೊತ್ತಿಲ್ಲ. ಆದ್ದರಿಂದ ಏಳು, ನಮ್ಮನ್ನು ಮುನ್ನಡೆಸಿಕೊಂಡು ಹೋಗಲು ನಮಗೊಬ್ಬ ದೇವರನ್ನು ಮಾಡಿಸಿಕೊಡು,” ಎಂದು ಕೇಳಿದರು.


“ಇಸ್ರಯೇಲರಿಗೆ ಹೀಗೆಂದು ಆಜ್ಞಾಪಿಸು - ‘ನೀವು ಜೋರ್ಡನ್ ನದಿಯನ್ನು ದಾಟಿ ಕಾನಾನ್ ನಾಡನ್ನು ಸೇರಿದಾಗ


“ಇಸ್ರಯೇಲರೇ, ಕೇಳಿ; ನೀವು ಜೀವದಿಂದುಳಿದು ನಿಮ್ಮ ಪಿತೃಗಳ ದೇವರಾದ ಸರ್ವೇಶ್ವರ ನಿಮಗೆ ಕೊಡುವ ನಾಡನ್ನು ಸೇರಿ ಸ್ವಾಧೀನಮಾಡಿಕೊಳ್ಳಬೇಕಾದರೆ ನಾನು ಈಗ ಬೋಧಿಸುವ ಆಜ್ಞಾವಿಧಿಗಳನ್ನು ಗಮನದಿಂದ ಅನುಸರಿಸಬೇಕು.


ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಹಾಗೆಯೇ ನಿಮ್ಮ ಸಹೋದರರನ್ನೂ ನೆಮ್ಮದಿಪಡಿಸಿ, ಸರ್ವೇಶ್ವರನಾದ ದೇವರು ತಮಗೆ ನೀಡುವ ನಾಡನ್ನು ಅವರು ಸ್ವತಂತ್ರಿಸಿಕೊಳ್ಳುವ ವರೆಗೆ ಅವರಿಗೆ ಸಹಾಯ ಮಾಡಲಿ. ತರುವಾಯ ಸರ್ವೇಶ್ವರನ ದಾಸ ಮೋಶೆ ಜೋರ್ಡನ್ನಿಗೆ ಈಚೆ ಸೂರ್ಯೋದಯದ ದಿಕ್ಕಿನಲ್ಲಿ, ನಿಮಗೆ ಕೊಟ್ಟ ಸ್ವಂತ ನಾಡಿಗೆ ಹಿಂದಿರುಗಿ ಬಂದು ಅದನ್ನು ಅನುಭವಿಸಬಹುದು.”


ಹೀಗಿರಲು ಸರ್ವೇಶ್ವರ ಆ ದಿನದಂದು ಸೂಚಿಸಿದಂತೆ ಈ ಮಲೆನಾಡನ್ನು ನನಗೆ ಕೊಡು. ‘ಇದರಲ್ಲಿ ಎತ್ತರದ ವ್ಯಕ್ತಿಗಳಿದ್ದಾರೆ, ದೊಡ್ಡ ದೊಡ್ಡ ನಗರಗಳಿವೆ, ಕೋಟೆಕೊತ್ತಲಗಳಿವೆ’ ಎಂದು ಆ ಕಾಲದಲ್ಲಿ ನೀನು ಕೇಳಿದ್ದುಂಟು. ಅವರೆಲ್ಲರನ್ನು ಓಡಿಸಿಬಿಡಲು ಸರ್ವೇಶ್ವರ ತಮ್ಮ ಮಾತಿಗನುಸಾರ ನನಗೆ ಸಹಾಯಮಾಡುವರೆಂಬ ನಂಬಿಕೆ ನನಗಿದೆ,” ಎಂದನು.


“ಆದರೂ ನನ್ನ ಜನರೇ, ನಿಮಗೆ ಎದುರಾಗಿ ನಿಂತ ಅಮೋರ್ಯದವರನ್ನು ಧ್ವಂಸಮಾಡಿದೆನು. ದೇವದಾರು ಮರದಂತೆ ಎತ್ತರವಾಗಿ, ಅಲ್ಲೋನ್ ಮರದಂತೆ ಬಲಿಷ್ಠರಾಗಿ ಇದ್ದ ನಿಮ್ಮ ಶತ್ರು ಅಮೋರ್ಯದವರನ್ನು ನಾಶಪಡಿಸಿದೆನು. ಮರದ ಮುಡಿಯಿಂದ ಫಲವನ್ನೂ ಅಡಿಯಿಂದ ಬೇರನ್ನೂ ಕಿತ್ತುಹಾಕುವಂತೆ ಅವರನ್ನು ನಿರ್ಮೂಲಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು