Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 9:23 - ಕನ್ನಡ ಸತ್ಯವೇದವು C.L. Bible (BSI)

23 ಅದೂ ಅಲ್ಲದೆ, ಕಾದೇಶ್ ಬರ್ನೇಯದಲ್ಲಿ ಸರ್ವೇಶ್ವರ ನಿಮಗೆ, ‘ಬೆಟ್ಟದ ಸೀಮೆಯನ್ನು ಹತ್ತಿ ನಾನು ನಿಮಗೆ ಕೊಟ್ಟಿರುವ ನಾಡನ್ನು ಸ್ವಾಧೀನಮಾಡಿಕೊಳ್ಳಿ,’ ಎಂದು ಅಪ್ಪಣೆ ಕೊಟ್ಟಾಗಲೂ ನೀವು ನಿಮ್ಮ ದೇವರಾದ ಸರ್ವೇಶ್ವರನ ಆ ಆಜ್ಞೆಯನ್ನು ಧಿಕ್ಕರಿಸಿ ಅವರನ್ನು ನಂಬದೆ ಅವರ ಮಾತನ್ನು ಅಲಕ್ಷ್ಯಮಾಡಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಅದಲ್ಲದೆ ಕಾದೇಶ್ ಬರ್ನೇಯದಲ್ಲಿ ಯೆಹೋವನು ನಿಮಗೆ, “ಬೆಟ್ಟದ ಸೀಮೆಯನ್ನು ಹತ್ತಿ ನಾನು ನಿಮಗೆ ಕೊಟ್ಟಿರುವ ದೇಶವನ್ನು ಸ್ವಾಧೀನಮಾಡಿಕೊಳ್ಳಿರಿ” ಎಂದು ಅಪ್ಪಣೆಕೊಟ್ಟಾಗಲೂ ನೀವು ನಿಮ್ಮ ದೇವರಾದ ಯೆಹೋವನ ಆ ಆಜ್ಞೆಯನ್ನು ಧಿಕ್ಕರಿಸಿ, ಆತನನ್ನು ನಂಬದೆ, ಆತನ ಮಾತನ್ನು ಅಲಕ್ಷ್ಯ ಮಾಡಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಅದಲ್ಲದೆ ಕಾದೇಶ್‍ಬರ್ನೇಯದಲ್ಲಿ ಯೆಹೋವನು ನಿಮಗೆ - ಬೆಟ್ಟದ ಸೀಮೆಯನ್ನು ಹತ್ತಿ ನಾನು ನಿಮಗೆ ಕೊಟ್ಟಿರುವ ದೇಶವನ್ನು ಸ್ವಾಧೀನಮಾಡಿಕೊಳ್ಳಿರಿ ಎಂದು ಅಪ್ಪಣೆಕೊಟ್ಟಾಗಲೂ ನೀವು ನಿಮ್ಮ ದೇವರಾದ ಯೆಹೋವನ ಆ ಆಜ್ಞೆಯನ್ನು ಧಿಕ್ಕರಿಸಿ ಆತನನ್ನು ನಂಬದೆ ಆತನ ಮಾತನ್ನು ಅಲಕ್ಷ್ಯಮಾಡಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಕಾದೇಶ್‌ಬರ್ನೇಯದಿಂದ ಹೊರಡಲು ಆತನು ನಿಮಗೆ ಹೇಳಿದಾಗ ನೀವು ಆತನಿಗೆ ವಿಧೇಯರಾಗಲಿಲ್ಲ. ಆತನು ನಿಮಗೆ, ‘ನೀವು ಬೆಟ್ಟಪ್ರದೇಶವನ್ನು ಹತ್ತಿಹೋಗಿ ನಾನು ನಿಮಗೆ ಕೊಡುವ ದೇಶವನ್ನು ವಶಪಡಿಸಿಕೊಳ್ಳಿ’ ಎಂದು ಹೇಳಿದಾಗ ನಿಮ್ಮ ದೇವರಾದ ಯೆಹೋವನಿಗೆ ವಿಧೇಯರಾಗಲಿಲ್ಲ. ನೀವು ಆತನಲ್ಲಿ ಭರವಸೆ ಇಡಲಿಲ್ಲ. ನೀವು ಆತನ ಆಜ್ಞೆಗೆ ಕಿವಿಗೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಇದಲ್ಲದೆ ಯೆಹೋವ ದೇವರು ನಿಮ್ಮನ್ನು ಕಾದೇಶ್ ಬರ್ನೇಯದಿಂದ ಕಳುಹಿಸಿ, “ನೀವು ಹೋಗಿ ನಾನು ನಿಮಗೆ ಕೊಡುವ ದೇಶವನ್ನು ಸ್ವಾಧೀನಮಾಡಿಕೊಳ್ಳಿರಿ,” ಎಂದು ಹೇಳಿದಾಗ, ನೀವು ನಿಮ್ಮ ದೇವರಾದ ಯೆಹೋವ ದೇವರ ಅಪ್ಪಣೆಗೆ ವಿರೋಧವಾಗಿ ತಿರುಗಿಬಿದ್ದು ಅವರನ್ನು ನಂಬಲಿಲ್ಲ. ಅವರ ಮಾತನ್ನೂ ಕೇಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 9:23
13 ತಿಳಿವುಗಳ ಹೋಲಿಕೆ  

ಶುಭವಾರ್ತೆಯನ್ನು ಅವರಿಗೆ ಸಾರಲಾದಂತೆ ನಮಗೂ ಸಾರಲಾಯಿತು. ಅವರು ಅದನ್ನು ಆಲಿಸಿದರು; ಆದರೆ ಅವರಲ್ಲಿ ವಿಶ್ವಾಸವಿರಲಿಲ್ಲ. ಈ ಕಾರಣ, ಅವರು ಕೇಳಿದ ಸಂದೇಶದಿಂದ ಫಲ ಪಡೆಯದೆ ಹೋದರು.


ಅವರಾದರೋ ಬಂಡಾಯವೆದ್ದರು; ಸ್ವಾಮಿಯ ಪವಿತ್ರಾತ್ಮನನ್ನು ದುಃಖಪಡಿಸಿದರು. ಎಂತಲೇ ಸರ್ವೇಶ್ವರ ಅವರಿಗೆ ಶತ್ರುವಾಗಿ ಮಾರ್ಪಟ್ಟರು, ತಾವೇ ಅವರಿಗೆ ವಿರುದ್ಧವಾಗಿ ಹೋರಾಡಿದರು.


ಏಕೆನೆ, ಅವರಿಗಿರಲಿಲ್ಲ ವಿಶ್ವಾಸ ದೇವರಲಿ I ಇರಲಿಲ್ಲ ನಂಬಿಕೆ ಆತನಾ ಸಲಹುವ ಶಕ್ತಿಯಲಿ II


ಸರ್ವೇಶ್ವರ ಸ್ವಾಮಿ ಮೋಶೆಗೆ:


ಆದ್ದರಿಂದ ಸರ್ವೇಶ್ವರನಿಗೆ ವಿರುದ್ಧ ದಂಗೆ ಏಳಬೇಡಿ. ಆ ನಾಡಿನ ಜನರಿಗೆ ದಿಗಿಲುಪಡಬೇಡಿ. ಅವರು ನಮಗೆ ತುತ್ತಾಗುವರು. ನಾವು ಪುಷ್ಠಿಯಾಗುವೆವು. ಅವರಿಗೆ ನೆರಳಾಗಿದ್ದ ದೇವರು ಅವರನ್ನು ಕೈಬಿಟ್ಟಿದ್ದಾನೆ. ಸರ್ವೇಶ್ವರ ನಮ್ಮ ಕಡೆ ಇದ್ದಾರೆ. ಅವರಿಗೆ ಭಯಪಡಬೇಡಿ”


(ಹೋರೇಬಿನಿಂದ ಸೇಯಿರ್ ಬೆಟ್ಟಗಳ ಮಾರ್ಗವಾಗಿ ಕಾದೇಶ್ ಬರ್ನೇಯದವರೆಗೆ ಹನ್ನೊಂದು ದಿನದ ಪ್ರಯಾಣ.)


ಎಂದೇ ಇಂತೆಂದುಕೊಂಡನು; ಇವರಿಗೆ ವಿಮುಖನಾಗುವೆನು, ಇವರಿಗೊದಗಲಿರುವ ಗತಿಯನು ನೋಡುವೆನು. ಸತ್ಯವರಿತೂ ಅನುಸರಿಸದೆ ಹೋದರು ಈ ವಿದ್ರೋಹ ಮಕ್ಕಳಂತವರು.


ಜನರೆಲ್ಲರು, ಈ ವರದಿಯನ್ನು ಕೇಳಿ ಗಟ್ಟಿಯಾಗಿ ಗೋಳಿಟ್ಟರು. ರಾತ್ರಿಯೆಲ್ಲಾ ಅಳುತ್ತಿದ್ದರು.


ಇಸ್ರಯೇಲರೆಲ್ಲರು ಮೋಶೆ ಮತ್ತು ಆರೋನರ ವಿರುದ್ಧ ಗುಣಗುಟ್ಟಿದರು. “ಈಜಿಪ್ಟಿನಲ್ಲೇ ನಾವು ಸತ್ತಿದ್ದರೆ ಚೆನ್ನಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು