Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 9:27 - ಕನ್ನಡ ಸತ್ಯವೇದವು C.L. Bible (BSI)

27 ಇವರ ಮೊಂಡುತನ, ದುಷ್ಟತನ, ಪಾಪ ಇವುಗಳನ್ನು ಮನಸ್ಸಿಗೆ ತೆಗೆದುಕೊಳ್ಳದೆ ನಿಮ್ಮ ದಾಸರಾದ ಅಬ್ರಹಾಮ್, ಇಸಾಕ್, ಯಕೋಬರನ್ನು ನೆನಪಿಗೆ ತಂದುಕೊಳ್ಳಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಇವರ ಮೊಂಡುತನ, ದುಷ್ಟತ್ವ, ಪಾಪ ಇವುಗಳನ್ನು ಮನಸ್ಸಿಗೆ ತೆಗೆದುಕೊಳ್ಳದೆ ನಿನ್ನ ಸೇವಕರಾದ ಅಬ್ರಹಾಮ್, ಇಸಾಕ್ ಮತ್ತು ಯಾಕೋಬರನ್ನು ನೆನಪಿಗೆ ತಂದುಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಇವರ ಮೊಂಡತನ, ದುಷ್ಟತ್ವ, ಪಾಪ ಇವುಗಳನ್ನು ಮನಸ್ಸಿಗೆ ತೆಗೆದುಕೊಳ್ಳದೆ ನಿನ್ನ ಸೇವಕರಾದ ಅಬ್ರಾಹಾಮ್ ಇಸಾಕ್ ಯಾಕೋಬರನ್ನು ನೆನಪಿಗೆ ತಂದುಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಯೆಹೋವನೇ, ನೀನು ಅಬ್ರಹಾಮನಿಗೆ, ಇಸಾಕನಿಗೆ, ಯಾಕೋಬನಿಗೆ ಮಾಡಿದ ವಾಗ್ದಾನವನ್ನು ನಿನ್ನ ನೆನಪಿಗೆ ತಂದುಕೋ. ಇವರು ಎಷ್ಟು ಹಠಮಾರಿಗಳೆಂಬುದನ್ನು ಮರೆತುಬಿಡು. ಅವರ ಪಾಪಮಾರ್ಗವನ್ನಾಗಲಿ ಪಾಪಗಳನ್ನಾಗಲಿ ನೋಡಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ನಿಮ್ಮ ದಾಸರಾದ ಅಬ್ರಹಾಮ್, ಇಸಾಕ್, ಯಾಕೋಬರನ್ನು ಜ್ಞಾಪಕಮಾಡಿಕೊಳ್ಳಿರಿ. ಈ ಜನರ ಕಾಠಿಣ್ಯದ ಮೇಲೆಯೂ, ಅವರ ದುಷ್ಟತ್ವದ ಮೇಲೆಯೂ, ಅವರ ಪಾಪದ ಮೇಲೆಯೂ ದೃಷ್ಟಿ ಇಡಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 9:27
19 ತಿಳಿವುಗಳ ಹೋಲಿಕೆ  

ನಿಮ್ಮ ನಾಮವನ್ನು ಮುಂದಿಟ್ಟು, ನಮಗೆ ಅವಮಾನ ಮಾಡಬೇಡಿ ನಿಮ್ಮ ಮಹಿಮೆಯ ಸಿಂಹಾಸನವನ್ನು ಅಸಡ್ಡೆ ಮಾಡಬೇಡಿ ನಮ್ಮೊಡನೆ ಮಾಡಿದ ಒಡಂಬಡಿಕೆಯನ್ನು ನೆನೆಯಿರಿ. ಅದನ್ನು ಭಂಗಪಡಿಸಬೇಡಿ.


ಆ ದಿನಗಳಲ್ಲಿ, ಆ ಕಾಲದಲ್ಲಿ ಇಸ್ರಯೇಲಿನ ಅಧರ್ಮವನ್ನು ಎಲ್ಲಿ ಹುಡುಕಿದರೂ ಸಿಗದು. ಜುದೇಯದ ಪಾಪವನ್ನು ತಡಕಿದರೂ ಸಿಗದು. ಏಕೆಂದರೆ ನಾನು ಉಳಿಸಿದ ಜನಶೇಷವನ್ನು ಕ್ಷಮಿಸಿಬಿಡುವೆನು. ಇದು ಸರ್ವೇಶ್ವರನಾದ ನನ್ನ ನುಡಿ.”


ಸತ್ಯಸ್ವರೂಪನ ದೃಷ್ಟಿ ದುಷ್ಟರ ಮನೆಯ ಮೇಲೆ; ಆ ದುರುಳರನ್ನು ದಬ್ಬಿಬಿಡುವನು ಕೇಡಿಗೆ.


ಮರೆಯರು ನನ್ನ ಮಹತ್ಕಾರ್ಯಗಳನು I ಇಡುವರು ನನ್ನಲ್ಲೇ ಭರವಸೆಯನು I ಕೈಗೊಳ್ಳುವರು ನನ್ನ ಆಜ್ಞೆಗಳನು II


ಒಡೆಯಾ, ಮಂದಮತಿಯಾದ ಆ ನಾಬಾಲನನ್ನು ತಾವು ಲಕ್ಷಿಸಬೇಡಿ. ಅವನ ಹೆಸರು ನಾಬಾಲ್; ಅದಕ್ಕೆ ತಕ್ಕಂತೆ ಮೂರ್ಖನೇ ಆಗಿರುತ್ತಾನೆ. ನಿಮ್ಮ ದಾಸಿಯಾದ ನಾನು, ತಾವು ಕಳುಹಿಸಿದ ಸೇವಕರನ್ನು ನೋಡಲಿಲ್ಲ.


ತಮ್ಮ ದಾಸರಾದ ಅಬ್ರಹಾಮ್, ಇಸಾಕ್ ಹಾಗು ಯಕೋಬರನ್ನು ನೆನಪಿಗೆ ತಂದುಕೊಳ್ಳಿ. ತಾವು ತಮ್ಮ ಜೀವದಾಣೆ ಪ್ರಮಾಣ ಮಾಡಿ ಅವರಿಗೆ, ‘ನಾನು ನಿಮ್ಮ ಸಂತತಿಯನ್ನು ಹೆಚ್ಚಿಸಿ ಆಕಾಶದ ನಕ್ಷತ್ರಗಳಷ್ಟು ಅಸಂಖ್ಯವಾಗಿ ಮಾಡುವೆನು; ನಾನು ಸೂಚಿಸಿರುವ ಈ ಪ್ರದೇಶಗಳನ್ನೆಲ್ಲಾ ನಿಮ್ಮ ಸಂತತಿಯವರಿಗೆ ಕೊಡುವೆನು; ಮತ್ತು ಅವರು ಈ ನಾಡನ್ನು ಶಾಶ್ವತವಾಗಿ ಸ್ವಾಧೀನದಲ್ಲಿಟ್ಟುಕೊಳ್ಳುವರು’ ಎಂದು ತಾವು ಮಾತುಕೊಡಲಿಲ್ಲವೆ?” ಎಂದನು.


ಸರ್ವೇಶ್ವರ ನಿಮ್ಮ ಪೂರ್ವಜರಿಗೆ ಪ್ರಮಾಣವಾಗಿ ಹೇಳಿದಂತೆ ನಿಮ್ಮನ್ನು ಹಾಲೂ ಜೇನೂ ಹರಿಯುವ ನಾಡಿಗೆ, ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಹಿವ್ವಿಯರು ಹಾಗು ಯೆಬೂಸಿಯರು ವಾಸವಾಗಿರುವ ನಾಡಿಗೆ ಕರೆದು ತಂದು ಅದನ್ನು ನಿಮಗೆ ಕೊಟ್ಟಾಗ, ನೀವು ಈ ಆಚರಣೆಯನ್ನು ಈ ತಿಂಗಳಿನಲ್ಲೇ ನಡೆಸಬೇಕು.


ನೀನು ಹೋಗಿ ಇಸ್ರಯೇಲರ ಹಿರಿಯರನ್ನು ಕೂಡಿಸು. ಅವರಿಗೆ, “ನಿಮ್ಮ ಪೂರ್ವಜರ ದೇವರು, ಅಂದರೆ ಅಬ್ರಹಾಮ, ಇಸಾಕ ಹಾಗು ಯಕೋಬರ ದೇವರು ಆಗಿರುವ ಸರ್ವೇಶ್ವರ ನನಗೆ ದರ್ಶನಕೊಟ್ಟು ನಿಮ್ಮ ವಿಷಯದಲ್ಲಿ ಹೀಗೆಂದಿದ್ದಾರೆ: ನಿಮ್ಮನ್ನೂ ಈಜಿಪ್ಟ್ ದೇಶದಲ್ಲಿ ನಿಮಗೆ ಸಂಭವಿಸಿದ್ದೆಲ್ಲವನ್ನೂ ನಾನು ಕಣ್ಣಾರೆ ಕಂಡು ತಿಳಿದುಕೊಂಡಿದ್ದೇನೆ.


ಅದೂ ಅಲ್ಲದೆ, “ನಾನು ನಿನ್ನ ತಂದೆಯ ದೇವರು, ಅಬ್ರಹಾಮನ ದೇವರು, ಇಸಾಕನ ದೇವರು, ಯಕೋಬನ ದೇವರು,” ಎಂದರು. ಆಗ ಮೋಶೆ ದೇವರನ್ನು ದಿಟ್ಟಿಸಿ ನೋಡಲು ಭಯಪಟ್ಟು ಮುಖವನ್ನು ಮುಚ್ಚಿಕೊಂಡನು.


ದೇವರು ಆ ಬಯಲುಸೀಮೆಯ ಪಟ್ಟಣಗಳನ್ನು ನಾಶಮಾಡಿದಾಗ ಲೋಟನು ವಾಸವಾಗಿದ್ದ ಊರುಗಳನ್ನೇನೋ ಹಾಳುಮಾಡಿದರು, ಆದರೆ ಅಬ್ರಹಾಮನನ್ನು ನೆನಪಿಗೆ ತಂದುಕೊಂಡು ಲೋಟನನ್ನು ತಪ್ಪಿಸಿ ಕಾಪಾಡಿದರು.


ನಾನು ಅವರನ್ನು ಬೇಡಿಕೊಳ್ಳುತ್ತಾ, ‘ಸರ್ವೇಶ್ವರಾ, ದೇವರೇ, ನೀವು ನಿಮ್ಮ ಮಹಿಮೆಯಿಂದ ರಕ್ಷಿಸಿ, ನಿಮ್ಮ ಭುಜಬಲ ಪ್ರಯೋಗಿಸಿ ಈಜಿಪ್ಟಿನಿಂದ ಬಿಡುಗಡೆಮಾಡಿದ ನಿಮ್ಮ ಸ್ವಕೀಯ ಜನರನ್ನು ನಾಶಮಾಡಬೇಡಿ.


ನೀವು ಯಾವ ದೇಶದಿಂದ ನಮ್ಮನ್ನು ಬರಮಾಡಿದಿರೋ ಆ ದೇಶದವರು, ‘ಸರ್ವೇಶ್ವರ ಇಸ್ರಯೇಲರಿಗೆ ವಾಗ್ದಾನಮಾಡಿದ ನಾಡಿಗೆ ಅವರನ್ನು ಸೇರಿಸಲಾರದೆ ಹಗೆಮಾಡಿ, ಮರುಭೂಮಿಯಲ್ಲಿ ಕೊಲ್ಲುವುದಕ್ಕೇ ಕರೆದುಕೊಂಡು ಹೋದರು’ ಎಂದು ಹೇಳುವುದಕ್ಕೆ ಆಸ್ಪದವಾದೀತು.


ಯಕೋಬ್, ಇಸಾಕ್ ಹಾಗು ಅಬ್ರಹಾಮ್ ಇವರಿಗೆ ಮಾಡಿದ ವಾಗ್ದಾನಗಳನ್ನು ನೆನಪಿಗೆ ತಂದುಕೊಳ್ಳುವೆನು. ಅವುಗಳನ್ನು ನೆರವೇರಿಸುವೆನು. ಅವರ ಸ್ವಂತ ನಾಡನ್ನು ಕರುಣೆಯಿಂದ ಜ್ಞಾಪಿಸಿಕೊಳ್ಳುವೆನು.


ಅವರ ಪೂರ್ವಜರ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ನೆನಪಿಗೆ ತಂದುಕೊಂಡು ಅವರಿಗೆ ಹಿತವನ್ನೇ ಮಾಡುವೆನು. ನಾನು ಅವರಿಗೆ ದೇವರಾಗಿರಬೇಕೆಂದೇ ಅವರ ಪೂರ್ವಜರನ್ನು ಎಲ್ಲ ಜನಾಂಗಗಳ ಕಣ್ಮುಂದೆಯೇ ಈಜಿಪ್ಟಿನಿಂದ ಬರಮಾಡಿದೆನು. ನಾನು ಸರ್ವೇಶ್ವರ.”


ಪಾಪಗಳ ನೀ ಪಟ್ಟಿಮಾಡಿದೆಯಾದರೆ ಪ್ರಭು I ನಿನ್ನ ಮುಂದೆ ಯಾರುತಾನೆ ನಿಲ್ಲಬಲ್ಲರು ವಿಭು? II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು