ಧರ್ಮೋಪದೇಶಕಾಂಡ 9:10 - ಕನ್ನಡ ಸತ್ಯವೇದವು C.L. Bible (BSI)10 ಆಗ ಸರ್ವೇಶ್ವರ ತಮ್ಮ ಕೈಯಿಂದಲೇ ಬರೆದ ಆ ಎರಡು ಕಲ್ಲಿನ ಹಲಗೆಗಳನ್ನು ನನ್ನ ವಶಕ್ಕೆ ಕೊಟ್ಟರು. ನೀವು ಸಭೆಕೂಡಿದ ದಿನದಲ್ಲಿ ಸರ್ವೇಶ್ವರ ಆ ಬೆಟ್ಟದ ಮೇಲೆ ಅಗ್ನಿಜ್ವಾಲೆಯೊಳಗಿಂದ ನಿಮ್ಮ ಸಂಗಡ ಹೇಳಿದ ಮಾತುಗಳು ಆ ಹಲಗೆಗಳಲ್ಲಿದ್ದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಆಗ ಯೆಹೋವನು ತನ್ನ ಕೈಯಿಂದಲೇ ಬರೆದ ಆ ಎರಡು ಕಲ್ಲಿನ ಹಲಿಗೆಗಳನ್ನು ನನ್ನ ವಶಕ್ಕೆ ಕೊಟ್ಟನು. ನೀವು ಸಭೆ ಕೂಡಿದ ದಿನದಲ್ಲಿ ಯೆಹೋವನು ಆ ಬೆಟ್ಟದ ಮೇಲೆ ಅಗ್ನಿಜ್ವಾಲೆಯೊಳಗಿಂದ ನಿಮ್ಮ ಸಂಗಡ ಹೇಳಿದ ಮಾತುಗಳು ಆ ಹಲಿಗೆಗಳಲ್ಲಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಆಗ ಯೆಹೋವನು ತನ್ನ ಕೈಯಿಂದಲೇ ಬರೆದು ಆ ಎರಡು ಕಲ್ಲಿನ ಹಲಿಗೆಗಳನ್ನು ನನ್ನ ವಶಕ್ಕೆ ಕೊಟ್ಟನು. ನೀವು ಸಭೆಕೂಡಿದ ದಿನದಲ್ಲಿ ಯೆಹೋವನು ಆ ಬೆಟ್ಟದ ಮೇಲೆ ಅಗ್ನಿಜ್ವಾಲೆಯೊಳಗಿಂದ ನಿಮ್ಮ ಸಂಗಡ ಹೇಳಿದ ಮಾತುಗಳು ಆ ಹಲಿಗೆಗಳಲ್ಲಿದ್ದವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಯೆಹೋವನು ತನ್ನ ಬೆರಳಿನಿಂದ ಕಲ್ಲಿನ ಹಲಗೆಗಳ ಮೇಲೆ ಆಜ್ಞೆಗಳನ್ನು ಬರೆದು ನನಗೆ ಕೊಟ್ಟನು. ನೀವು ಸೀನಾಯ್ ಬೆಟ್ಟದ ಬಳಿ ಸಮೂಹವಾಗಿ ಸೇರಿಬಂದಿದ್ದಾಗ ಆತನು ಬೆಂಕಿಯ ಜ್ವಾಲೆಯೊಳಗಿಂದ ನಿಮಗೆ ತಿಳಿಸಿದ ಪ್ರತಿಯೊಂದನ್ನೂ ಬರೆದಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಆಗ ಯೆಹೋವ ದೇವರು ನನಗೆ ತಮ್ಮ ಬೆರಳಿನಿಂದ ಬರೆದ ಆ ಎರಡು ಕಲ್ಲಿನ ಹಲಗೆಗಳನ್ನು ಕೊಟ್ಟರು. ಯೆಹೋವ ದೇವರು ನಿಮ್ಮ ಸಂಗಡ ಬೆಟ್ಟದಲ್ಲಿ ಬೆಂಕಿಯೊಳಗಿಂದ ಸಭೆಕೂಡಿದ ದಿನದಲ್ಲಿ ಹೇಳಿದ ಆಜ್ಞೆಗಳೆಲ್ಲಾ ಆ ಹಲಗೆಗಳಲ್ಲಿದ್ದವು. ಅಧ್ಯಾಯವನ್ನು ನೋಡಿ |