Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 9:14 - ಕನ್ನಡ ಸತ್ಯವೇದವು C.L. Bible (BSI)

14 ಇವರು ನನ್ನ ಆಜ್ಞೆಗೆ ಬಗ್ಗದವರು. ಬಿಡು, ನಾನು ಅವರನ್ನು ನಾಶಮಾಡಿ ಅವರ ಹೆಸರನ್ನು ಭೂಮಿಯ ಮೇಲೆ ಉಳಿಯದಂತೆ ಮಾಡುವೆನು. ತರುವಾಯ ಅವರಿಗಿಂತಲೂ ಮಹಾಬಲಿಷ್ಠ ಜನಾಂಗವೊಂದು ನಿನ್ನಿಂದುಂಟಾಗುವಂತೆ ಮಾಡುವೆನು,’ ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಬಿಡು, ನಾನು ಅವರನ್ನು ನಾಶಮಾಡಿ, ಅವರ ಹೆಸರನ್ನು ಭೂಮಿಯ ಮೇಲೆ ಉಳಿಯದಂತೆ ಮಾಡುವೆನು. ತರುವಾಯ ಅವರಿಗಿಂತಲೂ ಮಹಾ ಬಲಿಷ್ಠ ಜನಾಂಗವು ನಿನ್ನಿಂದುಂಟಾಗುವಂತೆ ಮಾಡುವೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಬಿಡು, ನಾನು ಅವರನ್ನು ನಾಶಮಾಡಿ ಅವರ ಹೆಸರನ್ನು ಭೂವಿುಯ ಮೇಲೆ ಉಳಿಯದಂತೆ ಮಾಡುವೆನು. ತರುವಾಯ ಅವರಿಗಿಂತಲೂ ಮಹಾಬಲಿಷ್ಠ ಜನಾಂಗವು ನಿನ್ನಿಂದುಂಟಾಗುವಂತೆ ಮಾಡುವೆನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಇವರನ್ನು ನಾನು ಸಂಪೂರ್ಣವಾಗಿ ನಾಶಮಾಡುತ್ತೇನೆ. ಅವರ ಹೆಸರುಗಳನ್ನು ಯಾರೂ ನೆನಪಿನಲ್ಲಿಟ್ಟುಕೊಳ್ಳದಂತೆ ಮಾಡುತ್ತೇನೆ. ಆಮೇಲೆ ನಾನು ನಿನ್ನಿಂದ ಬಲಿಷ್ಠವಾದ ಮಹಾಜನಾಂಗವನ್ನು ನಿರ್ಮಿಸುತ್ತೇನೆ’ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನನ್ನನ್ನು ಬಿಡು, ನಾನು ಅವರನ್ನು ನಾಶಮಾಡಿ, ಅವರ ಹೆಸರನ್ನು ಆಕಾಶದ ಕೆಳಗಿನಿಂದ ಅಳಿಸಿಬಿಟ್ಟು, ನಿಮ್ಮನ್ನು ಅವರಿಗಿಂತ ಬಲಿಷ್ಠವಾದ ಜನಾಂಗವಾಗಿ ಮಾಡುವೆನು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 9:14
19 ತಿಳಿವುಗಳ ಹೋಲಿಕೆ  

ಸರ್ವೇಶ್ವರ ಅಂಥವನನ್ನು ಎಂದಿಗೂ ಕ್ಷಮಿಸರು; ಬದಲಿಗೆ ಅವನ ಮೇಲೆ ಸಿಟ್ಟುಗೊಂಡು, ತಮ್ಮ ಗೌರವವನ್ನು ಕಾಪಾಡಿಕೊಳ್ಳುವವರಾಗಿ, ಈ ಗ್ರಂಥದಲ್ಲಿ ಬರೆದಿರುವ ಎಲ್ಲಾ ಶಾಪೋಕ್ತಿಗಳಿಗೂ ಅವನನ್ನು ಗುರಿಪಡಿಸುವರು. ಅವನ ಹೆಸರನ್ನು ಭೂಮಿಯ ಮೇಲೆ ಇಲ್ಲದಂತೆ ಮಾಡುವರು.


ಭ್ರಷ್ಟರನು ದಂಡಿಸಿದೆ, ರಾಷ್ಟ್ರಗಳನು ಖಂಡಿಸಿದೆ I ಎಂದೆಂದೂ ಹೆಸರಿಲ್ಲದಂತೆ ಅವರನು ಅಳಿಸಿಹಾಕಿದೆ II


ಜಯಹೊಂದುವವನು ಹೀಗೆ ಶ್ವೇತಾಂಬರನಾಗುವನು. ಜೀವಬಾಧ್ಯರ ಪಟ್ಟಿಯಿಂದ ಅವನ ಹೆಸರನ್ನು ನಾನು ಅಳಿಸಿಹಾಕುವುದಿಲ್ಲ. ನನ್ನ ಪಿತನ ಸಾನ್ನಿಧ್ಯದಲ್ಲಿಯೂ ಅವರ ದೂತರ ಮುಂದೆಯೂ ಅವನು ನನ್ನವನೆಂದು ನಾನು ಒಪ್ಪಿಕೊಳ್ಳುತ್ತೇನೆ.


ಸ್ತೇಫನನು ಮುಂದುವರೆದು, “ಎಷ್ಟು ಹಟಮಾರಿಗಳು ನೀವು; ಎಂಥಾ ಕಠಿಣ ಹೃದಯಿಗಳು ನೀವು’ ದೇವರ ಸಂದೇಶಕ್ಕೆ ಎಷ್ಟು ಕಿವುಡರು ನೀವು! ನಿಮ್ಮ ಪೂರ್ವಜರಂತೆ ನೀವು ಸಹ ಪವಿತ್ರಾತ್ಮ ಅವರನ್ನು ಯಾವಾಗಲೂ ಪ್ರತಿಭಟಿಸುತ್ತೀರಿ.


ನಿರ್ಮೂಲವಾಗಲಿ ಅವನಾ ಪೀಳಿಗೆ I ನಿರ್ನಾಮವಾಗಲಿ ಮರುವಂಶದೊಳಗೆ II


ಸರ್ವೇಶ್ವರ ಸ್ವಾಮಿ ನನಗೆ ಹೀಗೆಂದರು : “ಮೋಶೆ ಮತ್ತು ಸಮುವೇಲನು ನನ್ನ ಮುಂದೆ ನಿಂತು ವಿಜ್ಞಾಪಿಸಿದರೂ ನಾನು ಈ ಜನರ ಬಗ್ಗೆ ನನ್ನ ಮನಸ್ಸನ್ನು ಬದಲಾಯಿಸೆನು. ಇವರನ್ನು ನನ್ನ ಸಮ್ಮುಖದಿಂದ ತಳ್ಳಿಬಿಡು; ತೊಲಗಿಹೋಗಲಿ!


ಸರ್ವೇಶ್ವರ ಮತ್ತೆ ನನಗೆ : “ಈ ಜನರ ಹಿತವನ್ನು ಬಯಸಿ ಇವರಿಗೋಸ್ಕರ ಪ್ರಾರ್ಥನೆಮಾಡಬೇಡ.


ಸಜ್ಜನರ ಸ್ಮರಣೆ ಮಂಗಳಕರ; ದುರ್ಜನರ ಹೆಸರು ಅಸಹ್ಯಕರ.


ನಾಶ ಮಾಡುತ್ತಿದ್ದೆ ನಾನವರನು ಸಂಪೂರ್ಣವಾಗಿ ಅವರಿಲ್ಲದಂತೆ ಮಾಡುತ್ತಿದ್ದೆ ಯಾರೊಬ್ಬರ ನೆನಪಿನಲಿ.


ಹೀಗಿರುವಲ್ಲಿ, ನಾವು ಪುನಃ ನಿಮ್ಮ ಆಜ್ಞೆಗಳನ್ನು ಮೀರಿ ವಿಗ್ರಹಾರಾಧಕರಾದ ಈ ಜನರ ಸಂಗಡ ವಿವಾಹ ಸಂಬಂಧ ಬೆಳೆಸುವುದು ಯೋಗ್ಯವೇ? ಹಾಗೆ ಮಾಡಿದರೆ, ನೀವು ನಮ್ಮ ಮೇಲೆ ರೌದ್ರಾವೇಶವುಳ್ಳವರಾಗಿ, ಯಾರೂ ತಪ್ಪಿಸಿಕೊಳ್ಳದಂತೆ ನಮ್ಮನ್ನು ಮುಗಿಸಿಬಿಡುವಿರಲ್ಲವೇ?


ಎಂತಲೇ ‘ಸಂಹರಿಸುವೆ’ ಎನ್ನಲು ಪ್ರಭು ಅವರನು I ಆಪ್ತ ಮೋಶೆಯು ಮಧ್ಯಸ್ಥನಾಗಿ ಬಂದನು I ಸಂಹರಿಸದಂತೆ ಶಮನಗೊಳಿಸಿದನಾ ಕೋಪವನು II


“ಯೆರೆಮೀಯನೇ, ನೀನಂತು ಈ ಜನರಿಗಾಗಿ ಬೇಡಿಕೊಳ್ಳಬೇಡ. ಇವರ ಪರವಾಗಿ ಮೊರೆ ಇಡಬೇಡ. ಪ್ರಾರ್ಥಿಸಲೂ ಬೇಡ, ನನ್ನ ಬಳಿ ವಿಜ್ಞಾಪಿಸಲೂ ಬೇಡ. ನಾನು ಅದನ್ನು ಕೇಳಲಾರೆ.


ಅಗಣಿತವಾಗಿರುತ್ತಿತ್ತು ನಿನ್ನ ಸಂತತಿ ಕಡಲ ಮರಳಿನಂತೆ, ನಿನ್ನ ಕರುಳಿನ ಕುಡಿಗಳು ಉಸುಬಿನ ಅಣುರೇಣುಗಳಂತೆ, ಅವರ ಹೆಸರುಗಳು ಕೆಟ್ಟು ಅಳಿದುಹೋಗುತ್ತಿರಲಿಲ್ಲ ನನ್ನ ಮುಂದೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು