Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 9:6 - ಕನ್ನಡ ಸತ್ಯವೇದವು C.L. Bible (BSI)

6 ನಿಮ್ಮ ದೇವರಾದ ಸರ್ವೇಶ್ವರ ಆ ಉತ್ತಮ ನಾಡನ್ನು ನಿಮಗೆ ಸ್ವದೇಶವಾಗಿ ಕೊಡುವುದು ನಿಮ್ಮ ಪುಣ್ಯಫಲವಲ್ಲವೆಂದು ಚೆನ್ನಾಗಿ ತಿಳಿದುಕೊಳ್ಳಿ. ನೀವು ಅವರ ಆಜ್ಞೆಗೆ ಮಣಿಯದ ಜನರೇ ಆಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನಿಮ್ಮ ದೇವರಾದ ಯೆಹೋವನು ಆ ಉತ್ತಮ ದೇಶವನ್ನು ನಿಮಗೆ ಸ್ವದೇಶವಾಗಿ ಕೊಡುವುದು ನಿಮ್ಮ ಸದಾಚಾರದ ಫಲವಲ್ಲವೆಂದು ಚೆನ್ನಾಗಿ ತಿಳಿದುಕೊಳ್ಳಿರಿ. ನೀವು ಆತನ ಆಜ್ಞೆಯನ್ನು ಪಾಲಿಸದ ಮೊಂಡ ಜನರೇ ಆಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನಿಮ್ಮ ದೇವರಾದ ಯೆಹೋವನು ಆ ಉತ್ತಮದೇಶವನ್ನು ನಿಮಗೆ ಸ್ವದೇಶವಾಗಿ ಕೊಡುವದು ನಿಮ್ಮ ಪುಣ್ಯಫಲವಲ್ಲವೆಂದು ಚೆನ್ನಾಗಿ ತಿಳಿದುಕೊಳ್ಳಿರಿ. ನೀವು ಆತನ ಆಜ್ಞೆಗೆ ಮಣಿಯದ ಜನರೇ ಆಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನಿಮ್ಮ ದೇವರಾದ ಯೆಹೋವನು ಆ ಉತ್ತಮವಾದ ದೇಶವನ್ನು ನಿಮಗೆ ವಾಸಿಸಲು ಕೊಡುವನು. ನೀವು ಒಳ್ಳೆಯವರು ಎಂಬುದಾಗಿ ಅಲ್ಲ. ನಿಜವಾಗಿ ಹೇಳಬೇಕಾದರೆ ನೀವು ಹಠಮಾರಿಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಹೀಗಿರುವುದರಿಂದ ನಿಮ್ಮ ನೀತಿಗೋಸ್ಕರ ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಈ ಒಳ್ಳೆಯ ದೇಶವನ್ನು ಸ್ವಾಧೀನಪಡಿಸಿಕೊಳ್ಳುವುದಕ್ಕೆ ಕೊಡುವುದಿಲ್ಲವೆಂದು ನೀವು ತಿಳಿದುಕೊಳ್ಳಬೇಕು. ಏಕೆಂದರೆ ನೀವು ಹಟಮಾರಿ ಜನಾಂಗವಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 9:6
19 ತಿಳಿವುಗಳ ಹೋಲಿಕೆ  

ಆದುದರಿಂದ ಅವರ ಆಜ್ಞೆಗೆ ಮಣಿಯದ ನಿಮ್ಮ ದುಷ್ಟಸ್ವಭಾವವನ್ನು ಬಿಟ್ಟು ಬಿಟ್ಟು ನಿಮ್ಮ ಹೃದಯದಲ್ಲೇ ಸುನ್ನತಿಮಾಡಿಕೊಳ್ಳಿ.


ಸ್ತೇಫನನು ಮುಂದುವರೆದು, “ಎಷ್ಟು ಹಟಮಾರಿಗಳು ನೀವು; ಎಂಥಾ ಕಠಿಣ ಹೃದಯಿಗಳು ನೀವು’ ದೇವರ ಸಂದೇಶಕ್ಕೆ ಎಷ್ಟು ಕಿವುಡರು ನೀವು! ನಿಮ್ಮ ಪೂರ್ವಜರಂತೆ ನೀವು ಸಹ ಪವಿತ್ರಾತ್ಮ ಅವರನ್ನು ಯಾವಾಗಲೂ ಪ್ರತಿಭಟಿಸುತ್ತೀರಿ.


ಏಕೆಂದರೆ ನೀವು ಹಟಮಾರಿಗಳು, ಆಜ್ಞೆಗೆ ಒಳಗಾಗದವರೆಂಬುದು ನನಗೆ ತಿಳಿದೇ ಇದೆ. ನಾನು ಇನ್ನೂ ಜೀವದಿಂದಿರುವಾಗಲೇ ನೀವು ಸರ್ವೇಶ್ವರನಿಗೆ ವಿರುದ್ಧ ಪ್ರತಿಭಟಿಸಿದ್ದೀರಿ; ನಾನು ಹೋದ ತರುವಾಯ ನೀವು ಪ್ರತಿಭಟಿಸುವುದು ಮತ್ತಷ್ಟು ನಿಶ್ಚಯ.


“ಅದಲ್ಲದೆ ಅವರು ನನಗೆ, ‘ಈ ಜನರ ಸ್ವಭಾವವನ್ನು ನಾನು ನೋಡುತ್ತಾ ಬಂದಿದ್ದೇನೆ;


ಈ ಜನರ ಸ್ವಭಾವ ನನಗೆ ಗೊತ್ತಿದೆ. ಇವರು ನನ್ನ ಆಜ್ಞೆಗೆ ಬಗ್ಗದ ಹಟಮಾರಿಗಳು.


ಇಸ್ರಯೇಲ್ ವಂಶದವರೇ, ನಿಮ್ಮ ದುರ್ನಡತೆಗೂ ದುಷ್ಕೃತ್ಯಗಳಿಗೂ ತಕ್ಕ ಹಾಗೆ ನಾನು ನಿಮ್ಮನ್ನು ಸಹಿಸಿಕೊಂಡಿರುವಾಗ, ನಾನೇ ಸರ್ವೇಶ್ವರ ಎಂದು ನಿಮಗೆ ತಿಳಿಯುವುದು; ಇದು ಸರ್ವೇಶ್ವರನಾದ ದೇವರ ನುಡಿ.”


ನಾನು ಯಾವ ಸಂತಾನದವರ ಬಳಿಗೆ ನಿನ್ನನ್ನು ಕಳುಹಿಸುತ್ತೇನೋ ಆ ಸಂತಾನದವರು ನಾಚಿಕೆಗೆಟ್ಟವರೂ ಹಟಗಾರರೂ ಆಗಿದ್ದಾರೆ; ನೀನು ಅವರಿಗೆ, ‘ಸರ್ವೇಶ್ವರನಾದ ದೇವರೇ ಇಂತೆನ್ನುತ್ತಾರೆ,’ ಎಂದು ನುಡಿ.


ಮರೆಯರು ನನ್ನ ಮಹತ್ಕಾರ್ಯಗಳನು I ಇಡುವರು ನನ್ನಲ್ಲೇ ಭರವಸೆಯನು I ಕೈಗೊಳ್ಳುವರು ನನ್ನ ಆಜ್ಞೆಗಳನು II


ಇದಲ್ಲದೆ, ನೆಬೂಕದ್ನೆಚ್ಚರನಿಗೆ ಒಳಗಾಗುತ್ತೇನೆಂದು, ದೇವರ ಮೇಲೆ ಆಣೆಯಿಟ್ಟು ಪ್ರಮಾಣಮಾಡಿದ್ದರೂ, ಅವನಿಗೆ ವಿರುದ್ಧ ದಂಗೆ ಎದ್ದನು. ಇಸ್ರಯೇಲ್ ದೇವರಾದ ಸರ್ವೇಶ್ವರನಿಗೆ ಅಭಿಮುಖನಾಗಲೊಲ್ಲದೆ, ಹಟಹಿಡಿದು ಮನಸ್ಸನ್ನು ಕಠಿಣಮಾಡಿಕೊಂಡನು.


ಈಗ ನಿಮ್ಮ ಪೂರ್ವಜರಂತೆ ಆಜ್ಞೆಗೆ ಮಣಿಯದವರಾಗಬೇಡಿ. ಸರ್ವೇಶ್ವರನಿಗೆ ಅಧೀನರಾಗಿರಿ. ನಿಮ್ಮ ದೇವರಾದ ಸರ್ವೇಶ್ವರ ಸದಾಕಾಲಕ್ಕೂ ಪ್ರತಿಷ್ಠಿಸಿಕೊಂಡ ಪವಿತ್ರಾಲಯಕ್ಕೆ ಬಂದು ಅವರನ್ನು ಅವಲಂಬಿಸಿರಿ. ಆಗ ನಿಮ್ಮ ಮೇಲಿರುವ ಅವರ ಉಗ್ರಕೋಪ ತೊಲಗಿಹೋಗುವುದು.


ಸ್ವಾಮಿ, ಸರ್ವೇಶ್ವರಾ, ನಿಮ್ಮ ಅನುಗ್ರಹ ನಮಗೆ ದೊರಕಿತಾದರೆ, ತಾವೇ ನಮ್ಮ ಜೊತೆಯಲ್ಲಿ ಬರಬೇಕು. ನಮ್ಮ ಜನರು ಹಟಮಾರಿಗಳು. ಆದರೂ ತಾವು ನಮ್ಮ ಪಾಪಗಳನ್ನೂ ಅಧರ್ಮಗಳನ್ನೂ ಕ್ಷಮಿಸಿ ನಿಮ್ಮ ಜನರಾಗುವಂತೆ ನಮ್ಮನ್ನು ಸ್ವೀಕರಿಸಿ,” ಎಂದು ಪ್ರಾರ್ಥಿಸಿದನು.


ಅದು ಹಾಲೂ ಜೇನೂ ಹರಿಯುವ ಶ್ರೀಮಂತ ನಾಡು. ನಾನು ಸ್ವತಃ ನಿಮ್ಮ ಸಂಗಡ ಬರುವುದಿಲ್ಲ. ಏಕೆಂದರೆ ನೀವು ನನ್ನ ಆಜ್ಞೆಗೆ ತಲೆಬಾಗದ ಹಟಮಾರಿ ಜನ; ದಾರಿಯಲ್ಲೇ ನಾನು ನಿಮ್ಮನ್ನು ಸಂಹರಿಸಬೇಕಾಗಬಹುದು.


“ಆದಕಾರಣ - ನೀನು ಇಸ್ರಯೇಲ್ ವಂಶದವರಿಗೆ ಹೀಗೆ ನುಡಿ - ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಇಸ್ರಯೇಲ್ ವಂಶದವರೇ, ನಿಮ್ಮ ನಿಮಿತ್ತವಲ್ಲ, ನೀವು ಜನಾಂಗಗಳೊಳಗೆ ಸೇರಿ ಅಪಕೀರ್ತಿಗೆ ಗುರಿಮಾಡಿದ ನನ್ನ ಪರಿಶುದ್ಧ ನಾಮದ ನಿಮಿತ್ತವೆ, ಈ ರಕ್ಷಣಾಕಾರ್ಯವನ್ನು ಮಾಡುತ್ತೇನೆ.


“ಆ ಕಾಲದಲ್ಲಿ ನಾನು ನಿಮಗೆ, ‘ನಿಮ್ಮ ದೇವರಾದ ಸರ್ವೇಶ್ವರ ಈ ಪ್ರದೇಶವನ್ನೇ ನಿಮಗೆ ಸೊತ್ತಾಗಿ ಕೊಟ್ಟಿದ್ದಾರೆ. ಆದರೆ ನಿಮ್ಮ ಯೋಧರೆಲ್ಲರು ಯುದ್ಧಸನ್ನದ್ಧರಾಗಿ ನಿಮ್ಮ ಸಹೋದರರಾದ ಇಸ್ರಯೇಲರ ಮುಂದೇ ಹೊರಟು ನದಿ ದಾಟಿ ಹೋಗಬೇಕು.


ನನಗೆ ನಿಮ್ಮ ಪರಿಚಯವಾದಂದಿನಿಂದಲೂ ನೀವು ಸರ್ವೇಶ್ವರನ ಆಜ್ಞೆಯನ್ನು ಉಲ್ಲಂಘಿಸುತ್ತಾ ಬಂದಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು