Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 9:4 - ಕನ್ನಡ ಸತ್ಯವೇದವು C.L. Bible (BSI)

4 “ನಿಮ್ಮ ದೇವರಾದ ಸರ್ವೇಶ್ವರ ಅವರನ್ನು ನಿಮ್ಮ ಬಳಿಯಿಂದ ಹೊರಡಿಸಿದನಂತರ ನೀವು ಮನಸ್ಸಿನಲ್ಲೇ, ‘ಸರ್ವೇಶ್ವರ ನಮ್ಮನ್ನು ಈ ನಾಡಿಗೆ ಕರೆತಂದು ಅದನ್ನು ನಮಗೆ ಸ್ವಾಧೀನಪಡಿಸಿದ್ದು ನಮ್ಮ ಪುಣ್ಯಫಲವೇ’ ಎಂದುಕೊಳ್ಳಬಾರದು. ಆ ಜನಾಂಗಗಳ ದುರ್ನಡತೆಯ ಕಾರಣದಿಂದಲೇ ಸರ್ವೇಶ್ವರ ನಿಮ್ಮ ಬಳಿಯಿಂದ ಅವರನ್ನು ಹೊರದಬ್ಬುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನಿಮ್ಮ ದೇವರಾದ ಯೆಹೋವನು ಅವರನ್ನು ನಿಮ್ಮ ಎದುರಿನಿಂದ ಹೊರಡಿಸಿದ ನಂತರ ನೀವು ನಿಮ್ಮ ಮನಸ್ಸಿನಲ್ಲಿ, “ಯೆಹೋವನು ನಮ್ಮನ್ನು ಈ ದೇಶಕ್ಕೆ ಕರೆತಂದು ಅದನ್ನು ನಮಗೆ ಸ್ವಾಧೀನಪಡಿಸಿದ್ದಕ್ಕೆ ಕಾರಣ ನಮ್ಮ ಸದಾಚಾರವೇ” ಅಂದುಕೊಳ್ಳಬಾರದು. ಆ ಜನಾಂಗಗಳ ದುರ್ನಡತೆಯ ದೆಸೆಯಿಂದಲೇ ಯೆಹೋವನು ನಿಮ್ಮ ಎದುರಿನಿಂದ ಅವರನ್ನು ಹೊರಡಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನಿಮ್ಮ ದೇವರಾದ ಯೆಹೋವನು ಅವರನ್ನು ನಿಮ್ಮ ಎದುರಿನಿಂದ ಹೊರಡಿಸಿದನಂತರ ನೀವು ಮನಸ್ಸಿನಲ್ಲಿ - ಯೆಹೋವನು ನಮ್ಮನ್ನು ಈ ದೇಶಕ್ಕೆ ಕರತಂದು ಅದನ್ನು ನಮಗೆ ಸ್ವಾಧೀನಪಡಿಸಿದ್ದು ನಮ್ಮ ಪುಣ್ಯಫಲವೇ ಅಂದುಕೊಳ್ಳಬಾರದು. ಆ ಜನಾಂಗಗಳ ದುರ್ನಡತೆಯ ದೆಸೆಯಿಂದಲೇ ಯೆಹೋವನು ನಿಮ್ಮ ಎದುರಿನಿಂದ ಅವರನ್ನು ಹೊರಡಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 “ಅಲ್ಲಿಯ ಜನರನ್ನು ದೇವರಾದ ಯೆಹೋವನು ಹೊಡೆದೋಡಿಸುವನು. ಆದರೆ ನೀವು ನಿಮ್ಮ ಮನಸ್ಸಿನಲ್ಲಿ, ‘ನಾವು ನೀತಿವಂತರಾಗಿದುದ್ದರಿಂದ ಮತ್ತು ಒಳ್ಳೆಯವರಾಗಿದ್ದುದರಿಂದ ಆತನು ನಮ್ಮನ್ನು ಈ ಒಳ್ಳೆಯ ದೇಶಕ್ಕೆ ತಂದನು’ ಎಂದು ನೆನಸಿಕೊಳ್ಳಬೇಡಿ. ಅದು ಕಾರಣವಲ್ಲ. ಅಲ್ಲಿಯ ಜನರು ಬಹು ಕೆಟ್ಟವರಾಗಿದ್ದ ಕಾರಣ ಯೆಹೋವನು ಅವರನ್ನು ಹೊರಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನಿಮ್ಮ ದೇವರಾದ ಯೆಹೋವ ದೇವರು ಅವರನ್ನು ನಿಮ್ಮ ಮುಂದೆ ತೆಗೆದುಹಾಕಿದಾಗ, “ಯೆಹೋವ ದೇವರು ನಮ್ಮನ್ನು ಈ ದೇಶವನ್ನು ಸ್ವಾಧೀನಪಡಿಸಲು ಕರೆದುಕೊಂಡು ಬಂದಿದ್ದು ನಮ್ಮ ನೀತಿಯ ನಿಮಿತ್ತವೇ,” ಎಂದು ನೀವು ನಿಮ್ಮ ಹೃದಯದಲ್ಲಿ ಹೇಳಿಕೊಳ್ಳಬಾರದು. ಆ ಜನಾಂಗಗಳ ಕೆಟ್ಟತನದ ನಿಮಿತ್ತವೇ ಯೆಹೋವ ದೇವರು ಅವರನ್ನು ನಿಮ್ಮ ಮುಂದೆ ಹೊರಡಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 9:4
20 ತಿಳಿವುಗಳ ಹೋಲಿಕೆ  

‘ಈ ಭಾಗ್ಯ ನಮ್ಮ ಸಾಮರ್ಥ್ಯ ಸಾಹಸಗಳಿಂದಲೇ ನಮಗೆ ಲಭಿಸಿತು’ ಎಂದುಕೊಂಡೀರಿ ಎಚ್ಚರಿಕೆ!


ನಾವು ಸ್ವಂತ ಸತ್ಕಾರ್ಯಗಳಿಂದಲ್ಲ, ದೇವರ ಯೋಜನೆ ಹಾಗೂ ಅನುಗ್ರಹಗಳಿಂದಲೇ ಜೀವೋದ್ಧಾರ ವರವನ್ನು ಪಡೆದಿದ್ದೇವೆ; ದೇವರ ಪ್ರಜೆಗಳೆನಿಸಿಕೊಂಡಿದ್ದೇವೆ. ಈ ಅನುಗ್ರಹವನ್ನು ಕ್ರಿಸ್ತಯೇಸುವಿನಲ್ಲಿ ಅನಾದಿಯಿಂದಲೇ ನಮಗೆ ಕೊಡಲಾಯಿತು.


ನೀವು ಅವರ ನಾಡಿಗೆ ಬಂದು ಅದನ್ನು ಸ್ವಾಧೀನಮಾಡಿಕೊಳ್ಳುವುದಕ್ಕೆ ನಿಮ್ಮ ಪುಣ್ಯವೇ ಆಗಲಿ, ನಿಮ್ಮ ಸುಸ್ವಭಾವವೇ ಆಗಲಿ, ಕಾರಣವಲ್ಲ. ಆ ಜನಾಂಗಗಳ ದುರ್ನಡತೆಯ ಕಾರಣ ಹಾಗು ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಪಿತೃಗಳಾದ ಅಬ್ರಹಾಮ್, ಇಸಾಕ್, ಯಕೋಬರಿಗೆ ಪ್ರಮಾಣಪೂರ್ವಕವಾಗಿ ಮಾಡಿದ ವಾಗ್ದಾನವನ್ನು ನೆರವೇರಿಸಬೇಕೆಂಬ ಕಾರಣ ಅವರನ್ನು ನಿಮ್ಮ ಬಳಿಯಿಂದ ಹೊರಡಿಸಿಬಿಡುತ್ತಾರೆ.


ಇತರರಿಗಿಂತಲೂ ನಿನ್ನನ್ನು ಶ್ರೇಷ್ಠನನ್ನಾಗಿಸಿದವರು ಯಾರು? ದೇವರಿಂದ ಪಡೆಯದೆ ಇರುವುದು ನಿನ್ನಲ್ಲಿ ಯಾವುದಾದರೂ ಇದೆಯೆ? ಹೀಗೆ ಎಲ್ಲವನ್ನೂ ದೇವರಿಂದ ಪಡೆದ ಮೇಲೆ, ಪಡೆಯದವನಂತೆ ಜಂಬ ಕೊಚ್ಚಿಕೊಳ್ಳುವುದೇಕೆ?


ಅವರು ಆಯ್ಕೆಯಾದುದು ತಮ್ಮ ಸತ್ಕಾರ್ಯಗಳ ಆಧಾರದಿಂದಲ್ಲ, ದೈವಾನುಗ್ರಹದಿಂದಲೇ. ಇಲ್ಲದಿದ್ದರೆ, ದೈವಾನುಗ್ರಹ ನಿಜವಾಗಿ ದೈವಾನುಗ್ರಹ ಎನಿಸಿಕೊಳ್ಳುತ್ತಿರಲಿಲ್ಲ.


ಸರ್ವೇಶ್ವರನಿಗೆ ಅಸಹ್ಯವಾಗಿರುವ ಹಲವು ಹೇಸಿಗೆ ಕೆಲಸಗಳನ್ನು ಅವರು ತಮ್ಮ ದೇವತೆಗಳಿಗೆ ಮಾಡುತ್ತಾರೆ; ತಮ್ಮ ಗಂಡುಹೆಣ್ಣು ಮಕ್ಕಳನ್ನು ತಮ್ಮ ದೇವತೆಗಳಿಗೆ ಬೆಂಕಿಯಲ್ಲಿ ಸುಟ್ಟುಬಿಡುತ್ತಾರೆ. ನೀವು ನಿಮ್ಮ ದೇವರಾದ ಸರ್ವೇಶ್ವರನಿಗೆ ಮಾಡುವ ಸೇವೆ ಹಾಗಿರಬಾರದು.


ನಿನ್ನ ಸಂತತಿಯವರು ನಾಲ್ಕನೆಯ ತಲಾಂತರವಾದ ಮೇಲೆ ಇಲ್ಲಿಗೆ ಮರಳಿ ಬರುವರು. ಏಕೆಂದರೆ ಅಮೋರಿಯರ ಪಾಪಕ್ರಮ ಇನ್ನೂ ಮಾಗಿಲ್ಲ,” ಎಂದರು.


ನನ್ನಲ್ಲಿ ದೋಷವಿದೆಯೆಂದು ನನ್ನ ಮನಸ್ಸಾಕ್ಷಿಗೆ ತೋರುವುದಿಲ್ಲ. ಆದರೂ ನಾನು ನಿರ್ದೋಷಿಯೆಂದು ಹೇಳುವಂತಿಲ್ಲ. ನನ್ನ ನ್ಯಾಯನಿರ್ಣಯ ಮಾಡುವವರು ಪ್ರಭುವೇ.


ಅದು ಸರಿಯೆ. ಅವರ ಅವಿಶ್ವಾಸದ ಕಾರಣದಿಂದ ಅವರನ್ನು ಕಡಿದುಹಾಕಲಾಯಿತು. ನೀನು ದೃಢವಾಗಿ ನಿಂತಿರುವುದಾದರೋ ವಿಶ್ವಾಸದ ಪ್ರಯುಕ್ತವೇ. ಆದ್ದರಿಂದ ಗರ್ವಪಡಬೇಡ. ಭಯಭಕ್ತಿಯಿಂದಿರು.


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - “ನಾನು ಈ ರಕ್ಷಣಾಕಾರ್ಯವನ್ನು ಮಾಡುವುದು ನಿಮ್ಮ ನಿಮಿತ್ತವಲ್ಲವೆಂಬುದು ನಿಮಗೆ ತಿಳಿದಿರಲಿ; ಇಸ್ರಯೇಲ್ ವಂಶದವರೇ, ನಿಮ್ಮ ದುರ್ಮಾರ್ಗಗಳಿಗಾಗಿ ಲಜ್ಜೆಗೊಳ್ಳಿರಿ, ನಾಚಿಕೆಪಡಿರಿ.


“ಆದಕಾರಣ - ನೀನು ಇಸ್ರಯೇಲ್ ವಂಶದವರಿಗೆ ಹೀಗೆ ನುಡಿ - ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಇಸ್ರಯೇಲ್ ವಂಶದವರೇ, ನಿಮ್ಮ ನಿಮಿತ್ತವಲ್ಲ, ನೀವು ಜನಾಂಗಗಳೊಳಗೆ ಸೇರಿ ಅಪಕೀರ್ತಿಗೆ ಗುರಿಮಾಡಿದ ನನ್ನ ಪರಿಶುದ್ಧ ನಾಮದ ನಿಮಿತ್ತವೆ, ಈ ರಕ್ಷಣಾಕಾರ್ಯವನ್ನು ಮಾಡುತ್ತೇನೆ.


ನೀವು ವಾಸವಾಗಿದ್ದ ಈಜಿಪ್ಟಿನ ಆಚಾರಗಳನ್ನು ಅನುಸರಿಸಬಾರದು; ನಾನು ನಿಮ್ಮನ್ನು ಕರೆದೊಯ್ಯುತ್ತಿರುವ ಕಾನಾನ್ ನಾಡಿನ ಆಚರಣೆಗಳನ್ನು ಕೂಡ ನೀವು ಅನುಸರಿಸಬಾರದು. ಅವರಲ್ಲಿರುವ ನಿಯಮಗಳಿಗೆ ನೀವು ಒಳಗಾಗಕೂಡದು.


“ನೀವು ಮರುಭೂಮಿಯಲ್ಲಿ ನಿಮ್ಮ ದೇವರಾದ ಸರ್ವೇಶ್ವರನಿಗೆ ಕೋಪ ಹುಟ್ಟಿಸಿದ್ದನ್ನು ನೆನಪುಮಾಡಿಕೊಳ್ಳಿ. ಅದನ್ನು ಮರೆಯಬೇಡಿ. ನೀವು ಈಜಿಪ್ಟ್ ದೇಶವನ್ನು ಬಿಟ್ಟಂದಿನಿಂದ ಈ ಸ್ಥಳಕ್ಕೆ ಬಂದ ದಿನದವರೆಗೂ ಸರ್ವೇಶ್ವರನ ಆಜ್ಞೆಗಳನ್ನು ಧಿಕ್ಕರಿಸುತ್ತಾ ಬಂದಿದ್ದೀರಿ.


ನನಗೆ ನಿಮ್ಮ ಪರಿಚಯವಾದಂದಿನಿಂದಲೂ ನೀವು ಸರ್ವೇಶ್ವರನ ಆಜ್ಞೆಯನ್ನು ಉಲ್ಲಂಘಿಸುತ್ತಾ ಬಂದಿದ್ದೀರಿ.


ಏಕೆಂದರೆ ನೀವು ಹಟಮಾರಿಗಳು, ಆಜ್ಞೆಗೆ ಒಳಗಾಗದವರೆಂಬುದು ನನಗೆ ತಿಳಿದೇ ಇದೆ. ನಾನು ಇನ್ನೂ ಜೀವದಿಂದಿರುವಾಗಲೇ ನೀವು ಸರ್ವೇಶ್ವರನಿಗೆ ವಿರುದ್ಧ ಪ್ರತಿಭಟಿಸಿದ್ದೀರಿ; ನಾನು ಹೋದ ತರುವಾಯ ನೀವು ಪ್ರತಿಭಟಿಸುವುದು ಮತ್ತಷ್ಟು ನಿಶ್ಚಯ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು