Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 9:18 - ಕನ್ನಡ ಸತ್ಯವೇದವು C.L. Bible (BSI)

18 “ನೀವು ಹೀಗೆ ಅಪರಾಧಮಾಡಿ, ಸರ್ವೇಶ್ವರನ ದೃಷ್ಟಿಯಲ್ಲಿ ಕೆಟ್ಟದ್ದನ್ನು ನಡೆಸಿ, ಅವರನ್ನು ಕೋಪಗೊಳಿಸಿದ ಕಾರಣ ನಾನು ಮೊದಲಿನಂತೆ ಅನ್ನಪಾನಗಳನ್ನು ಬಿಟ್ಟು ನಲವತ್ತು ದಿನಗಳು ಹಗಲಿರುಳು ಸರ್ವೇಶ್ವರನ ಸನ್ನಿಧಿಯಲ್ಲೇ ಬಿದ್ದಿದ್ದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ನೀವು ಹೀಗೆ ಅಪರಾಧಮಾಡಿ ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದನ್ನು ನಡಿಸಿ ಆತನನ್ನು ಕೋಪಗೊಳಿಸಿದ ಕಾರಣ ನಾನು ಮೊದಲಿನಂತೆ ಅನ್ನ ಪಾನಗಳನ್ನು ಬಿಟ್ಟು ನಲ್ವತ್ತು ದಿನಗಳು ಹಗಲಿರುಳು ಯೆಹೋವನ ಸನ್ನಿಧಿಯಲ್ಲೇ ಬಿದ್ದಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ನೀವು ಹೀಗೆ ಅಪರಾಧಮಾಡಿ ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದನ್ನು ನಡಿಸಿ ಆತನನ್ನು ಕೋಪಗೊಳಿಸಿದ ಕಾರಣ ನಾನು ಮೊದಲಿನಂತೆ ಅನ್ನಪಾನಗಳನ್ನು ಬಿಟ್ಟು ನಾಲ್ವತ್ತು ದಿನಗಳು ಹಗಲಿರುಳು ಯೆಹೋವನ ಸನ್ನಿಧಿಯಲ್ಲೇ ಬಿದ್ದಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಆಮೇಲೆ ನಾನು ನಲವತ್ತು ದಿನ ಹಗಲಿರುಳು ಯೆಹೋವನ ಮುಂದೆ ಬೋರಲ ಬಿದ್ದಿದ್ದೆನು. ನಾನು ಊಟ ಮಾಡಲಿಲ್ಲ, ನೀರನ್ನು ಕುಡಿಯಲಿಲ್ಲ ಯಾಕೆಂದರೆ ನೀವು ಪಾಪಮಾಡಿ ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದ್ದರಿಂದ ಆತನು ಕೋಪಗೊಂಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಆಮೇಲೆ ನೀವು ಮಾಡಿದ ಎಲ್ಲಾ ಪಾಪಗಳ ನಿಮಿತ್ತವೂ ನೀವು ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿ ಅವರಿಗೆ ಕೋಪವನ್ನೆಬ್ಬಿಸಿದ ನಿಮಿತ್ತವೂ ಮುಂಚಿನಂತೆ ನಲವತ್ತು ದಿವಸ ಹಗಲುರಾತ್ರಿ ಊಟಮಾಡದೆ, ನೀರು ಕುಡಿಯದೆ, ಯೆಹೋವ ದೇವರ ಮುಂದೆ ಬಿದ್ದಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 9:18
11 ತಿಳಿವುಗಳ ಹೋಲಿಕೆ  

ಮೋಶೆ ಆ ಬೆಟ್ಟದಲ್ಲಿ ನಾಲ್ವತ್ತು ದಿನ ಹಗಲಿರುಳೂ ಅನ್ನಪಾನವಿಲ್ಲದೆ ಸರ್ವೇಶ್ವರನ ಸನ್ನಿಧಿಯಲ್ಲಿ ಇದ್ದನು. ಒಡಂಬಡಿಕೆಯ ವಾಕ್ಯಗಳನ್ನು, ಅಂದರೆ ಹತ್ತು ಆಜ್ಞೆಗಳನ್ನು, ಆ ಕಲ್ಲಿನ ಹಲಗೆಗಳ ಮೇಲೆ ಬರೆದನು.


ಸರ್ವೇಶ್ವರ ನಿಮ್ಮ ಸಂಗಡ ಮಾಡಿದ ಒಡಂಬಡಿಕೆಯನ್ನು ಬರೆದ ಆ ಕಲ್ಲಿನ ಹಲಗೆಗಳನ್ನು ತೆಗೆದುಕೊಳ್ಳುವುದಕ್ಕೆ ನಾನು ಬೆಟ್ಟವನ್ನು ಹತ್ತಿದಾಗ ಅನ್ನಪಾನಗಳನ್ನು ಬಿಟ್ಟು ಹಗಲಿರುಳು ನಲವತ್ತು ದಿನ ಆ ಬೆಟ್ಟದಲ್ಲಿದ್ದೆ.


ಎಂತಲೇ ‘ಸಂಹರಿಸುವೆ’ ಎನ್ನಲು ಪ್ರಭು ಅವರನು I ಆಪ್ತ ಮೋಶೆಯು ಮಧ್ಯಸ್ಥನಾಗಿ ಬಂದನು I ಸಂಹರಿಸದಂತೆ ಶಮನಗೊಳಿಸಿದನಾ ಕೋಪವನು II


ಆದುದರಿಂದ ದಾವೀದನು ಮಗುವಿಗಾಗಿ ದೇವರನ್ನು ಪ್ರಾರ್ಥಿಸುತ್ತಾ ಉಪವಾಸ ಮಾಡುತ್ತಾ ಒಳಕೋಣೆಯಲ್ಲಿ ನೆಲದ ಮೇಲೆಯೇ ಬಿದ್ದುಕೊಂಡು ರಾತ್ರಿ ಕಳೆಯುತ್ತಿದ್ದ.


“ನಾನು ಮುಂಚಿನಂತೆ ಹಗಲಿರುಳು ನಲವತ್ತು ದಿನವೂ ಬೆಟ್ಟದ ಮೇಲೆ ಇದ್ದೆ. ಸರ್ವೇಶ್ವರ ಆ ಕಾಲದಲ್ಲೂ ನನ್ನ ಪ್ರಾರ್ಥನೆಯನ್ನು ಕೇಳಿ, ನಿಮ್ಮನ್ನು ನಾಶಮಾಡಬೇಕೆಂಬ ಆಲೋಚನೆಯನ್ನು ಬಿಟ್ಟುಬಿಟ್ಟರು.


ಸ್ವಾಮಿ, ಸರ್ವೇಶ್ವರಾ, ನಿಮ್ಮ ಅನುಗ್ರಹ ನಮಗೆ ದೊರಕಿತಾದರೆ, ತಾವೇ ನಮ್ಮ ಜೊತೆಯಲ್ಲಿ ಬರಬೇಕು. ನಮ್ಮ ಜನರು ಹಟಮಾರಿಗಳು. ಆದರೂ ತಾವು ನಮ್ಮ ಪಾಪಗಳನ್ನೂ ಅಧರ್ಮಗಳನ್ನೂ ಕ್ಷಮಿಸಿ ನಿಮ್ಮ ಜನರಾಗುವಂತೆ ನಮ್ಮನ್ನು ಸ್ವೀಕರಿಸಿ,” ಎಂದು ಪ್ರಾರ್ಥಿಸಿದನು.


ಅದನ್ನು ನೋಡಿ ನಾನು ಕೈಯಲ್ಲಿದ್ದ ಆ ಎರಡು ಶಿಲಾಶಾಸನಗಳನ್ನು ನಿಮ್ಮ ಎದುರಿನಲ್ಲಿಯೇ ನೆಲಕ್ಕೆ ಹಾಕಿ ಒಡೆದುಬಿಟ್ಟೆ.


“ಸರ್ವೇಶ್ವರ ನಿಮ್ಮನ್ನು ನಾಶಮಾಡಬೇಕೆಂದಿದ್ದುದರಿಂದ ನಾನು ಆ ನಲವತ್ತು ದಿನವೂ ಹಗಲಿರುಳು ಅವರ ಸನ್ನಿಧಿಯಲ್ಲೇ ಬಿದ್ದಿದ್ದೆ.


ಅವನು ಎದ್ದು, ತಿಂದು, ಕುಡಿದು ಅದರ ಬಲದಿಂದ ನಾಲ್ವತ್ತು ದಿವಸ ಹಗಲಿರುಳು ಪ್ರಯಾಣ ಮಾಡಿದನು;


ಆಮೇಲೆ ಎಜ್ರನು ಎದ್ದು, ದೇವಾಲಯದ ಮುಂಭಾಗದ ಸ್ಥಳವನ್ನು ಬಿಟ್ಟು, ಎಲ್ಯಾಷೀಬನ ಮಗ ಯೆಹೋಹಾನಾನನ ಕೊಠಡಿಗೆ ಹೋಗಿ, ಅಲ್ಲಿ ಸೆರೆ ಇಂದ ಬಂದವರಿಗಾಗಿ ದುಃಖಿಸುತ್ತಾ ಅನ್ನಪಾನಗಳನ್ನು ತೆಗೆದುಕೊಳ್ಳದೆ ರಾತ್ರಿಯನ್ನು ಕಳೆದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು