Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 9:3 - ಕನ್ನಡ ಸತ್ಯವೇದವು C.L. Bible (BSI)

3 ಆದುದರಿಂದ ನಿಮ್ಮ ದೇವರಾದ ಸರ್ವೇಶ್ವರ ತಾವೇ, ವಿರೋಧಿಗಳನ್ನು ದಹಿಸುವ ಬೆಂಕಿಯೋಪಾದಿಯಲ್ಲಿ ನಿಮ್ಮ ಮುಂದೆ ಹೋಗುತ್ತಾರೆಂದು ಈಗ ತಿಳಿದುಕೊಳ್ಳಿ. ಅವರೇ ಆ ವಿರೋಧಿಗಳನ್ನು ನಾಶಮಾಡುವರು; ನಿಮ್ಮ ಮುಂದೆ ಆ ವಿರೋಧಿಗಳು ಸೋತುಹೋಗುವಂತೆ ಮಾಡುವರು. ಸರ್ವೇಶ್ವರ ನಿಮಗೆ ಹೇಳಿದಂತೆ ನೀವು ಅವರನ್ನು ಹೊರಡಿಸಿ ಬೇಗನೆ ನಾಶಮಾಡುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆದುದರಿಂದ ನಿಮ್ಮ ದೇವರಾದ ಯೆಹೋವನು ತಾನೇ ವಿರೋಧಿಗಳನ್ನು ದಹಿಸುವ ಬೆಂಕಿಯೋಪಾದಿಯಲ್ಲಿ ನಿಮ್ಮ ಮುಂದೆ ಹೋಗುತ್ತಾನೆಂದು ಈಗ ತಿಳಿದುಕೊಳ್ಳಿರಿ. ಆತನೇ ಅವರನ್ನು ನಾಶಮಾಡುವನು; ಆತನೇ ಅವರನ್ನು ನಿಮ್ಮ ಮುಂದೆ ಸೋತುಹೋಗುವಂತೆ ಮಾಡುವನು. ಯೆಹೋವನು ನಿಮಗೆ ಹೇಳಿದಂತೆ ನೀವು ಅವರನ್ನು ಹೊರಡಿಸಿ, ಬೇಗನೆ ನಾಶಮಾಡುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆದದರಿಂದ ನಿಮ್ಮ ದೇವರಾದ ಯೆಹೋವನು ತಾನೇ ವಿರೋಧಿಗಳನ್ನು ದಹಿಸುವ ಬೆಂಕಿಯೋಪಾದಿಯಲ್ಲಿ ನಿಮ್ಮ ಮುಂದೆ ಹೋಗುತ್ತಾನೆಂದು ಈಗ ತಿಳಿದುಕೊಳ್ಳಿರಿ. ಆತನೇ ಅವರನ್ನು ನಾಶ ಮಾಡುವನು; ಆತನೇ ಅವರನ್ನು ನಿಮ್ಮ ಮುಂದೆ ಸೋತುಹೋಗುವಂತೆ ಮಾಡುವನು. ಯೆಹೋವನು ನಿಮಗೆ ಹೇಳಿದಂತೆ ನೀವು ಅವರನ್ನು ಹೊರಡಿಸಿ ಬೇಗನೆ ನಾಶಮಾಡುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆದರೆ ನಿಮ್ಮ ದೇವರಾದ ಯೆಹೋವನು ನಿಮ್ಮ ಮುಂದೆ ನದಿಯನ್ನು ದಾಟುತ್ತಾನೆಂಬುದು ನಿಮಗೆ ನಿಶ್ಚಯವಾಗಿ ತಿಳಿದಿರಲಿ. ಆತನು ದಹಿಸುವ ಬೆಂಕಿಯಂತಿದ್ದಾನೆ. ಆತನು ಆ ಜನಾಂಗಗಳನ್ನು ಬೇಗನೆ ನಾಶಪಡಿಸುವನು; ನಿಮ್ಮ ಎದುರಿನಲ್ಲಿ ಅವರು ಬಿದ್ದುಹೋಗುವಂತೆ ಮಾಡುವನು. ಇದು ನೆರವೇರುವುದಾಗಿ ಯೆಹೋವನೇ ನಿಮಗೆ ವಾಗ್ದಾನ ಮಾಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಹೀಗಿರುವುದರಿಂದ ನೀವು ಈ ಹೊತ್ತು ತಿಳಿದುಕೊಳ್ಳತಕ್ಕದ್ದೇನೆಂದರೆ, ನಿಮ್ಮ ದೇವರಾದ ಯೆಹೋವ ದೇವರೇ ನಿಮ್ಮ ಮುಂದೆ ಹೋಗುತ್ತಾರೆ. ಅವರು ದಹಿಸುವ ಅಗ್ನಿಯಾಗಿ ಅವರನ್ನು ನಾಶಮಾಡುವರು. ದೇವರು ಅವರನ್ನು ನಿಮ್ಮ ಮುಂದೆ ಸೋಲಿಸುವರು. ಯೆಹೋವ ದೇವರು ನಿಮಗೆ ಹೇಳಿದ ಹಾಗೆ ನೀವು ಅವರನ್ನು ಸ್ವಾಧೀನಪಡಿಸಿಕೊಂಡು ಅವರನ್ನು ಬೇಗ ತೆಗೆದುಹಾಕುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 9:3
34 ತಿಳಿವುಗಳ ಹೋಲಿಕೆ  

ಏಕೆಂದರೆ ನಿಮ್ಮ ದೇವರಾದ ಸರ್ವೇಶ್ವರ ಕಬಳಿಸಿಬಿಡುವ ಅಗ್ನಿಯಂಥವರು; ತಮಗೆ ಸಲ್ಲಬೇಕಾದ ಗೌರವವನ್ನು ಮತ್ತೊಬ್ಬನಿಗೆ ಸಲ್ಲಗೊಡದ ದೇವರು.


ಏಕೆಂದರೆ, ನಮ್ಮ ದೇವರು ದಹಿಸುವ ಅಗ್ನಿ.


ಹೀಗಿರುವಲ್ಲಿ ನಾವು ಏನು ಹೇಳೋಣ? ದೇವರೇ ನಮ್ಮ ಪರ ಇರುವಾಗ ನಮ್ಮನ್ನು ವಿರೋಧಿಸುವವರು ಯಾರು?


ನಿಮ್ಮ ದೇವರಾದ ಸರ್ವೇಶ್ವರನೇ ನಿಮ್ಮ ಸಂಗಡ ಇದ್ದು ಶತ್ರುಗಳೊಡನೆ ನಿಮ್ಮ ಪರವಾಗಿ ಯುದ್ಧಮಾಡಿ, ನಿಮಗೆ ಜಯವನ್ನುಂಟುಮಾಡುವರು’ ಎಂದು ಹೇಳಬೇಕು


ಹೇಗೆಂದರೆ - ಸರ್ವಲೋಕದ ಒಡೆಯನ ಒಡಂಬಡಿಕೆಯ ಮಂಜೂಷವು ನಿಮ್ಮ ಮುಂದಾಗಿ ಹೋಗಿ ಜೋರ್ಡನಿನಲ್ಲಿ ಇಳಿಯುವುದು.


ಬಾಗಿಲನ್ನು ಒಡೆದು ತೆರೆಯುವಂಥವನು ಜನರ ಮುಂದಾಳಾಗಿ ಹೊರಡುವನು; ಅವರೂ ಬಾಗಿಲನ್ನು ಒಡೆದು ನುಗ್ಗುವರು; ಅವರ ಅರಸನು ಮುಂದಾಳಾಗಿ ಹೋಗುವನು. ಸರ್ವೇಶ್ವರಸ್ವಾಮಿಯೇ ಅವರ ಮುಂದಾಳತ್ವವನ್ನು ವಹಿಸುವರು.


ನಿಮ್ಮ ಮುಂದುಗಡೆಯಲ್ಲೇ ಹೋಗುವ ನಿಮ್ಮ ದೇವರಾದ ಸರ್ವೇಶ್ವರ ಈಜಿಪ್ಟ್ ದೇಶದಲ್ಲೂ ನೀವು ನೋಡಿದ ಮರುಭೂಮಿಯಲ್ಲೂ ಪ್ರತ್ಯಕ್ಷರಾಗಿ ನಿಮ್ಮ ಪರವಾಗಿ ಯುದ್ಧಮಾಡಿದಂತೆಯೇ, ಈಗಲೂ ನಿಮ್ಮ ಕಡೆಯವರಾಗಿದ್ದು ಯುದ್ಧಮಾಡುವರು.


ಜನರು ಜೋರ್ಡನ್ ನದಿಯನ್ನು ದಾಟಲು ತಮ್ಮ ತಮ್ಮ ಡೇರೆಗಳಿಂದ ಹೊರಟರು. ಒಡಂಬಡಿಕೆಯ ಮಂಜೂಷವನ್ನು ಹೊತ್ತ ಯಾಜಕರು ಅವರ ಮುಂದೆ ಇದ್ದರು.


ಬುದ್ಧಿಹೀನರಾಗಿರದೆ ಪ್ರಭುವಿನ ಚಿತ್ತವೇನೆಂದು ಗ್ರಹಿಸಿಕೊಳ್ಳಿರಿ.


ಅನಂತರ ಯೇಸುಸ್ವಾಮಿ ಜನರ ಗುಂಪನ್ನು ತಮ್ಮ ಬಳಿಗೆ ಕರೆದು,


ಅನಂತರ ಯೇಸುಸ್ವಾಮಿ ಜನರನ್ನು ತಮ್ಮ ಬಳಿಗೆ ಕರೆದು, “ನಾನು ಹೇಳುವುದನ್ನು ಕೇಳಿ ಚೆನ್ನಾಗಿ ತಿಳಿದುಕೊಳ್ಳಿರಿ:


ಸಿಯೋನಿನಲ್ಲಿರುವ ಪಾಪಾತ್ಮರು ಭಯಪಡುತ್ತಾರೆ. ಭಕ್ತಿಹೀನರು ಗಡಗಡನೆ ನಡುಗುತ್ತಾರೆ. ‘ನಮ್ಮಲ್ಲಿ ಯಾರು ತಾನೇ ಕಬಳಿಸುವ ಕಿಚ್ಚಿನ ಬಳಿ ವಾಸಿಸಬಲ್ಲರು?’ ಎಂದು ಹೇಳಿಕೊಳ್ಳುತ್ತಾರೆ.


ಪುರಾತನ ಕಾಲದಿಂದಲೇ ಅಸ್ಸೀರಿಯದ ಅರಸನಿಗೆ ಅಗ್ನಿಕುಂಡವು ಅಣಿಯಾಗಿದೆ. ಅದನ್ನು ಆಳವಾಗಿಯೂ ಅಗಲವಾಗಿಯೂ ಮಾಡಲಾಗಿದೆ. ಅದರಲ್ಲಿನ ಚಿತೆಯೊಳಗೆ ಬೆಂಕಿಯೂ ಸೌದೆಯೂ ತುಂಬಿದೆ. ಗಂಧಕದ ಪ್ರವಾಹದೋಪಾದಿಯಲ್ಲಿ ಸರ್ವೇಶ್ವರ ಸ್ವಾಮಿ ತಮ್ಮ ಶ್ವಾಸವನ್ನೂದಿ ಅದನ್ನು ಭುಗಿಲೆಬ್ಬಿಸುವರು.


ಆಗ ಸರ್ವೇಶ್ವರ ತಮ್ಮ ಗಂಭೀರವಾದ ವಾಣಿಯನ್ನು ಕೇಳುವಂತೆ ಮಾಡುವರು. ತೀವ್ರಕೋಪ, ದಹಿಸುವ ಅಗ್ನಿಜ್ವಾಲೆ, ಸಿಡಿಯುವ ಮೋಡ, ಚಂಡಮಾರುತ, ಕಲ್ಮಳೆ - ಇವುಗಳಿಂದ ತಮ್ಮ ಶಿಕ್ಷಾಹಸ್ತವನ್ನು ಪ್ರದರ್ಶಿಸುವರು.


ಇಗೋ, ಸರ್ವೇಶ್ವರ ನಾಮಧೇಯನು ಬರುತಿಹನು ದೂರದಿಂದ; ಭುಗಿಲೇರುತಿದೆ ಆತನ ಕೋಪ ಏಳುತಿದೆ ದಟ್ಟವಾದ ಧೂಮ ಅದರಿಂದ. ದಹಿಸುವ ಅಗ್ನಿಯಂತಿದೆ ಆತನ ನಾಲಗೆ. ಭರಿತವಾಗಿದೆ ಆತನ ತುಟಿಗಳು ರೋಷದಿಂದ.


ಇದರ ಬಗ್ಗೆ ನನಗೆ ಇನ್ನಿಲ್ಲ ರೌದ್ರ, ಇದರೊಳಗಿಲ್ಲ ಮುಳ್ಳುಕಳ್ಳಿಗಳ ಗಹ್ವರ, ಇದ್ದಿದ್ದರೆ ಸುಟ್ಟು ಭಸ್ಮ ಮಾಡುತ್ತಿದ್ದೆ ಹೂಡಿ ಸಮರ.


ನಿಮ್ಮ ದೇವರಾದ ಸರ್ವೇಶ್ವರ ಆ ಉತ್ತಮ ನಾಡನ್ನು ನಿಮಗೆ ಸ್ವದೇಶವಾಗಿ ಕೊಡುವುದು ನಿಮ್ಮ ಪುಣ್ಯಫಲವಲ್ಲವೆಂದು ಚೆನ್ನಾಗಿ ತಿಳಿದುಕೊಳ್ಳಿ. ನೀವು ಅವರ ಆಜ್ಞೆಗೆ ಮಣಿಯದ ಜನರೇ ಆಗಿದ್ದೀರಿ.


ನಿಮ್ಮ ದೇವರಾದ ಸರ್ವೇಶ್ವರಾ, ನಿಮ್ಮಿಂದ ಪರಾಜಯಪಡಿಸುವ ಜನರುಗಳನ್ನೆಲ್ಲಾ ನೀವು ಕನಿಕರಿಸದೆ ನಾಶಮಾಡಬೇಕು. ಅವರ ದೇವರುಗಳನ್ನು ಪೂಜಿಸಲೇಬಾರದು; ಪೂಜಿಸಿದರೆ ಅವು ನಿಮಗೆ ಉರುಲಾಗುವುವು.


ಸರ್ವೇಶ್ವರನ ತೇಜಸ್ಸು ಬೆಟ್ಟದ ಶಿಖರದ ಮೇಲೆ ಪ್ರಜ್ವಲಿಸುವ ಬೆಂಕಿಯೋಪಾದಿಯಲ್ಲಿ ಇಸ್ರಯೇಲರಿಗೆ ಕಾಣಿಸಿತು.


ಆಗ ದೆಬೋರಳು ಬಾರಾಕನಿಗೆ, “ಏಳು, ಸರ್ವೇಶ್ವರ ಸೀಸೆರನನ್ನು ನಿನ್ನ ಕೈಗೆ ಒಪ್ಪಿಸುವ ದಿನ ಇದೇ; ನಿಶ್ಚಯವಾಗಿ ಅವರು ತಾವೇ ನಿನ್ನ ಮುಂದಾಗಿ ಯುದ್ಧಕ್ಕೆ ಹೊರಡುವರು,” ಎಂದಳು. ಬಾರಾಕನು ಬೇಗನೆ ಹತ್ತು ಸಾವಿರ ಜನರ ಸಹಿತ ತಾಬೋರ್ ಬೆಟ್ಟದಿಂದಿಳಿದನು.


ನನ್ನ ದೂತನು ನಿಮ್ಮ ಮುಂದೆ ನಡೆದು ಅಮೋರಿಯರು, ಹಿತ್ತಿಯರು, ಪೆರಿಜೀಯರು, ಕಾನಾನ್ಯರು, ಹಿವ್ವಿಯರು ಹಾಗೂ ಯೆಬೂಸಿಯರು ಇರುವ ನಾಡಿಗೆ ನಿಮ್ಮನ್ನು ಸೇರಿಸುವನು. ಅವರನ್ನಾದರೋ ನಾನು ನಿರ್ಮೂಲ ಮಾಡುವೆನು.


ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಮಧ್ಯೆ ಇದ್ದಾರೆ. ಅವರು ಭಯಭಕ್ತಿಗೆ ಪಾತ್ರರಾದ ಮಹಾದೇವರು. ನಿಮ್ಮ ದೇವರಾದ ಸರ್ವೇಶ್ವರ ಆ ಜನಾಂಗಗಳನ್ನು ನಿಮ್ಮ ಮುಂದೆಯೇ ಸ್ವಲ್ಪ ಸ್ವಲ್ಪವಾಗಿ ಹೊರಡಿಸುವರು. ನೀವು ಬಹು ಶೀಘ್ರವಾಗಿ ಅವರನ್ನು ನಿರ್ಮೂಲಮಾಡಕೂಡದು; ಮಾಡಿದರೆ ಕಾಡುಮೃಗಗಳು ಹೆಚ್ಚಿ ನಿಮಗೆ ತೊಂದರೆಯನ್ನುಂಟುಮಾಡುವುವು.


“ನೀವು ಶತ್ರುಗಳ ವಿರುದ್ಧ ಯುದ್ಧಕ್ಕೆ ಹೊರಟಾಗ ಅವರ ಕಡೆ ಕುದುರೆಗಳು, ರಥಗಳು ಹಾಗು ನಿಮಗಿಂತ ಹೆಚ್ಚಾದ ಕಾಲ್ಬಲವು ಇರುವುದನ್ನು ಕಂಡರೆ, ಹೆದರಬೇಡಿ. ಏಕೆಂದರೆ ಈಜಿಪ್ಟ್ ದೇಶದಿಂದ ನಿಮ್ಮನ್ನು ಬಿಡಿಸಿದ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮೊಂದಿಗೆ ಇದ್ದಾರೆ.


ಸರ್ವೇಶ್ವರ ಅವರನ್ನು ಇಸ್ರಯೇಲರ ಕೈವಶ ಮಾಡಿದರು. ಇವರು ಅವರನ್ನು ದೊಡ್ಡ ಚೀದೋನ್ ಹಾಗು ಮಿಸ್ರೆಫೋತ್ಮಯಿಮ್ ಎಂಬ ಊರುಗಳವರೆಗೂ ಮತ್ತು ಪೂರ್ವ ದಿಕ್ಕಿನಲ್ಲಿರುವ ಮಿಚ್ಫೆಯ ಬಯಲಿನವರೆಗೂ ಹಿಂದಟ್ಟಿ, ಒಬ್ಬನೂ ಉಳಿಯದಂತೆ ಸದೆಬಡಿದರು.


ಯೆಹೋಶುವನು ಆ ಬೇರೆ ಅರಸರನ್ನು, ಅವರ ಎಲ್ಲ ನಗರಗಳನ್ನು ಹಿಡಿದು ಸರ್ವೇಶ್ವರನ ದಾಸ ಮೋಶೆಯ ಆಜ್ಞೆಯಂತೆ ಅವರನ್ನು ಕತ್ತಿಯಿಂದ ನಾಶಮಾಡಿದನು.


ಹೀಗಿರಲು ಸರ್ವೇಶ್ವರ ಆ ದಿನದಂದು ಸೂಚಿಸಿದಂತೆ ಈ ಮಲೆನಾಡನ್ನು ನನಗೆ ಕೊಡು. ‘ಇದರಲ್ಲಿ ಎತ್ತರದ ವ್ಯಕ್ತಿಗಳಿದ್ದಾರೆ, ದೊಡ್ಡ ದೊಡ್ಡ ನಗರಗಳಿವೆ, ಕೋಟೆಕೊತ್ತಲಗಳಿವೆ’ ಎಂದು ಆ ಕಾಲದಲ್ಲಿ ನೀನು ಕೇಳಿದ್ದುಂಟು. ಅವರೆಲ್ಲರನ್ನು ಓಡಿಸಿಬಿಡಲು ಸರ್ವೇಶ್ವರ ತಮ್ಮ ಮಾತಿಗನುಸಾರ ನನಗೆ ಸಹಾಯಮಾಡುವರೆಂಬ ನಂಬಿಕೆ ನನಗಿದೆ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು