ಧರ್ಮೋಪದೇಶಕಾಂಡ 9:28 - ಕನ್ನಡ ಸತ್ಯವೇದವು C.L. Bible (BSI)28 ನೀವು ಯಾವ ದೇಶದಿಂದ ನಮ್ಮನ್ನು ಬರಮಾಡಿದಿರೋ ಆ ದೇಶದವರು, ‘ಸರ್ವೇಶ್ವರ ಇಸ್ರಯೇಲರಿಗೆ ವಾಗ್ದಾನಮಾಡಿದ ನಾಡಿಗೆ ಅವರನ್ನು ಸೇರಿಸಲಾರದೆ ಹಗೆಮಾಡಿ, ಮರುಭೂಮಿಯಲ್ಲಿ ಕೊಲ್ಲುವುದಕ್ಕೇ ಕರೆದುಕೊಂಡು ಹೋದರು’ ಎಂದು ಹೇಳುವುದಕ್ಕೆ ಆಸ್ಪದವಾದೀತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ನೀನು ಯಾವ ದೇಶದಿಂದ ನಮ್ಮನ್ನು ಬರಮಾಡಿದಿಯೋ ಆ ದೇಶದವರು, ‘ಯೆಹೋವನು ಇಸ್ರಾಯೇಲರಿಗೆ ವಾಗ್ದಾನಮಾಡಿದ ದೇಶಕ್ಕೆ ಅವರನ್ನು ಸೇರಿಸಲಾರದೆ ಹಗೆಮಾಡಿ ಅರಣ್ಯದಲ್ಲಿ ಕೊಲ್ಲುವುದಕ್ಕೆ ಕರೆದುಕೊಂಡು ಹೋದನು’ ಎಂದು ಹೇಳುವುದಕ್ಕೆ ಆಸ್ಪದವಾದೀತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ನೀನು ಯಾವ ದೇಶದಿಂದ ನಮ್ಮನ್ನು ಬರಮಾಡಿದಿಯೋ ಆ ದೇಶದವರು - ಯೆಹೋವನು ಇಸ್ರಾಯೇಲ್ಯರಿಗೆ ವಾಗ್ದಾನಮಾಡಿದ ದೇಶಕ್ಕೆ ಅವರನ್ನು ಸೇರಿಸಲಾರದೆ ಹಗೆಮಾಡಿ ಅರಣ್ಯದಲ್ಲಿ ಕೊಲ್ಲುವದಕ್ಕೆ ಕರಕೊಂಡು ಹೋದನೆಂದು ಹೇಳುವದಕ್ಕೆ ಆಸ್ಪದವಾದೀತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ನೀನು ಇವರಿಗೆ ಶಿಕ್ಷೆಕೊಟ್ಟರೆ ಈಜಿಪ್ಟಿನವರು, “ದೇವರು ತನ್ನ ಜನರನ್ನು ತಾನು ವಾಗ್ದಾನ ಮಾಡಿದ ದೇಶಕ್ಕೆ ನಡೆಸಲು ಅಸಮರ್ಥನಾದನು. ಆತನು ಅವರನ್ನು ದ್ವೇಷಿಸುತ್ತಾನೆ; ಆದ್ದರಿಂದ ಅವರನ್ನು ಮರುಭೂಮಿಯಲ್ಲಿ ಹತಮಾಡಲು ಕೊಂಡೊಯ್ದಿದ್ದಾನೆ” ಎಂದು ಹೇಳುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ನೀವು ಯಾವ ದೇಶದಿಂದ ನಮ್ಮನ್ನು ಬರಮಾಡಿದಿರೋ, ಆ ದೇಶದವರು, ‘ಯೆಹೋವ ದೇವರು ಇಸ್ರಾಯೇಲರಿಗೆ ವಾಗ್ದಾನ ಮಾಡಿದ ನಾಡಿಗೆ ಅವರನ್ನು ಸೇರಿಸಲಾರದೆ ಹಗೆಮಾಡಿ, ಮರುಭೂಮಿಯಲ್ಲಿ ಕೊಲ್ಲುವುದಕ್ಕೆ ಕರೆದುಕೊಂಡು ಹೋದರು’ ಎಂದು ಹೇಳುವುದಕ್ಕೆ ಆಸ್ಪದವಾದೀತು. ಅಧ್ಯಾಯವನ್ನು ನೋಡಿ |
ಈಜಿಪ್ಟಿನವರು ತಮ್ಮ ವಿಷಯದಲ್ಲಿ, ‘ಸರ್ವೇಶ್ವರನು ಕೇಡುಮಾಡಬೇಕೆಂಬ ಉದ್ದೇಶದಿಂದಲೇ ಇಸ್ರಯೇಲರನ್ನು ಇಲ್ಲಿಂದ ಕರೆದುಕೊಂಡು ಹೋದದ್ದು; ಅವರನ್ನು ಬೆಟ್ಟಗುಡ್ಡಗಳಲ್ಲಿ ಸಾಯಿಸಿ ಇಳೆಯಲ್ಲಿ ಉಳಿಯದಂತೆ ನಿರ್ಮೂಲ ಮಾಡಬೇಕೆಂದೇ ಅವರನ್ನು ಕರೆದುಕೊಂಡು ಹೋದದ್ದು ಎಂದು ಆಡಿಕೊಳ್ಳುವುದಕ್ಕೆ ಎಡೆಮಾಡಿಕೊಳ್ಳಬೇಕೆ? ತಾವು ಕೋಪಾಗ್ನಿಯನ್ನು ಬಿಟ್ಟು ತಮ್ಮ ಪ್ರಜೆಗೆ ಕೇಡುಮಾಡಬೇಕೆಂಬ ಮನಸ್ಸನ್ನು ಮಾರ್ಪಡಿಸಿಕೊಳ್ಳಿ.