Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 9:20 - ಕನ್ನಡ ಸತ್ಯವೇದವು C.L. Bible (BSI)

20 ಅದಲ್ಲದೆ, ಸರ್ವೇಶ್ವರ ಆರೋನನ ಮೇಲೆ ಬಹಳ ಸಿಟ್ಟುಗೊಂಡು, ಅವನನ್ನೂ ನಾಶಮಾಡಬೇಕೆಂದಿದ್ದರು. ಆದುದರಿಂದ ನಾನು ಅವನ ಪರವಾಗಿಯೂ ಆ ಕಾಲದಲ್ಲಿ ಪ್ರಾರ್ಥಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಅದಲ್ಲದೆ ಯೆಹೋವನು ಆರೋನನ ಮೇಲೆ ಬಹಳ ಸಿಟ್ಟುಗೊಂಡು ಅವನನ್ನೂ ನಾಶಮಾಡಬೇಕೆಂದಿದ್ದರಿಂದ ನಾನು ಅವನಿಗೋಸ್ಕರವಾಗಿಯೂ ಆ ಸಮಯದದಲ್ಲಿ ಪ್ರಾರ್ಥಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಅದಲ್ಲದೆ ಯೆಹೋವನು ಆರೋನನ ಮೇಲೆ ಬಹಳ ಸಿಟ್ಟುಗೊಂಡು ಅವನನ್ನೂ ನಾಶಮಾಡಬೇಕೆಂದಿದ್ದದರಿಂದ ನಾನು ಅವನಿಗೋಸ್ಕರವಾಗಿಯೂ ಆ ಕಾಲದಲ್ಲಿ ಪ್ರಾರ್ಥಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಯೆಹೋವನು ಆರೋನನನ್ನು ನಾಶಪಡಿಸುವಷ್ಟು ಕೋಪೋದ್ರಿಕ್ತನಾಗಿದ್ದನು. ನಾನು ಅವನಿಗಾಗಿ ಪ್ರಾರ್ಥಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಆರೋನನನ್ನು ನಾಶಮಾಡುವಂತೆ ಯೆಹೋವ ದೇವರು ಅವನ ಮೇಲೆಯೂ ಬಹಳ ಕೋಪಗೊಂಡರು. ಆದ್ದರಿಂದ ಆರೋನನಿಗೋಸ್ಕರವೂ ಆ ಸಮಯದಲ್ಲಿ ಪ್ರಾರ್ಥನೆ ಮಾಡಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 9:20
6 ತಿಳಿವುಗಳ ಹೋಲಿಕೆ  

ಇಸ್ರಯೇಲರು ಆರೋನನ ಕೈಯಿಂದ ಆ ಹೋರಿಕರುವನ್ನು ಮಾಡಿಸಿದ್ದರಿಂದ ಸರ್ವೇಶ್ವರ ಅವರನ್ನು ದಂಡಿಸಿದರು.


ಅಲ್ಲದೆ, ಆರೋನನನ್ನು ಉದ್ದೇಶಿಸಿ, “ನೀನು ಈ ಜನರಿಂದ ಮಹಾಪಾಪವನ್ನು ಮಾಡಿಸಿರುವೆ. ಹೀಗೆ ಮಾಡಿಸಲು ಇವರು ನಿನಗೇನು ಮಾಡಿದರು,” ಎಂದು ವಿಚಾರಿಸಿದನು. ಅದಕ್ಕೆ ಆರೋನನು,


ಸರ್ವೇಶ್ವರ ನಿಮ್ಮ ಮೇಲೆ ಬಹು ಕೋಪಗೊಂಡು ನಿಮ್ಮನ್ನು ನಾಶಮಾಡಬೇಕೆಂದು ಆಲೋಚಿಸಿದ್ದರಿಂದ ನಾನು ಹೆದರಿದೆ. ಆದರೆ ಆ ಕಾಲದಲ್ಲೂ ಅವರು ನನ್ನ ಮನವಿಯನ್ನು ಕೇಳಿದರು.


ಮತ್ತು ನಿಮ್ಮ ಪಾಪಕ್ಕೆ ಕಾರಣವಾದ ಆ ಹೋರಿಕರುವನ್ನು ನಾನು ತೆಗೆದುಕೊಂಡು, ಬೆಂಕಿಯಿಂದ ಸುಟ್ಟು, ಒಡೆದು, ಅರೆದು, ಧೂಳುಮಾಡಿ ಬೆಟ್ಟದಿಂದ ಹರಿಯುವ ಹಳ್ಳದಲ್ಲಿ ಬಿಸಾಡಿಬಿಟ್ಟೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು